Nitya Bhavishya: ರಾಶಿಭವಿಷ್ಯ; ಸ್ವತಂತ್ರವಾದ ನಿರ್ಧಾರ ಈ ರಾಶಿಯವರಿಗೆ ಪೂರಕವೂ ಆಗಿ, ನೆಮ್ಮದಿಯನ್ನೂ ಕೊಡುವುದು
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 22, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 22) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಬ್ರಹ್ಮ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:19 ರಿಂದ ಮಧ್ಯಾಹ್ನ 12:44ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:35ರ ವರೆಗೆ.
ಮೇಷ ರಾಶಿ: ನಿಮ್ಮ ಕಠಿಣ ಪರಿಶ್ರಮವು ನೆನಪಿಗೆ ಬರಬಹುದು. ಭಡ್ತಿಯ ನಿರೀಕ್ಷೆಯಲ್ಲಿಯೇ ಇರುವಿರಿ. ಸ್ವತಂತ್ರವಾದ ನಿರ್ಧಾರವು ನಿಮಗೆ ಪೂರಕವೂ ಆಗಿ, ನೆಮ್ಮದಿಯನ್ನು ಕೊಡುವುದು. ಆದಾಯದ ಮೂಲವು ಗೌಪ್ಯವಾಗಿ ಇಟ್ಟುಕೊಳ್ಳಿ. ನಿಮ್ಮ ಶಾಂತ ಮನಸ್ಸಿನಿಂದ ಸಂಕಷ್ಟವನ್ನು ಎದುರಿಸುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ನಿಮ್ಮ ಅಭಿಮಾನಕ್ಕೆ ಘಾಸಿಯಾದೀತು. ಅದನ್ನು ಪ್ರಕಟಿಸಲು ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ಆಪ್ತರ ಜೊತೆ ಕೆಲವು ರಹಸ್ಯವನ್ನು ಹೇಳಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು.
ವೃಷಭ ರಾಶಿ: ಇಂದು ಕಿರಿಕಿರಿಯ ವಾತಾವರಣವು ಇರಲಿದ್ದು, ಎಲ್ಲವೂ ಸಮಸ್ಯೆಯಂತೆ ತೋರೀತು. ಆರ್ಥಿಕತೆಯ ಬಗ್ಗೆ ಅತಿಯಾದ ಚಿಂತನೆಯನ್ನು ಮಾಡುವಿರಿ. ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮನ್ನು ವೈಭವೀಕರಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ. ನಿಮ್ಮ ವಿರುದ್ಧ ತಂತ್ರಗಳು ನಡೆಯಲಿದ್ದು ನಿಮಗೆ ಗೊತ್ತಾಗದು. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮಕ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ. ನಿಶ್ಚಯಾತ್ಮಕ ಬುದ್ಧಿಯು ಇರದು. ಉದ್ಯೋಗಿಗಳ ಆದಾಯದಲ್ಲಿ ಅಲ್ಪ ಏರಿಕೆ. ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ.
ಮಿಥುನ ರಾಶಿ: ನಿಮ್ಮ ಮಕ್ಕಳ ಬಗೆಯ ವ್ಯಾಮೋಹವು ಅವರನ್ನು ಕೆಟ್ಟದ್ದಕ್ಕೆ ತಳ್ಳಬಹುದು. ಇಂದು ನೀವು ಸಾತ್ತ್ವಿಕರಂತೆ ತೋರುವಿರಿ. ಇಷ್ಟವಾಗದವರು ನಿಮ್ಮೆದುರಿಗೆ ಬರುವಾಗ ಕಣ್ತಪ್ಪಿಸಿಕೊಳ್ಳುವಿರಿ. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ಬಗ್ಗೆ ಯತ್ನವು ಪ್ರಬಲವಾಗಿ ಇರುವುದು. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ.
ಕಟಕ ರಾಶಿ: ನಿಮ್ಮ ವ್ಯಾಪಾರಕ್ಕೆ ಹೊಸ ದಿಕ್ಕನ್ನು ಕೊಡಬೇಕಾದೀತು. ತಂತ್ರಜ್ಞರು ತಮ್ಮ ಕಾರ್ಯವನ್ನು ವಿಸ್ತರಿಸಲು ಹಂಬಲಿಸಬಹುದು. ಉನ್ನತ ಮಟ್ಟದವರ ಜೊತೆ ಸಭೆಯಲ್ಲಿ ಭಾಗವಹಿಸುವಿರಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ನಿಮ್ಮ ಬಗ್ಗೆ ಹಗುರಾದ ಭಾವವು ಬರಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಮಕ್ಕಳ ಬಗ್ಗೆ ಅನವಶ್ಯಕ ಅನುಮಾನ ಹಾಗೂ ಅಪವಾದವನ್ನು ಮಾಡುವ ಸನ್ನಿವೇಶವು ಬರಬಹುದು. ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳುವಿರಿ. ಸಂಬಂಧದಲ್ಲಿ ಮಿತವಾದ ಬಂಧವಿರಲಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ.
ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ