AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಇಂದು ತಮ್ಮ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ನೀಡಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 10, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದಿನಭವಿಷ್ಯ, ಈ ರಾಶಿಯವರು ಇಂದು ತಮ್ಮ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ನೀಡಿ
ಇಂದಿನ ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Dec 10, 2023 | 12:15 AM

Share

ಮುಂಜಾನೆ ಎದ್ದ ಕೂಡಲೇ ಮಕ್ಕಳಿಂದ ಪ್ರಾರಂಭಿಸಿ ಹಿರಿಯರವರೆಗೂ ದಿನಭವಿಷ್ಯ ನೋಡುತ್ತಾರೆ. ಹಿರಿಯಾದರೆ ನಿತ್ಯ ಪಂಚಾಂಗವನ್ನೂ ಗಮನಿಸುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 10) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣಮ, ವಾರ: ಭಾನು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 09:36 ರಿಂದ 11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:49 ರಿಂದ 03:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 06:47 ರಿಂದ 08:12ರ ವರೆಗೆ, ರಾಹು ಕಾಲ ಮಧ್ಯಾಹ್ನ 04:38 ರಿಂದ 06:03ರ ವರೆಗೆ.

ಮೇಷ ರಾಶಿ : ನಿಮ್ಮ ನಿಯಮಿತ ವ್ಯವಹಾರವು ನಿಮ್ಮನ್ನು ಬಂಧಿಸಿಡುವುದು. ಅಕಸ್ಮಾತ್ ಆದ ಘಟನೆಗೆ ನಿಮಗೆ ಪ್ರತಿಕ್ರಿಯೆ ಕೊಡುವುದು ಅಸಾದ್ಯವಾಗಬಹುದು. ಮನಸ್ತಾಪದ ನಡೆವೆಯೂ ನೀವು ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುವಿರಿ. ಪ್ರಾಪಂಚಿಕ ಸುಖದ ಮೇಲೆ ಆಸಕ್ತಿಯು ಕಡಿಮೆ ಆದೀತು. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದೆ. ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಮಾತನ್ನು ಕೇಳಿಲ್ಲ ಎಂದ ಮಾತ್ರಕ್ಕೆ ನಿಷ್ಠುರವಾಗಿ ಸಂಬಂಧವನ್ನು ಹಾಳುಮಾಡಿಕೊಳ್ಳುವುದು ಬೇಡ. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಿಯುಂಟುಮಾಡುವುದು. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳಬೇಕಾಗುವುದು. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ಮನಸ್ಸಿಗೆ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಯಾವ ಸಂದರ್ಭವನ್ನೂ ಎದುರಿಸುವ ಮಾನಸಿಕತೆ ಇರಲಿದೆ. ಆಗಬೇಕಾಗಿರುವ ಕಾರ್ಯವನ್ನು ಮೊದಲು ನಿರ್ಧರಿಸಿಕೊಳ್ಳಿ.

ವೃಷಭ ರಾಶಿ : ನಿಮ್ಮ ಪಕ್ಷಪಾತ ಧೋರಣೆಯು ಇತರರಿಗೆ ಇಷ್ಟವಾಗದೇ ಹೋದೀತು. ಗೊತ್ತಿಲ್ಲದ ಕೆಲಸವನ್ನು ಮಾಡಿ ಕೈಸುಟ್ಟುಕೊಳ್ಳುವಿರಿ. ಯಾರಾದರೂ ನಿಮಗೆ ಮಾದರಿಯಾದಾರು. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ನಿಮ್ಮ ಗುರಿಗೆ ಹಾದಿಯು ಸ್ಪಷ್ಟವಾಗಿ ಇರದೇ ಹೋಗಬಹುದು. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು. ನಿಮ್ಮ ಜಾಣ್ಮೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಕೆಲವು ಸಲಹೆಯನ್ನು ಪಡೆಯುವಿರಿ. ಸಂಸಾರದ ಖರ್ಚನ್ನು ಸರಿದೂಗಿಸಿಕೊಳ್ಳಲು ಆಗದು. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದೇ ಹೋದೀತು.

ಮಿಥುನ ರಾಶಿ : ಪ್ರತಿಭೆಯನ್ನು ವ್ಯಕ್ತಪಡಿಸಲು ವೇದಿಕೆಯು ನಿಮಗೆ ಸಿಗಲಿದೆ. ವಿವಾಹಕ್ಕೆ ಬರುವ ಉತ್ತಮ ಸಂಬಂಧಗಳನ್ನು ನಿರಾಕರಿಸಲು ಮನಸ್ಸು ಮಾಡುವಿರಿ. ಸ್ನೇಹಿತರು ನಿಮ್ಮಿಂದ ಅಲ್ಪ ಧನಸಹಾಯವನ್ನು ನಿರೀಕ್ಷಿಸುವರು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನೀವು ಪ್ರಭಾವೀ ವ್ಯಕ್ತಿಗಳಂತೆ ತೋರುವಿರಿ. ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ನಿಮ್ಮ ಲಾಭವನ್ನು ಹೆಚ್ಚಿಸುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದ್ದರೆ, ಪ್ರಯತ್ನ ಮುಂದುವರಿಯಲಿ. ಹಣದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಆಪ್ತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದದ ಕಾರಣ ಸಂತೋಷದ ಕ್ಷಣವನ್ನು ನಷ್ಟ ಮಾಡಿಕೊಳ್ಳುವಿರಿ.

ಕರ್ಕ ರಾಶಿ : ನಿಮ್ಮ ವಿಶ್ವಾಸಕ್ಕೆ ತೊಂದರೆಯಾಗಬಹುದು. ಸಂಗಾತಿಯ ಜೊತೆ ಸರಿ ತಪ್ಪುಗಳ ವಿವೇಚನೆಗೆ ಹೋಗುವುದು ಬೇಡ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ತಾಯಿಯ ಅನಾರೋಗ್ಯದಿಂದ ನಿಮಗೆ ಚಿಂತೆ ಕಾಡಬಹುದು. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ನಿಮ್ಮದಾದ ಗೌಪ್ಯ ಸಂಗತಿಗಳನ್ನು ಇತರರು ತಿಳಿದುಕೊಂಡಾರು. ಸಾಮಾಜಿಕ ವಲಯಗಳಲ್ಲಿ ಸ್ಥಾನಮಾನವು ಲಭ್ಯವಾಗುವುದು. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಕಛೇರಿಯಲ್ಲಿ ಕೆಲಸವು ಮಂದಗತಿಯಲ್ಲಿ ಇರುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?