Horoscope Today 30 December 2024: ಈ ರಾಶಿಯವರು ನಿಮಲ್ಲಿ ಎಲ್ಲವೂ ಇದ್ದರೂ ಎನೋ ಇಲ್ಲ ಎಂಬಂತೆ ಇರುವಿರಿ
ಇಂದಿನ ನಿಮ್ಮ ರಾಶಿಯ ಯಾವ ರೀತಿಯ ಫಲ ಇದೆ. ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ನಿಮ್ಮ ದೆಸೆಗಳು ಹಾಗೂ ಈ ಮಾಡಬೇಕದ ಕಾರ್ಯಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಯಾವ ರಾಶಿ ಸಂಕಷ್ಟ ಇದೆ, ಅದಕ್ಕೆ ಪರಿಗಾರಗಳೇನು ಎಂಬ ಬಗ್ಗೆ ಈ ಲೇಖನದಲ್ಲಿ ನೀಡಲಾಗಿದೆ. ಇಂದಿನ ದಿನ ನಿಮ್ಮ ಎಚ್ಚರಿಕೆ ಕ್ರಮಗಳೇನು? ಇ್ಲಲಿದೆ ನೋಡಿ.
ಶಾಲಿವಾಹನ ಶಕೆ 1947
ಕ್ರೋಧೀ ಸಂವತ್ಸರ
ದಕ್ಷಿಣಾಯನ
ಹೇಮಂತ ಋತು
ಧನು ಮಾಸ
ಮಹಾನಕ್ಷತ್ರ : ಮೂಲಾ
ಮಾಸ : ಮಾರ್ಗಶಿರ
ಪಕ್ಷ : ಕೃಷ್ಣ
ವಾರ : ಸೋಮ
ತಿಥಿ : ಅಮಾವಾಸ್ಯಾ
ನಿತ್ಯನಕ್ಷತ್ರ : ಪೂರ್ವಾಷಾಢ
ಯೋಗ : ವೃದ್ಧಿ
ಕರಣ : ಚತುಷ್ಪಾತ್
ಸೂರ್ಯೋದಯ – 06 – 58 am
ಸೂರ್ಯಾಸ್ತ – 06 – 12 pm
ಶುಭಾಶುಭಕಾಲ :
ರಾಹು ಕಾಲ 08:23 – 09:47
ಯಮಘಂಡ ಕಾಲ 11:11 – 12:35
ಗುಳಿಕ ಕಾಲ 13:59 – 15:24
ಮೇಷ ರಾಶಿ :
ನಿಮ್ಮ ಕಾಮಗಾರಿಗಳ ಪರಿಶೀಲನೆಯನ್ನು ಮೇಲಧಿಕಾರಿಗಳು ಮಾಡುಬವರು. ಇನ್ನೊಬ್ಬರ ಹಿತ ಚಿಂತನೆಯನ್ನು ಕಡಿಮೆ ಮಾಡಿ, ನಿಮ್ಮ ಬಗ್ಗೆ ಯೋಚಿಸುವಿರಿ. ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ನಿಮ್ಮವರಿಗೆಂದು ಕೊಡುವ ಸಮಯು ವ್ಯರ್ಥವಾಗುವುದು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಾಯಿಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ಯಾವುದನ್ನೇ ಆದರೂ ನಿರಂತರ ಮಾಡಿದರೆ ನಿಮ್ಮ ವಶವಾಗುವುದು. ಭಿನ್ನಾಭಿಪ್ರಾಯಗಳು ಪರಸ್ಪರ ಮಾತುಕತೆಯ ಮೂಲಕ ಪರಿಹಾರವಾಗುವುದು.
ವೃಷಭ ರಾಶಿ :
ಯಾರ ಮಾತನ್ನೂ ಒಮ್ಮೆಲೇ ನಂಬಿ ಮುನ್ನುಗ್ಗಲಾರಿರಿ. ನಿಮಲ್ಲಿ ಎಲ್ಲವೂ ಇದ್ದರೂ ಎನೋ ಇಲ್ಲ ಎಂಬಂತೆ ಇರುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಬಗ್ಗೆ ಭಿನ್ನಾಭಿಪ್ರಾಯ ಬರಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ನಿಮ್ಮ ಇಷ್ಟದ ಪ್ರಯಾಣಕ್ಕೆ ಕ್ಷಣಗಣನೆ ಮಾಡುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ಅನ್ಯರ ಜೊತೆ ಸಮಾನಸ್ಥಾನವನ್ನು ಗಳಿಸುವುದು ಕಷ್ಟವಾಗುವುದು. ಇಂದು ಪ್ರಾಬಲ್ಯವನ್ನು ಪ್ರದರ್ಶಿಸುವುದು ಮುಖ್ಯವಾಗಬಹುದು.
ಮಿಥುನ ರಾಶಿ :
ಎಂತಹದ್ದೇ ನೋವಿದ್ದರೂ ಆತ್ಮವಿಶ್ವಾಸದಿಂದ ಮುನ್ನಡೆಯುವುದೊಂದೇ ದಾರಿ. ಇಂದು ನಿಮ್ಮ ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ತಾಯಿಯ ಆರೋಗ್ಯದ ವ್ಯತ್ಯಾಸದಿಂದ ಚಿಕಿತ್ಸೆ ಕೊಡಿಸಿ. ಸ್ನೇಹಿತರು ನಿಮ್ಮ ಬಳಿ ಧನಸಹಾಯವನ್ನು ಕೇಳಬಹುದು. ಪ್ರಖ್ಯಾತ ವ್ಯಕ್ತಿಗಳ ಭೇಟಿಯಾಗಬಹುದು. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸಿ. ಎಂದೋ ಆಡಿದ ನಿಮ್ಮ ಮಾತು ನಿಮಗೇ ಪುನಃ ಬರಬಹುದು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ನಿಮಗಾದ ಒಳ್ಳೆಯದನ್ನು ಮರೆಯುವುದು ಬೇಡ.
ಕರ್ಕಾಟಕ ರಾಶಿ :
ನಿಮಗೆ ಅವಶ್ಯಕ ವಸ್ತುಗಳನ್ನು ಪಡೆಯುವ ಬಗ್ಗೆ ಅತಿಯಾದ ಇಚ್ಛೆ ಇರಲಿದೆ. ನಿಮ್ಮ ಬಗ್ಗೆ ಸಲ್ಲದ ಆರೋಪಗಳು ಕೇಳಿಬರಬಹುದು. ಭೂಮಿಯ ವ್ಯವಹಾರವನ್ನು ಸಂಕೋಚದಿಂದ ಮಾಡುವುದು ಬೇಡ. ನಿಮ್ಮ ನಿರ್ಧಾರವನ್ನು ಬದಲಿಸದೇ ಮುಂದುವರಿಯಿರಿ. ವಾಹನವನ್ನು ಪರೀಕ್ಷಿಸಿ ಖರೀದಿಸಿ. ಶತ್ರುಗಳು ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಕೆಲಸವನ್ನು ಮುಗಿಸುವಾಗ ಹೆಚ್ಚು ಜಾಗರೂಕರಾಗಿರಬೇಕು. ಕೊನೆಯ ಹಂತದಲ್ಲೂ ವ್ಯತ್ಯಾಸವಾಗಬಹುದು.
ಸಿಂಹ ರಾಶಿ :
ಇಂದು ನಿಮ್ಮ ಮನೆಗೆ ಅನಿರೀಕ್ಷಿತವಾಗಿ ಬಂಧುಗಳ ಆಗಮನ, ಕಾರ್ಯದಲ್ಲಿ ಹಿನ್ನಡೆ. ಇಂದು ಎಲ್ಲದಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡುವಿರಿ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಅಧಿಕಾರಿಗಳು ವೃತ್ತಿಯನ್ನು ಸರಿಯಾಗಿ ನಿರ್ವಹಿಸುವರು. ಒತ್ತಾಯಪೂರ್ವಕವಾಗಿ ಯಾರ ಸ್ನೇಹವನ್ನೂ ಬಯಸದಿರಿ. ಉತ್ತಮ ಕುಲದ ಸಂಗಾತಿಯ ಜೊತೆ ವಿವಾಹ ತೀರ್ಮಾನವಾಗುವುದು. ದೇವರಲ್ಲಿ ಶ್ರದ್ಧೆ ಇರಲಿದೆ. ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬೇಕಾದೀತು. ವ್ಯಾಪಾರಕ್ಕೆ ಸಂಬಂಧಿಸಿದಂತೆ ನಿಮಗೆ ಆದಾಯ ಕಡಿಮೆ ಆಗಬಹುದು. ವೈಯಕ್ತಿಕ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ.
ಕನ್ಯಾ ರಾಶಿ :
ಬೇಡಿಕೆಗಳಿಗೆ ಸ್ಪಂದಿಸಿದರೆ ಉದ್ಯಮವನ್ನು ಬೆಳೆಸಿಕೊಳ್ಳಬಹುದು. ಸಣ್ಣ ವ್ಯಾಪಾರವೂ ಇಂದು ಎಂದಿಗಿಂತ ಅಧಿಕ ಲಾಭವನ್ನು ಗಳಿಸುವುದು. ದೂರದ ಊರಿಗೆ ಉದ್ಯೋಗಕ್ಕೆ ಆಹ್ವಾನ ಬರಬಹುದು. ಸ್ನೇಹಿತರಿಂದ ವಿಶ್ವಾಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ. ರಾಜಕೀಯ ವ್ಯಕ್ತಿಗಳು ತಮ್ಮ ಲಾಭವನ್ನು ಪಡೆದುಕೊಳ್ಳುವರು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ವಿವಾಹದ ಬಗ್ಗೆ ಇರುವ ಗೊಂದಲವು ನಿವಾರಣೆಯಾಗಲಿದೆ. ಆಗದವರು ನಿಮ್ಮ ರಹಸ್ಯ ವಿಚಾರಗಳನ್ನು ತಿಳಿದುಕೊಳ್ಳಲು ಇಚ್ಛಿಸುವರು. ಒತ್ತಡದಿಂದ ನಿಮ್ಮ ಎಲ್ಲ ಚಿಂತೆಗಳೂ ಕಾಣಿಸಿಕೊಳ್ಳದು. ನಿಮ್ಮ ಸ್ಥಾನವನ್ನು ಕಳೆದುಕೊಳ್ಳುವುದು ಬೇಡ. ನೌಕರ ಇಚ್ಛಾಶಕ್ತಿಗೆ ಸ್ಪಂದಿಸಿ.
ತುಲಾ ರಾಶಿ :
ಮಾತು ನಿಮಗೆ ಕಟುವಾಗದೇ ಇರಬಹುದು. ಎದುರಿನವರ ಬಗ್ಗೆ ಸ್ವಲ್ಪ ಕನಿಕರವಿರಲಿ. ನೀವು ಪಾಲುದಾರಿಕೆಯನ್ನು ಬಿಡುವ ಬಗ್ಗೆ ಯೋಚಿಸುವಿರಿ. ನೀವು ಆಸ್ತಿಯನ್ನು ಮಾರಾಟ ಮಾಡಲು ಯೋಜಿಸುವಿರಿ. ಸಂಗಾತಿಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನೀವು ನಡೆದದ್ದೇ ಹಾದಿಯಾದರೂ ಒಮ್ಮೆ ದಾರಿಯನ್ನು ನೋಡುವುದು ಸೂಕ್ತ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಇಂದು ತುರ್ತಾಗಿ ಹಣ ಹೊಂದಿಸುವುದು ನಿಮಗೆ ಕಷ್ಟವಾಗುವುದು. ನಿಮ್ಮ ಬಗ್ಗೆ ಬರುವ ನಕಾರಾತ್ಮಕ ಅಂಶಗಳನ್ನು ಅಲ್ಲಗಳೆಯುವಿರಿ. ಸಹೋದರರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಕಲಾವಿದರು ಪ್ರಯತ್ನಪೂರ್ವಕವಾಗಿ ಉತ್ತಮ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳುವಿರಿ. ಕಛೇರಿಯ ವಾತಾವರಣದ ವ್ಯತ್ಯಾಸವಾದ್ದರಿಂದ ನೀವು ಉದ್ವೇಗದಲ್ಲಿ ಇರುವಂತೆ ಕಾಣಿಸುವುದು.
ವೃಶ್ಚಿಕ ರಾಶಿ :
ಮಾತಿಗೆ ನಿಂತರೆ ನಿಮ್ಮನ್ನು ತಡೆಯುವವರು ಒಬ್ಬರು ಬೇಕು. ಇಂದು ನಿಮ್ಮ ಪರಿಶ್ರಮದ ಬಗ್ಗೆ ಹೆಚ್ಚು ವಿಶ್ವಾಸವಿರಲಿದೆ. ಅನಿರೀಕ್ಷಿತವಾಗಿ ದೂರಪ್ರಯಾಣ ಮಾಡಬೇಕಾದೀತು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಕರಕುಶಲ ಕರ್ಮಕ್ಕೆ ಮೆಚ್ಚುಗೆ ಅಗುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ಅನಪೇಕ್ಷಿತ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಎಲ್ಲ ತಪ್ಪುಗಳಿಗೂ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವಿರಿ. ಮಕ್ಕಳ ಹಠದ ಸ್ವಭಾವಕ್ಕೆ ನೀವು ಮಣಿಯುವಿರಿ. ಯೋಜಿತ ಕಾರ್ಯವನ್ನು ಪೂರೈಸಲು ನಡುವೆ ಅನ್ಯ ಕಾರ್ಯವು ಬರಬಹುದು. ಅಗ್ಗದ ಬೆಲೆಗೆ ವಸ್ತುವನ್ನು ಕೊಂಡು ಹಾಳು ಮಾಡಿಕೊಳ್ಳುವಿರಿ.
ಧನು ರಾಶಿ :
ಎಲ್ಲವನ್ನೂ ನಿಮಗೆ ಬೇಕಾದಂತೆ ಮಾಡಿಕೊಳ್ಳಲಾಗದು. ಆಗ ಬರುವ ಅಡೆತಡೆಗಳನ್ನು ನೀವು ದೂರ ಮಾಡಿಕೊಳ್ಳಬೇಕು. ಇಂದು ಆರ್ಥಿಕ ಲಾಭದ ಹೊಸ ಮೂಲಗಳು ಗೊತ್ತಾಗುವುದು. ಯಾರದೋ ಮೇಲಿನ ಸಿಟ್ಟನ್ನು ತೀರಿಸಿಕೊಳ್ಳಲು ನಿಮ್ಮವರ ಮೇಲೆ ಸಿಟ್ಟುಗೊಳ್ಳುವಿರಿ. ಶತ್ರುಗಳಿಂದ ನಿಮಗೆ ವಂಚನೆಯಾಗಿದ್ದು ವಿಳಂಬವಾಗಿ ಗೊತ್ತಾಗುವುದು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಬಹಳ ದಿನಗಳ ಅನಂತರ ಬಂಧುಗಳ ಮನೆಗೆ ಹೋಗಲಿದ್ದೀರಿ. ಒಳ್ಳೆಯ ರೀತಿಯಲ್ಲಿ ನಿಮ್ಮನ್ನು ಉಪಚಾರವೂ ಸಿಗುವುದು. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ. ನಿಮ್ಮ ಆರ್ಥಿಕ ಸ್ಥಿತಿಯೂ ಕ್ಷೀಣಿಸಿದ್ದು ಆತಂಕವಾಗಬಹುದು. ನಿಮ್ಮದಲ್ಲದ ವಸ್ತುವನ್ನೂ ನೀವು ಬಿಟ್ಟುಕೊಡಲಾರಿರಿ. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಮಾತನಾಡುವಾಗ ಜಾಣತನದ ಅವಶ್ಯಕತೆ ಇರುವುದು.
ಮಕರ ರಾಶಿ :
ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಲು ಕಷ್ಟವಾಗುವುದು. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಮಾತುಗಾರರಿಗೆ ಅವಕಾಶವು ಸಿಗಲಿದೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಕಾರ್ಯಗಳಿಗೆ ಪರಿಚಿತರು ಸಹಾಯ ಮಾಡುವರು. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ. ಸಂಗಾತಿಯ ಆರೋಗ್ಯವು ಕೆಡಲಿದ್ದು ಓಡಾಟ ಮಾಡಬೇಕಾದೀತು. ಸರ್ಕಾರಿ ಕೆಲಸದಲ್ಲಿ ತೊಡಕಾಗುವುದು. ಉನ್ನತ ಅಧ್ಯಯನಕ್ಕಾಗಿ ನೀವು ಬೇರೆ ಕಡೆಗೆ ಹೋಗಬೇಕಾದೀತು. ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಬರುವುದು. ಕೊನೆಗೆ ಅನುಭವಿಸುವವರು ತಾವೇ ಆಗಿರುತ್ತೀರಿ.
ಕುಂಭ ರಾಶಿ :
ಆಪ್ತರಿಂದ ಆಗುವ ಸಣ್ಣ ನೋವೂ ನಿಮಗೆ ಸಹಿಸಲಸಾಧ್ಯ. ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಕಾರ್ಯದಲ್ಲಿ ಪ್ರಯತ್ನಶೀಲರಾಗುವಿರಿ. ಸ್ವಪ್ರತಿಷ್ಠೆಯನ್ನು ಬಿಟ್ಟು ನೀವು ಸಹಜವಾಗಿ ಇರಬೇಕಾಗುವುದು. ಮಕ್ಕಳ ವಿವಾಹವು ವಿಳಂಬವಾಗುತ್ತಿರುವುದು ನಿಮಗೆ ಆತಂಕವಾಗಬಹುದು. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಇಲ್ಲವಾದರೆ ಜನರನ್ನು ದೂರಮಾಡಿಕೊಳ್ಳುವಿರಿ. ನಿಮ್ಮ ಅಮೂಲ್ಯ ವಸ್ತುಗಳು ಕಾಣೆಯಾಗಬಹುದು. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ನಿಮ್ಮ ಮಾತು ಸ್ನೇಹಿತರಿಗೆ ಕಿರಿಕಿರಿಯಾಗಬಹುದು. ಅತಿಥಿಸತ್ಕಾರಕ್ಕೆ ಅವಕಾಶಗಳು ಬರಬಹುದು. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ.
ಮೀನ ರಾಶಿ :
ಪಾಲಿಗೆ ಬಂದಿದ್ದನ್ನು ಮೊದಲು ಪಡೆಯಿರಿ. ಆಮೇಲೆ ಬರಬೇಕಾದುದರ ಚಿಂತೆ. ಇಂದು ಮಹಿಳೆಯರಿಗೆ ಬಿಡುವಿಲ್ಲದ ಕಾರ್ಯವು ಇರಲಿದೆ. ಗೆಲ್ಲಬೇಕು ಎನ್ನುವ ಉತ್ಕಟ ಇಚ್ಛೆ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಆರ್ಥಿಕತೆಗೆ ಸಂಬಂಧಿಸಿದಂತೆ ಪೂರ್ಣ ಸಮಾಧಾನ ಇರದು. ಇನ್ನೊಬ್ಬರ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಆರ್ಥಿಕತೆಯ ತೊಂದರೆಯಿಂದ ಮನೆಯ ಕಾರ್ಯವು ಅರ್ಧಕ್ಕೇ ನಿಲ್ಲುವುದು. ಹೊಸಬರ ಪರಿಚಯದಿಂದ ನಿಮಗೆ ಹೊಸ ವಿಷಯಗಳು ಗೊತ್ತಾಗುವುದು. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)
Published On - 10:44 am, Mon, 30 December 24