ವಿದ್ಯಾಭ್ಯಾಸದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಿಸದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಪ್ರತಿಪತ್/ ದ್ಚಿತೀಯಾ ತಿಥಿ, ಬುಧವಾರ ವಿದ್ಯಾಭ್ಯಾಸದಲ್ಲಿ ಉತ್ತಮ ಗತಿ, ಭವಿಷ್ಯದ ಚಿಂತನೆ, ಬಿಟ್ಟ ಕಾರ್ಯದ ಮುಂದುವರಿಕೆ ಇವು ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ವಿದ್ಯಾಭ್ಯಾಸದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಿಸದು
ದಿನ ಭವಿಷ್ಯ
Edited By:

Updated on: May 28, 2025 | 1:36 AM

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್ / ದ್ವಿತೀಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸುಕರ್ಮ, ಕರಣ: ಕಿಂಸ್ತುಘ್ನ, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 55 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:30 – 14:07, ಯಮಘಂಡ ಕಾಲ 07:41 – 09:17, ಗುಳಿಕ ಕಾಲ 10:54 – 12:30

ಮೇಷ ರಾಶಿ: ಸಂತೋಷದ ವಿನಿಮಯದಿಂದ ನೆಮ್ಮದಿ ಇಮ್ಮಡಿಸುವುದು. ವಿದ್ಯಾಭ್ಯಾಸದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಿಸದು. ನೀವು ಸ್ನೇಹಿತರನ್ನು ನಂಬಿ ಯಾರಿಗೋ ಹಣವನ್ನು ಕೊಟ್ಟು ಕಳೆದುಕೊಳ್ಳಬಹುದು. ವಿವಾಹಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ಯಾರ ಬಳಿಯಾದರೂ ಆದಾಯದ‌ ಮೂಲವನ್ನು ಕೇಳಿ ಬೈಸಿಕೊಳ್ಳುವ ಸಾಧ್ಯತೆ ಇದೆ. ತಾಳ್ಮೆಯಿಂದ ಕೆಲಸವನ್ನು ಮಾಡುವುದು ಉತ್ತಮ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ.

ವೃಷಭ ರಾಶಿ: ಚಿತ್ತಶುದ್ಧಿಗೆ ಸಮೀಪದ ಪ್ರದೇಶಕ್ಕೆ ಪ್ರವಾಸ ಮಾಡುವಿರಿ. ವಿದ್ಯೆಯ ಜೊತೆ ಬುದ್ಧಿಯೂ ಕೆಲಸ ಮಾಡಬೇಕು. ಏನೂ ಕೆಲಸವಿಲ್ಲದೇ ಸಮಯವನ್ನು ಕಳೆಯುವಿರಿ. ಆದಕಾರಣ ಹತ್ತಾರು ವಿಚಾರಗಳು ನಿಮ್ಮ ತಲೆಯಲ್ಲಿ ಓಡುತ್ತಿರಬಹುದು. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ ಯೋಜನೆಗಳು ಯಶಸ್ವಿಯಾಗುತ್ತವೆ. ಕೆಲಸದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹಿರಿಯರಿಂದ ನಿಮಗೆ ಬೆಂಬಲ ಸಿಗುತ್ತದೆ. ತಾಳ್ಮೆಯನ್ನು ಇಟ್ಟುಕೊಳ್ಳಿ. ಹೂಡಿಕೆಯ ಕಾರಣ ಆರ್ಥಿಕವಾಗಿ ಕಷ್ಟವಾಗಬಹುದು. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಸಣ್ಣ ಅಂತರದಲ್ಲಿ ಅಪಾಯದಿಂದ ಹೊರಬರುವಿರಿ. ನೀವು ಹನಿಮ್ಮ ಆವಿಷ್ಕಾರಕ್ಕೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಬಹುದು.

ಮಿಥುನ ರಾಶಿ: ಆಭರಣವನ್ನು ಸುಮ್ಮನೇ ಹಾಕಿಕೊಳ್ಳುವುದು ಬೇಡ. ನಿಮಗೆ ಇಷ್ಟವಾಗದವರ ಜೊತೆ ಮಾತನಾಡುವ ಸಂದರ್ಭ ಬರಬಹುದು. ಮಾತುಗಾರರಾಗಿದ್ದರೆ ಒಳ್ಳೆಯ ಅವಕಾಶಗಳು ಸಿಗಲಿವೆ. ಯಾರ ಮಾತ್ಸರ್ಯಕೋ ನೀವು ಗುರಿಯಾಗಬೇಕಾದೀತು. ಆತ್ಮವಿಶ್ವಾಸದಿಂದ ಕಾರ್ಯ ಯಶಸ್ವಿಯಾಗುವುದು. ವೈಯಕ್ತಿಕ ಬದುಕಿನಲ್ಲಿ ನೆಮ್ಮದಿ ಕಾಣಬಹುದು. ಸ್ನೇಹಿತರಿಂದ ಬೆಂಬಲ ಮತ್ತು ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಸಿಗುತ್ತದೆ. ಕಛೇರಿಯಲ್ಲಿ ನಿಮ್ಮ ಯೋಜನೆಗಳನ್ನು ಮೆಚ್ಚಿಕೊಂಡು ಅದನ್ನು ಕಾರ್ಯರೂಪಕ್ಕೆ ತರಲಿದ್ದಾರೆ.‌ ಬೇಡವೆಂದಿದ್ದನ್ನು ಮತ್ತೆ ಮಾಡುವುದು ಬೇಡ. ನೀವು ಸಮಯಕ್ಕೆ ಮಹತ್ತ್ವವನ್ನು ಕೊಡುವುದು ಬಹಳ ಇಷ್ಟದ ಸಂಗತಿಯಾಗಿದೆ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ಮಕ್ಕಳಿಗೆ ಭಯವನ್ನು ಕೊಡುವುದು ಬೇಡ.‌ ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಸರಳತೆಯನ್ನು ರೂಢಿಸಿಕೊಳ್ಳುವುದು ಉತ್ತಮ.

ಕರ್ಕಾಟಕ ರಾಶಿ: ನಿಮ್ಮ ಸಂಧಾನದಿಂದ ಯಾರಿಗೂ ಲಾಭವಾಗದು. ನೀವು ಇಂದು ದೂರದ ಪ್ರಯಾಣವನ್ನು ಮಾಡಲು ಸಾಧ್ಯವಾಗದು. ಪುರಸ್ಕಾರದ ಹಿಂದೆ ಇರುವ ಉದ್ದೇಶವನ್ನು ಮರೆಯುವಿರಿ. ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಶ್ರಮಕ್ಕೆ ಫಲ ಬೇಕಾದರೆ, ಸಹೋದ್ಯೋಗಿಗಳಿಂದ ಸಹಕಾರವೂ ಅಗತ್ಯ. ಮಾತಿನಲ್ಲಿ ಧೈರ್ಯ ಹಾಗೂ ಮಿತವ್ಯಯ ಇರಲಿ. ಕುಟುಂಬದಲ್ಲಿ ವಿಶಿಷ್ಟ ಸಂದರ್ಭ ಎದುರಾಗಬಹುದು. ಆತ್ಮೀಯರು ನಿಮ್ಮ ಸಮಯವನ್ನು ಹಾಳುಮಾಡುವರು. ಗಮನವಿಲ್ಲದ ಪ್ರಯಾಣದಿಂದ ದೂರವಿರಿ. ಅತಿಯಾದ ನಿಮ್ಮ ಸೂಕ್ಷ್ಮ ಸ್ವಭಾವದಿಂದ ನಿಮಗೇ ತೊಂದರೆಯಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮಗೆ ತಪ್ಪಿತಸ್ಥ ಭಾವವು ಮೂಡುವುದು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ.

ಸಿಂಹ ರಾಶಿ: ಶೀಘ್ರಕೋಪಕ್ಕೆ ಎಲ್ಲರಿಂದ ನಿಂದನೆ. ವ್ಯಾಪರದಲ್ಲಿ ಸಾಮೂಹಿಕತೆಯನ್ನು ಒಪ್ಪಿಕೊಳ್ಳಬೇಕಾಗುವುದು. ಇಂದು ನೀವು ಹೊರಗೆ ಸುತ್ತಾಡುವಾಗ ಎಚ್ಚರವಿರಲಿ. ಇನ್ನೊಬ್ಬರಿಂದ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ವೈದ್ಯಕೀಯ ಕ್ಷೇತ್ರಕ್ಕೆ ಹೋಗಲು ಬಯಸುವವರು ತಮ್ಮ ನಿರ್ಧಾರವನ್ನು ಗಟ್ಟಿ ಮಾಡಳ್ಳಬೇಕಿದೆ. ಅರೆಬೆಂದವರ ಜೊತೆ ಅಪಕ್ವವಾದ ಮಾತುಗಳನ್ನೇ ಆಡಬೇಕು. ವ್ಯಾಪಾರವು ಓಡಾಟದಿಂದ ಯಶಸ್ವಿಯಾಗುತ್ತವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು. ಕಛೇರಿಯ ಕೆಲಸವು ನಿಧಾನವಾಗಿ ಮೇಲಧಿಕಾರಿಗಳಿಂದ ನಿಂದನೆ ಸಾಧ್ಯತೆ ಇದೆ. ಇದರಿಂದ ಕೆಲಸದಲ್ಲಿ ನಿರಾಸಕ್ತಿಯೂ ಆಗಲಿದೆ. ಬೇಡದ ವಿಚಾರಕ್ಕೆ ತಲೆ ಹಾಕುವುದು ಬೇಡ. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ.

ಕನ್ಯಾ ರಾಶಿ: ನಿಮ್ಮ ಹಸ್ತಾಕ್ಷರವೇ ನಿಮಗೆ ಮುಳುವಾಗಬಹುದು. ಅಸಲಿ ವಿಚಾರವು ನಿಮಗೆ ಗೊತ್ತಾಗುವ ತನಕ ಕಾಲ ಮೀರಿಹೋಗುವುದು. ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವಾಗಬಹುದು. ನಿಮ್ಮ ದಾಂಪತ್ಯದ‌ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು ಅದಕ್ಕಾಗಿ ನಿಮ್ಮ ಹಣವನ್ನು ಖರ್ಚು ಮಾಡಬೇಕಾಗಿ ಬರಬಹುದು. ಮಾನಸಿಕ ಒತ್ತಡದ ಕಾರಣ ವಾಹನದಿಂದ ತೊಂದರೆ ಉಂಟಾಗಬಹುದು. ಮಧ್ಯಾಹ್ನದ ನಂತರ ಪರಿಸ್ಥಿತಿ ಸುಧಾರಿಸುತ್ತದೆ. ಮಕ್ಕಳಿಂದ ಸಂತೋಷ ಸಿಗುತ್ತದೆ. ಸಂಜೆ, ಕೆಲವು ದೊಡ್ಡ ಕೆಲಸಗಳಲ್ಲಿ ಯಶಸ್ಸು ಸಾಧ್ಯ, ಅದು ಆದಾಯ ಮತ್ತು ಸಂತೋಷವನ್ನು ಹೆಚ್ಚಿಸುತ್ತದೆ. ನಿಮ್ಮ ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡಬೇಕಿದೆ. ಮೋಸ ಹೋಗುವ ಸಾಧ್ಯತೆಯು ಇರಲಿದೆ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು. ನಿಮ್ಮ ಸಂಗಾತಿಗೆ ಒತ್ತಡಕ್ಕೆ ಇಂದಿನ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು.