AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಿಮ್ಮ ದುಡಿಮೆಯನ್ನು ಸರಿಯಾದ ಕಡೆ ವಿನಿಯೋಗಿಸುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಮಂಗಳವಾರ ಗಣ್ಯರ ಒಡನಾಟ, ಆದಾಯದಲ್ಲಿ ತನ್ಮಯತೆ, ಮರೆವಿಗೆ ಮದ್ದು, ಪಕ್ಷಪಾತದಿಂದ ಬೇಸರ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ಇಂದು ನಿಮ್ಮ ದುಡಿಮೆಯನ್ನು ಸರಿಯಾದ ಕಡೆ ವಿನಿಯೋಗಿಸುವಿರಿ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 01, 2025 | 2:00 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 – 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:51 – 17:28, ಯಮಘಂಡ ಕಾಲ 09:23 – 10:59, ಗುಳಿಕ ಕಾಲ 12:37 – 14:14

ತುಲಾ ರಾಶಿ: ಕರಾಳ ಅನುಭವಗಳು ನಿಮ್ಮನ್ನು ಪರಿವರ್ತಿಸುವುದು. ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಸಿಗುವ ಸಾಧ್ಯತೆ ಇದೆ. ಸಿಟ್ಟೇ ನಿಮ್ಮ ಶತ್ರುವಾಗಿ ಕಾಡಲಿದ್ದು, ಸಕಲ ಕಾರ್ಯಗಳಿಗೂ ಇದು ವಿಘ್ನವಾಗಲಿದೆ. ಮಾಡುವ ಕೆಲಸದಲ್ಲಿ ನಿಧಾನವಾಗಿ ಜಯ ಸಿಗಲಿದೆ. ಆದರೆ ತಾಳ್ಮೆಯ ಅಗತ್ಯವಿದೆ. ಖರ್ಚು ಮಾಡುವಾಗ ಲೆಕ್ಕಾಚಾರ ಇರಲಿ. ಕಛೇರಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿಸಬಹುದು. ಬೇಸರಗೊಳ್ಳುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ‌ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಮಮತೆಯನ್ನು ನಿಷ್ಪಕ್ಷಪಾತದಿಂದ ತೋರಿದರೂ ಅದು ಎಲ್ಲರ ಕೋಪಕ್ಕೆ ಕಾರಣವಾಗುವುದು. ಇಂದು ನೀವು ಯಾರಿಗೂ ನೋವಾಗದಂತೆ ವರ್ತಿಸುವ ಯೋಚನೆ‌ ಮಾಡುವಿರಿ. ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ದೀರ್ಘಾವಧಿಯ ಶಿಕ್ಷೆಯಿಂದ ಮುಕ್ತರಾಗಿ ಸ್ವತಂತ್ರತೆಯನ್ನು ಪಡೆಯುವಿರಿ. ನಿಮ್ಮೊಳಗೆ ಇಂದು ವಿಚಿತ್ರವಾದ ಕೆಲವು ಆಲೋಚನೆಗಳು ಬರಲಿದ್ದು, ನಿಮಗೇ ಆಶ್ಚರ್ಯವೆನಿಸುವಂತೆ ಮಾಡುವುದು. ಹತ್ತಿರವರನ್ನು ನಿಮ್ಮ ಮಾತುಗಳಿಂದ ದೂರಮಾಡಿಕೊಳ್ಳುವಿರಿ. ಎಷ್ಟೋ ವರ್ಷದ ಸ್ನೇಹವು ಬೇರೆಯಾದೀತು. ಕಲ್ಪನೆಗಳಿಗೆ ರೂಪವನ್ನು ಕೊಡಲು ಹೋದರೆ ಅದು ಅಸಾಧ್ಯವಾದೀತು. ನಿಮ್ಮನ್ನು ನಡತೆಯ ಮೂಲಕ ಅಳೆಯುವರು. ಆರೋಗ್ಯವು ಕೆಡದಂತೆ ನೋಡಿಕೊಳ್ಳಿ. ಬಂಧುಗಳ ಮನೆಗೆ ಹೋಗಲಿದ್ದೀರಿ. ಕೆಲವನ್ನು ನೀವು ಬಿಡಲು ಸಾಧ್ಯವಾಗದು. ದಿನದ ಬಹಳ ಹೊತ್ತನ್ನು ಏಕಾಂತಸಲ್ಲಿ ಇರಬೇಕೆಂದು ನೀವಿಂದು ಬಯಸಬಹುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ.

ಧನು ರಾಶಿ: ಅಧಿಕಾರಿಗಳಿಂದ ಉದ್ಯಮಕ್ಕೆ ಒತ್ತಡ ಬರಲಿದೆ. ಇಂದು ನಿಮಗೆ ಹಣದ ಅಗತ್ಯತೆಗಳು ತುಂಬಾ ಎದುರಾಗಬಹುದು. ನಿಮ್ಮ ಹಣವೂ ಖಾಲಿಯಾಗಿ ಸಂಗಾತಿಯಿಂದ ಹಣವನ್ನು ಪಡೆಯುವಿರಿ. ಖರ್ಚನ್ನು ಕಡಿಮೆಮಾಡಿಕೊಳ್ಳುವ ವಿಚಾರದಲ್ಲಿ ಚಿಂತಿಸುವುದು ಉತ್ತಮ. ನೀವಿಂದು ಸುಳ್ಳಾಡುವಿರೆಂದು ಅನ್ನಿಸಬಹುದು. ಅಸಹನೆಯು ನಿಮ್ಮ ದೌರ್ಬಲ್ಯವನ್ನು ಹೇಳುವುದು. ನಿಮ್ಮ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುವವರಿದ್ದಾರೆ. ಮಕ್ಕಳಿಂದ ಧನಸಹಾಯವನ್ನು ಪಡೆಯುವಿರಿ. ದೇವರಲ್ಲಿ ದೃಢವಾದ ಭಕ್ತಿಯನ್ನು ಇಟ್ಟುಕೊಳ್ಳುವುದು ಒಳ್ಳೆಯದು. ನಿಮ್ಮ ಆಲೋಚನೆಗಳು ಕಾರ್ಯರೂಪಕ್ಕೆ ಬರಬಹುದು. ವಾಹನ ಖರೀದಿಯನ್ನು ಮಾಡಲೇಬೇಕು ಎಂಬ ಗಟ್ಟಿ ನಿರ್ಧಾರವನ್ನು ಮಾಡಿಕೊಳ್ಳುವಿರಿ. ಮನಸ್ಸು ಸಂಕೋಚಗೊಂಡಿದ್ದು ಅದರ ವಿಕಾಸಕ್ಕೆ ಹೊರಗಡೆ ಸುತ್ತಾಟ ಮಾಡುವಿರಿ. ಇಂದು ಹೆಚ್ಚಿನ ಸಮಯವನ್ನು ನಿದ್ರೆಯಿಂದ ಕಳೆಯುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ.

ಮಕರ ರಾಶಿ: ನಿಮಗೆ ಆಗದವರ ಜೊತೆ ಕಲಹವನ್ನು ತಂದುಹಾಕುವಿರಿ. ಇಂದು ನಿಮ್ಮ ದುಡಿಮೆಯನ್ನು ಸರಿಯಾದ ಕಡೆ ವಿನಿಯೋಗಿಸುವಿರಿ. ಉಪಕಾರ ಮಾಡುವುದು ನಿಮಗೆ ಖುಷಿ ಕೊಡುವುದು. ಮಕ್ಕಳಿಂದ ನಿಮಗೆ ಖುಷಿಯಾಗಲಿದೆ. ನಿಮ್ಮ ಮಾತಿಗೆ ವಿರೋಧ ಉಂಟಾಗಬಹುದು. ಹೇಳಬೇಕಾದುದನ್ನು ಸ್ಪಷ್ಟವಾಗಿ ಹೇಳಿ. ನೆರಹೊರೆಯರ ಭೂಮಿಯ ವಿಚಾರಕ್ಕೆ ಮನಸ್ತಾಪ. ಕೆಲಸಗಳಿಂದ ಒತ್ತಡವು ಅತಿಯಾಗಬಹುದು, ಸಮಾಧಾನಚಿತ್ತದಿಂದ ಸ್ವೀಕರಿಸಿರಿ. ತಪ್ಪುಗಳಿಂದ ಪಶ್ಚಾತ್ತಾಪ ಆಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸಬೇಕಾಗಬಹುದು. ಕೆಲಸವು ಕಷ್ಟವೆಂದು ಕೈಬಿಡಬಹುದು. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಕೆಲಸವನ್ನು ಮಾಡಿ. ಅದನ್ನು ಹಾಗೇ ಸುಮ್ಮನೇ ಕಳೆಯಬೇಡಿ. ಉನ್ನತವಾದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆದಂತೆ ಅನಿಸುವುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು.

ಕುಂಭ ರಾಶಿ: ನೂತನ ಗೃಹನಿರ್ಮಾಣದ ಬಗ್ಗೆ ಹತ್ತಾರು ಕನಸುಗಳು ಕಣ್ಣ ಮುಂದಿರುವುದು. ಕಷ್ಟಗಳು ನಮ್ಮ ಕರ್ಮದ್ದು ಎನ್ನುವ ವಿಚಾರ ನೆನಪಿರಲಿ. ಅದನ್ನು ಸಹಿಸುವ ಎದುರಿಸುವ ಶಕ್ತಿಯನ್ನು ಕೊಡು ಎಂದು ಕೇಳಿಕೊಳ್ಳಿ. ಸಂಪಾದನೆಗೆ ನೂರು ದಾರಿಗಳಿದ್ದರೂ ನಿಮ್ಮ ಆಯ್ಕೆ ಸ್ಪಷ್ಟವೂ ಯೋಗ್ಯವೂ ಆಗಿರಬೇಕು. ಆಲಸ್ಯವೂ ಒಮ್ಮೆ ನಿಮ್ಮನ್ನು ರಕ್ಷಿಸುವುದು. ಸಾಮರ್ಥ್ಯದ ಬಗ್ಗೆ ಅಪನಂಬಿಕೆ ಇರಲಿದೆ. ನಿಮ್ಮ ಬಗ್ಗೆ ಋಣಾತ್ಮಕವಾದ ಮಾತುಗಳು ಕೇಳಿ ಬರಬಹುದು. ಅದನ್ನು ಧನಾತ್ಮಕವಾಗಿ ಮಾಡುವ ಛಲವು ನಿಮಗೆ ಇರಬೇಕಿದೆ. ಪರಿಸ್ಥಿತಿಗಳು ನಮ್ಮ‌ಅನುಕೂಲಕ್ಕೆ ತಕ್ಕಂತೆ ಇರದು. ನೀವು ಭವಿಷ್ಯಕ್ಕೆಂದು ರೂಪಿಸಿಕೊಂಡ ಯೋಜನೆಗೆ ಇನ್ನಷ್ಟು ಸ್ಪಷ್ಟತೆ ಬೇಕಿದೆ. ನೀವು ಸ್ನೇಹಿತರ ಸಲಹೆಯನ್ನೂ ಪಡೆದರೆ ಒಳ್ಳೆಯದು‌. ಜ್ವರ ಬರುವ ಹಾಗಿದ್ದು ಬೇಕಾದ ಔಷಧವನ್ನು ಸ್ವೀಕರಿಸಿ. ಸುತ್ತಾಡುವ ಮನಃಸ್ಥಿತಿ ಇದ್ದರೂ ದೇಹವು ಸಹಕರಿಸದೇ ಹೋಗಬಹುದು. ವಾಹನವನ್ನು ನಿಧಾನವಾಗಿ ಚಲಾಯಿಸಿ. ಮನೆಯವರ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ನಿಮ್ಮ ಅನನುಕೂಲತೆಯನ್ನು ಹೇಳಬೇಡಿ.

ಮೀನ ರಾಶಿ: ಇಷ್ಟವಾದ ಜನರಿಂದ ದೂರಾಗುವ ಅನಿವಾರ್ಯತೆ ಬರಲಿದೆ. ಸ್ವಂತಿಕೆಯನ್ನು ಸಂಪಾದಿಸಬೇಕು ಎನ್ನುವ ನಿಮ್ಮ ತೀವ್ರತರವಾದ ಪ್ರಯತ್ನಕ್ಕೆ ಇಂದು ಕೆಲವು ಅಡ್ಡಿಗಳು ಬರಬಹುದು. ಇರುವುದರಲ್ಲಿ ಖುಷಿಪಡುವುದು ಉತ್ತಮ. ಸಂಗಾತಿಯನ್ನು ಮುಚ್ಚಿಡಲು ಹೋಗಿ ಸೋಲುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದ ಹಾಗೆ ದಿನವನ್ನು ರೂಪಿಸಿಕೊಳ್ಳಿ. ದುಸ್ಸಾಹಸವು ಒಳ್ಳೆಯದಲ್ಲ. ಅನಾಹುತದ ಭೀತಿ ಕಾಡುವುದು. ವಿದ್ಯಾರ್ಥಿಗಳು ಓದಿನ ಕಡೆ ಗಮನಕೊಟ್ಟರೂ ತಲೆಯ ಒಳಗೆ ಹೋಗದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಸಂಪತ್ತು ವ್ಯಯವಾಗುವ ಸಾಧ್ಯತೆ ಇದೆ. ಒಂದೇ ಕಡೆಯಲ್ಲಿ ಗಮನಹರಿಸಿದ ಕೆಲಸವು ಸರಿಯಾಗಿ ಹೋಗುವುದು.‌ ಸಮಯ ಮಿತಿಯನ್ನು ಇಟ್ಟುಕೊಂಡು ಕೆಲಸವನ್ನು ಮಾಡಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್