AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಓಡಾಟವನ್ನು ಫಲಪ್ರದವನ್ನಾಗಿ ಮಾಡಿಕೊಳ್ಳುವರು…

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಸೋಮವಾರದಂದು ದುಡುಕಿ ದುಃಖ, ಭೋಗಾಪೇಕ್ಷೆ, ಸಂಶೋಧನೆ, ವಾಹನದಿಂದ ಲಾಭ, ಆಚರಣೆಯಲ್ಲಿ ಸುಧಾರಣೆ, ಅಡಚಣೆಯಿಂದ ಅಸಹನೆ, ಕ್ರಾಂತಿಯ ಸ್ವಭಾವ ಇವೆಲ್ಲ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಓಡಾಟವನ್ನು ಫಲಪ್ರದವನ್ನಾಗಿ ಮಾಡಿಕೊಳ್ಳುವರು...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 05, 2026 | 12:04 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಶಿವ , ಕರಣ : ಗರಜ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:40 – 09:09, ಯಮಗಂಡ ಕಾಲ 10:38 – 12:08, ಗುಳಿಕ ಕಾಲ 13:37 – 17:07

ಮೇಷ ರಾಶಿ : ಮೋಜಿನಲ್ಲಿ ಈ ದಿನವನ್ನು ಕಳೆದುಕೊಳ್ಳುವಿರಿ. ಇಂದು ವಿದ್ಯಾಭ್ಯಾಸದಲ್ಲಿ ಆಸಕ್ತಿಯು ಕಡಿಮೆ ಆಗಲಿದೆ. ಆಸ್ತಿ ಖರೀದಿಯ ಬಗ್ಗೆ ಮನೆಯಲ್ಲಿ ಚಿಂತನೆಯನ್ನು ನಡೆಸಬಹುದು. ಬರಬೇಕಾದ ಹಣವನ್ನು ಪಡೆಯಲು ಮನೆಗೇ ಹೋಗಲಿದ್ದೀರಿ. ಉದ್ಯೋಗದ ಕಾರಣಕ್ಕೆ ಅಲೆದಾಟ ಅತಿಯಾಗಬಹುದು. ಮಾತು ಅವಮಾನವಂತೆ ಕಂಡರೆ ಅಲ್ಲಿರುವುದು ಬೇಡ.‌ ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ.

ವೃಷಭ ರಾಶಿ : ನಿಮ್ಮ ಸಂಪತ್ತಿನ ಅಳೆಯುವರು. ಗುಟ್ಟನ್ನು ನೀವು ಬಿಟ್ಟಕೊಡುವಿರಿ. ನಿಮ್ಮ ತಪ್ಪು ತಿಳಿದಿಕೊಂಡವರಿಗೆ ಸರಿಯಾದ‌ ಮಾಹಿತಿಯನ್ನು ಕೊಡುವಿರಿ.‌ ಇಂದು ನಿಮ್ಮ ಆಲಸ್ಯವು ಯಶಸ್ಸಿನ ಶತ್ರುವಾಗಬಹುದು. ಸುಳ್ಳು ಹೇಳಿಕೊಂಡು ನಿಮ್ಮ ದಾಖಲೆಗಳನ್ನು ಪರಿಶೀಲಿಸಬಹುದು. ಧಾರ್ಮಿಕ ವಿಚಾರಕ್ಕೆ ನೀವು ಹೆಚ್ಚು ಒತ್ತಡುವಿರಿ. ಹೊಸತನ್ನು ಮಾಡಬೇಕು ಎಂಬ ಮನಸ್ಸು ಬರಬಹುದು. ಭೂಮಿಯ ವ್ಯವಹಾರವು ಇಂದು ಕಾರಣಾಂತರಗಳಿಂದ ಸ್ವಲ್ಪ ಹಿಮ್ಮುಖವಾಗಿ ಹೋಗಬಹುದು.

ಮಿಥುನ ರಾಶಿ : ಬಂಧುಗಳಿಗಾಗಿ ನೀವು ಹಣವನ್ನು ನೀಡಬೇಕಾಗಬಹುದು. ವಿದ್ಯಾಭ್ಯಾಸಕ್ಕಾಗಿ ಮನೆಯವರಿಂದ ಪ್ರೋತ್ಸಾಹವನ್ನು ಪಡೆಯುವಿರಿ. ಅನಿವಾರ್ಯವಾಗಿ ನೀವು ಬದಲಾಯಿಸಿದ ವೃತ್ತಿಗೇ ಹೋಗಬೇಕಾಗುವುದು. ನಿಮ್ಮನ್ನು ಅತಿಯಾಗಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ಸಹೋದರಿಂದ ನಿಮಗೆ ಬೇಕಾದ ಸಹಾಯ ಇಂದು ಪಡೆಯುವಿರಿ. ನಿಮ್ಮ ಬಗ್ಗೆ ಯಾರಿಂದಲೋ ಮಾಹಿತಿಯನ್ನು ಪಡೆಯುವರು. ಸಂಬಂಧಿಸದ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗಬಹುದು.

ಕರ್ಕಾಟಕ ರಾಶಿ : ನಾಯಕರಾಗುವುದಕ್ಕಿಂತ ಹಾಗೆ ನಡೆದುಕೊಳ್ಳುವುದೂ ಮುಖ್ಯವಾಗಲಿದೆ. ಜೀವನವು ಬಹಳ ನಿಧಾನವಾಗಿ ಚಲಿಸುತ್ತಿದೆ ಎಂದು ಅನ್ನಿಸಬಹುದು. ಸಂಗಾತಿಯ ಜೊತೆ‌ಗಿನ ಕಲಹದಿಂದ‌ ಕೆಲ ಕಾಲ ಮೌನವು ಆವರಿಸುವುದು. ಪ್ರಸಿದ್ಧ ವ್ಯಕ್ತಿಗಳನ್ನು ಭೇಟಿ ಮಾಡುವಿರಿ. ಆಪ್ತರ ಜೊತೆ ಅನೇಕ ದಿನಗಳ ಅನಂತರ ನೀವು ಕಾಲಕಳೆಯುವಿರಿ. ಇದು ನಿಮಗೆ ಸಂತೋಷವನ್ನು ಕೊಡುವುದು. ಯಾವ ಮೆಚ್ಚುಗೆಯನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಲಾರಿರಿ.

ಸಿಂಹ ರಾಶಿ : ಮಕ್ಕಳಿಂದ ನಿಮ್ಮ ತೊಂದರೆ ದೂರಾಗುವುದು. ಸಾಲವೇ ನಿಮಗೆ ಸಾಲವಾಗದು. ಅನಾರೋಗ್ಯದ ಕಾರಣ ಆರ್ಥಿಕ ಮಟ್ಟವು ಕುಸಿಯುವುದು. ಹೆಚ್ಚಿನ ಆರ್ಥಿಕ ಮೂಲವನ್ನೂ ಪಡೆಯಲು ಕಷ್ಟವಾದೀತು. ಆಲೋಚನೆಗಳು ಅಸ್ಥಿರವಾಗಿ ಇರುತ್ತವೆ. ನಿಮ್ಮ ಬಗ್ಗೆ ಇತರರಿಗೆ ಅನುಕಂಪ ಬರಬಹುದು. ಅಧಿಕಾರಕ್ಕಾಗಿ ನೀವು ತಂತ್ರವನ್ನು ಬಳಸಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತೆಯಿಂದ ಇರುವುದು ಸುಖವೆನಿಸಬಹುದು.

ಕನ್ಯಾ ರಾಶಿ : ನಿಮ್ಮ ಬಳಿ ಅಪರಿಚಿತರು ಸಹಾಯವನ್ನು ಕೇಳಿಕೊಂಡು ಬರಬಹುದು. ಇಲ್ಲ ಎನದೇ ಅಲ್ಪವನ್ನಾದರೂ ದಾನಮಾಡಿ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಯಾವ ಹೊರೆಯನ್ನೂ ನೀವು ಹೊರಲು ಸಿದ್ಧರಾಗುವುದಿಲ್ಲ. ಮನಬಂದಂತೆ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಬಂಧುಗಳ ಜೊತೆ ನಿಮ್ಮ ವಿಚಾರವನ್ನು ಹಂಚಿಕೊಂಡು ಸಮಾಧಾನ ಪಡುವಿರಿ. ಭವಿಷ್ಯದ ಬಗ್ಗೆ ಚಿಂತೆಯೂ ಕಾಡಬಹುದು.

ತುಲಾ ರಾಶಿ : ಒಂಟಿಯಾಗಿ ಇದ್ದಷ್ಟೂ ನಿಮಗೆ ಏನೇನೋ ಯೋಚನೆಗಳು ಬರಬಹುದು. ನಿಮ್ಮ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಿ. ಕೆಲವು ಪ್ರಗತಿಗಳು ನಿಮಗೆ ಆಶ್ಚರ್ಯಕರ ಎನಿಸುವುದು. ಜಾಣತನದಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಬೇಕಾಗಬಹುದು.‌ ವಿದೇಶಪ್ರಯಾಣಕ್ಕೆ ನಿಮಗೆ ಅವಕಾಶಗಳು ಬರಬಹುದು. ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡುವಿರಿ. ಆತ್ಮೀಯರ ಒಡನಾಟದಿಂದ ನಿಮಗೆ ಖುಷಿಯಾಗಲಿದೆ.

ವೃಶ್ಚಿಕ ರಾಶಿ : ಎಲ್ಲವನ್ನೂ ಸಂಭ್ರಮಿಸಿದರೆ ಯಾವುದೂ ಕಷ್ಟವೆನಿಸದು. ನಿಮ್ಮ‌ ಸಮಾನರಿಗೂ ಕೆಲವು ಸಂದರ್ಭದಲದಲಿ ಗೌರವ ಕೊಡಬೇಕಾಗುವುದು. ನಿಮ್ಮ ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಆಗದು. ಹಿತಶತ್ರುಗಳನ್ನು ಹಿಮ್ಮೆಟ್ಟಿಸಲು ನಿಮಗೆ ಕೆಲವು ತಂತ್ರಗಳು ಗೊತ್ತಿರುವುದು. ಅದನ್ನು ಪ್ರಯೋಗಿಸುವಿರಿ. ವ್ಯವಹಾರ ಲಾಭದಾಯಕವಾಗಿ ನಡೆಯಲಿದೆ, ಉದ್ಯೋಗದಲ್ಲಿ ಪ್ರಗತಿಯನ್ನು ಸಾಧಿಸುವಿರಿ. ನಿಮ್ಮ ಅಗಾಧ ಜ್ಞಾನದ ಬಗ್ಗೆ ಸ್ಥೈರ್ಯವು ಬೇಕು.

ಧನು ರಾಶಿ : ಗೊತ್ತಿಲ್ಲದೇ ಮಾತನಾಡುವುದು ನಿಮಗೆ ಶೋಭೆ ತರದು. ವಂಚನೆಯ ಬಲೆಯಲ್ಲಿ ನೀವು ಸಿಕ್ಕಿಕೊಳ್ಳಬಹುದು. ಕಲಹವದಿಂದ ನಿಮಗೆ ತೃಪ್ತಿ ಸಿಕ್ಕರೂ ಇತರರ ಪಾಡನ್ನೂ ಗಮನಿಸಿ. ನಿಮ್ಮವರನ್ನು ರಕ್ಷಿಸಿಕೊಳ್ಳಲು ಬಹಳ ಪ್ರಯತ್ನ ಪಡುವಿರಿ. ಸಂಗಾತಿಯ ಪ್ರೀತಿಯನ್ನು ನೀವು ಉಳಿಸಿಕೊಳ್ಳಲು ಪ್ರಯತ್ನಿಸುವಿರೊ. ಬಂಧುಗಳು ನಿಮ್ಮನ್ನು ಮನೆಗೆ ಆಹ್ವಾನಿಸಬಹುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಆಸಕ್ತಿಯು ಕಡಿಮೆ ಆಗಬಹುದು.

ಮಕರ ರಾಶಿ : ಇಂದು ನೀವು ಬೇರೆಯವರ ಕಷ್ಟಕ್ಕೆ ಸ್ಪಂದಿಸಬೇಕಾಗಬಹುದು. ಆರ್ಥಿಕ ಮೂಲವು ಕೈತಪ್ಪಿ ಹೋಗಬಹುದು. ಕನಸನ್ನು ನನಸಾಗಿಸಲು ನಿಮ್ಮ ಪ್ರಯತ್ನ ಅತಿಮುಖ್ಯವಾಗುವುದು. ಎಲ್ಲವೂ ಸರಿಯಿದ್ದರೂ ಮತ್ತೆಲ್ಲೋ ತಪ್ಪನ್ನು ಕಂಡುಕೊಳ್ಳುವಿರಿ. ಕೈಗೊಂಡ ಕೆಲಸಗಳಲ್ಲಿ ಅಡೆತಡೆ. ತಾಯಿಯಿಂದ ಅತಿಯಾದ ಸಹಕಾರವನ್ನು ಬಯಸುವಿರಿ. ಜನರ ಜೊತೆ ಬೆರೆಯಲು ನಿಮಗೆ ಇಂದು ಸಮಯ ಸಾಕಾಗದು. ಸಂಗಾತಿಯನ್ನು ನೀವು ಖುಷಿ‌ಪಡಿಸಲು ಎಲ್ಲಿಗಾದರೂ ಕರೆದುಕೊಂಡು ಹೋಗುವಿರಿ.

ಕುಂಭ ರಾಶಿ : ಇಂದು ನಿಮಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಡಿಮೆ ಆಗುವುದು. ಬಂಧುಗಳ ವಿಚಾರದಲ್ಲಿ ನಿಮಗೆ ಸಂಪೂರ್ಣ ಮನಸ್ಥಿತಿಯು ಏಕರೂಪವಾಗಿ ಇರಲಾರದು. ಪರಿಚಿತ ಸಂಬಂಧಗಳನ್ನು ಸಡಿಲ‌ಮಾಡಿಕೊಳ್ಳುವಿರಿ. ನಿಮ್ಮ ವರ್ತನೆಯಿಂದ ನಿಮ್ಮನ್ನು ನೋಡುವ ಕ್ರಮವು ಬದಲಾದೀತು. ಆಸ್ತಿ ಲಾಭ. ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಇನ್ನೊಬ್ಬರ ಸುಖಕ್ಕಾಗಿ ನೀವು ಸುಖವನ್ನೇ ತ್ಯಾಗಮಾಡುವಿರಿ.

ಮೀನ ರಾಶಿ : ಅತಿಯಾದ ಬುದ್ಧಿವಂತಿಕೆಯನ್ನು ತೋರಿಸಲು ಹೋಗಿ ಮುಗ್ಗರಿಸಬಹುದು. ವಾಹನಕ್ಕಾಗಿ ಖರ್ಚು ಮಾಡುವ ಸ್ಥಿತಿಯು ಬರಬಹುದು. ಸಹಾಯವನ್ನು ಯಾರಾದರೂ ಕೇಳುವರು. ಒಂಟಿಯಾಗಿ ಇರಲು ನೀವು ಇಂದು ಹೆಚ್ಚು ಇಷ್ಟಪಡಬಹುದು. ಆಸ್ತಿಗೆ ಸಂಬಂಧಿತ ವಿವಾದ ಬಗೆಹರಿಯಲಿದೆ. ಏನನ್ನಾದರೂ ಯೋಚಿಸುವ ಬದಲು ಆಗಬೇಕಾದ ಕೆಲಸದ‌ ಕಡೆ ಗಮನಕೊಡುವುದು ಮುಖ್ಯವಾಗುವುದು. ಹಳೆಯ ಕಡತಗಳನ್ನು ನೀವು ವಿಲೇವರಿ ಮಾಡುವಿರಿ.

– ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್