Horoscope Today 27 December 2024: ಈ ರಾಶಿಯವರ ಉನ್ನತ ಶಿಕ್ಷಣದ ಕನಸು ನನಸಾಗಲಿದೆ

ಈ ಲೇಖನವು ಶಾಲಿವಾಹನ ಶಕೆ 1947ರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಪಂಚಮಿಯ ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ದಿನದ ಪ್ರಭಾವವನ್ನು ವಿವರಿಸಲಾಗಿದೆ. ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ತಿಳಿದುಕೊಳ್ಳಲು ಈ ಲೇಖನ ಸಹಾಯ ಮಾಡುತ್ತದೆ.

Horoscope Today 27 December 2024: ಈ ರಾಶಿಯವರ ಉನ್ನತ ಶಿಕ್ಷಣದ ಕನಸು ನನಸಾಗಲಿದೆ
ಈ ರಾಶಿಯವರ ಉನ್ನತ ಶಿಕ್ಷಣದ ಕನಸು ನನಸಾಗಲಿದೆ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 27, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ಧೃತಿ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:10 ರಿಂದ ಮಧ್ಯಾಹ್ನ 12:34ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:23 ರಿಂದ 04:47 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 08:21 ರಿಂದ 09:45 ರವರೆಗೆ.

ಮೇಷ ರಾಶಿ: ಇಂದು ನಿಮ್ಮ ಬೆಲೆ ಬಾಳುವ ಆಭರಣ ಕಣ್ಮರೆಯಾಗುವ ಸಾಧ್ಯತೆ ಇದೆ. ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಹೊಸ ಉದ್ಯೋಗದ ಅನ್ವೇಷಣೆಯಲ್ಲಿ ತೊಡಗುವಿರಿ. ಕಛೇರಿಯಲ್ಲಿ ಇಂದು ಕೆಲಸ ಮಾಡಲು ಆಸಕ್ತಿ ಕಡಿಮೆ ಇರಲಿದೆ.

ವೃಷಭ ರಾಶಿ: ಕಛೇರಿಯ ಕೆಲಸದ ಬಿಡುವಿನ ವೇಳೆಯಲ್ಲಿ ಸ್ವಂತ ಕೆಲಸವನ್ನು ಮಾಡುವಿರಿ. ಸಾಲಬಾಧೆಯ ಕಾರಣ ಮನಸ್ಸಿನಲ್ಲಿ ಅಸ್ಥಿರತೆ ಇರಲಿದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ಶುಭ ಸಮಾಚಾರದಿಂದ‌ ಮನಸ್ಸು ಅರಳುವುದು.‌ ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.‌ ಯಾರ ಒತ್ತಡಕ್ಕೂ ಮಣಿಯದ ನೀವಿ ಇಂದು ಒಪ್ಪಿಕೊಳ್ಳುವಿರಿ.‌ ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವಿರಿ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.

ಮಿಥುನ ರಾಶಿ: ನಿಮ್ಮ ವ್ಯಾಪಾರದ ಆಗುಹೋಗುಗಳನ್ನು ಬೇರೆ ರೀತಿಯಲ್ಲಿ ಸರಿಮಾಡಿಕೊಳ್ಳುವಿರಿ. ಆತ್ಮೀಯರು ನಿಮಗೆ ಹಿತಶತ್ರುಗಳಾಗಬಹುದು. ನಿಮ್ಮ ಬಗ್ಗೆ ಸಲ್ಲದ ಪ್ರಚಾರವನ್ನು ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಓದಿನ ಕಡೆ ಗಮನವು ಕಡಿಮೆ ಆಗಲಿದೆ. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ.‌ ಇಂದು ನೀವು ಗಟ್ಟಿ ಮನಸ್ಸಿನಿಂದ ಹೋದರೂ ಕಛೇರಿಯಿಂದ ನಿಮಗೆ ಕೆಲವು ಕಹಿ ಅನುಭವವನ್ನು ಕೊಟ್ಟೀತು. ಸಂಗಾತಿಯ ಜೊತೆ ಮಾತನಾಡಲು ಹೋಗಿ ಕಲಹವಾದೀತು. ದುಷ್ಕೃತ್ಯಕ್ಕೆ ಅಪ್ರತ್ಯಕ್ಷವಾಗಿ ಅನುಮೋದನೆ ಸಿಗಲಿದೆ. ಕೊಟ್ಟ ಹಣವನ್ನು ಹೊಂಪಡೆಯುವುದು ಕಷ್ಟ.

ಕರ್ಕಾಟಕ ರಾಶಿ: ವೃತ್ತಿಗಿಂತ ಹೆಚ್ಚು ಬೇರೆ ಕೆಲಸದಿಂದ ಹಣವನ್ನು ಗಳಿಸುವಿರಿ. ಇಂದು ನೀವು ಉದ್ಯೋಗದ ಕಾರಣಕ್ಕೆ ಬೇರೆ ಕಡೆಗೆ ಹೋಗುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಮಂದಗತಿಯ ಕೆಲಸಗಳಿಗೆ ನೀವು ಚುರುಕು ನೀಡುವಿರಿ. ಸಾಲ ಪಡೆದವರ ವಿಚಾರದಲ್ಲಿ ನಿಮಗೆ ಅಸಮಾಧಾನವಾಗಲಿದೆ. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ‌ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಮಕ್ಕಳ‌ ಸಂತೋಷದಿಂದ ನಿಮಗೂ ಸಂತೋಷವಾಗಲಿದೆ. ನಿಮ್ಮ‌‌‌ ಕೆಲವು ಮಾತುಗಳು ಇತರರಿಗೆ ಬೇಸರ ತರಿಸಬಹುದು. ನೌಕರರಿಂದ ಅಸಮಾಧಾನವಾಗಲಿದೆ. ಸಮಾರಂಭಗಳು ಇಂದು ನಿಮಗೆ ಸಪ್ಪೆ ಅನ್ನಿಸಬಹುದು. ದಾಂಪತ್ಯದಲ್ಲಿ ಹೊಂದಾಣಿಕೆಯು ಕಷ್ಟವಾದೀತು. ಅಪರಿಚಿತ ಸ್ತ್ರೀಯಿಂದ ಮೋಸ ಹೋಗುವಿರಿ.

ಸಿಂಹ ರಾಶಿ: ನಿಮ್ಮೊಳಗೆ ಎಲ್ಲವನ್ನೂ ಬಿಡುವ ಆಲೋಚನೆ ಬರುವುದು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಹೆಚ್ಚಿನ ಮೌಲ್ಯವು ಸಿಗದೇಹೋಗಬಹುದು. ಗುಂಪಿನಲ್ಲಿ ಕೆಲಸ ಮಾಡುವುದು ಇಷ್ಟವಾಗುವುದು. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಾದೀತು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳಿಂದ ಕೆಂಗಣ್ಣಿಗೆ ಗುರಿಯಾಗಬೇಕಾದೀತು. ತಂದೆಯ ಆರೋಗ್ಯದ ಬಗ್ಗೆ ನಿಮಗೆ ಚಿಂತೆ ಹೆಚ್ಚಾದೀತು. ನಿಮಗೆ ಸಂಬಂಧಿಸದ ವಿಷಯಕ್ಕೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವಿರಿ. ನೆರೆಯವರ ಸಹಾಯಕ್ಕೆ ಹೋಗಬೇಕಾದೀತು. ಪ್ರಾಣಿಗಳಿಂದ ಭೀತಿ ಉಂಟಾಗಬಹುದು. ಸುಲಭ ಕೆಲಸವನ್ನು ಇಂದು ಮಾಡಿಮುಗಿಸುವಿರಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಲೆಕ್ಕಪತ್ರದ ವ್ಯವಹಾರದಲ್ಲಿ ಕಲಹವಾಗವುದು.

ಕನ್ಯಾ ರಾಶಿ: ನಿಮಗೆ ಇಂದು ಮಾಡಲಾಗದ ಕಾರ್ಯವನ್ನು ಇನ್ನೊಬ್ಬರಿಗೆ ವಹಿಸಿಕೊಡುವಿರಿ. ಯಾರೋ ಮಾಡಿದ ತಪ್ಪು ಕೆಲಸದಿಂದ ನಿಮಗೆ ಸಿಟ್ಟು, ಹತಾಶೆ ಮೂಡಬಹುದು. ನೀವೇ ಸಂಗಾತಿಯ ಮನಸ್ಸನ್ನು ನೋಯಿಸಿ ಅನಂತರ ಸರಿಪಡಿಸುವಿರಿ.‌ ನಿಮ್ಮ‌ ನೇರ ನುಡಿಯಿಂದ ಎದುರಿನವರು ಸಿಟ್ಟಾಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ‌ ಕಾರಣ ನೀವು ಒಂಟಿಯಾಗಬೇಕಾದೀತು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ನಿಮ್ಮ‌‌‌ ಕೆಲವು ಮಾತುಗಳು ಬೇರೆಯವರಿಗೆ ಬೇಸರ ತರಿಸಬಹುದು. ಮಕ್ಕಳನ್ನು ಪಡೆಯುವ ಆಸೆಯಾಗಲಿದೆ. ನೌಕರರಿಂದ ನಿಮಗೆ ಅಸಮಾಧಾನ ಇದೆ.

ತುಲಾ ರಾಶಿ: ಸಮಸ್ಯೆಗಳನ್ನು ಹುಡುಕುವ ಪ್ರಯತ್ನವನ್ನು ಮೊದಲು ಮಾಡುವುದು ಬೇಡ. ಇಂದು ಕುರುಡ ಕತ್ತವನ್ನು ಹೊಸೆದಂತೆ ಆಗಬಹುದು. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ಸುಮ್ಮನೇ ಸಿಕ್ಕಿಕೊಳ್ಳುವಿರಿ. ವೇಗವಾಗಿ ಹಣವನ್ನು ಪಡೆಯಲು ಹೋಗಿ ಸಾಲದ ಚಕ್ರದಲ್ಲಿ ಸಿಕ್ಕಿಕೊಳ್ಳುವಿರಿ. ಹೊಸ ವಾಹನದ ಖರೀದಿಯು ಸದ್ಯಕ್ಕೆ ಬೇಡ. ನಿಮ್ಮನ್ನು ಇಷ್ಟಪಡುವವರು ನಿಮ್ಮ ಮನೆಗೆ ಬರುವರು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ನೀವು ಅಧಿಕವಾಗಿ ಮಾತನಾಡದೇ ಮೌನವಾಗಿರುವುದು ಉತ್ತಮ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಭವಿಷ್ಯದ ಬಗ್ಗೆ ನಿಮಗೆ ಸ್ಪಷ್ಟವಾದ ದೃಷ್ಟಿಕೋನ ಇಲ್ಲವಾದೀತು. ಎನಗಿಂತ ಕಿರಿಯರಿಲ್ಲ ಎನ್ನುವ ಭಾವ ಇರಲಿ.

ವೃಶ್ಚಿಕ ರಾಶಿ: ಒಂದಲ್ಲ ಒಂದು ರೀತಿಯಲ್ಲಿ ನಿಮ್ಮ‌ ಅನಾವರಣ ಆಗಲಿದೆ. ಮಕ್ಕಳ‌ ಆಸೆಗಳನ್ನು ಪೂರೈಸುವತ್ತ ನಿಮ್ಮ ಗಮನ ಇರಲಿದೆ. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ದಿನದಿಂದ ದಿನಕ್ಕೆ ಕ್ಷೀಣಿಸುವ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರಬಹುದು. ಹಿರಿಯರಿಂದ ಸಮಾಧಾನ ಸಿಗಲಿದೆ. ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮನ್ನು ಗೊಂದಲಗೊಳಿಸಬಹುದು. ತಾಯಿಯ ಮಾತನ್ನು ನಿರ್ಲಕ್ಷಿಸುವುದು ಬೇಡ. ಸಾಹಸದ ಕೆಲಸಕ್ಕೆ ಹೋಗುವಿರಿ. ನಿಮಗೆ ಸಿಗಬೇಕಾದ ಹಣವು ವಿಳಂಬವಾಗಬಹುದು. ಮರಗೆಲಸದವರಿಗೆ ಲಾಭ ಕಾಣಿಸುವುದು. ಇಂದಿನ ಖರ್ಚಿನ ಲೆಕ್ಕಾಚಾರವು ಬುಡಮೇಲಾಗವುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸೇ ನಿಮಗೆ ತೊಂದರೆ ಕೊಡುವುದು.

ಧನು ರಾಶಿ: ಇಂದು ಕೆಲಸವನ್ನು ಬೇರೆಯವರು ಮಾಡುತ್ತಾರೆ ಎಂದು ನೀವೂ ಮಾಡದೇ ಇರುವಿರಿ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ‌ಡುವಿರಿ. ಹಿರಿಯರ ಮಾರ್ಗದರ್ಶನವು ಉಪಯೋಗಕ್ಕೆ ಬರಲಿದೆ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ‌ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ಅಪರಿಚಿತರಿಂದ ನಿಮ್ಮ‌ ದೇಹಪೀಡಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ತಗ್ಗಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡುವುದು. ನಿಮ್ಮ‌ ಸೃಜನಾತ್ಮಕ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ಕೇಳಿ ಪಡೆದುಕೊಳ್ಳಿ. ದುಂದುವೆಚ್ವದ ಹಣವನ್ನು ಉಳಿತಾಯ ಮಾಡಿದ್ದರ‌ ಬಗ್ಗೆ ಸಮಾಧಾನವು ಸಿಗಲಿದೆ. ಉತ್ತಮ ಕಾರ್ಯಕ್ಕೆ ಶ್ಲಾಘನೆ ಸಿಗಲಿದೆ. ಹಿರಿಯರ ಜೊತೆ ವಾಗ್ವಾದಕ್ಕೆ ಹೋಗಿ‌ ಸೋಲಬೇಕಾಗಿದೆ.

ಮಕರ ರಾಶಿ: ಇಂದು ಮಾಡಬೇಕಾದ ಕಾರ್ಯವನ್ನು ಕಾರಣಾಂತರಗಳಿಂದ ಮುಂದೂಡುವಿರಿ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಸಂಗಾತಿಯನ್ನು ನೀವು ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಅಲ್ಪ ಶ್ರಮದ ಯತ್ನವು ಫಲಪ್ರದವಾಗದು. ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವು ಸಿಗಲಿದ್ದು ಬೇಕೋ ಬೇಡವೋ ಎನ್ನುವುದನ್ನು ಯಾರ ಬಳಿಯಾದರೂ ವಿಚಾರಿಸಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ. ಉಂಟಾದ ಪ್ರೀತಿಯನ್ನು ಹಾಗೆಯೇ ಇರಿಸಿಕೊಂಡು ನೋಡಿ, ಸತ್ಯವೇ ಸುಳ್ಳೆ ಎಂದು. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ.

ಕುಂಭ ರಾಶಿ: ಹಳೆಯ ಕಾರ್ಯಕ್ಕೆ ಹೊಸ ತಂತ್ರವನ್ನು ಬಳಸಿ ಕಾರ್ಯವನ್ನು ಸಾಧಿಸುವಿರಿ. ಸಾಮಾಜಿಕ‌ ಕ್ಷೇತ್ರದಲ್ಲಿ ಅಪಕೀರ್ತಿ ಬರಬಹುದು. ಉದ್ಯಮದಲ್ಲಿ ಒತ್ತಡದ ಸ್ಥಿತಿ ಬರಬಹುದು. ಇಂದು ನೀವು ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳ್ಳುವಿರಿ. ಕಛೇರಿಯನ್ನು ಏಕತಾನತೆಯನ್ನು ಬದಲಿಸಿಕೊಳ್ಳುವಿರಿ. ಸಂಗಾತಿಯಿಂದ ಸಾಮರಸ್ಯ ಕೊರತೆ ನೀಗಬಹುದು. ಬೇಕಾಗುವ ವಸ್ತುಗಳನ್ನು ಸ್ನೇಹಿತರಿಂದ ಪಡೆಯುವಿರಿ. ಆರ್ಥಿಕ ಸಂಕಷ್ಟವನ್ನು ಯಾರ ಸಮೀಪವೂ ಹೇಳಿಕೊಳ್ಳುವುದು ಬೇಡ. ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ಸಿಟ್ಟನ್ನು ಅಲ್ಪ ಸಮಯದಲ್ಲಿ ಶಮನ ಮಾಡಿಕೊಂಡು ಯಥಾಸ್ಥಿತಿಗೆ ಬರುವಿರಿ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು. ಖುಷಿಯನ್ನು ನೀವು ಹಂಚಿಕೊಳ್ಳುವ ಮನಸ್ಸು ಮಾಡುವಿರಿ.

ಮೀನ ರಾಶಿ: ಎದ್ದ ಅಲೆಗಳು ಕೆಲವೇ ಸಮಯದಲ್ಲಿ ಶಾಂತವಾಗುತ್ತವೆ. ಆದರೆ ಅಲ್ಲಿಯವರೆಗೆ ಕಾಯುವಿಕೆ‌ ಬೇಕು. ಗಟ್ಟಿ ಇದೆ ಎಂದು‌ ತಲೆಯನ್ನು ಬಂಡೆಗೆ ಕುಟ್ಟಲು ಆಗದು. ನಿಮ್ಮ ಯೋಗ್ಯತೆ ತಕ್ಕ ಕೆಲಸವು ಸಿಗಲಿದ್ದು ಇನ್ನೊಬ್ಬರನ್ನು ಹೋಲಿಕಾ ಮಾಡುತ್ತ ನಿಮ್ಮ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಪ್ರಯೋಜಕ ವಸ್ತುಗಳು ಅರ್ಧ ಬೆಲೆಗೆ ಮಾರಾಟ ಮಾಡುವಿರಿ. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಇಂದು ನಿಮ್ಮ‌ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ಒಂದೇ ವಿಚಾರವನ್ನು ನಿಮಗೆ ಮತ್ತೆ ಮತ್ತೆ ನೆನಪಿಸಬೇಕಾದೀತು. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೆ ಬೇಸರಿಸುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಎಲ್ಲ ಗೊತ್ತಿದೆ ಎಂದು ಹುಂಬುತನವನ್ನು ಮಾಡುವುದು ಬೇಡ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್