AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 02 July: ಇಂದು ಈ ರಾಶಿಯವರಿಗೆ ಬೇಡದ್ದನ್ನು ಕಲಿಯುವ ಆಸಕ್ತಿ

ದಿನ ಭವಿಷ್ಯ ಜುಲೈ 2: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಬುಧವಾರ ಆರ್ಥಿಕ‌ ರಿಸ್ಕ್, ಕಾರ್ಯಗಳು ದೀರ್ಘಾಂತ, ಮುಂಗಡ ಹಣ ವಾಪಾಸು, ವಿಶ್ವಾಸ ಸಾಧನೆ ಇವೆಲ್ಲ ಈ ದಿನ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 02 July: ಇಂದು ಈ ರಾಶಿಯವರಿಗೆ ಬೇಡದ್ದನ್ನು ಕಲಿಯುವ ಆಸಕ್ತಿ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Digi Tech Desk|

Updated on:Jul 02, 2025 | 11:09 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:51 – 17:28, ಯಮಘಂಡ ಕಾಲ 09:23 – 10:59, ಗುಳಿಕ ಕಾಲ 12:37 -14:14

ಮೇಷ ರಾಶಿ: ಬಲಪ್ರದರ್ಶನಕ್ಕೆ ಯೋಗ್ಯ ವ್ಯಕ್ತಿಯನ್ನು ಆರಿಸಿಕೊಳ್ಳುವಿರಿ. ಇಂದು ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಹಳೆಯ ಪ್ರೇಯಸಿಯಿಂದ ಆಹ್ವಾನ ಬರಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಉತ್ಪನ್ನದ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗದು. ಸಾಲವನ್ನು ಸರ್ಕಾರ ತೀರಿಸುತ್ತದೆ ಎಂಬ ಭಾವದಿಂದ ಎಷ್ಟಾದರೂ ಸಾಲವನ್ನು ಮಾಡಬೇಡಿ. ನಿಮಗೇ ಕಷ್ಟವಾಗುವುದು. ಉದ್ಯೋಗದ ಸ್ಥಳದಲ್ಲಿ ಆಗುವ ಕಲಹದಲ್ಲಿ ಯಾರ ಪರವಾಗಿ ಇರಬೇಕು ಎನ್ನುವ ಗೊಂದಲ ಕಾಣಿಸಿ ತಟಸ್ಥರಾಗಬಹುದು. ಶತ್ರುವನ್ನು ಮಿತ್ರನನ್ನು ಮಾಡಿಕೊಳ್ಳುವ ತಂತ್ರವನ್ನು ಹೂಡುವಿರಿ. ಕೆಲವು ಅಭ್ಯಾಸವು ಚಟವಾಗಿ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮನ್ನು ಇಬ್ಬಂದಿ ಮಾಡಬಹುದು. ಆಪ್ತರ ಸಲಹೆಯನ್ನು ಪಡೆಯಿರಿ.

ವೃಷಭ ರಾಶಿ: ಯಶಸ್ಸಿನಿಂದ ನಿಮಗೆ ಸಮಾಧಾನ ಸಿಗದೇ, ಮತ್ತೇನೋ ಬೇಕು ಎನಿಸುವುದು. ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು. ಅದು ನಿಮ್ಮ ವೃತ್ತಿಜೀವನದ ಮೇಲೂ ಪರಿಣಾಮವನ್ನು ಉಂಟುಮಾಡಬಹುದು. ಆರ್ಥಿಕ ವಿಚಾರದಲ್ಲಿ ಸಣ್ಣ ರಿಸ್ಕ್ ತೆಗೆದುಕೊಳ್ಳಲು ಮುಂದಾಗುವಿರಿ. ಕಲೆದುಕೊಂಡಿದ್ದನ್ನು ಪಡೆಯುವ ತನಕ ಸಮಾಧಾನ‌ಸಿಗದು. ಬೇರೆಯವರಲ್ಲಿ ನಿಮ್ಮ ಬಗ್ಗೆ ಇರುವ ಭವನೆಗಳು ಗೊತ್ತಾಗಬಹುದು. ನೀರಿನ ಪ್ರದೇಶಗಳಲ್ಲಿ ಹೋಗುವಾಗ ಜಾಗರೂಕತೆ ಮುಖ್ಯ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಹೂಡಿಕೆಯಲ್ಲಿ ಲಾಭವು ಕಾಣಿಸುವುದು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ: ಸ್ವಲ್ಪ ದೂರವಿದ್ದು ನಿಮ್ಮವರನ್ನು ನೋಡಿದಾಗ ಎಲ್ಲವುಯ ಸ್ಪಷ್ಟ. ಇಂದು ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಸದ್ದಿಲ್ಲದೆ ಮಾಡಿದ ಕೆಲಸದಿಂದ ಎಲ್ಲರೂ ಅಚ್ಚರಿಪಡುವರು. ಒಂದೇ ವಿಚಾರವನ್ನು ಮತ್ತೆ ಮತ್ತೆ ಹೇಳಿದೆ ಎನ್ನಿಸಿದರೂ ಹಿರಿಯರ ಮಾತುಗಳನ್ನು ಅವರ ಮೇಲಿನ‌ ಗೌರವದಿಂದ ಕೇಳಬೇಕಾಗಬಹುದು. ಹಳೆಯ ಖಾಯಿಲೆಯು ಮತ್ತೆ ಬರಬಹುದು. ಅವಕಾಶಗಳನ್ನು ಬಿಟ್ಟಕೊಟ್ಟ ಇದ್ದಲ್ಲಿಯೇ ಇರಬೇಡಿ. ಸಮಯವನ್ನು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳಿ. ನಿಮ್ಮನ್ನು ಬೆಂಬಲಿಸುವವರಿಗೆ ನಿಮ್ಮ ಬೆಂಬಲವನ್ನು ನೀಡುವಿರಿ. ಆತಂಕದ ಸಂದರ್ಭಗಳು ಬರಬಹುದು. ತಾಳ್ಮೆಯಿಂದ ಸರಿಮಾಡಿಕೊಳ್ಳಿ. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ: ದೊಡ್ಡ ಸಮ್ಮಾನವು ದೊಡ್ಡ ಕೆಲಸಕ್ಕೆ ಪ್ರೇರಣೆ ಕೊಡುವುದು. ಇಂದು ನೀವು ದುಶ್ಚಟದಿಂದ ದೂರವಿರಲು ದಾರಿ ಹುಡುಕುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಸ್ನೇಹಿತರಿಗೋಸ್ಕರ ಸಮಯವನ್ನು ಕೊಡಬೇಕಾಗಿಬರಬಹುದು. ಅನ್ಯರ ಪ್ರಭಾವಕ್ಕೆ ಒಳಗಾಗಿ ನಿಮ್ಮನ್ನು ಪರಿವರ್ತಿಸಿಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ. ಹಿಂದೆ ಪಟ್ಟ ಕಷ್ಟದಿಂದ ನಿಮಗೆ ಇಂದು ಸುಖ, ನೆಮ್ಮದಿಗಳು ಸಿಗಲಿವೆ. ನಿಮ್ಮ ಆಲೋಚನೆಗಳನ್ನು ಬೇರೆಯವರ ಮೇಲೆ ಹೇರಬೇಡಿ. ಕಾರ್ಯಕ್ರಮದ‌ ಕಾರಣ ದೂರ ಓಡಾಟ ಬರಬಹುದು. ಕೋಪವನ್ನು ಆದಷ್ಟು ಬುದ್ಧಿಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ. ಮಕ್ಕಳಿಗೆ ನಿಮ್ಮಿಂದ ಪ್ರೊತ್ಸಾಹ ಬೇಕು. ಶಿಕ್ಷಿತರಾದಕಾರಣ ಇದನ್ನು ಹಿಡಿತದಲ್ಲಿ ಇಟ್ಟಿಕೊಳ್ಳಬೇಕಾಗುವುದು. ಯಾವುದನ್ನೂ ಆಗದು ಎಂಬ ಮಾತು ನಿಮ್ಮಿಂದ ಬರುವುದು ಬೇಡ.

ಸಿಂಹ ರಾಶಿ: ನಿಮ್ಮ ಕೆಲಸಗಳು ದೀರ್ಘವಾಗುವುದು ಅಂತ್ಯವನ್ನು ನಿರ್ಧರಿಸದೇ ಇರುವುದರಿಂದ. ನೀವು ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ನಿಮಗೆ ದೈರ್ಯವನ್ನು ತುಂಬುವವರೂ ಇಲ್ಲವಾಗಬಹುದು. ಪ್ರೇಮಸಂಬಂಧದಲ್ಲಿ ಹುರುಳಿಲ್ಲ ಎನಿಸುವುದು. ಹೂಡಿಕೆಯಲ್ಲಿ ನೀವು ಬದಲಾವಣೆಯನ್ನು ಬಯಸುವಿರಿ. ವಿಶ್ರಾಂತಿ ಬೇಕೆನಿಸಿದರೆ ಪಡೆದು ಮುನ್ನಡೆಯುವುದು ಉತ್ತಮ. ವ್ಯಾಪಾರವನ್ನು ಮಾಡುತ್ತಿದ್ದರೆ ಸಾಲವನ್ನು ಕೊಡಲು ಹೋಗಬೇಡಿ. ಭಾರವಾದ ಮನಸ್ಸಿನ ಜೊತೆ ಕೆಲಸ ಮಾಡಲಾಗದು. ಹಣ ಸಂಪಾದನೆಯನ್ನೇ ಮುಖ್ಯವಾಗಿಟ್ಟುಕೊಂಡು ಮನೆಯನ್ನು, ಮಕ್ಕಳನ್ನು ಮರೆಯಬಹುದು. ಅಕಾರಣವಾಗಿ ದುಃಖದ ಸನ್ನಿವೇಷಗಳು ಬರಬಹುದು. ಮನಸ್ಸಿಗೆ ಹಿಡಿಸುವ ಕೆಲಸವನ್ನು ಮಾಡಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು.

ಕನ್ಯಾ ರಾಶಿ: ಅಪರಿಚಿತ ಕರೆಗಳು ನಿಮ್ಮ ವೈಯಕ್ತಿಕ ವಿವರಗಳನ್ನು ಕೇಳಬಹುದು. ನಿಮ್ಮದಲ್ಲದ‌ ವಸ್ತುವನ್ನು ಜೋಪಾನ‌ಮಾಡುವುದು ಅತ್ಯವಶ್ಯಕ. ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ. ಹೂಡಿಕೆ ಮಾಡುವ ಮನಸ್ಸಿದ್ದರೆ ಸ್ವಲ್ಪ ಮಾಡಿ. ಆದರೆ ನೀವು ನಿರೀಕ್ಷಿಸಿದಷ್ಟು ಲಾಭವನ್ನು ಪಡೆಯುವುದು ಕಷ್ಟವಾಗಬಹುದು. ನಿಮ್ಮ ಮಾತಿನಲ್ಲಿ ತಪ್ಪು ಹುಡುಕುವವರಿಗೆ ಭಯಪಡುವಿರಿ. ಇಂದು ಮನೆಗೆ ಬರುವವರು ಬಾರದೇಹೊಇಗಬಹುದು. ನೀವು ಸ್ವತಂತ್ರವಾಗಿ ಬದುಕುವ ಇಚ್ಛೆ ಹೊಂದುವಿರಿ. ಅನುಕೂಲತೆಯನ್ನು ನೋಡಿ ಮನೆಗೆ ಸಹಾಯ ಮಾಡುವಿರಿ. ಪರರ ಉಪಕಾರವನ್ನು ನೀವು ಸ್ಮರಿಸುವಿರಿ. ಅನವಶ್ಯವೆನಿಸಿದರೆ ಅಂತಹ ಖರ್ಚನ್ನು ಮಾಡಲೇ ಬೇಡಿ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದು.

ತುಲಾ ರಾಶಿ: ನಿಮ್ಮ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವ‌ನ್ನು ಸಾಧಿಸುವಿರಿ. ಇಂದು ನಿಮ್ಮ ಮನಸ್ಸನ್ನು ಒಂದೇ ಕಾರ್ಯದಲ್ಲಿ ನಿಲ್ಲಿಸಲಾಗದು. ನೀವೇ ಆಯ್ಕೆ ಮಾಡಿಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ಸ್ನೇಹವು ಬಲಗೊಳ್ಳಬಹುದು. ಕಛೇರಿಯಲ್ಲಿ ಇಂದು ಅಸಮಾಧನಕಾರ ವಾತಾವರಣ ಇರಲಿದೆ. ಕಛೇರಿಯ ಆರಂಭದಲ್ಲಿ ಮೇಲಧಿಕಾರಿಗಳಿಂದ ಬೈಗುಳ ಕೇಳಿಬರುವುದು. ನಿಮ್ಮ ವಿರುದ್ಧ ಯಾರೋ ಏನ್ನೋ ನಡೆಸುತ್ತಿದ್ದಾರೆ ಎಂಬ ಅನುಮಾನ ಕಾಡಲಿದೆ. ಸಂಗಾತಿಯ ಗಂಭೀರ ಸಮಸ್ಯೆಗೆ ಸ್ಪಂದಿಸಿ. ಕೆಲಸವು ಎಷ್ಟೇ ಚೆನ್ನಾಗಿದ್ದರೂ ಪ್ರಶಂಸೆ ಸಿಗುತ್ತಿಲ್ಲ ಎಂಬ ನೋವು ಹೆಚ್ಚಾಗಬಹುದು. ಕೆಲಸದಲ್ಲಿ ವೈರಾಗ್ಯವೂ ಬರುವ ಸಾಧ್ಯತೆ ಇದೆ. ನಕಾರಾತ್ಮಕತೆಯ ಬಗ್ಗೆ ಚಿಂತಿಸಿ, ಆದರೆ ಅದರದ್ದೇ ಆಲೋಚನೆಯಲ್ಲಿ ನೀವು ಮುಳುಗಬೇಡಿ. ಅನಿವಾರ್ಯವಾಗಿ ಬಂದ ಕೆಲಸವನ್ನು ಮಾಡಬೇಕಾಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎಂಬ ಮಾನಸಿಕತೆ ನಿಮ್ಮನ್ನು ಖುಷಿಯಿಂದ ಇಡಲಿದೆ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ. ಇನ್ನೊಬ್ಬರ ನೋವಿಗೆ ಸ್ಪಂದನೆ ಇರಲಿ.

ವೃಶ್ಚಿಕ ರಾಶಿ: ದೊಡ್ಡ ನಗರಗಳಲ್ಲಿ ಒಂಟಿಯಾಗಿ ಸಂಚಾರ ಮಾಡುವಿರಿ. ನಿಮ್ಮ ಬಳಿ ಇರುವ ಸಂಪತ್ತಿನಲ್ಲಿ ಅಲ್ಪವನ್ನಾದರೂ ಸಹಾಯಕ್ಕಾಗಿ ನೀಡಿ. ಮುಂದೆ ಅದೇ ಮರಳಿ ಬರಬಹುದು. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ಕಾಲು ನೋವಿನಿಂದ ನರಕದ ಅನುಭವವಾಗಬಹುದು. ನಿಮ್ಮ ನಾಯಕತ್ವವು ಎಲ್ಲರಿಗೂ ಅರಿವಿಗೆ ಬರುವುದು. ಅಧಿಕಾರವು ಸಿಕ್ಕ ಮಾತ್ರಕ್ಕೆ ಹೇಗಾದರೂ ಚಲಾಯಿಸಬೇಕೆಂದಿಲ್ಲ. ನೈತಿಕವಾಗಿ ಮಾತು ಇರಲಿ. ಹಣಕಾಸಿನ ವಿಚಾರದಲ್ಲಿ ಇರುವ ಗೊಂದಲವನ್ನು ಆರ್ಥಿಕ ತಜ್ಞರ ಬಳಿ ಬಗೆಹರಿಸಿಕೊಳ್ಳಬಹದು. ಯಾರ ಬಗ್ಗೆಯೂ ತೀರ್ಮಾನ ಕೊಡುವ ಬದಲು ಪೂರ್ವಾಪರ ವಿಚಾರಗಳನ್ನು ಗಮನಸಿಕೊಳ್ಳಿ. ಪ್ರತ್ಯಕ್ಷವಾಗಿ ಕಂಡಿದ್ದೂ ಸುಳ್ಳಾಗುವುದು. ನಿಮ್ಮ ಮೂಗಿನ ನೇರದ್ದು ಮಾತ್ರ ಸತ್ಯವಾಗಿ ಇರದು. ಜನರನ್ನು ಅವರ ಯೋಗ್ಯತೆಯ ಆಧಾರದ ಮೇಲೆ ಕೆಲಸಕ್ಕೆ ಜೋಡಿಸಿ. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ‌ ಮೇಲೆ ಪ್ರಭಾವವನ್ನು ಬೀರಲಿದೆ.

ಧನು ರಾಶಿ: ಮುಂಗಡ ಹಣವನ್ನು ಮರಳಿ ಹಿಂದಿರುಗಿಸುವಿರಿ. ಇಂದು ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಣವನ್ನು ಕೊಡಬೇಕಾಗಿಬರಬಹುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ವಾಹನ ರಿಪೇರಿಯಿಂದ ಖರ್ಚಾಗಲಿದೆ. ಕುಟುಂಬದಲ್ಲಿ ತಾನೇ ಶ್ರೇಷ್ಠ ಎಂಬ ಭಾವ ಬೇಡ. ಸ್ಥಳ ಖರೀದಿಗೆ ಕೂಡಿಟ್ಟ ಹಣವು ಮತ್ತೆಲ್ಲಿಗೋ ವಿಯೋಗವಾಗುವುದು. ಸಮಯವು ಒಂದೇ ರೀತಿಯಲ್ಲಿ ಇರದು. ಅಕಸ್ಮಾತ್ ಆಗಿ ಸಿಕ್ಕ ಜವಾಬ್ದಾರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಇರುವ ಸಮಸ್ಯೆಯನ್ನು ಎದುರಿಸಲು ಹೋಗಿ ಮತ್ತೊಂದು ಸಮಸ್ಯೆಯನ್ನು ಹುಟ್ಟುಹಾಕಿಕೊಳ್ಳಬೇಡಿ. ಸ್ವಾಭಾವಿಕ ಮಾತೂ ತಿರುಗುಬಾಣವಾಗಲಿದೆ. ಅವರ ಮೇಲೆ ಬುದ್ಧಿವಂತಿಕೆ ಸವಾರಿ ಮಾಡಬೇಡಿ. ಅವರ ಬೇಸರವೇ ನಿಮಗೆ ದುಃಖವನ್ನು ತಂದುಕೊಟ್ಟೀತು. ಯಾರನ್ನೂ ನಂಬದವರು ಇಂದು ನಂಬಿ ಮೋಸ ಹೋಗಬಹುದು. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ.

ಮಕರ ರಾಶಿ: ಹೊಸ ಸ್ನೇಹಿತರ ಆಗಮನದಿಂದ ಹಳಬರನ್ನು ನಿರ್ಲಕ್ಷ್ಯ ಮಾಡುವ ಸಂಭವವಿದೆ‌. ಇಂದು ಸಹೋದರರ ಜೊತೆ ಪ್ರೀತಿಯಿಂದ ಇರುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಯಾರನ್ನೂ ಸಾಧರಣ‌ ಮನುಷ್ಯ ತಿಳಿದುಕೊಳ್ಳಬೇಡಿ. ಅವರ ಯೋಗ್ಯತೆಯನ್ನು ಅವರ ಬಟ್ಟೆಯಿಂದ, ಮಾತಿನಿಂದ ಅಳೆಯಲು ನೀವಿಂದು ಅಶಕ್ಯರು. ಒತ್ತಡಗಳು ನಿಮ್ಮ ಆರೋಗ್ಯವನ್ನು ಇನ್ನೂ ದುರ್ಬಲ ಸ್ಥಿತಿಗೆ ಒಯ್ಯುವುದು. ಒಂದೊಂದೇ ಖರ್ಚನ್ನು ನೀವು ನಿಭಾಯಿಸುವಾಗ ಅದೊಂದು ದೊಡ್ಡ ಮೊತ್ತವಾಗಿ ಕಾಣಬಹುದು. ನಿಮ್ಮಷ್ಟಕ್ಕೇ ನೀವು ಹೊಸತನವನ್ನು ಸೃಷ್ಟಿಸಿಕೊಂಡು ಅಪಮಾನಕ್ಕೆ ಒಳಗಾಗುವಿರಿ. ಸ್ವಾವಲಂಬಿಯಾಗಲು ಶ್ರಮಿಸಿಸುವಿರಿ. ಮೇಲೆಧಿಕಾರಿಗಳ ದಯಾಪಾಶವು ನಿಮ್ಮನ್ನು ವೃತ್ತಿಯಲ್ಲಿ ಉಳಿಸಬಹುದು. ಸಂಕಷ್ಟ‌ ಬಂದಾದ ಎಲ್ಲದಕ್ಕೂ ಏನೋ‌ ಒಂದು ಕಾರಣವಿರಬಹುದು ಎಂದು ಸಮಾಧಾನವನ್ನು ತಂದುಕೊಳ್ಳುವಿರಿ. ಗೃಹನಿರ್ಮಾಣದ ಪ್ರಸ್ತಾಪವು ಇರಲಿದೆ.

ಕುಂಭ ರಾಶಿ: ಮಾನಸಿಕ ಖಿನ್ನತೆಯಿಂದ ಮಾರ್ಗಗಳು ಕಾಣಿಸದೇ ಇರಬಹುದು. ನಿಮ್ಮ ಯಶಸ್ಸು ಕಂಡು ನಿಮ್ಮವರೇ ಸಂಕಟ ಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದ ಊರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಹಳೆಯ ವಿಚಾರಗಳನ್ನು ಪತಿಯಿಂದ ಕೇಳುವ ಸಂದರ್ಭ ಬರಬಹುದು. ಸಾಮಾಜಿಕವಾದ ಕೆಲಸವನ್ನು ಮಾಡುವವರಿಗೆ ತಾಳ್ಮೆ ಮುಖ್ಯವಾಗಿ ಬೇಕಾಗಿದೆ. ಆರ್ಥಿಕ ವಿಚಾರದಲ್ಲಿ ಹೊಂದಾಣಿಕೆ ಇದ್ದರೆ ಅದು ಕೆಲವು ಕಾಲದ ವರೆಗೆ ಮಾತ್ರ. ಸ್ವಭಾವವನ್ನು ತಿದ್ದಿಕೊಳ್ಳಲು ಇಷ್ಟಪಟ್ಟರೂ ನಿಮ್ಮ ಜೊತೆಗಿರುವವರು ಅದನ್ನು ಬಿಡಲಾರರು. ನಿಮ್ಮನ್ನು ಛೇಡಿಸುತ್ತ ಹಾಸ್ಯ ಮಾಡುವರು. ಸಾಲವನ್ನು ಮಾಡಬೇಕಾಗಿ ಬಂದರೆ ಬಹಳ ಎಚ್ಚರಿಕೆಯಿಂದ ಜನರನ್ನು ನೋಡಿ ಮಾಡಿ. ನಿರುತ್ಸಾಹಕ್ಕೆ ಮದ್ದು ಅವಶ್ಯಕ. ಯಾವುದಾದರೂ ಘಟನೆಯು ನಿಮ್ಮನ್ನು ಇಂದು ಹೆಚ್ಚು ಕಾಡಬಹುದು. ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು.

ಮೀನ ರಾಶಿ: ದುಡಿಮೆಯಿಂದ ಗಳಿಸಿದ ಹಣ ಸ್ಥಿರವಾಗಿ ಉಳಿಯುವುದು. ಉಳಿದವರಿಗೆ ಆತಂಕವಿರಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣುವುದು ಬೇಡ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ನನಸು ಮಾಡಿಕೊಳ್ಳುವಿರಿ. ಬಂಧುಗಳ ವಿಯೋಗವಾರ್ತೆಯು ಬರಬಹುದು. ನೀವಂದು ಅಶಕ್ತರಿಗೆ ಸಹಾಯ ಮಾಡುವಿರಿ. ಅತಿಯಾದ ಹಠಮಾರಿತನವನ್ನು ಉಳಿಸಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು. ಒಲಿಸಿಕೊಳ್ಳಲು ಸ್ತ್ರೀಯರು ನಿಮ್ಮನ್ನು ಪ್ರಶಂಸಿಸಿಯಾರು. ಆಪ್ತರು ನೀಡುವ ಉಡುಗೊರೆಯಿಂದ ಸಂತೃಪ್ತಿ ಇರುವುದು. ನಿಮ್ಮ ಕೈಲಾದ ಸಹಾಯವನ್ನು ಮಾಡಿ. ಸಾಧ್ಯವಾದರೆ ನಿತ್ಯವೂ ಅನ್ನದಾನ ನಡೆಯುವ ಸ್ಥಳಕ್ಕೆ ಹೋಗಿ ಸುವಸ್ತುವನ್ನು ಕೊಡಿ. ಸುಳ್ಳಾಡುವವರ ಬಗ್ಗೆ ಅತಿಯಾದ ಕೋಪವಿರಲಿದೆ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಇಂದು ಅಪರಿಚಿತ ಸ್ಥಳವು ಆಪ್ತವೂ ಆಗಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 1:03 am, Wed, 2 July 25