AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಹೊರಭಾಗದ ಸುಂದರೀಕರಣಕ್ಕೆ ಪ್ರಾಶಸ್ತ್ಯ ನೀಡುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ ಬುಧವಾರ ಪ್ರತಿನಿಧಿಯಾಗಿ ಭಾಗವಹಿಸುವುದು, ಅಜ್ಞಾತ ಸ್ಥಳದಲ್ಲಿ ವಾಸ, ಚಿಂತೆಯಿಂದ ಆರೋಗ್ಯ ಹಾಳು ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಮನೆಯ ಹೊರಭಾಗದ ಸುಂದರೀಕರಣಕ್ಕೆ ಪ್ರಾಶಸ್ತ್ಯ ನೀಡುವಿರಿ
ಜೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Jun 11, 2025 | 1:34 AM

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೂಲಾ, ಯೋಗ: ವ್ಯತಿಪಾತ್, ಕರಣ: ಭದ್ರ, ಸೂರ್ಯೋದಯ – 06 : 04 am, ಸೂರ್ಯಾಸ್ತ – 07 : 00 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ12:32 – 14:09, ಯಮಘಂಡ ಕಾಲ 07:41 – 09:18, ಗುಳಿಕ ಕಾಲ10:55 – 12:32

ಮೇಷ ರಾಶಿ: ಕುಟುಂಬದಲ್ಲಿ ತಪ್ಪು ಗ್ರಹಿಕೆಯಿಂದ ಮನಸ್ತಾಪ ಬರಲಿದೆ. ನಿಮಗೆ ಪ್ರತಿಭೆ, ಸಾಮರ್ಥ್ಯಗಳು ಇವೆ ಎಂದು ನಿಮಗೆ ಅನ್ನಿಸದೇ ಹೋಗಬಹುದು. ಎಲ್ಲವೂ ಏಕಕಾಲಕ್ಕೆ ಪ್ರಕಟವಾಗದು. ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಎಲ್ಲರಿಂದ ಒಂಟಿಯಾಗಿ ಇರಬೇಕಾಗುವುದು. ಇಂದಿನ ಸನ್ನಿವೇಶವನ್ನು ನಿಭಾಯಿಸುವ ಸಾಮರ್ಥ್ಯವು ಕಂಡು ಸಹೋದ್ಯೋಗಿಗಳು ಆಶ್ಚರ್ಯಪಡುವರು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಬದಲಿಸಬಹುದು. ವಿದ್ಯಾಭ್ಯಾಸವನ್ನು ಮುಗಿಸಿದ ನಿಮಗೆ ಕೆಲಸವೂ ಶೀಘ್ರವಾಗಿ ಸಿಗಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ: ಅನಾರೋಗ್ಯದ ಸಮಸ್ಯೆಗೆ ಚಿಕಿತ್ಸೆಯ ಮೂಲಕ ಅಥವಾ ದೈವದ ಮೂಲಕ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಇಂದು ವ್ಯಾವಹಾರಿಕವಾಗಿರುವ ಮನಶ್ಚಾಂಚಲ್ಯ ಅನೇಕ ವಿಧವಾಗಿ ಕಾಡಬಹುದು.‌ ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು ಮಧ್ಯದಲ್ಲೇ ನಿಲ್ಲಬಹುದು. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ಮಕ್ಕಳಿಗೆ ಜವಾಬ್ದಾರಿ ಕೊಡಲು ಭಯ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡಿ, ಆದರೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಕಲಾವಿದರಿಗೆ ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ನೀವು ಸಹಾಯ ಮಾಡುತ್ತೀರೆಂಬ ನಂಬಿಕೆಯಿಂದ ಜನರು ನಿಮ್ಮ ಬಳಿ ಕೇಳುವರು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ: ಅಪರಿಚಿತ ವಿಚಾರದಲ್ಲಿ ಆಯ್ಕೆ ಮಾಡುವ ಸನ್ನಿವೇಶ ಬರುವುದು. ಇದು ನಿಮ್ಮ ಪರೀಕ್ಷೆಯ ಕಾಲವೂ ಹೌದು. ಇಂದು ತಂದೆ ಹಾಗು ತಾಯಿಯರ ಸೇವೆಯನ್ನು ಮಾಡುವ ಅವಕಾಶವು ಸಿಗುವುದು. ಮನೆಯಿಂದ‌ ದೂರ ಹೋಗುವಾಗ, ಕಛೇರಿಗೆ ಹೋಗುವಾಗ ದೇವರಿಗೆ ನಮಸ್ಕರಿಸಿ ಮುನ್ನಡೆಯಿರಿ. ದೇಹ ಸೌಂದರ್ಯವನ್ನು ಬೆಳೆಸಿಕೊಳ್ಳಲು ಸಮಯವನ್ನು ಮೀಸಲಿಡುವಿರಿ. ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಮನೆ ಮತ್ತು ಉದ್ಯೋಗವೆಂದು ಅಲೆಯುತ್ತಿದ್ದರೆ ಸ್ವಲ್ಪ ದಿನ ವಿರಾಮ ಪಡೆದು ಆಮೇಲೆ ಹೋಗಿ. ಕೆಲಸವು ಚೆನ್ನಾಗಿ, ಉತ್ಸಾಹದಿಂದ ನಡೆಯುವುದು. ನಿಮ್ಮ ವಿರುದ್ಧ ಮಾತನಾಡಿದವರಿಗೆ ಇಂದು ಕಾಲವೇ ಉತ್ತರಿಸುವುದು. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕರ್ಕಾಟಕ ರಾಶಿ: ಕಛೇರಿಯಲ್ಲಿ ಅಧಿಕ‌ಕೆಲಸ ಕೊಟ್ಟು ನಿಮ್ಮನ್ನು ಹಿಂಡಿ ಹಿಪ್ಪೆ ಮಾಡಬಹುದು. ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಮನಸ್ಸು ಸ್ವಲ್ಪ ಎಲ್ಲವನ್ನೂ ಮರೆತು ಹಗುರಾಗಬಹುದು. ಅನಾರೋಗ್ಯದಿಂದಲೂ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಹಂಚಿಕೆಯ ವಿಚಾರದಲ್ಲಿ ನಿಮಗೆ ಪೂರ್ಣವಾದ ಮನಸ್ಸಿರದು. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ಇದರಿಂದ ನಿಮಗೆ ನಿರಾಸೆಯಾಗಲಿದೆ. ಬಹಳ ಬೇಸರಗೊಳ್ಳುವಿರಿ. ಹಣವೂ ನಷ್ಟ ಶ್ರಮವೂ ನಷ್ಟವಾಗಿ ದುಃಖಿಸುವಿರಿ. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು.

ಸಿಂಹ ರಾಶಿ: ಮನೆಯ ಹೊರ ಭಾಗದ ಸುಂದರೀಕರಣಕ್ಕೆ ಪ್ರಾಶಸ್ತ್ಯ ಕೊಡುವಿರಿ. ನೀವು ಇಂದು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ವಿದೇಶಕ್ಕೆ ಹೋಗಲು ಆಲೋಚನೆ ಮಾಡಿದ್ದರೆ ಹೊರಡಬಹುದು. ಆನಾರೋಗ್ಯದಿಂದ ಮುಕ್ತಿಸಿಗಲಿದೆ. ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಆಪ್ತರ ಚಿಕಿತ್ಸೆಗೆ ಧನಸಹಾಯ ಮಾಡಬೇಕಾಗುವುದು. ರಾಜಕಾರಣಿಗಳು ಗೆಲ್ಲುವ ತಂತ್ರವನ್ನು ಹೂಡುವರು. ನೂತನ ವಿದ್ಯುತ್ ಉಪಕರಣವನ್ನು ಖರೀದಿಸುವಿರಿ. ವಾಹನವು ರಿಪೇರಿಗೆ ಬರಲಿದೆ. ಹಣವೂ ನಷ್ಟವಾಗುವುದು. ಕಳ್ಳತನದ ಅಪವಾದವನ್ನು ಹೊತ್ತುಕೊಳ್ಳುವಿರಿ. ಸಂಗಾತಿಯ ಬೇಸರವನ್ನು ದೂರ ಮಾಡಲು ಎಲ್ಲಿಯಾದರೂ ದೂರ ಕರೆದುಕೊಂಡು ಹೋಗಿ. ಅಂತರಂಗದ ಪರಿವರ್ತನೆ ಸುಲಭವಲ್ಲ. ದೈಹಿಕ ಶ್ರಮವು ಇಂದು ಅಧಿಕವಾಗುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಲಿದೆ. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತು.

ಕನ್ಯಾ ರಾಶಿ: ದೂರ ಪ್ರಯಾಣಕ್ಕೆ ಸಹಚರು ಒತ್ತಾಯ ಮಾಡಬಹುದು. ಇಂದು ನಿಮ್ಮ ಹಳೆಯ ಕಾರ್ಯಗಳನ್ನೇ ನೆನೆದು ಹತಾಶಗೊಳ್ಳಬಹುದು. ನೀವು ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಸರ್ಕಾರದ ಕೆಲಸಗಳು ನಿಧಾನವಾಗಲಿದೆ. ಮತ್ತೆ ಮತ್ತೆ ಬರುವ ಸಂಕಷ್ಟಕ್ಕೆ ದೈವಕ್ಕೆ ಮೊರೆ ಹೋಗಬೇಕಾಗುವುದು. ಭಾರವಾದುದನ್ನು ಎತ್ತಿ ಅಪಾಯ ತಂದುಕೊಳ್ಳುವಿರಿ. ಪ್ರತಿಕೂಲ ವಾತಾವರಣದಲ್ಲಿಯೂ ನಿಮಗೆ ಅನುಕೂಲಕರ ವಾತಾವರಣ ಇರಲಿದೆ. ಸರ್ಕಾರಿ ಉದ್ಯೋಗಿಗಳಿಗೆ ನಿವೃತ್ತಿ ಸಿಗುವ ದಿನ. ಬಹಳ ದಿನಗಳ ಅನಂತರ ದಾಂಪತ್ಯದಲ್ಲಿ ಸಂತೋಷ ಕಾಣಿಸುವುದು. ಖಾಸಗಿ ಉದ್ಯೋಗಿಗಳನ್ನು ಸಂಸ್ಥೆ ತೆರವುಗೊಳಿಸಬಹುದು. ಕುಟುಂಬದಲ್ಲಿ ನಿಮ್ಮನ್ನು ಸರಿಯಾಗಿ ಆದರಿಸದೇ ಇರಬಹುದು. ಸುತ್ತಾಟದಿಂದ ಆಯಾಸವಿದೆ. ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇರಲಿದೆ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು.

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ