
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ – 06 : 03 am, ಸೂರ್ಯಾಸ್ತ – 06 : 57 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:17 – 10:54, ಯಮಘಂಡ ಕಾಲ 14:07 – 15:44, ಗುಳಿಕ ಕಾಲ 06:04 – 07:41
ಮೇಷ ರಾಶಿ: ಸಂಕಲ್ಪ ಶುದ್ದರವಾಗಿದ್ದರೆ ನಿಮ್ಮ ಎಲ್ಲ ಇಂದಿನ ಕಾರ್ಯಗಳೂ ಯಶಸ್ವಿಯಾಗುವುದು. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ನಿಮ್ಮನ್ನು ಹುಡುಕಿಕೊಂಡು ಬಂದವರಿಗೆ ಸ್ವಲ್ಪ ಸಮಯವನ್ನಾದರೂ ಕೊಡಬೇಕಾಗುವುದು. ಹಣಕಾಸು ಪ್ರಗತಿಮಾರ್ಗದಲ್ಲಿದೆ ಆದರೆ ಯೋಚಿಸಿ ವೆಚ್ಚಮಾಡಿ. ಕುಟುಂಬದ ಬೆಂಬಲ ನಿಮಗೆ ಶಕ್ತಿ ನೀಡುತ್ತದೆ. ಪ್ರೀತಿಯಲ್ಲಿ ನಿಗೂಢತೆಯ ಬದಲಿಗೆ ಸ್ಪಷ್ಟತೆ ಅಗತ್ಯವಿದೆ. ಕಾನೂನು ಸಂಬಂಧಿತ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ವಿಳಂಬಿತ ಕೆಲಸಗಳಿಂದ ದೂರವಿರಿ. ಆಗಿದ್ದನ್ನು ನೆನಪಿಸಿಕೊಳ್ಳುತ್ತ ಕುಳಿತುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಆಗಬೇಕಿರುವುದರ ಕಡೆ ಗಮನವಿರಲಿ. ನಿಮ್ಮನ್ನು ಸರಿದಾರಿಯಲ್ಲಿ ನಡೆಸುವನು. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ.
ವೃಷಭ ರಾಶಿ: ಗೊತ್ತಿದ್ದೂ ಮಾಡುವ ತಪ್ಪಿಗೆ ನೀವೇ ಹೊಣೆ. ವಾಹನ ಚಾಲನೆಯಲ್ಲಿ ಪ್ರಶಾಂತವಾಗಿರಿ. ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ ದೃಷ್ಟಿ ಇರಲಿ. ದೂರಪ್ರಯಾಣ ಸುಖಕರವಾಗಿ ಇರುವುದು. ಧಾರ್ಮಿಕವಾದ ನಂಬಿಕೆಯುಳ್ಳ ನೀವು ತೀರ್ಥಕ್ಷೇತ್ರಗಳೋ ದೇವಾಲಯಕ್ಕೋ ಭೇಟಿ ಕೊಡುವಿರಿ. ಪರರ ಪ್ರಶಂಸೆಯನ್ನು ಹೃದಯದಲ್ಲಿ ಧರಿಸಿ. ಕೆಲಸದ ಮೆಚ್ಚುಗೆಗಳು ಸಂತೋಷವನ್ನು ಉಂಟುಮಾಡುತ್ತವೆ. ಹಣಕಾಸು ವಿಷಯದಲ್ಲಿ ಜಾಗ್ರತೆ ಅಗತ್ಯವಿದೆ. ಕುಟುಂಬದಲ್ಲಿ ಚಿಕ್ಕಪುಟ್ಟ ಮನಸ್ತಾಪ ಉಂಟಾಗಬಹುದು. ಮಾತುಗಳಲ್ಲಿ ನಿಖರತೆ ಇರಲಿ. ನಿಮ್ಮ ನಿರ್ಧಾರಗಳಲ್ಲಿ ತಲೆಕೆಡಿಸಿಕೊಳ್ಳದೇ ನಂಬಿಕೆಯಿಂದ ಮುಂದೆ ಸಾಗುವುದು ಉತ್ತಮ. ಆರೋಪಗಳಿಂದ ಮುಕ್ತರಾಗುವುದು ಕಷ್ಟವಾಗುವುದು. ಇಂದು ಕುಟುಂಬದವರ ಮಾತುಗಳು ನಿಮ್ಮ ಮನಸ್ಸಿಗೆ ನಾಟಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ಸ್ಪರ್ಧಾತ್ಮಕ ವಿಚಾರದಲ್ಲಿ ಹಿಂದುಳಿಯಬೇಕಾಗುವುದು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ.
ಮಿಥುನ ರಾಶಿ: ಎಲ್ಲಿಯೂ ಸಿಕ್ಕಿಬೀಳದೇ ಎಲ್ಲವನ್ನೂ ಸಲೀಸಾಗಿ ಮಾಡುವ ಗುಣ ಗೊತ್ತಾಗುವುದು. ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಕೆಟ್ಟ ಅನುಭವಗಳನ್ನು ಆತ್ಮೀಯರ ಜೊತೆ ಹಂಚಿಕೊಳ್ಳುವಿರಿ. ಹಳೆಯ ವಿಷಯಗಳನ್ನು ನೆನೆಸಿಕೊಳ್ಳದೇ ಪ್ರಸ್ತುತದತ್ತ ಗಮನ ಹರಿಸಿ. ಹೂಡಿಕೆಯೊಳಗಿನ ಲಾಭದಿಂದ ಹಣಕಾಸು ಬೆಂಬಲ ಸಿಗಬಹುದು. ಮನೆಯವರೊಂದಿಗೆ ಕಾಲ ಕಳೆಯುವುದರಿಂದ ಶಾಂತಿ ಪಡೆಯುವಿರಿ. ಹಳೆಯ ಗೆಳೆಯನ ಸಂಪರ್ಕ ಸಂತೋಷ ನೀಡಬಹುದು. ಅತಿಯಾದ ಹಸಿವು ನಿಮ್ಮನ್ನು ಬಾಧಿಸಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ. ನಿಮಗೆ ಬರುವ ಆಪತ್ತುಗಳು ನಿಮ್ಮನ್ನು ಗಟ್ಟಿಯಾಗಿಸುತ್ತವೆ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ಸಂಗಾತಿಯ ಮನೋರಥವನ್ನು ಈಡೇರಿಸುವುದು ಕಷ್ಟವಾಗುವುದು.
ಕರ್ಕಾಟಕ ರಾಶಿ: ಸ್ಪರ್ಧಾತ್ಮಕ ವಿಚಾರದಲ್ಲಿ ನಿಮ್ಮ ಮನಸ್ಸು ಒಪ್ಪದು. ತಪ್ಪನ್ನು ಒಪ್ಪಿಕೊಂಡು ಮುನ್ನಡೆದರೆ ಎಲ್ಲವೂ ಸುಖವಾಗುವುದು. ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲ್ಲಿಯೇ ಸರಿಮಾಡಿಕೊಳ್ಳಿ. ಮನೆಗೆ ಊಹಿಸಿದ್ದಕ್ಕಿಂತ ಹೆಚ್ಚಿನವರ ಆಗಮನವಾಗಲಿದೆ, ಆತಂಕ ಹೆಚ್ಚುಮಾಡಿಕೊಳ್ಳುವಿರಿ. ಮಾತುಗಳು ಹೊಸ ಅವಕಾಶಗಳನ್ನು ತಂದೀತು. ಕಾನೂನು ಕೆಲಸದಲ್ಲಿ ಎಚ್ಚರಿಕೆ ಇರಲಿ. ಹಣಕಾಸು ಒತ್ತಡದಿಂದ ಚಿಕ್ಕ ಏರುಪೇರು ಆಗಬಹುದು. ಬಹುತೇಕವಾಗಿ ಕೆಲಸಗಳನ್ನು ಒಂದೇ ಸಮಯಕ್ಕೆ ಮಾಡದೆ ಶ್ರದ್ಧೆಯಿಂದ ಪೂರ್ಣಗೊಳಿಸಿ. ಸಹಕರಿಸುವ ಮನೋಭಾವನೆ ಇಂದು ಯಶಸ್ಸಿಗೆ ದಾರಿ ತೆಗೆಯುತ್ತದೆ. ಎಲ್ಲರ ಜೊತೆ ಜಗಳವಾಡುತ್ತ ಇರುವುದು ನಿಮಗೆ ಇಷ್ಟವಾಗಬಹುದು. ಆಸ್ತಿಯ ವಿಚಾರದಲ್ಲಿ ಆಸೆಯನ್ನು ಅತಿಯಾಗಿ ಇಟ್ಟುಕೊಳ್ಳುವಿರಿ. ಇದರಿಂದ ನಿಮ್ಮ ಜೊತೆಗಾರ ಸ್ಥಿತಿಯೂ ಹದ ತಪ್ಪಬಹುದು. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವ ಕಾಡಬಹುದು.
ಸಿಂಹ ರಾಶಿ: ನಿಮ್ಮನ್ನು ಕುಗ್ಗಿಸುವ ಪ್ರಯತ್ನ ಯಾರಾದರೂ ಮಾಡಬಹುದು. ಇಂದು ನಿಮ್ಮ ಹಳೆಯ ಕನಸಿಗೆ ಮೂರ್ತರೂಪ ಸಿಗುವುದು. ನಿಮ್ಮಿಂದ ಹೆತ್ತವರು ಸುಖಪಡುವರು. ಸ್ನೇಹಿತರಿಗೆ ಮಾಡಿದ ಸಹಾಯದಿಂದ ನಿಮಗೆ ಅನುಕೂಲವಗಲಿದೆ. ಸಾಮಾಜಿಕ ಕಾರ್ಯದಲ್ಲಿ ನಿಮಗೆ ಆಸಕ್ತಿಯು ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜಾಣೆ ಅಗತ್ಯ. ಮೌಖಿಕ ವಿಚಾರವನ್ನು ಯಾರೂ ಗಂಭೀರವಾಗಿ ಪರಿಗಣಿಸಲಾರರು. ಸಣ್ಣ ಖರ್ಚು ಕೂಡ ದೊಡ್ಡದಾಗಬಹುದು. ಕುಟುಂಬದವರ ಭಾವನೆಗಳಿಗೆ ಪ್ರಾಮುಖ್ಯತೆ ನೀಡಿ. ದೂರದ ಸಂಬಂಧಿಯವರಿಂದ ಸಂವೇದನೆಗಳ ಬದಲಾವಣೆ ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿ ಗಂಭೀರತೆ ಬೆಳೆಯಲಿದೆ. ಸಿಕ್ಕ ಯಶಸ್ಸನ್ನು ಲಾಭವಾಗಿ ಪರಿವರ್ತಿಸುವಿರಿ. ಸಂಗಾತಿಯ ಪ್ರೀತಿಯು ನಿಮಗೆ ಅಚ್ಚರಿಯನ್ನು ಉಂಟುಮಾಡೀತು. ಮೋಹದಿಂದ ಸರಿ ತಪ್ಪುಗಳ ವಿವೇಚನೆ ದೂರಾಗುವುದು. ಯಾರಾದರೂ ನಿಮ್ಮನ್ನು ತೆಗಳಿದರೆ ಅದನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ. ಬಂಧುಗಳ ಚರಾಸ್ತಿಯು ಸಿಗಬಹುದು.
ಕನ್ಯಾ ರಾಶಿ: ಉರಿಯುವ ಬೆಂಕಿಗೆ ತುಪ್ಪ ಹಾಕಿದರೆ ನಿಮ್ಮನ್ನೇ ಸುಡಬಹುದು. ಇಂದಿನ ನಿಮ್ಮ ಕೋಪವನ್ನು ಶಾಂತ ಮಾಡಲು ಸಂಗಾತಿಯು ಶ್ರಮಪಡಬಹುದು. ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಖರ್ಚಿಲ್ಲದೇ ಎಲ್ಲ ಓಡಾಟವನ್ನು ಮಾಡುವ ಯೋಚನೆ. ಕೆಲಸದಲ್ಲಿ ನಿಮ್ಮ ಚುರುಕು ಮೆಚ್ಚುಗೆಯನ್ನು ಗಳಿಸಬಹುದು. ಹಳೆಯ ಹೂಡಿಕೆಗಳು ಲಾಭದ ಸಂಕೇತ ತೋರಿಸುತ್ತವೆ. ಮನೆಯ ವಿಷಯದಲ್ಲಿ ಹೆಚ್ಚು ಸಮಯ ಕೊಡಬೇಕಾಗಬಹುದು. ಯಾರೊಬ್ಬರ ಉಪದೇಶವೂ ನಿಮಗೆ ಉಪಕಾರಿಯಾಗಬಹುದು. ಹಠವನ್ನು ತೊರೆಯಿರಿ. ಯಶಸ್ಸು ಬೆನ್ನು ಹತ್ತುತ್ತಿದ್ದರೂ ಹಂಬಲವಿಲ್ಲದೆ ಮುಂದುವರಿಯಿರಿ. ಮಕ್ಕಳು ನಿಮ್ಮ ಜೊತೆ ಕಳೆಯಲು ಇಚ್ಛಿಸುವರು. ನಿಮ್ಮಿಂದ ಕುಟುಂಬಕ್ಕೆ ಯಾವುದೇ ಸಲಹೆಯು ಇಲ್ಲದಂತೆ ಅನ್ನಿಸಬಹುದು. ಕೋಪದಿಂದ ಶಾಂತವಾಗಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಬಂಧುಗಳ ಜೊತೆ ಆತ್ಮೀಯ ಒಡನಾಟ ಮಾಡುವಿರಿ. ಅಚಾತುರ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಿ.