AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 10 July: ಇಂದು ಈ ರಾಶಿಯವರ ಮಾತುಗಳು ಪೂರ್ಣ ಸತ್ಯಾಗಿರದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 10 July: ಇಂದು ಈ ರಾಶಿಯವರ ಮಾತುಗಳು ಪೂರ್ಣ ಸತ್ಯಾಗಿರದು
ಜ್ಯೋತಿಷ್ಯImage Credit source: Pinterest
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 10, 2025 | 1:35 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಸಾಧ್ಯ, ಕರಣ: ಭದ್ರ, ಸೂರ್ಯೋದಯ – 06 : 11 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:15 – 15:51, ಯಮಘಂಡ ಕಾಲ 06:11 – 07:48, ಗುಳಿಕ ಕಾಲ 09:25 – 11:01

ಇಂದು ಗುರುಪೂರ್ಣಿಮೆ ಅಥವಾ ವ್ಯಾಸಪೂರ್ಣಿಮೆ ಎಂದೂ ಕರೆಯುತ್ತಾರೆ. ವ್ಯಾಸರನ್ನು ಶ್ರೇಷ್ಠ ಗುರು ಎಂಬುದಾಗಿ ಭಾರತೀಯರು ಸ್ವೀಕರಿಸಿದ್ದಾರೆ. ಮಹಾಭಾರತ, ಪುರಾಣ, ವೇದಗಳನ್ನು ವಿಭಾಗ ಮಾಡಿ ಜಗತ್ತಿಗೆ ನೀಡಿದ ಮಹಾಮಹಿಮ. ಅವರ ಅನುಗ್ರಹವನ್ನು ಪ್ರಾರ್ಥಿಸುವ ಮಹಾ ದಿನ.

ಮೇಷ ರಾಶಿ: ದಟ್ಟವಾದ ಜನಜಂಗುಳಿ ಪ್ರದೇಶದಲ್ಲಿ ಓಡಾಟ ಮಾಡುವಿರಿ. ಏಕಕಾಲಕ್ಕೆ ಒತ್ತಡವಾದಂತೆ ಅನ್ನಿಸುವುದು. ಇಂದು ನಿಮ್ಮಲ್ಲಿ ಹೋರಾಟದ ಸ್ವಭಾವವು ಎದ್ದು ತೋರುವುದು. ಎಲ್ಲದಕ್ಕೂ ವಿರೋಧ ಮಾಡುವಿರಿ. ಖುಷಿಯಲ್ಲಿ ಕೊಟ್ಟ ಮಾತಿನಿಂದ ನಿಮಗೆ ಇಂದು ತೊಂದರೆಯಾದೀತು. ನಿಮ್ಮ ಆಡಳಿತ ವೈಖರಿ ಬೇರೆ ರೂಪವನ್ನು ಪಡೆಯಲಿದೆ. ಆರೋಗ್ಯದ ವ್ಯತ್ಯಾಸದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಎಷ್ಟೋ ಕಾಲದ ಅನಂತರ ನಿಮ್ಮ ನಡುವೆ ಆಪ್ತತೆ ಇರಲಿದೆ. ಖರ್ಚಿನ ವಿಚಾರದಲ್ಲಿ ಹೆಚ್ಚಿನ ಜಾಗರೂಕತೆ ಅವಶ್ಯಕ. ಲಾಭವಿಲ್ಲದೇ ಇಂದು ನೀವು ಯಾವ ಕೆಲಸವನ್ನೂ ಮಾಡಲಾರಿರಿ. ನಿಮಗೆ ಪ್ರಶಂಸೆಯು ಸಿಗಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಕಣ್ಣಿಡುವರು. ನೀವೇ ಸಂಪಾದಿಸಿದ ಸಂಪತ್ತು ನಿನ್ನ ಬಳಕೆಗೆ ಸಿಗದು. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ದೂರ ಪ್ರಯಾಣಕ್ಕೆ ವೈದ್ಯರು ನಿರ್ಬಂಧ ಹಾಕಬಹುದು. ದೌರ್ಬಲ್ಯವನ್ನೇ ಅಸ್ತ್ರವಾಗಿಸಿಕೊಂಡು ಲಾಭ ಪಡಯುವಿರಿ.

ವೃಷಭ ರಾಶಿ: ದಾಂಪತ್ಯದ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಲು ಒಬ್ಬರಾದರೂ ಮೌನವಾಗಿರಬೇಕು. ನೀವು ಅದೃಷ್ಟವನ್ನು ನಿರೀಕ್ಷಿತ್ತ ಸಮಯವನ್ನು ಕಳೆಯುವಿರಿ. ಯಾರನ್ನಾದರೂ ಮೆಚ್ಚಿಸಲು ನಿಮ್ಮ ಕೆಲಸವನ್ನು ಪಕ್ಕಕ್ಕಿರಿಸುವಿರಿ. ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ನಿರುದ್ಯೋಗದಿಂದ ನಿಮಗೆ ಬಹಳ ಬೇಸರವಾದೀತು. ಎಲ್ಲರೂ ನಿಮ್ಮ ಬಗ್ಗೆ ಮಾತನಾಡಿಕೊಳ್ಳುವರು. ಇಷ್ಟವಿಲ್ಲದ ಕಡೆ ಹೋಗಬೇಕಾಗುವುದು. ಹಣದ ಹರಿವೂ ಸದ್ಯಕ್ಕೆ ಅಷ್ಟಕ್ಕೆಷ್ಟೇ ಇರಲಿದೆ. ಸಣ್ಣ ವಾಗ್ವಾದವು ಅನ್ಯರ ಜೊತೆ ನಡೆಯಲಿದೆ. ಮಾತಿನ ಮೇಲೆ ಹಿಡಿತವಿರಲಿ. ಯಾರನ್ನೋ ಮಾತನಾಡಿಸುವ ಬದಲು ನಿಮ್ಮನ್ನು ಮಾತನಾಡಿಸಬಹುದು. ಹಣದ ಹರಿವಿನಲ್ಲಿ ವ್ಯತ್ಯಾಸವಾಗಲಿದೆ. ನಿಮ್ಮ ಜವಾಬ್ದಾರಿಯ ಕೆಲಸವನ್ನು ಬೇಗ ಮುಗಿಸಿ ಇನ್ನೊಬ್ಬರಿಗೆ ಸಹಾಯ ಮಾಡಲಿರುವಿರಿ. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ಉಪಕಾರದ ಸ್ಮರಣೆಯಿಂದ ಸಹಕಾರ ನೀಡುವಿರಿ.

ಮಿಥುನ ರಾಶಿ: ಕಲ್ಲಿಗೆ ಸಂಬಂಧಿಸಿದ ಕೆಲಸಕ್ಕೆ ಹೆಚ್ಚಿನ ಆದ್ಯತೆ ಹಾಗೂ ಆದಾಯ ಸಿಗಲಿದೆ‌. ಇಂದು ನೀವು ಬಹಳ ಕಷ್ಟಪಟ್ಟು ಕೆಲಸ ಮಾಡಲಿದ್ದೀರಿ. ತಾತ್ಸಾರ ಮಾಡದೇ ಕ್ರಮಬದ್ಧವಾಗಿ ಶತ್ರುಗಳನ್ನು ಗೆಲ್ಲಿರಿ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ಪ್ರಭಾವಿಗಳ ಭೇಟಿ ಅನಿರೀಕ್ಷಿತವಾಗಿ ಆಗುವುದು. ಯಂತ್ರೋಪಕರಣಗಳ ಮೇಲೆ ಅಧಿಕ ಮೋಹವಿರಲಿದೆ. ಎಲ್ಲವನ್ನೂ ನೀವೊಬ್ಬರೇ ಅನಿಭವಿಸಬೇಕು ಎಂಬ ಯೋಚನೆ ಇರಲಿದೆ. ಇಲ್ಲವಾದರೆ ಇತರರ ತೀರ್ಮಾನಕ್ಕೆ ಶರಣಾಗಬೇಕಾದೀತು. ವಾಹನ‌ಸಂಚಾರದಲ್ಲಿ ಕಿರಿಕಿರಿ ಇರುವುದು. ಕುಟುಂಬದ ಕೆಲಸದಲ್ಲಿ ಭಾಗವಹಿಸುವಿರಿ. ಕೆಲಸ ನಿಮ್ಮದಾದರೂ ಅದರ ಯಶಸ್ಸು ಪರರಿಗೆ. ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸವನ್ನು ಮಾಡಬಹುದು ಎಂದು ತೋರಿಸುವಿರಿ. ಯೋಗ್ಯರ ಸಹವಾಸವನ್ನು ಮಾಡಿ. ಭೂಮಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ತಾಳ್ಮೆಯ ಅಗತ್ಯತೆಯ ಮನವರಿಕೆ ಅಗತ್ಯ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬಹಳ ಸಂಕಟವಾಗಲಿದೆ. ನಿಮಗೆ ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು.

ಕರ್ಕಾಟಕ ರಾಶಿ: ಮಾನವ ಸಂಬಂಧಕ್ಕಿಂತ ಪ್ರಾಣಿ ಪಕ್ಷಿಗಳ ಜೊತೆ ಬಾಂಧವ್ಯ ಬೆಳೆಯುವುದು. ಇಂದು ವಿದ್ಯಾಭ್ಯಾದಲ್ಲಿ ಕಾರ್ಯಕ್ಷಮತೆ ಗಮನಾರ್ಹವಾಗಿ ಸುಧಾರಣೆ ಕಾಣಲಿದೆ. ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹವಣಿಸುವಿರಿ. ಸಂಗಾತಿಯ ನಡವಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಇದರ ಪ್ರಭಾವವು ಕಛೇರಿಯ ಕೆಲಸದಲ್ಲಿಯೂ ಕಾಣಬಹುದು. ದುರಭ್ಯಾಸವನ್ನು ಬಿಡುವ ಹಂಬಲ ಇರುವುದು. ಪಾಲುದಾರರ ಬಗ್ಗೆ ಒಳ್ಳೆಯ ಅಭಿಪ್ರಾಯ ನಿಮಗಿರದು. ಅನ್ಯರ ಸಂಬಂಧವು ನಿಮಗೆ ಅಪರಕೀರ್ತಿಯನ್ನು ತರಬಹುದು. ನಕಾರಾತ್ಮಕ ಆಲೋಚನೆಯ ನಿಮ್ಮನ್ನು ಹಿಮ್ಮುಖ ಮಾಡಬಹುದು. ಹಿರಿಯರ ವಿಚಾರದಲ್ಲಿ ಅನಾದರ ತೋರಿದಂತೆ ಕಾಣಿಸುವುದು. ಕುಟುಂಬವು ನಿಮ್ಮ ಜೊತೆಗಿದೆ ಎಂಬ ಧೈರ್ಯವಿರಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ.

ಸಿಂಹ ರಾಶಿ: ಅರೆಕಾಲಿಕ ಸಣ್ಣ ಉದ್ಯೋಗಕ್ಕೆ ಸೇರಿಕೊಳ್ಳುವಿರಿ. ಇಂದು ನೀವು ಸಹೋದ್ಯೋಗಿಗಳ ಜೊತೆ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವಿದೇಶದಲ್ಲಿ ಕೆಲಸಮಾಡಲು ನಿಮಗೆ ಅನೇಕ ಅವಕಾಶಗಳು ಸಿಗಬಹುದು. ಮಧ್ಯವರ್ತಿಗಳ ಮೂಲಕ‌ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ವಿದ್ಯಾರ್ಥಿಗಳು ಮುಂದಿನ ಯೋಜನೆಯನ್ನು ಹಾಕಿಕೊಳ್ಳುವುದು ಉತ್ತಮ. ಬಣ್ಣದ ಮಾತುಗಳಿಗೆ ಬಲಿಯಾಗುವುದು ಬೇಡ. ರಾಜಕಾರಣದಿಂದ ಒಳ್ಳೆಯ ಭವಿಷ್ಯದ ಕನಸು ಕಾಣುವಿರಿ. ಯಾರ ಮೇಲಾದರೂ ಅನುಮಾನವಿದ್ದರೆ ಅದನ್ನು ಕೂಡಲೇ ಹೇಳುವುದು ಬೇಡ. ಹೊಸ ಮನೆಯನ್ನು ಕಟ್ಟುವ ಯೋಚನೆಯು ಶುರುವಾಗಲಿದೆ. ಏಕಾಂತವನ್ನು ಬಯಸಿ ದೂರ ಎಲ್ಲಿಯಾದರೂ ಹೋಗುವಿರಿ. ನಿಮ್ಮ ಯೋಚನೆಗಳು ಆದಷ್ಟು ಸರಿಯಾದ ಮಾರ್ಗದಲ್ಲಿ ಇರಲಿ. ತಾಳ್ಮೆ ಮತ್ತು ಪ್ರತಿಭೆಯಿಂದ ಶತ್ರು ಗೆಲ್ಲುವಲ್ಲಿ ನೀವು ಯಶಸ್ಸನ್ನು ಗಳಿಸುವಿರಿ. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು.

ಕನ್ಯಾ ರಾಶಿ: ಅದೃಷ್ಟವು ಫಲ ನೀಡುವ ಸೂಚನೆ ಇರಲಿದೆ‌. ಇಂದು ನಿಮ್ಮ ಸಂಗಾತಿಯ ಜೊತೆಗಿನ ಭಿನ್ನಾಭಿಪ್ರಾಯದಿಂದ ದ್ವೇಷವು ಉಂಟಾಗಬಹುದು. ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ನಿಮ್ಮ ಸಲಹೆಗಳನ್ನು ನಿಮ್ಮವರು ತೆಗೆದುಕೊಳ್ಳದೇ ಇರುವುದು ನಿಮಗೆ ಸಿಟ್ಟೂ ಬೇಸರವನ್ನೂ ಉಂಟುಮಾಡಬಹುದು. ಕೈಬಿಟ್ಟ ವಿಚಾರವು ಪುನಃ ಮುಖ್ಯಸ್ಥಾನಕ್ಕೆ ಬರಲಿದೆ. ಸತ್ಯವನ್ನು ಹೇಳುವ ಮನಸ್ಸಿದ್ದರೂ ನಿಮಗೆ ಕೆಲವು ತೊಂದರೆ ಎದುರಾಗುವುದರಿಂದ ಅದನ್ನು ಗೌಪ್ಯವಾಗಿ ಇಡುವಿರಿ. ಧಾರ್ಮಿಕ ಆಚರಣೆಗಳನ್ನು ಮಾಡಲು ಹೆಚ್ಚು ಆಸಕ್ತಿ ತೋರಿಸುವಿರಿ. ಇತರರ ಸ್ವಭಾವವನ್ನು ನೀವು ಆಡಿಕೊಳ್ಳುವುದು ಬೇಡ. ಬಂಧುಗಳ ಸಹವಾಸದಿಂದ ಬದಲಾಗುವ ಸಾಧ್ಯತೆ ಇದೆ. ನೀವು ಹೊಸ ಹೂಡಿಕೆ ಮಾಡಬೇಕಾದರೆ ಅದು ಶುಭವಾಗುತ್ತದೆ. ಕುಟುಂಬದಲ್ಲಿಯೂ ಶಾಂತಿ ಇರುತ್ತದೆ. ನಿಮಗಿಂತ ಭಿನ್ನವಾದ ವ್ಯಕ್ತಿಗಳ ಬಗ್ಗೆ ಯೋಚಿಸದೇ ನಿಮ್ಮ ನಿಲುವೇ ಸರಿ ಎಂಬಂತೆ ವರ್ತಿಸುವಿರಿ. ಬೇಡದ ವಿಚಾರಗಳ‌ ಜೊತೆಗಾರರು ಹೆಚ್ಚು ಗಮನ ಕೊಡುವಂತೆ ಮಾಡುವರು.

ತುಲಾ ರಾಶಿ: ಅನುಭವದ ಪಾಠಗಳು ನಿಮಗೆ ಉಪಯೋಗಕ್ಕೆ ಬರಲಿವೆ. ಭೂಮಿಯ ವ್ಯವಹಾರವನ್ನು ಸದ್ಯಕ್ಕೆ ನಿಲ್ಲಿಸಿ, ಕೆಲವು ದಿನಗಳ ಅನಂತರ ನಡೆಸುವುದು ಉತ್ತಮ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ನಿಮ್ಮದಾದ ಆತ್ಮೀಯ ವೃತ್ತವನ್ನು ನಿರ್ಮಿಸಿಕೊಳ್ಳುವಿರಿ. ಕಳ್ಳತನದ ಅಪವಾದಗಳು ನಿಮಗೆ ಚಿಂತನೆಯನ್ನು ಕೊಡಬಹುದು. ಸಹೋದ್ಯೋಗಿಗಳು ನಿಮ್ಮನ್ನು ಅವರದೇ ಕಾರಣಕ್ಕೆ ದೂರವಿಡುವರು. ವ್ಯಾಪಾರದಲ್ಲಿ ಮೋಸದಿಂದ ನಷ್ಟವಾಗಬಹುದು. ಹೆಚ್ಚು ಪರಿಶ್ರಮದಿಂದ ಕೆಲಸ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಓದುವಂತೆ ಒತ್ತಾಯ ಮಾಡಬೇಕಾದೀತು. ಇಂದಿ‌ನ ಕೋಪದಿಂದ ಏನನ್ನೂ ಸಾಧಿಸಲು ಸಾಧ್ಯವಾಗದು. ಹೂಡಿಕೆ ಹಣವನ್ನು ತೆಗೆಯು ನಿರ್ಧಾರವನ್ನು ಮಾಡಬೇಕಾದೀತು. ಊಹೆಯು ದಿಕ್ಕು ತಪ್ಪುವ ಸಾಧ್ಯತೆ ಇದೆ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ಕೋಪವು ನಿಮ್ಮ ಇಂದಿನ ಕೆಲಸವನ್ನು ಕೆಡಿಸಬಹುದು. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು.

ವೃಶ್ಚಿಕ ರಾಶಿ: ಆಲಂಕಾರಿಕ ವಿಚಾರಕ್ಕೆ ನಿಮ್ಮ ಗಮನ ಹೆಚ್ಚಾಗಿರುವುದು. ಇಂದು ಯಾರ ಬಳಿಯಾದರೂ ಮಾತನಾಡಲು ಸಂಕೋಚ ಇರುವುದು. ಚಿಂತೆಯು ನಿಮ್ಮ ಮಾನಸಿಕ ಸ್ಥಿತಿಯನ್ನು ದುರ್ಬಲ ಮಾಡುವುದು. ಜೋಪಾನವಾಗಿ ಇರಿಸಿಕೊಂಡಿರುವ ನಿಮ್ಮ ಅಮೂಲ್ಯವಾದ ವಸ್ತುಗಳು ಕಣ್ಮರೆಯಾಗಿದ್ದು ಇಂದು ತಿಳಿಯಲಿದೆ. ಆಸ್ತಿಯ ವಿಚಾರಕ್ಕೆ ಸಹೋದರರ ನಡುವೆ ವೈಮನಸ್ಯ ಉಂಟಾಗಬಹುದು. ಸಮಾಜಸೇವೆಯಿಂದ ನಿಮಗೆ ಆಯಾಸ ಹೆಚ್ಚಾಗಲಿದೆ‌. ಅಲ್ಪ ಜ್ಞಾನಿಗಳ ಸಹವಾಸದಿಂದ ನಿಮ್ಮ ಮಾರ್ಯಾದೆಯೂ ಹೋಗಬಹುದು. ಸಮ್ಮಾನಗಳು ಸಂತೋಷವನ್ನು ತರುವುದು. ವಿದೇಶದಲ್ಲಿ ಇದ್ದವರಿಗೆ ಸ್ವದೇಶಕ್ಕೆ ಹೋಗಲು ಅವಕಾಶ ಸಿಗಲಿದೆ. ತಪ್ಪು ನಿರ್ಧಾರಗಳನ್ನು ಮಾಡಿ ಕಷ್ಟಪಡಬೇಕಾದೀತು. ಅಧಿಕಾರದ ಅಸೆಯಿಂದ ನಿಮ್ಮ ವ್ಯಕ್ತಿತ್ವ ಬದಲಾಗಬಹುದು. ವ್ಯವಧಾನದ ಕೊರತೆಯನ್ನು ಎದುರಿಸುವಿರಿ. ನಿಮ್ಮ ಕೆಲಸವಾಗಲು ಯಾರನ್ನಾದರೂ ದೂರ ಮಾಡುವಿರಿ. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ಭೂಮಿಯಿಂದ ಬರುವ ಸಂಪತ್ತನ್ನು ಭದ್ರವಾಗಿ ಇಡುವಿರಿ.

ಧನು ರಾಶಿ: ಉದ್ಯೋಗದಲ್ಲಿ ಉತ್ತಮ‌ಸ್ಥಾನ ಪಡೆಯಲು ಪರೀಕ್ಷೆಯನ್ನು ಎದುರಿಸಬೇಕಾಗುವುದು. ಇಂದು ಸಜ್ಜನರ ಸಹವಾಸದಿಂದ ಸಜ್ಜನರೆನಿಸಿಕೊಳ್ಳುವಿರಿ. ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ಸ್ವಾಭಿಮಾನಕ್ಕೆ ಧಕ್ಕೆ ಬಂದು ಮನಸ್ಸಿನಲ್ಲಿ ಬಹಳ ಹಿಂಸೆಯನ್ನು ಅನುಭವಿಸಬಹುದು. ಸ್ವಂತಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ದಾಂಪತ್ಯದಲ್ಲಿ ಸುಖವಿದ್ದರೂ ಸಣ್ಣ ಕಿರಿಕಿರಿಗಳು ಬಂದು ಹೋಗಬಹುದು. ನಿಮ್ಮ ಕೆಲಸವಾಗಲು ಹಣದ ಬೇಡಿಕೆ ಬರಬಹುದು. ದಿನಚರ್ಯೆಯಲ್ಲಿ ವ್ಯತ್ಯಾಸವನ್ನು ಇಂದು ಕಾಣಬಹುದಾಗಿದೆ. ಹಠ ಸ್ವಭಾವವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಕ್ಷಣದ ಕೋಪವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡಿಸೀತು. ನಿಮ್ಮ ಕೆಲಸವೆಲ್ಲವೂ ಪರರ ಉಪಕಾರಕ್ಕೇ ಆಗುವುದು. ಮಾತಿನಲ್ಲಿ ಕಠೋರತಯು ಕಡಿಮೆಯಾದರೆ ಒಳ್ಳೆಯದು. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಭಯವನ್ನು ನೀವು ಕಳೆದುಕೊಳ್ಳಬೇಕು.

ಮಕರ ರಾಶಿ: ಸಂಗಾತಿಯ ಎದುರು ಗೆಲ್ಲಬೇಕಾದ ಅನಿವಾರ್ಯ ಪ್ರಸಂಗ ಬರಲಿದೆ. ಇಂದು ಅಪರಿಚಿತರೂ ಆಪ್ತರಂತೆ ವರ್ತಿಸಬಹುದು. ನಿಮ್ಮ ಎಲ್ಲ ಗೌಪ್ಯತೆಯನ್ನು ಹೇಳುವಿರಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ಯಾರನ್ನೂ ಹಗುರವಾಗಿ ಕಾಣುವುದು ಬೇಡ. ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಶ್ಯಕತೆ ಇಲ್ಲ. ಅದು ತಾನಾಗಿಯೇ ಗೊತ್ತಾಗಲಿದೆ. ಗೌರವಯುತವಾಗಿ ಎಲ್ಲರ ಜೊತೆ ನಡೆದುಕೊಳ್ಳುವಿರಿ. ಸಮಯಕ್ಕೆ ಹೆಚ್ಚು ಮಹತ್ವವನ್ನು ನೀವು ಕೊಡಲಿದ್ದೀರಿ. ಮನೆಯವರ ಕಾರಣಕ್ಕೆ ನಿಮ್ಮ ತೀರ್ಮಾನಗಳು ಬದಲಾಗುವುದು. ಕಛೇರಿಯ ಕೆಲಸವೇ ಇಂದು ಅಧಿಕವಾದೀತು. ಅನ್ಯಾಯವನ್ನು ಖಂಡಿಸುವ ಮಾನಸಿಕತೆ ಇರಲಿದೆ. ಇನ್ನೊಬ್ಬರ ಸ್ಥಿತಿಯನ್ನು ಕಂಡು ನೀವು ನೆಮ್ಮದಿಯಿಂದ ಇರುವಿರಿ. ಸಂಗಾತಿಯಿಂದ ಅನಿರೀಕ್ಷಿತ ಸಮಾಚಾರ ಬರಬಹುದು. ಏನನ್ನೂ ಹೇಳದೇ ನಿಮ್ಮಷ್ಟಕ್ಕೆ ಗಮನಿಸಿ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ. ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು.

ಕುಂಭ ರಾಶಿ: ಯಾರ ಸಹಾಯ ಹಸ್ತವನ್ನೂ ಬಯಸದೇ ನೀವು ಸ್ವಾಭಿಮಾನದಿಂದ ನಿಮ್ಮನ್ನು ಗುರುತಿಸಿಕೊಳ್ಳುವಿರಿ. ಇಂದು ನಿಮ್ಮ ಮಾತುಗಳು ಸಂಬಂಧದಲ್ಲಿ ಒಡಕು ತರುವಂತಹವು ಆಗಿರುತ್ತವೆ. ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಇಲ್ಲವಾದರೆ ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ನಿರೀಕ್ಷೆ ಮೀರಿದ ಅನುಕೂಲತೆಗಳು ಇದ್ದರೂ ಸಂತೃಪ್ತಿಯು ಇರಲಾರದು. ಧಾರ್ಮಿಕ ಸ್ಥಳದಿಂದ ನಿಮಗೆ ನೆಮ್ಮದಿ ಸಿಗಲಿದೆ. ಪ್ರಣಯದಲ್ಲಿ ಅತಿಯಾದ ಆಸಕ್ತಿಯೂ ಇರಲಾರದು. ಉತ್ಪಾದನಾ ಕ್ಷೇತ್ರದಲ್ಲಿ ಸಾಧಿಸುವ ಯೋಜನೆ ಇರಲಿದೆ. ಹಳೆಯ ಘಟನೆಯು ಇಂದು ಕಾರಣಾಂತರದಿಂದ ನೆನಪಾಗಿ ಕಾಡಲಿದೆ. ದೇಶವನ್ನು ಸುತ್ತುವ ಮನಸ್ಸಾದೀತು. ವೈದ್ಯಕೀಯ ವಿಚಾರದಲ್ಲಿ ನಿಮಗೆ ಕೆಲವು ಕುತೂಹಲವು ಉಂಟಾಗಬಹುದು. ಆಪ್ತರ ಜೊತೆ ಸಮಾಲೋಚನೆ ನಡೆಸುವಿರಿ. ಹಳೆಯ ವಸ್ತುಗಳ ಬಗ್ಗೆ ತಾತ್ಸಾರ ಭಾವ ಬರಬಹುದು. ಇಂದು ನಿಮ್ಮ ಕೆಲಸವನ್ನು ಬದಲು ಮಾಡಿಕೊಳ್ಳಲಿದ್ದೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು.

ಮೀನ ರಾಶಿ: ಆಸ್ತಿಯನ್ನು ಬಹಿರಂಗಪಡಿಸಲು ಹಲವು ಒತ್ತಡಗಳನ್ನು ಬರಲಿದೆ. ನಿಮಗೆ ಆಗದವರ ಬಗ್ಗೆ ಕಿವಿಚುಚ್ಚುವುದು ಬೇಡ. ಹಣದ ಕೊರತೆಯಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಬರಬಹುದು. ಸಂತೋಷವನ್ನು ಅನುಭವಿಸುವ ತಾಳ್ಮೆ ಇರದು. ಹಣಕಾಸಿನ ವ್ಯವಹಾರದಲ್ಲಿ ನಿಮಗೆ ಹೆಚ್ಚು ಸಂದೇಹಗಳು ಬರಬಹುದು. ನಿಮ್ಮ ಅಭಿಮಾನ ಸುಳ್ಳೆನಿಸಬಹುದು. ಅತ್ಯಾಪ್ತರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮನೋರಂಜನೆಯನ್ನು ಇಂದು ಹೆಚ್ಚು ಇಷ್ಟಪಡುವಿರಿ. ಕೇಳಿ ಬಂದವರಿಗೆ ಯಥಾಯೋಗ್ಯ ಸಹಾಯವನ್ನು ಮಾಡುವಿರಿ. ಕೋಪವನ್ನು ಕಡಿಮೆ ಮಾಡಿಕೊಂಡಿದ್ದರ ಪರಿಣಾಮ ನಿಮ್ಮ ಆಪ್ತರ ಸಂಖ್ಯೆ ಹೆಚ್ಚಾಗಿದೆ. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ತಂದೆಯಿಂದ ದೂರವಿರುವ ಯೋಚನೆ ಮಾಡುವಿರಿ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ