AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ, ಮಂಗಳವಾರ ಅಲೌಕಿಕ ಅನುಭವಕ್ಕೆ ಆಸೆ, ಅಸಂಗತ ವಿಚಾರದ‌ ಕಡೆ ಗಮನ, ನೇರ ಮಾತಿನಿಂದ ದ್ವೇಷ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jun 03, 2025 | 1:48 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ – 06 : 03 am, ಸೂರ್ಯಾಸ್ತ – 06 – 57 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:44 – 17:21, ಯಮಘಂಡ ಕಾಲ 09:17 – 10:54, ಗುಳಿಕ ಕಾಲ 12:31 – 14:08

ಮೇಷ ರಾಶಿ: ಇನ್ನೊಬ್ಬರ ಮುಂದೆ ಸಂಭ್ರಮಿಸುವುದು ಬೇಡ. ಅಸೂಯ ಬರಬಹುದು. ಇಂದು ಅನುಭವಿಗಳ ಜೊತೆ ನಿಮ್ಮ ಅನನುಭವದ ಸನ್ನಿವೇಶವನ್ನು ಹಂಚಿಕೊಳ್ಳುವಿರಿ. ಅದು ಬಾಲಿಶ ಎನಿಸುವುದು. ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಭಯದ ಕಾರಣಕ್ಕೆ ನೀವು ಎಲ್ಲ ಕಾರ್ಯಗಳಿಂದ ಹಿಮ್ಮುಖರಾಗುವಿರಿ. ಕೆಲವರಿಗೆ ದಾರ್ಷ್ಟ್ಯದ ಮಾತುಗಳನ್ನು ಆಡಬೇಕಾಗುವುದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು.

ವೃಷಭ ರಾಶಿ: ಲಾಭಕ್ಕಿಂತ ಹೆಚ್ಚಾಗಿ ವಸ್ತುನಿಷ್ಠರಾಗಿ ಇರುವಿರಿ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಕಾಗದು. ನೀವು ಇತರರ ಸಲಹೆಯನ್ನು ಮಾತ್ರ ಅವಲಂಬಿಸಿದ್ದರೆ ಸಂಭಾವ್ಯ ಆರ್ಥಿಕ ನಷ್ಟಗಳ ಬಗ್ಗೆ ಜಾಗರೂಕರಾಗಿರಿ. ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ ದೂರವಿರಿ. ಎಷ್ಟೇ ಹಣವಿದ್ದರೂ ಸಾಲದಂತೆ ಕಾಣಿಸುವುದು. ಕುಟುಂಬದ ಜೊತೆ ಸಮಯ ಕಳೆಯುವುದು ಸಂತೋಷ ತರಲಿದೆ. ಸ್ನೇಹಿತರೊಂದಿಗೆ ಉತ್ತಮ ಮಾತುಕತೆ ಸಾಧ್ಯ. ಹೊಸ ಯೋಜನೆ ನಿಮ್ಮ ದಿಕ್ಕು ಬದಲಾಯಿಸಬಹುದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಕೆಲವು ಅಪವಾದವನ್ನು ಅನಿವಾರ್ಯವಾಗಿ ಹೊರಬೇಕಾಗುವುದು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸುವಿರಿ. ಹಳೆಯ ವಿಚಾರವನ್ನು ಮತ್ತೆ ತೆಗದು ವಿವಾದ ಮಾಡಿಕೊಳ್ಳುವ ಸಂದರ್ಭವಿದೆ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಸಜ್ಜನರ ಸಹವಾಸದಿಂದ ಕೆಲವು ಬದಲಾವಣೆಯನ್ನು ತಂದುಕೊಳ್ಳುವಿರಿ.

ಮಿಥುನ ರಾಶಿ: ವಿವೇಕದಿಂದ ನಿಮಗೆ ಹೊಸ ಅರಿವು ಮೂಡುವುದು. ನಿಮ್ಮ ಬಿಡುವಿನ ದಿನದಲ್ಲಿಯೂ ಕುಟುಂಬದವರ ಬಗ್ಗೆ ಕಾಳಜಿ ಇರದು. ಬಹಳ ದಿನಗಳಿಂದ ಉಳಿದ‌ ಕಾರ್ಯಕ್ಕೆ ನಿಮ್ಮ ಪೂರ್ಣ ಪರಿಶ್ರಮ ಬೇಕಾಗಲಿದೆ. ನಿಮ್ಮ ಮಾತುಕತೆಗಳು ಪ್ರಾಮಾಣಿಕರಾಗಿರಲಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸುವಿರಿ. ಹಣಕಾಸಿನಲ್ಲಿ ಬದಲಾವಣೆ ಬೇಕಾದರೆ ಹೊಸ ಯೋಚನೆ ಮಾಡಿ. ಕುಟುಂಬದ ವಿಷಯದಲ್ಲಿ ನಿಮ್ಮ ಮಾತಿಗೆ ಬೆಲೆ ಇರುತ್ತದೆ. ನಿಮ್ಮ ಸ್ವಪ್ನಗಳಿಗೆ ಹೊಸ ದಿಕ್ಕು ಸಿಗಲಿದೆ. ಆರೋಗ್ಯ ಸರಿಹೊಂದುತ್ತದೆ. ವ್ಯಾಪಾರ ಪ್ರಯತ್ನಗಳು ಫಲಪ್ರದವಾಗುತ್ತವೆ. ಉಡುಗೊರೆಗಳು ಅಥವಾ ಗೌರವ ಹೆಚ್ಚಾಗುತ್ತದೆ. ಮಾಡಿದ ಪ್ರಯತ್ನಗಳು ಸಾರ್ಥಕವಾಗುತ್ತವೆ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು.

ಕರ್ಕಾಟಕ ರಾಶಿ: ಸಂಗಾತಿಯ ವಿರುದ್ಧ ಮಾತನಾಡುವುದನ್ನು ಸಹಿಸಲಾರಿರಿ. ಇಂದು ನಿಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗಿ ಬರಬಹುದು. ಕುಟುಂಬ ಸದಸ್ಯರ ಬಗ್ಗೆ ನಿಮಗಿದ್ದ ನಿರೀಕ್ಷೆಗಳು ಹುಸಿಯಾಗಬಹುದು. ಪ್ರೀತಿ ಇಂದು ನಿಮಗೆ ಸಂತೋಷವನ್ನು ತರಬಹುದು. ಕೆಲಸದಲ್ಲಿ ಉತ್ಪಾದಕ ದಿನವನ್ನು ನಿರೀಕ್ಷಿಸಿ. ಹೊಸ ಕೆಲಸ ಮಾಡಲು ಅವಕಾಶಗಳು ಸಿಗಲಿವೆ. ಸಮಯ ಸ್ವಲ್ಪ ತೊಂದರೆ ಉಂಟುಮಾಡುತ್ತದೆ. ಆದರೆ ನಿಮಗೆ ಅವಕಾಶ ಸಿಗುತ್ತದೆ ಮತ್ತು ಆರ್ಥಿಕ ಲಾಭವು ತೃಪ್ತಿಕರವಾಗಿರುತ್ತದೆ. ದಿನದ ಅಂತ್ಯವನ್ನು ನಿಮ್ಮ ಮಕ್ಕಳೊಂದಿಗೆ ಕಳೆಯುತ್ತೀರಿ. ಮಕ್ಕಳ ಜವಾಬ್ದಾರಿಗಳನ್ನು ಪೂರೈಸಲಾಗುವುದು. ಎಲ್ಲರೂ ನಿಮ್ಮನ್ನು ಮೆಚ್ಚಬೇಕು ಎಂದುಕೊಳ್ಳುವಿರಿ. ಸೃಜನಾತ್ಮಕ ಪ್ರಯತ್ನಗಳು ಫಲ ನೀಡುತ್ತವೆ. ಪರದೇಶದಲ್ಲಿ ಇರುವವರಿಗೆ ಜೀವನ ಕಷ್ಟವೆನಿಸಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು.

ಸಿಂಹ ರಾಶಿ: ಒಬ್ಬರನ್ನೇ ಲೌಕಿಕ ಕಾರ್ಯಕ್ಕೆ ನಂಬಿ ಕುಳಿತರೆ ಆಗದು. ನಿಮ್ಮನ್ನು ಅವರು ಕೇವಲವಾಗಿ ನೋಡಬಹುದು. ಇಂದು ಸಾಮಾಜಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ಸಿಗುವುದು. ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು. ಹೊಸ ವ್ಯವಹಾರ ಒಪ್ಪಂದಗಳು ಮತ್ತು ನಿರುದ್ಯೋಗಿಗಳಿಗೆ ಯಶಸ್ಸು ಸಿಗುತ್ತದೆ. ಲಾಭದ ಸ್ಥಿತಿ ಉಳಿಯುತ್ತದೆ. ನಿಮ್ಮ ಮಾತನ್ನು ನಿಯಂತ್ರಿಸಿ, ಕೋಪವು ವಿವಾದಗಳಿಗೆ ಕಾರಣವಾಗಬಹುದು. ವೈವಾಹಿಕ ಜೀವನವು ಆಹ್ಲಾದಕರವಾಗಿರುವುದು. ಮಿತವಾಗಿ ಕಡಿಮೆ ತೆಗೆದುಕೊಳ್ಳಿ. ಲೋಕ ವ್ಯವಹಾರದಲ್ಲಿ ಆಸಕ್ತಿ ತೋರಿಸಲಾರಿರಿ. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಷ್ಠೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು.

ಕನ್ಯಾ ರಾಶಿ: ಮನಸ್ಸು ನಕಾರದ ಕಡೆಗೆ ಹೋದರೂ ನೀವು ಅದನ್ನು ಸರಿದಾರಿಗೆ ತರಲೇಬೇಕಾಗುವುದು. ನಿಮ್ಮ ದೌರ್ಬಲ್ಯಗಳನ್ನು ಹತೋಟಿ ತರುವುದು ಕಷ್ಟವಾಗುವುದು. ಇದೇ ಕಾರಣಕ್ಕೆ ಅಪಮಾನವನ್ನು ಎದುರಿಸಬೇಕಾಗುವುದು. ಭೂಮಿ ಮಾರಾಟದ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮವಾಗಿರುವುದು. ಯಾವುದೇ ರೀತಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಮನಸ್ಸು ಸಂತೋಷವಾಗಿರುತ್ತದೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯುತ್ತೀರಿ. ಅಗತ್ಯ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸರ್ಜನಾತ್ಮಕ ಕೆಲಸಗಳಲ್ಲಿ ಪ್ರಗತಿ ಇರುತ್ತದೆ. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಸಾಮರಸ್ಯದ ಕೊರತೆ ಎದ್ದು ಕಾಣಿಸುವುದು. ಅತಿಯಾದ ಕೋಪದಿಂದ ನಿಮ್ಮ ವ್ಯವಹಾರವು ಬುಡಮೇಲಾದೀತು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ