ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ, ಗುರುವಾರ ಭವಿಷ್ಯದ ಚಿಂತೆ, ಆರ್ಥಿಕ ಅಸ್ಥಿರತೆ, ಉದ್ಯೋಗದಲ್ಲಿ ಉನ್ನತಿ, ವಿದ್ಯಾಭ್ಯಾಸಕ್ಕೆ ತಡೆ ಇವೆಲ್ಲ ಇಂದಿನ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧವಾರ, ತಿಥಿ: ದಶಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವಿಷ್ಕಂಭ, ಕರಣ: ವಣಿಜ, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 – 54 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:06 : 15:42, ಯಮಘಂಡ ಕಾಲ 06:05 – 07:41, ಗುಳಿಕ ಕಾಲ 09:17 – 10:53
ಮೇಷ ರಾಶಿ: ಯಾವ ಕಟ್ಟುಪಾಡುಗಳನ್ನೂ ಮೀರದೇ ಕೆಲಸಮಾಡುವುದು ಅಗತ್ಯ. ಇಂದಿನ ಎಲ್ಲ ಕಾರ್ಯಗಳೂ ಸಮಯ ಮೀರುವ ಸಾಧ್ಯತೆ ಇದೆ. ಅಷ್ಟಾದರೂ ನಿಮ್ಮ ಪಾಲಿನದ್ದು ಸಿಕ್ಕೆ ಸಿಗುವುದು. ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಹಿತಶತ್ರುಗಳಿಂದ ನಿಮ್ಮ ಕಾರ್ಯವನ್ನು ಗೊತ್ತಾಗದೇ ಮಾಡಿಸಿಕೊಳ್ಳುವಿರಿ. ನಿಮ್ಮ ಆತ್ಮವಿಶ್ವಾಸ ಹೆಚ್ಚು, ಅದನ್ನು ಕೆಲಸದಲ್ಲಿ ಪ್ರದರ್ಶಿಸಿ. ಮನಸ್ಸಿಗೆ ಬೇರೆ ರೀತಿಯಲ್ಲಿ ನೋಡುವ ಅವಶ್ಯಕತೆ ಇರಲಿದೆ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ.
ವೃಷಭ ರಾಶಿ: ಏಕಾಗ್ರತೆಯಿಂದ ಏನನ್ನೂ ಮಾಡಲಾಗದು. ಇಂದು ನಿಮ್ಮ ಬಳಿ ಯಾರಾದರೂ ಸಮಸ್ಯೆಗಳನ್ನು ಹೇಳುತ್ತ ಬರಬಹುದು. ಅದನ್ನು ಜಾಣ್ಮೆಯಿಂದ ಬಗೆ ಹರಿಸಿ. ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡುವಿರಿ. ವ್ಯವಹಾರಕ್ಕೆ ಬೇಕಾದ ಪ್ರಮುಖ ದಾಖಲೆಗಳು ಕಣ್ಮರೆಯಾಗಬಹುದು. ಪರಿಸ್ಥಿತಿ ಶೀಘ್ರದಲ್ಲೇ ನಿಮ್ಮ ಪರವಾಗಿ ಬದಲಾಗುತ್ತದೆ. ಎಲ್ಲದಕ್ಕೂ ಮಾರ್ಗದರ್ಶನ ಬೇಕು ಎನಿಸುವುದಕ್ಕಿಂತ ಸ್ವಂತವಾಗಿ ಆಲೋಚಿಸುವುದೂ ಮುಖ್ಯವಾಗುವುದು. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ಧೈರ್ಯ ಮತ್ತು ಮನಸ್ಸಿಗೆ ಶಾಂತಿ ದೊರಕಲಿದೆ. ಇಲ್ಲವಾದರೆ ಪರಿಸ್ಥಿತಿಯು ಮತ್ತೇನೋ ಆಗುವುದು. ಕಚೇರಿಯಲ್ಲಿನ ಸೂಕ್ಷ್ಮ ವ್ಯವಹಾರವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು.
ಮಿಥುನ ರಾಶಿ: ಪ್ರೀತಿ ಮಾಡಲು ನಿಮ್ಮ ಮನಃಸ್ಥಿತಿಯವರನ್ನೇ ಹುಡುಕುವಿರಿ. ನಿಮ್ಮ ಸ್ನೇಹಿತರಿಗೆ ನಿಮ್ಮಿಂದ ಹೆಚ್ಚಿನ ಸಲಹೆ ಬೇಕಾಗಬಹುದು. ಅದು ಅವರ ಸಾಮರ್ಥ್ಯಕ್ಕೆ ಸರಿಯಾಗಿರಲಿ. ನಿಮಗೆ ಅತೃಪ್ತಿಯ ಭಾವವು ಕಾಡಲಿದೆ. ಪಕ್ಕದರ ಪರಿಚಯವು ಸ್ನೇಹವಾಲಿದೆ. ನಿಮ್ಮ ಅಪಕ್ವತೆಯನ್ನು ತೋರಿಸುವುದು ಬೇಡ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಅಥವಾ ಸ್ಥಾನಮಾನ ಅಲ್ಲಗಳೆಯುವಿರಿ. ನಿಮ್ಮ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡುವರು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಯಾರಾದರೂ ನಿಮ್ಮನ್ನು ಹುಡುಕಿಕೊಂಡು ಬಂದು ನಿಮ್ಮಿಂದ ಸಲಹೆಯನ್ನು ಪಡೆಯಬಹುದು. ಹಿಂದಿನ ಪ್ರಯತ್ನಗಳ ಫಲವನ್ನು ನೀವು ಈಗ ಪಡೆಯಲು ಪ್ರಾರಂಭಿಸುತ್ತೀರಿ. ಕಛೇರಿಯಲ್ಲಿ ಸಂತೋಷದ ವಾತಾವರಣ ಇದ್ದು ನಿಮಗೆ ಕೆಲಸವನ್ನು ಮಾಡಲು ಅನುಕೂಲವಾಗುವುದು. ಇಷ್ಟು ದಿನ ಮಾತಮಾಡದೇ ಇರುವವರು ಇಂದು ಮಾತನಾಡುವರು. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ.
ಕರ್ಕಾಟಕ ರಾಶಿ: ನಿಂದನೆ ಮಾಡುವ ಜನರನ್ನು ನೀವು ತಿರಸ್ಕರಿಸಿ ಅವರ ಜೊತೆ ಎಲ್ಲ ಬಂಧವನ್ನು ಕಳೆದುಕೊಳ್ಳುವಿರಿ. ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳಲು ಪ್ರಾಣಾಯಾಮ ಅಥವಾ ಧ್ಯಾನವನ್ನು ಮಾಡುವುದು ಉತ್ತಮ. ನಿಮಗೆ ಪ್ರಿಯವಾದದ್ದನ್ನು ಪಡೆದುಕೊಳ್ಳುವಿರಿ. ಬಹಳ ಕಾಲದಿಂದ ಮಾಡುತ್ತಿರುವ ಕೆಲಸಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ. ಉದ್ವೇಗದಲ್ಲಿ ಇರುವಾಗ ಸುಮ್ಮನೆ ಒಂದು ಕಡೆ ಕುಳಿತು ಶಾಂತರಾಗಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಗಳು ಕೂಡಲೇ ಫಲ ನೀಡಬಹುದು. ಹಣಕಾಸಿನಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ. ಸ್ನೇಹಿತರಿಂದ ಬೆಂಬಲ ಸಿಗುವುದು ನಿಮ್ಮ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಮನಸ್ಸನ್ನು ದೃಢವಾಗಿಟ್ಟುಕೊಳ್ಳಿ. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಕಲಾವಿದರಿಗೆ ಪ್ರಶಂಸೆಯು ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಜೊತೆ ಗೌರವದಿಂದ ವರ್ತಿಸಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು.
ಸಿಂಹ ರಾಶಿ: ನಿಮ್ಮ ಬುಡಕ್ಕೆ ಬಂದಿದ್ದನ್ನು ಯಾವತ್ತೂ ಬಿಡಲಾರಿರಿ. ಇಂದು ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗಲಿದೆ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇರುವಿರಿ. ಸಂಶೋಧನೆ ಮಾಡುತ್ತಿರುವವರಿಗೆ ಶುಭವಾರ್ತೆ ಇರಲಿದೆ. ಅನವಶ್ಯಕ ವೆಚ್ಚದಿಂದ ದೂರವಿರಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಸಂಭವಿಸಬಹುದು, ಸಂಯಮ ಅಗತ್ಯ. ಅಧ್ಯಾತ್ಮದ ಬಗ್ಗೆ ಪರಿಚಿತರ ಬಳಿ ಸಂವಾದ ಮಾಡುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಸಂಗಾತಿಗೆ ಬೇಕಾದ ವಸ್ತುವನ್ನು ಕೊಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ತಾಳ್ಮೆಯಿಂದ ಕೆಲಸಗಳನ್ನು ನಿರ್ವಹಿಸಿ. ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಸಹೋದ್ಯೋಗಿಗಳ ಜೊತೆ ಸಣ್ಣ ವಿವಾದ ಆಗಬಹುದು. ಯಾರಿಂದಲಾದರೂ ಮೋಸ ಹೋಗುವ ಸಾಧ್ಯತೆ ಇದೆ. ಕೆಲವು ಘಟನೆಗಳು ನೀವು ಅಂದಿಕೊಂಡಂತೆ ಆಗುವುದು. ಆದಾಯದ ಭಾಗವನ್ನು ದಾನ ಮಾಡುವ ಆಸೆ ಬರಬಹುದು.
ಕನ್ಯಾ ರಾಶಿ: ಸುಮ್ಮನೆ ಕುಳಿತಿರುವುದು ನಿಮಗೆ ನಿರುದ್ಯೋಗದಂತೆ ಭಾಸವಾಗುವುದು. ನಿಮ್ಮ ವೃತ್ತಿಜೀವನವನ್ನು ಯಶಸ್ಸನ್ನು ಸಾಧಿಸಲು ಶ್ರಮವಹಿಸುವಿರಿ. ನಿಮ್ಮ ಉದ್ಯೋಗ ಅಭಿವೃದ್ಧಿಗೆ ಉತ್ತಮ ಆಲೋಚನೆಗಳನ್ನು ಮಾಡುತ್ತ ಮುಂದುವರಿಯಿರಿ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡಯುವಿರಿ. ಮನೆಯವರೊಂದಿಗೆ ಪ್ರವಾಸ ಹಾಗೂ ಬೇಕಾದ ವಸ್ತುಗಳ ಖರೀದಿಮಾಡುವಿರಿ. ಕಳಂಕರಹಿತ ವ್ಯವಹಾರವನ್ನು ಮಾಡುವಿರಿ. ಆರೋಗ್ಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯವಿದೆ. ಬದಲಾವಣೆಗಳನ್ನು ಅರ್ಥಮಾಡಿಕೊಳ್ಳುವ ಶಕ್ತಿ ಬೆಳೆಯುತ್ತದೆ. ಒರಟುತನವನ್ನು ಬಿಟ್ಟಷ್ಟು ನಿಮಗೇ ಒಳ್ಳೆಯದು. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ. ಮಕ್ಕಳ ಮೇಲೆ ಅತಿಯಾದ ಮೋಹವು ಬೇಡ. ಶಾಂತಿಯಿಂದ ಮುನ್ನಡೆಯಿರಿ. ನಿಮ್ಮ ಸಂಬಂಧವು ಮತ್ತಷ್ಟು ಆಪ್ತವಾಗಲು ಯೋಚಿಸುವಿರಿ. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದೇ ಕಲಹವಾಗುವುದು. ಬಿಗುಮಾನವನ್ನು ಬಿಟ್ಟು ಎಲ್ಲರ ಜೊತೆ ಬೆರೆಯುವ ಅಭ್ಯಾಸವು ಬೇಕಾಗುವುದು.