
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಭಾನುವಾರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 55 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:19 – 18:55, ಯಮಘಂಡ ಕಾಲ 12:30 – 14:06, ಗುಳಿಕ ಕಾಲ 15:42 – 17:19
ತುಲಾ ರಾಶಿ: ಸಮಜಾಯಿಷಿ ಕೊಡಬೇಕಾದರೆ ಕ್ರಮವನ್ನು ಅರಿತುಕೊಳ್ಳಿ. ನಿಮ್ಮ ಆಕಸ್ಮಿಕ ಪ್ರಯಾಣದಲ್ಲಿ ತೊಡಕಾಗಬಹುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳುವುದು ನಿಮಗೆ ಅನಿವಾರ್ಯವಾದೀತು. ಹಣದ ಖರ್ಚು ನಿಯಂತ್ರಣದಲ್ಲಿ ಇರಲಿದೆ. ಆಪ್ತರೊಂದಿಗೆ ಸಣ್ಣ ವ್ಯಾಜ್ಯ ಸಾಧ್ಯವಿದೆ, ಬುದ್ದಿವಂತಿಕೆಯಿಂದ ಬಗೆಹರಿಸಿ. ಆರೋಗ್ಯ ಸುಧಾರಿತ ಸ್ಥಿತಿಯಲ್ಲಿದೆ. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲು ತುರ್ತು ನಿರ್ಣಯ ಬೇಕಾಗಬಹುದು. ಯಾರ ಅನುಭವವೂ ನಿಮ್ಮ ಗಣನೆಗೆ ಬರದು. ಆರ್ಥಿಕವಾಗಿ ಅಭಿವೃದ್ಧಿ ನೆಮ್ಮದಿ ತರಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ. ಮಕ್ಕಳ ಕಡೆಯಿಂದ ತೃಪ್ತಿದಾಯಕ ಒಳ್ಳೆಯ ಸುದ್ದಿ ಪಡೆಯುತ್ತೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಖರೀದಿಯಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಭೋಗದ ವಿಧಾನಗಳು ಹೆಚ್ಚಾಗುತ್ತವೆ. ಮಕ್ಕಳಿಂದ ಬೇಸರವಾಗುವ ಸಾಧ್ಯತೆ ಇದೆ. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ.
ವೃಶ್ಚಿಕ ರಾಶಿ: ನಿರೀಕ್ಷಿಸದೇ ಇರುವುವರಿಂದ ಕಲಹವನ್ನು ಮಾಡಬೇಕಾಗುವುದು. ನಿಮ್ಮ ಬಳಿ ಸಂಪತ್ತಿರುವುದು ತಿಳಿದು ಅದನ್ನು ಪಡೆಯಲು ನಿಮ್ಮವರು ಪ್ರಯತ್ನಿಸಬಹುದು. ಇಂದು ಸದವಕಾಶಗಳು ಸಿಗಲಿವೆ ಎಂಬ ಖುಷಿ ಇರುವುದು. ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗಬಹುದು. ಉಪಾಯದಿಂದ ಗೆಲ್ಲುವ ದಾರಿಯನ್ನು ನೋಡಿ. ಮಕ್ಕಳ ಪ್ರಯತ್ನ ಫಲ ನೀಡಬಹುದು. ದಾಂಪತ್ಯ ಜೀವನದಲ್ಲಿ ಅನ್ನೋನ್ಯತೆ ಇರುತ್ತದೆ. ಕುಟುಂಬದ ಕೀರ್ತಿಯನ್ನು ಬೆಳೆಸುವವರಿದ್ದೀರಿ. ರಕ್ಷಣೆಯ ವ್ಯವಸ್ಥೆಯಲ್ಲಿ ಇರುವವರಿಗೆ ಶುಭಸುದ್ದಿ ಇರಲಿದೆ. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಲ್ಲದಿದ್ದರೆ ನಷ್ಟವು ನಿಮ್ಮದಾಗುತ್ತದೆ.
ಧನು ರಾಶಿ: ಹಳೆಯ ಕಲಹವು ಯಾವುದೋ ಕಾರಣದಿಂದ ಪುನಃ ಬರಬಹುದು. ಇಂದು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಿನ್ನಡೆಯಾಗುವುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ನೂತನ ಗೃಹನಿರ್ಮಾಣದ ಕನಸು ಕಾಣುವಿರಿ. ಈ ಸಮಯದಲ್ಲಿ ಆದಾಯ ಹೆಚ್ಚಳ ತರುತ್ತದೆ. ನಿಮ್ಮ ಆತ್ಮವಿಶ್ವಾಸ ಬಲವಾಗಿ ಉಳಿಯುತ್ತದೆ, ವಿಶ್ವಾಸಾರ್ಹ ಜನರೊಂದಿಗೆ ಮಾತ್ರ ಸಂಪರ್ಕದಲ್ಲಿರಿ. ಇಲ್ಲವಾದರೆ ಯಾರಾದರೂ ನಿಮ್ಮನ್ನು ಗೊಂದಲಗೊಳಿಸಲು ಪ್ರಯತ್ನಿಸಬಹುದು. ಅನಾರೋಗ್ಯದಿಂದ ಕಂಗೆಡಬಹುದು. ತೈಲವ್ಯಾಪಾರಿಗಳು ಹೆಚ್ಚು ಲಾಭವನ್ನು ಪಡೆವರು. ಉದ್ಯೋಗ, ವ್ಯವಹಾರಗಳಲ್ಲಿ ಏರುಗತಿಯನ್ನು ಕಂಡು ಸಮಾಧಾನವಾಗಲಿದೆ. ನಕಾರಾತ್ಮಕ ವಿಚಾರಗಳ ಗಮನ ಕೊಟ್ಟು ನಿಮ್ಮ ಸಮಯವು ಹಾಳಾಗುವುದು. ನಿಮ್ಮಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಪಾಲಿನ ಕೆಲಸ ಕಾರ್ಯಗಳಲ್ಲಿ ಚುರುಕುತನ ಕಂಡುಬಂದು ಮುನ್ನಡೆ ಸಾಧಿಸಲಿದ್ದೀರಿ.
ಮಕರ ರಾಶಿ: ಸಾಲವನ್ನು ತೀರಿಸಲು ಮತ್ತೆಲ್ಲೋ ಸಾಲಮಾಡುವಿರಿ. ನೀವು ಹಿಂದೆ ಆಗಿಹೋದ ಘಟನೆಗಳನ್ನು ನೆನೆಸಿಕೊಂಡು ವ್ಯಥೆಪಡುವಿರಿ. ಸಹೋದರರ ಜೊತೆ ಪ್ರೀತಿಯಿಂದ ಇರಲು ಬಯಸುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಪ್ರೀತಿಗೆ ಗೆಳೆಯರ ಸಹಾಯ ಸಿಗುವುದು. ಕೆಲವು ನಿರ್ಧಾರಗಳನ್ನು ತಾಳ್ಮೆಯಿಂದ ತೆಗೆದುಕೊಳ್ಳಿ. ಹಣದ ವ್ಯವಹಾರಗಳಲ್ಲಿ ಲಾಭದ ಸೂಚನೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ. ಯಾವುದೇ ಕೌಟುಂಬಿಕ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಬಹುದು. ವಿನಂತಿಸಿಕೊಂಡರೆ ಯಾವ ಕಾರ್ಯವೂ ಆಗದೇ ಇರದು. ವಿದ್ಯಾಭ್ಯಾಸದ ಕುರಿತು ಮಕ್ಕಳಿಗೆ ಪಾಠವನ್ನು ಮನೆಯಲ್ಲಿ ಮಾಡುವರು. ನಿಮಗದು ಅಸಹ್ಯ ವಿಷಯವಾಗುವುದು. ನಿಮ್ಮ ಬೆಳವಣಿಗೆಗೆ ಸಹಕರಿಸಿದವರ ನೆನಪನ್ನು ಮಾಡಿಕೊಳ್ಳವಿರಿ. ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಅಮೂಲ್ಯವಾದದ್ದನ್ನು ಕಳೆದುಕೊಳ್ಳುವಿರಿ. ಕೌಟುಂಬಿಕ ವಿಚಾರಗಳಲ್ಲಿ ಒತ್ತಡಗಳು ದೂರವಾಗಿ ನೆಮ್ಮದಿ ಕಂಡುಬರಲಿದೆ.
ಕುಂಭ ರಾಶಿ: ನಿಮ್ಮೊಬ್ಬರ ಸಿಟ್ಟು ಇಡಿಯ ವ್ಯವಸ್ಥೆಯನ್ನು ಹಾಳುಮಾಡುವುದು. ನಿಮ್ಮ ಏಳ್ಗೆಯನ್ನು ಕಂಡು ಶತ್ರುಗಳು ಸಂಕಟಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಆರ್ಥಿಕವಾಗಿ ಸ್ವಲ್ಪ ಒತ್ತಡ ಅನುಭವಿಸಬಹುದು ಆದರೆ ಅದು ತಾತ್ಕಾಲಿಕ. ಕೆಲಸದಲ್ಲಿ ಹಿರಿಯರಿಂದ ಶ್ಲಾಘನೆ ದೊರೆಯಬಹುದು. ಮನೆತನದ ಪ್ರತಿಷ್ಠೆಗೆ ಯೋಗ್ಯರೀತಿಯಲ್ಲಿ ವರ್ತಿಸುವಿರಿ. ಸಂಬಂಧಗಳಲ್ಲಿ ಸ್ಪಷ್ಟತೆ ಇಟ್ಟರೆ ಗೊಂದಲ ತಪ್ಪಬಹುದು. ವಾಹನ, ಮನೆ ಸಂಬಂಧಿತ ಕೆಲಸಗಳಿಗೆ ಅನುಕೂಲ. ಮಕ್ಕಳ ವಿಚಾರದಲ್ಲಿ ಸಂತೋಷದ ಸುದ್ದಿ ಕೇಳಬಹುದು. ನಿಯಮಗಳನ್ನು ಮುರಿಯಬೇಕು ಎನ್ನುವ ಮನಃಸ್ಥಿತಿಯು ಇರಲಿದೆ. ಅತಿಯಾದ ಪ್ರಯಾಣವನ್ನು ನೀವು ನಿಲ್ಲಿಸುವುದು ಉತ್ತಮ. ಇಲ್ಲವಾದರೆ ಅದರ ಪರಿಣಾಮವನ್ನು ಅನುಭವಿಸಬೇಕಾಗುವುದು. ಕೆಲವು ಅಹಿತಕರ ಜನರನ್ನು ಭೇಟಿಯಾಗುವುದರಿಂದ ಅನಗತ್ಯ ತೊಂದರೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗ, ವ್ಯವಹಾರಗಳಲ್ಲಿ ಉಲ್ಲಾಸಕರ ವಾತಾವರಣವಿರಲಿದೆ.
ಮೀನ ರಾಶಿ: ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಕೊಳ್ಳುವುದು ಕಡಿಮೆಯಾಗಿದ್ದು ಗಮನಕ್ಕೆ ಬರುವುದು. ಇಂದು ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣಲಿದ್ದೀರಿ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದು ಸಾಕಾರಗೊಳ್ಳುವುದು. ಸುಮ್ಮನಿರುವುದು ಹಲವು ಕಲಹವನ್ನು ತಪ್ಪಿಸುವುದು. ಸಣ್ಣ ವಿಷಯಗಳಿಗೂ ಕೋಪಗೊಳ್ಳುವ ನಿಮ್ಮ ಅಭ್ಯಾಸವನ್ನು ಸುಧಾರಿಸಿ ಮತ್ತು ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಯತ್ನಿಸಿ. ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಳೆಯ ಅನುಭವಗಳನ್ನು ನೆನಪಿಸಿಕೊಳ್ಳಿ. ಸ್ನೇಹಿತನಿಂದ ಬೆಂಬಲ ಸಿಗಲಿದೆ. ಹಣದ ವ್ಯವಹಾರಗಳಲ್ಲಿ ಜಾಗರೂಕತೆಯಿಂದಿರಿರಿ. ನಿಮ್ಮ ನಿರ್ಧಾರಕ್ಕೆ ಹಿಂದಿನ ಅನುಭವಗಳೇ ನಿಮಗೆ ಸಹಾಯವಾಗಲಿವೆ. ಇರುವವರನ್ನು ಬಿಟ್ಟು ಇನ್ನೊಬ್ಬರ ನಂಬಿ ಮೋಸಹೋಗಬೇಡಿ. ನೀವು ಯಾವುದೇ ನಿರ್ಧಾರಕ್ಕೆ ಕಟ್ಟುಬೀಳದೇ ಸ್ವತಂತ್ರವಾಗಿ ಇರಲು ಬಯಸುವಿರಿ. ಸ್ವಂತ ವ್ಯಾಪಾರ, ವ್ಯವಹಾರ ಹಾಗೂ ಕೌಟುಂಬಿಕ ವಿಚಾರಗಳಲಿದ್ದ ಒತ್ತಡಗಳು ನಿವಾರಣೆಯಾಗಲಿವೆ. ಶುಭ ಕಾರ್ಯದ ನಿರ್ಧಾರವು ಪ್ರಯತ್ನ ಬಲದಿಂದ ಫಲ ನೀಡಲಿದೆ.