Horoscope Today 12 May: ಈ ರಾಶಿಯವರು ಆತ್ಮಬಲವನ್ನು ಕಳೆದುಕೊಳ್ಳಬಾರದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಸೋಮವಾರ ಆಪದ್ಬಾಂಧವರ ನೆನೆಪು, ಮಾನಸಿಕ ಹಿಂಸೆ, ಆಧಾರ ರಹಿತ ಮಾತು ಇವೆಲ್ಲ ಇಂದಿನ ವಿಶೇಷ.ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 12 May: ಈ ರಾಶಿಯವರು ಆತ್ಮಬಲವನ್ನು ಕಳೆದುಕೊಳ್ಳಬಾರದು
ಜ್ಯೋತಿಷ್ಯ
Edited By:

Updated on: May 12, 2025 | 1:49 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ವರಿಯಾನ್, ಕರಣ: ಭದ್ರ, ಸೂರ್ಯೋದಯ – 06 : 07 am, ಸೂರ್ಯಾಸ್ತ – 06 : 51 pm, ಇಂದಿನ ಶುಭಾಶುಭಕಾಲ : ರಾಹು ಕಾಲ 07:43 – 09:18, ಯಮಘಂಡ ಕಾಲ 10:54 – 12:29, ಗುಳಿಕ ಕಾಲ 14:05 – 15:40

ಮೇಷ ರಾಶಿ: ಸ್ಥಾನದ ಪ್ರತಿಷ್ಠೆಯು ನಿಮ್ಮ ಪ್ರತಿಷ್ಠೆಯನ್ನೂ ಹೆಚ್ಚಿಸೀತು. ಇಂದು ನಿಮ್ಮ ಕಾರ್ಯದಲ್ಲಿ ವೇಗಕ್ಕಿಂತ ಉದ್ವೇಗವೇ ಹೆಚ್ಚು ಕಾಣಿಸುವುದು. ಹೊಸ ವಿಚಾರಗಳ ಅನ್ವೇಷಣೆಯು ನಿಮಗೆ ಖುಷಿಕೊಡುವುದು. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಕೆಲವು ಏರಿಳಿತಗಳು ಇರಬಹುದು. ವೈಯಕ್ತಿಕ‌ ಜೀವನದಿಂದ ಹೊರಬರಲು ಪ್ರಯತ್ನ ನಡೆಯಲಿದೆ. ಹಣದ ವಿಚಾರದಲ್ಲಿ ಜಾಣೆ ಅಗತ್ಯ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಆದಾಯದ ಮೂಲವನ್ನು ನೀವು ಹೆಚ್ಚಿಸಿಕೊಳ್ಳಲು ಬಯಸುವಿರಿ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ಆಪದ್ಬಾಂಧವರನ್ನು ನೆನಪಿಸಿಕೊಳ್ಳುವಿರಿ. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಸ್ತ್ರೀಯರ ಮಾತಿಗೆ ಮನಸೋಲುವ ಸಾಧ್ಯತೆ ಇದೆ.

ವೃಷಭ ರಾಶಿ: ಗದ್ದಲದ‌ ನಡುವೆ ನಿಮ್ಮ ಮಾತು ಕೇಳಿಸದು. ನೀವು ಕುಟುಂಬ ಮತ್ತು ನಿಮ್ಮ ಆಪ್ತರ ಜೊತೆ ಸಮಯ ಕಳೆಯುವುದರಿಂದ ಸದ್ಭಾವ ಬೆಳೆಯುವುದು. ಹಣಕಾಸಿನ ವಿಷಯಗಳಲ್ಲಿ ಯಾರಾದರೂ ನಿಮಗೆ ಸಹಾಯ ಮಾಡುತ್ತಾರೆ. ಗಂಭೀರ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಿ. ವ್ಯವಹಾರದಲ್ಲಿ ಲಾಭಸಾಧ್ಯ. ಮಕ್ಕಳಿಗೆ ಸಹಾಯ ಮಾಡಿ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ವ್ಯಾವಹಾರಿಕ ಸಂದಿಗ್ಧತೆಯನ್ನು ಸರಿಮಾಡಲು ಆಗದು. ಪ್ರೇಮ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ಉದ್ಯಮಿಗಳಿಗೂ ಲಾಭದ ದಿನ. ದಿನದ ಕೊನೆಯಲ್ಲಿ ಆತ್ಮೀಯರೊಂದಿಗೆ ಸಮಯ ಕಳೆಯಬಹುದು. ಸಂಗಾತಿಯ ಪ್ರೀತಿ ನಿಮ್ಮ ನೆನಪಿನಲ್ಲಿ ಉಳಿಯುವ ರೀತಿಯಲ್ಲಿರುತ್ತದೆ. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ಭವಿಷ್ಯದ ನಿಮ್ಮ ಕಲ್ಪನೆಗೆ ಒಂದು ರೂಪವು ಸಿಕ್ಕಂತೆ ತೋರುವುದು. ದಿನ ನಿತ್ಯದ ಚಟುವಟಿಕೆಗಳು ಬೇಸರ ತರಿಸುವುದು. ಏನಾದರೂ ಹೊಸತನ್ನು ಮಾಡಲು ಇಷ್ಟಪಡುವಿರಿ.

ಮಿಥುನ ರಾಶಿ: ಆಧಾರ ರಹಿತ ಮಾತುಗಳಿಗೆ ಪ್ರಾಮುಖ್ಯ ಇರದು. ನಿಮ್ಮ ಕಾರ್ಯವನ್ನು ಕಂಡು ಮೇಲಧಿಕಾರಿಗಳು ಪ್ರಶಂಸಿಸುವರು. ಅಧ್ಯಯನದಲ್ಲಿ ನೀವು ಮಾಡುವ ಪ್ರಯತ್ನಗಳು ಲಾಭದಾಯಕವೆಂದು ಸಾಬೀತುಪಡಿಸುತ್ತದೆ. ನಿಮಗೆ ಬೇಕಾದುದನ್ನು ಮಾತ್ರ ಹೇಳಿಕೊಳ್ಳುವಿರಿ. ನಿಮ್ಮ ಗುರಿಗಳನ್ನು ಸಾಧಿಸಲು ನಿಮ್ಮನ್ನು ಹತ್ತಿರಕ್ಕೆ ತರುತ್ತದೆ. ಸ್ಪಷ್ಟತೆಯು ಉತ್ತಮ ಸಂವಾದಕ್ಕೆ ಕಾರಣವಾಗುತ್ತದೆ. ನಾಯಕತ್ವದ ಗುಣದಿಂದ ಹೊಣೆಗಾರಿಕೆಗಳೂ ಹೆಚ್ಚಾಗುತ್ತವೆ. ಆತ್ಮತೃಪ್ತಿ ಹೊಸ ಬಾಗಿಲುಗಳನ್ನು ತೆರೆಯುತ್ತದೆ. ಉದ್ಯೋಗದಲ್ಲಿ ಧೈರ್ಯದಿಂದ ಹೊಸ ಪ್ರಯತ್ನ ನಡೆಸಿ. ಮನಸ್ಸುಗಳ ನಡುವೆ ಸಮತೋಲನ ಇಲ್ಲವಾದೀತು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಕಛೇರಿಯಲ್ಲಿ ನಿಮಗೆ ಆರಾಮಾಗಿ ಇರುವ ಯೋಚನೆ ಇರುವುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಯಾರಾದರೂ ನಿಮ್ಮ ಮಾತನ್ನು ನಂಬುವರು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತ.

ಕರ್ಕಾಟಕ ರಾಶಿ: ಸಿಗಬೇಕಾದುದು ಸರಿಯಾದ ಸಮಯಕ್ಕೆ ಸಿಗಲಿದೆ. ಬಾಂಧವ್ಯವನ್ನು ಉಳಿಸಿಕೊಳ್ಳುವುದು ನಿಮಗೆ ಹಿಡಿಸದು. ದಿನವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ ಆರೋಗ್ಯದ ಬಗ್ಗೆ ತೃಪ್ತಿಕರವಾಗಿರುತ್ತದೆ. ನಿಮ್ಮ ಪರವಾಗಿ ಮಾತನಾಡಲು ಯಾರಾದರೂ ಬೇಕಾಗುತ್ತಾರೆ. ಸಾಮಾಜಿಕ ಸೇವೆಗೆ ವಿರಾಮ ಹೇಳುವಿರಿ. ಹಳೆಯ ಸಂಬಂಧಗಳು ಮತ್ತೆ ಬರುವ ಸಾಧ್ಯತೆ ಇರುವ ದಿನ. ಜ್ಞಾನಾರ್ಜನೆಗೆ ಪ್ರಯಾಣ ಮಾಡುವಿರಿ. ಉದ್ಯೋಗದಲ್ಲಿ ವಿವೇಕ ಅವಶ್ಯ. ಚಟುವಟಿಕೆಗಳ ಮೂಲಕ ಶಕ್ತಿ ಪುನಶ್ಚತನಗೊಳ್ಳುತ್ತದೆ. ಆರೋಗ್ಯದಲ್ಲಿ ತಾಳ್ಮೆಯೇ ಮುಖ್ಯ. ಹೊಸ ನಿಲುವಿನಿಂದ ಭವಿಷ್ಯ ನಿರ್ಮಿಸಿ. ವಿದ್ಯಾಭ್ಯಾಸಕ್ಕೆ ಸಮಯ ಚೆನ್ನಾಗಿದೆ. ಉತ್ತಮ ಪ್ರದರ್ಶನದಿಂದಾಗಿ ಯಶಸ್ಸಿನ ಸಾಧ್ಯತೆಗಳು ಹೆಚ್ಚುತ್ತಿವೆ. ಕೃತಜ್ಞತೆಯು ಅನಿವಾರ್ಯವಾಗಿ ಬೇಕಾಗುವುದು. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಇರದು.

ಸಿಂಹ ರಾಶಿ: ಸಿಕ್ಕಿಕೊಂಡ ಹಣವನ್ನು ಬಿಡಿಸಿಕೊಳ್ಳಲು ಬಹಳ ಪ್ರಯತ್ನ ಅಗತ್ಯ. ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ‌ ಅವಕಾಶಗಳು ಇರಲಿದ್ದು ಅದನ್ನು ಬಳಸಿಕೊಳ್ಳುವಿರಿ. ನೀವು ತುಂಬಾ ಆರೋಗ್ಯ ಪ್ರಜ್ಞೆ ಹೊಂದಿರುತ್ತೀರಿ ಮತ್ತು ಆರೋಗ್ಯ ಸಂಬಂಧಿತ ಪ್ರಯತ್ನಗಳು ಯಶಸ್ವಿ ಫಲಿತಾಂಶಗಳನ್ನು ನೀಡುತ್ತವೆ. ಹಣದ ಬದಲು ಸುರಕ್ಷಿತ ಹೂಡಿಕೆ ಅತ್ಯುತ್ತಮ. ಪ್ರೀತಿ ಜೀವನ ಚೈತನ್ಯ ತುಂಬಿದಂತೆ ತೋರುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನ ಹಾಗೂ ಲಾಭ ಸಿಗಲಿದೆ. ಮನೆಯಲ್ಲಿ ಸಮಸ್ಯೆಗಳಿದ್ದರೂ ನೀವು ಸಮಾಧಾನದಿಂದಿರುವುದು ಉತ್ತಮ. ನಿಮ್ಮ ಸಂಬಂಧದಲ್ಲಿ ಅನ್ಯರಿಂದ ಅನುಮಾನ ವ್ಯಕ್ತವಾಗಲಿದೆ. ನಿಮ್ಮ ಕೆಲವು ಜೀವನದಲ್ಲಿ ಪ್ರೀತಿ ಬರಬಹುದು. ನಿಮಗೆ ತುಂಬಾ ಅದೃಷ್ಟವಂತರು ಎಂದು ಸಾಬೀತಾಗುತ್ತದೆ. ಅಲ್ಲಿ ನೀವು ಅಂತಿಮವಾಗಿ ನಿಮ್ಮ ದಾರಿಯನ್ನು ಮಾಡಲು ಸಾಧ್ಯವಾಗುತ್ತದೆ. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಮಾತಿನ‌ ಮೇಲೆ ಹಿಡಿತ ತಪ್ಪಬಹುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು.

ಕನ್ಯಾ ರಾಶಿ: ನಿಮ್ಮ ಸಹಾಯಕ್ಕೆ ಪ್ರತಿಯಾಗಿ ಸಹಾಯವನ್ನು ಅಪೇಕ್ಷಿಸುವಿರಿ. ವೃತ್ತಿಯಲ್ಲಿ ಹಾಗೆಯೇ ಉಳಿದ ಕಾರ್ಯಗಳ ಗಮನ ಹೆಚ್ಚಾಗುವುದು. ಕೆಲವು ಸಂದರ್ಭಗಳಿಂದಾಗಿ ನಿಮ್ಮ ಕೆಲಸದ ಪ್ರಯತ್ನಗಳು ವಿಳಂಬವಾಗುವ ಸಾಧ್ಯತೆಯಿದೆ. ಅನಂತರ ತೊಂದರೆ ತಪ್ಪಿಸಲು, ಯಾವುದೇ ಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೊದಲು ಯೋಚಿಸಿ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಸ್ತ್ರೀಯರು ಉದ್ಯೋಗಕ್ಕೆ ಅಲ್ಪವಿರಾಮ ಹೇಳವ ಸಾಧ್ಯತೆ ಇದೆ. ಕುಟುಂಬದ ಕೇಂದ್ರಬಿಂದುವಾಗಿ ನೀವು ಬೆಳಗಬಹುದು. ಸಹಭಾಗಿತ್ವದ ವಿಚಾರದಲ್ಲಿ ಸ್ಪಷ್ಟತೆ ಅಗತ್ಯ. ಸಂಗಾತಿಯ ಅತಿಯಾದ ಆಸಕ್ತಿ ನಿಮ್ಮ ಮನಸ್ಸಿಗೆ ಒತ್ತಡ ತರಬಹುದು. ಆದರೆ ಅವರ ನಿಜವಾದ ಉದ್ದೇಶ ನಿಮಗೆ ನಂತರ ಸ್ಪಷ್ಟವಾಗಲಿದೆ. ಇದರಿಂದ ಯಾವುದೇ ಪ್ರಮುಖ ಕೆಲಸವು ತಪ್ಪಿಸಿಕೊಳ್ಳುವುದಿಲ್ಲ. ಪ್ರೇಮ ಸಂಬಂಧಗಳು ಮಿಶ್ರವಾಗಿರುತ್ತದೆ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ನಿಮ್ಮನ್ನು ಬೇರೆ ಕಾರ್ಯಗಳಿಗೆ ಕರೆದುಕೊಂಡು ಹೋಗಿ, ಯೋಜನೆಯನ್ನು ಹಾಳುಮಾಡುವರು.

ತುಲಾ ರಾಶಿ: ಯಾರನ್ನೂ ತಿದ್ದುವ ಕೆಲಸ ಇಂದು ಸಫಲವಾಗದು. ಸಣ್ಣ ಸಣ್ಣ ಕೆಲಸಗಳನ್ನು ಮಾಡಲು ಹೆಚ್ಚು ಸಮಯ ತೆಗದುಕೊಳ್ಳುವುದು. ಇಂದು ನೀವು ಅನ್ಯರಿಂದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಆದ್ದರಿಂದ ಅವರ ಅಭಿಪ್ರಾಯವನ್ನು ಗೌರವಿಸಿ ಮತ್ತು ಅವರಿಗೆ ಸ್ವಲ್ಪ ಜಾಗವನ್ನು ನೀಡಿ. ಆತ್ಮವಿಶ್ವಾಸದ ಮೂಲಕ ನೀವು ಅನಾರೋಗ್ಯವನ್ನು ಎದುರಿಸಬಹುದು. ಹಣಕಾಸು ಯೋಜನೆಗಳಲ್ಲಿ ಜಾಗ್ರತೆ ಅವಶ್ಯಕ. ಮನೆಯ ಒತ್ತಡ ಹೆಚ್ಚಾಗಬಹುದು, ಆದರೆ ಸಹಕಾರದಿಂದ ಅದು ಕಡಿಮೆಯಾಗುತ್ತದೆ. ಜನರೊಂದಿಗೆ ಇಣುಕು ನೋಟದಿಂದ ವ್ಯವಹರಿಸಬೇಕು. ನಿಮ್ಮ ತಾಳ್ಮೆ ಯಶಸ್ಸಿಗೆ ಕಾರಣವಾಗಲಿದೆ. ಇಲ್ಲದಿದ್ದರೆ ನಿಮ್ಮ ಹುಂಬುತನ ಸ್ವಭಾವದಿಂದ ಸಮಸ್ಯೆಗಳು ಉಂಟಾಗಬಹುದು. ನೌಕರರನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯವಾಗುವುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ನಿಮ್ಮ ವೇತನದ ಬಗ್ಗೆ ಹೇಳಬೇಕಾಗಿಬರಬಹುದು.

ವೃಶ್ಚಿಕ ರಾಶಿ: ನಿಮ್ಮ ನಿಷ್ಕ್ರಿಯತೆಯನ್ನೂ ಯಾರೂ ಸಹಿಸಲಾರರು. ಮೇಲಧಿಕರಿಗಳಿಂದ ವಿಚಾರಣೆ ನಡೆಯಲಿದೆ. ಯಾವುದನ್ನಾದರೂ ಒಪ್ಪಿಕೊಳ್ಳುವ ಮೊದಲು ನಿಮ್ಮ ಒತ್ತಡವನ್ನು ಗಮನಿಸಿಕೊಳ್ಳಿ. ನೀವು ಪ್ರೇಮ ಸಂಬಂಧದಲ್ಲಿ ಬೇಸರವನ್ನು ಅನುಭವಿಸಬಹುದು, ಆದ್ದರಿಂದ ಪ್ರೀತಿಯ ಸಂಬಂಧವನ್ನು ಕೇಂದ್ರೀಕರಿಸಿ ಮತ್ತು ನಿಮ್ಮ ಸಂಗಾತಿಯ ಜೊತೆ, ಮಕ್ಕಳ ಜೊತಡ ಸಮಯ ಕಳೆಯಲು ಆಗದು. ಹಣ ಉಳಿಸುವ ಯತ್ನ ಇಂದು ಯಶಸ್ವಿ. ಸಂಬಂಧಿಕರ ಜೊತೆ ಸಣ್ಣ ಪ್ರಯಾಣ ನೆಮ್ಮದಿ ತರಬಹುದು. ಜೀವನದಲ್ಲಿ ಗಾಢತೆಯ ಅನುಭವವನ್ನು ಮರೆಯಲಾಗದು. ನಿಮ್ಮ ಶ್ರಮದ ಫಲವನ್ನು ಇತರರು ಪಡೆದರೆ ವ್ಯಥೆ ಆಗಬಹುದು. ಹಳೆ ಸ್ನೇಹಿತರ ಭೇಟಿಗೆ ಯೋಜನೆ ಮಾಡುವಿರಿ. ಸಂಗಾತಿಯ ಕಾಳಜಿಯು ನಿಮ್ಮ ಮನಸ್ಸನ್ನು ಮುಕ್ತಗೊಳಿಸುತ್ತದೆ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಮನೆಯ ಮುಂದೆ ಬಂದವರನ್ನು ಖಾಲಿ ಕೈಯಲ್ಲಿ ಕಳುಹಿಸುವುದು ಬೇಡ.

ಧನು ರಾಶಿ: ಕೆಲವರನ್ನು ನಿಮ್ಮ ಮುಷ್ಟಿಯಲ್ಲಿ ಹಿಡಿದುಕೊಂಡರೂ ತಪ್ಪುಹೋಗಬಹುದು. ಸುಮ್ಮನೇ ಇನ್ನೊಬ್ಬರ ಭವಿಷ್ಯದ ಬಗ್ಗೆ ಮಾರ್ಗದರ್ಶನ ಮಾಡುವುದು ಬೇಡ. ನೀವು ಎಂದಿಗಿಂತಲೂ ನಿಮ್ಮ ಸಂಗಾತಿಗೆ ಹತ್ತಿರವಾಗಲಿದ್ದೀರಿ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಬೇರೆಕಡೆ ಇಟ್ಟ ಹಣದ ವ್ಯವಹಾರಗಳಲ್ಲಿ ಎಚ್ಚರ ವಹಿಸಿ. ಯಂತ್ರದಿಂದ ಆದಷ್ಟು ದೂರವಿರಿ. ಬಳಕೆಯನ್ನು ಕಡಿಮೆ ಮಾಡಿದರೆ ಇನಗನೂ ಒಳ್ಳೆಯದು. ಮನೆಯವರೊಂದಿಗೆ ಹೆಚ್ಚು ಕಾಲ ಇಲ್ಲದಿದ್ದರೆ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಕೆಲಸದಲ್ಲಿ ಹೊಸ ಜನರನ್ನು ಭೇಟಿಯಾಗಿ ಮುಂದಿನ ಅವಕಾಶಗಳತ್ತ ಗಮನ ಹರಿಸಿ. ಬುದ್ಧಿವಂತಿಕೆಯಿಂದ ಕೆಲಸವನ್ನು ಮಾಡಿ ನಿಭಾಯಿಸಿಕೊಳ್ಳಿ. ಪರಿಚಿತ ಜನರನ್ನು ಭೇಟಿಯಾಗುವ ಸಂತೋಷವನ್ನು ಹಂಚಿಕೊಳ್ಳುವಿರಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು.

ಮಕರ ರಾಶಿ: ವಿಘ್ನಸಂತೋಷಗಳಿಂದ ನಿಮಗೆ ಕೋಪ ಅಧಿಕವಾಗುವುದು. ಪ್ರತಿಕಾರದ ಮನೋಭಾವ ನಿಮ್ಮದಾಗುವುದು. ಇಂದು ನಿಮಗೆ ಪ್ರೇಮವು ಸಂತೋಷವನ್ನು ಕೊಡದೇಹೊಇಗಬಹುದು. ನಿಮ್ಮ ಸಂಗಾತಿಗೆ ಈ ವಾರ ಸ್ಥಳಾವಕಾಶ ಬೇಕಾಗುತ್ತದೆ, ಅವರ ಅಭಿಪ್ರಾಯವನ್ನು ಗೌರವಿಸಿ. ಆತ್ಮವಿಶ್ವಾಸದಿಂದ ನೀವು ದಿನವನ್ನು ಸುಗಮವಾಗಿ ಕಳೆಯುತ್ತೀರಿ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಜಗಳವಾದರೂ, ತಾಳ್ಮೆ ಬೇಕು. ಕೆಲಸದ ಕಡೆ ನೂರಕ್ಕೆ ನೂರು ಶೇಕಡಾ ಗಮನ ನೀಡಿ. ಹಿರಿಯರಿಂದ ಮಾರ್ಗದರ್ಶನ ಸಿಗಬಹುದು. ಎಲ್ಲದೂ ನಿಮ್ಮದೇ ಎಂಬ ಮನೋಭಾವ ಬೇಡ. ಕಾಳಜಿ ವಹಿಸುವುದನ್ನು ನೋಡುವುದು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸುತ್ತದೆ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಹಂಚಿಕೊಳ್ಳುವ ಬಗ್ಗೆ ಸಮಾಧಾನ ಇರದು. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ.

ಕುಂಭ ರಾಶಿ: ಸ್ನೇಹಿತರ ಪ್ರೇಮಕ್ಕೆ ಮಧ್ಯಪ್ರವೇಶ ಮಾಡಿ ಪ್ರೇಮಭಂಗ‌ಮಾಡಯವಿರಿ‌ ಮನೆಯಲ್ಲಿಯೇ ಇದ್ದು ಮಕ್ಕಳ ಜೊತೆ ಕಾಲವನ್ನು ಕಳೆಯುವಿರಿ. ಮನೆಯ ನವೀಕರಣದ ಬಗ್ಗೆ ಯಾರನ್ನಾದರೂ ಸಂಪರ್ಕಿಸಿ ಮುಂದುವರಿಯುವಿರಿ. ಸಂಗಾತಿಯ ವ್ಯವಹಾರಗಳಲ್ಲಿ ಕಡಿಮೆ ಹಸ್ತಕ್ಷೇಪ ಮಾಡುವುದು ಉತ್ತಮ. ಹಣದ ಹೂಡಿಕೆ ಕುರಿತು ಯೋಚಿಸಿ ನಿರ್ಧಾರ ಮಾಡಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಇರುವಾಗ ಸಹನೆವಹಿಸಿ. ಪ್ರೇಮದಲ್ಲಿ ವಿಶಿಷ್ಟ ಅನುಭವ ಸಾಧ್ಯ. ಕೆಲಸಕ್ಕಾಗಿ ಕೈಗೊಂಡ ಪ್ರಯಾಣ ಯಶಸ್ಸು ತರುತ್ತದೆ. ಹೃದಯ ಮತ್ತು ಮನಸ್ಸಿಗೆ ಜಾಗೃತಗೊಳ್ಳುವ ದಿನ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌ ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ಮೀನ ರಾಶಿ: ವೈಯಕ್ತಿಕ ಕಾರ್ಯಗಳನ್ನು ತಾತ್ಕಾಲಿಕ ಸಮಯದವರೆಗೆ ಮುಂದೂಡುವಿರಿ. ಕುಟುಂಬದಲ್ಲಿ ನಿಮ್ಮ ಯಶಸ್ಸಿನ ಎಲ್ಲರೂ ಖುಷಿಪಡುವರು. ವೃತ್ತಿಜೀವನಕ್ಕೆ ಬೇಕಾದ ಸಿದ್ಧತೆಯಲ್ಲಿ ಇರುವಿರಿ. ಕೆಲಸದಲ್ಲಿ ಪೂರ್ವಭಾವಿಯಾಗಿ ತಿಳಿದುಕೊಳ್ಳಲು ಹೋದರೆ, ಕೆಲಸಗಳನ್ನು ಅನಾಯಸವಾಗಿ ನಡೆಸಬಹುದು. ಅತಿಯಾದ ಸಮಯವನ್ನು ಬಾಕಿಯಿರುವ ಕೆಲಸಗಳಿಗೆ ಬಳಸಬಹುದು. ಹಣಕಾಸಿನ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಸಂಗಾತಿಯ ಕುಟುಂಬದ ಅಡ್ಡಿ ಕೆಲವೊಂದು ವ್ಯತ್ಯಯ ತಂದರೂ, ನಿಮ್ಮ ಸಹನೆಗೆ ಅದರ ಬಗ್ಗೆ ಪ್ರಭಾವ ಬೀರುವುದಿಲ್ಲ. ನೀವು ನಿರೀಕ್ಷೆ ಮಾಡದ ರೀತಿ ದಿನ ನಡೆಯಲಿದೆ. ದೂರದೂರಿಗೆ ಪ್ರವಾಸಕ್ಕೆ ಹೋಗುವ ಮನಸ್ಸು ಮಾಡಲಿದ್ದೀರಿ. ನಿಮ್ಮನ್ನು ನೀವು ದುರ್ಬಲ ಮಾಡಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಯಾರದೋ ಬೇಸರವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು.

-ಲೋಹಿತ ಹೆಬ್ಬಾರ್ – 8762924271 (what’s app only)