Daily Horoscope 03 December 2024: ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿವು ಬೇಡ

Daily Horoscope 03 December 2024: ಡಿಸೆಂಬರ್ 03, 2024ರ ಮಂಗಳವಾರ ಇಂದಿನ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರಿಗೆ ಅಶುಭವಾಗಲಿದೆ? ಸೇರಿದಂತೆ ರಾಹು ಕಾಲ, ಯಮಘಂಡ, ಗುಳಿಕ ಕಾಲ ಸಮಯವನ್ನೂ ಸಹ ತಿಳಿದುಕೊಳ್ಳಿ.

Daily Horoscope 03 December 2024: ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿವು ಬೇಡ
ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿವು ಬೇಡ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 03, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಶೂಲಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 44 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:36ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:33 ರಿಂದ 10:58 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:23 ರಿಂದ 01:47 ರವರೆಗೆ.

ಮೇಷ ರಾಶಿ: ನಿಮಗೆ ಉಚಿತ ಗೌರವ ಸಿಗಲಿದೆ. ಯಾವುದಾದರೂ ತೊಂದರೆಗೆ ನೀವೇ ಕಾರಣವೆಂದು ಪಶ್ಚಾತ್ತಾಪವಾಗಬಹುದು. ಆತ್ಮೀಯರ ಜೊತೆ ಇದ್ದು ಹಣವನ್ನು ಖರ್ಚು ಮಾಡುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ. ಸಮಾರಂಭಗಳಲ್ಲಿ ಮುಖ್ಯಸ್ಥರಾಗಬಹುದು. ವಿದ್ಯಾಭ್ಯಾಸದ ವಿಚಾರದಲ್ಲಿ ಯಾವ ಸಡಿಲಿಕೆಯನ್ನೂ ಮಾಡಿಕೊಳ್ಳದಿರಿ. ದಾಂಪತ್ಯದಲ್ಲಿ ನೀವು ಸಂತೋಷವಾಗಿರುವಿರಿ. ಹತ್ತಿರದ ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತ ಸಮಾಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಿ. ದೂರಪ್ರಯಾಣದಿಂದ ಆಯಾಸವಾಗಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪು ನಿಮ್ಮ ತಲೆಯ ಮೇಲೆ ಬರಬಹುದು. ಮಾತು ಅಲ್ಪವಾಗಿದ್ದರೂ ಯೋಗ್ಯವಾದ ಮಾತುಗಳನ್ನು ಆಡುವಿರಿ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸಿ.

ವೃಷಭ ರಾಶಿ: ಅಜೀರ್ಣವಾಗುವ ಯಾವುದನ್ನೂ ವಸ್ತು, ವಿಷಯವನ್ನೂ ಸೇವಿಸಬಾರದು. ಅಧಿಕಾರಿಗಳ ಒತ್ತಡವೇ ನಿಮ್ಮ ಉದ್ವೇಗಕ್ಕೆ ಕಾರಣವಾಗಲಿದೆ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಡವಾಗಬಹುದು. ಅನಿರೀಕ್ಷಿತ ಬಂಧುಗಳ ಆಗಮನದಿಂದ ಕೊಂಚ ಗಲಿಬಿಲಿ ಆಗುವುದು. ಚಂಚಲ ಮನಸ್ಸನ್ನು ನೀವು ನಿಯಂತ್ರಿಸಲು ಆಗದು. ಇದರಿಂದ ತೀರ್ಮಾನ ಸರಿಯಾಗಿ ತೆಗೆದುಕೊಳ್ಳಲಾಗದು. ಪ್ರಯಾಣದಿಂದ ನಿಮ್ಮ ದೇಹಸ್ಥಿತಿ ಬದಲಾಗಬಹುದು. ಕಛೇರಿಯಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸ ಮಾಡಲು ಆಗದು. ಉನ್ನತ ಅಧಿಕಾರಿಗಳ ಜೊತೆ ಸೆಣೆಸಾಡುವ ಸ್ಥಿತಿಯು ಬರಬಹುದು. ಸರ್ಕಾರದ ಕೆಲಸಕ್ಕೆ ನೀವು ಹಣವನ್ನು ಖರ್ಚುಮಾಡುವಿರಿ. ಇಂದಿನ‌ ನಿವು ಬಹಳ ಒತ್ತಡದಲ್ಲಿ ಇರುವಂತೆ ತೋರುವಿರಿ. ಅರಿವಿಲ್ಲದೇ ನೀವು ತಪ್ಪು ದಾರಿಗೆ ಹೋಗುವಿರಿ.‌ ನಿಮ್ಮ ಬಳಿ ಹಣವಿದ್ದರೂ ಸರಿಯಾದ ಸಮಯಕ್ಕೆ ಸಿಗದು. ನಿಮ್ಮ ಅಸಹಜ ಸ್ವಭಾವವನ್ನು ಸರಿಮಾಡಿಕೊಳ್ಳುವುದು ಮುಖ್ಯ.

ಮಿಥುನ ರಾಶಿ: ಅಜ್ಞಾತವಾಸದಿಂದ ಹೊರಬರುವ ಲಕ್ಷಣವಿದೆ. ಅನೇಕ ವಿಚಾರಗಳ ಕಡೆ ನಿಮ್ಮ ಗಮನವಿರುವುದು. ಹಾಗಾಗಿ ಇಂದಿನ ಕಾರ್ಯವು ಸಫಲವಾಗದು. ಉದ್ಯೋಗವನ್ನು ಬದಲಿಸುವ ಆಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಅನ್ಯೋನ್ಯತೆ ಕಂಡುಬರುವುದು. ನೀವು ಮಾಡಬೇಕಂದುಕೊಂಡ ಕಾರ್ಯದಲ್ಲಿ ಜಯವಿರುವುದು. ಸ್ತ್ರೀಯರಿಂದ ಕಛೇರಿಯಲ್ಲಿ ಸಹಕಾರವು ಸಿಗಲಿದೆ. ಭೂಮಿಯ ಬಗ್ಗೆ ಆಸೆ ಕಡಿಮೆ ಆಗಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ತಂದೆಯ ಆರೋಗ್ಯವನ್ನು ಸರಿಪಡಿಸಲು ಹೆಚ್ಚು ಜವಾಬ್ದಾರಿಯನ್ನು ಹೊರಬೇಕಾದೀತು. ಮನಸ್ಸಿಗೆ ನೆಮ್ಮದಿ ಸಿಗುವ ಜಾಗಕ್ಕೆ ಹೋಗುವಿರಿ. ನಿಮ್ಮ‌ ಮಾತುಗಳು ಅಹಂಕಾರದಂತೆ ತೋರಬಹುದು. ಆಸ್ತಿಯಲ್ಲಿ ಪಾಲನ್ನು ಕೇಳುವ ಸ್ಥಿತಿ ಬರಬಹುದು. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಹೊಸ ಕಾರ್ಯಕ್ಕೆ ದೊಡ್ಡ ಫಲದ ಯೋಜನೆ ಇರಲಿ.

ಕರ್ಕಾಟಕ ರಾಶಿ: ಬಹಿರಂಗವಾಗಿ ಬಹಳ ಸಭ್ಯರಾಗುವಿರಿ. ಅನ್ವೇಷಣೆಯ ಮನಃಸ್ಥಿತಿಯವರಿಗೆ ಯಾವುದಾದರೂ ಮಾರ್ಗವು ಸಿಗುವುದು. ರಾಜಕೀಯ ಪರಿವರ್ತನೆಯು ನಿಮ್ಮಲ್ಲಿ ಅಚ್ಚರಿ ತಂದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನೂ ಕೊಡುವರು. ಇಂದು ನೀವು ಸಮಾನ್ಯಾರಂತೆ ತೋರುವಿರಿ. ನಿಮ್ಮ ರಹಸ್ಯ ವಿಚಾರವನ್ನು ಆಪ್ತರಿಗೆ ಹೇಳುವಿರಿ. ಸಿಟ್ಟು ನಿಮ್ಮ ಆರೋಗ್ಯವನ್ನು ಕೆಡಿಸುವುದು. ಬಾಡಿಗೆ ಮನೆಯವರು ಮನೆಯನ್ನು ಬದಲಾಯಿಸುವರು. ಭೂವ್ಯವಹಾರವನ್ನು ಮಾಡುವವರಿಗೆ ಇಂದು ಅಧಿಕ ಲಾಭವು ಆಗುವುದು. ಕಡಿಮೆಯಾಗುತ್ತಿದ್ದ ಆರೋಗ್ಯದಿಂದ ಸಮಾಧಾನ‌ಸಿಗಲಿದೆ. ನಿಮ್ಮನ್ನು ತಿಳಿದವರೇ ನಿಮಗೆ ವಂಚನೆ ಮಾಡುವರು. ಮನೆಯ ಕೆಲಸದಲ್ಲಿ ಇಂದು ಆಸಕ್ತಿ ಕಡಿಮೆ ಆಗುವುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಬೇಡ.‌ ತಪ್ಪಿಲ್ಲದೇ ಹೆದರುವ ಅವಶ್ಯಕತೆ ಇರದು. ಮಕ್ಕಳಿಗಾಗಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ.

ಸಿಂಹ ರಾಶಿ: ನಿಮ್ಮನ್ನು ನೀವು ಖಾಲಿ ಮಾಡಿಕೊಳ್ಳುವುದು ಬೇಡ. ಸಂಗಾತಿಯ ಮನೋಭಾವವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ ಆಗುವ ಸಾಧ್ಯತೆ ಇದೆ.‌ ಛಲವು ನಿಮಗೆ ಪರಿವರ್ತನೆಯನ್ನು ಕೊಡಿಸುವುದು. ನಿಮಗೆ ಯಾರಿಂದಲಾದರೂ ಸಹಾಯ ಕೇಳಲು ಸಂಕೋಚವಾದೀತು. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ಇಂದು ನೀವು ಒತ್ತಡವನ್ನು ತಂದುಕೊಳ್ಳಬಾರದು ಎಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಸೃಷ್ಟಿಯಾಗಬಹುದು. ಉದ್ಯಮದಲ್ಲಿ ಹೊಸ ಕ್ರಾಂತಿಯನ್ನು ಮಾಡುವ ಸಾಧ್ಯತೆ ಇದೆ. ನಿಮ್ಮ ಕಾರ್ಮಿಕರು ನಿಮ್ಮ ಕಾರ್ಯವನ್ನು ಸರಿಯಾಗಿ ಮಾಡದೇ ಇರಬಹುದು. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಯಾರದೋ ಮಾತಿನಿಂದ ಸ್ಥೈರ್ಯವನ್ನು ಕಳೆದುಕೊಳ್ಳುವಿರಿ.

ಕನ್ಯಾ ರಾಶಿ: ಇಂದು ವ್ಯವಹಾರದ ಅನುಭವವನ್ನು ಕಲಿಯಿರಿ. ಸಂಬಂಧಗಳು ಸಂಬಂಧಗಳಾಗಿಯೇ ಇರಲಿ. ಅಪರಿಚಿತರ ಜೊತೆ ಸ್ವಲ್ಪ ಹದವಾಗಿ ವರ್ತಿಸಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ಸ್ನೇಹಿತರು ಪ್ರೀತಿಯಿಂದ ನಿಮಗೆ ಉಡುಗೊರೆ ಕೊಡುವರು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ. ಸಂಗಾತಿಯ ಜೊತೆ ಕಲಹವಾಡಿ ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ಯೋಜನೆಯನ್ನು ಪೂರ್ಣವಾಗಿ ನಿರ್ವಹಿಸಲು ಸಾಧ್ಯವಾಗದು. ನಿಮ್ಮನ್ನು ಸಮ್ಮಾನಿಸಬಹುದು. ಸಣ್ಣ ವಿಚಾರದಲ್ಲಿ ಇನ್ನೊಬ್ಬರ ಜೊತೆ ಕಲಹ ಬೇಡ. ಮರೆತು ಮುನ್ನಡೆಯುವುದು ಉತ್ತಮ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ. ನ್ಯಾಯವಾದಿಗಳು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.

ತುಲಾ ರಾಶಿ: ಅತಿಯಾದ ಅವಲಂಬನೆ ಬೇಡ. ಸ್ವತಂತ್ರರಾಗುವ ಬಗ್ಗೆ ಯೋಚನೆ ಬರಲಿ. ಚಾಣಾಕ್ಷತನದಿಂದ ಗಿಟ್ಟಿಸಿಕೊಂಡ ಅಧಿಕಾರವು ಸಮಯಮಿತಿಯಲ್ಲಿ ಇರುತ್ತದೆ. ಮನಸ್ಸನ್ನು ನಿಯಂತ್ರಿಸಲು ದುಶ್ಚಟಕ್ಕೆ ಬೀಳುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣವು ಹಾಳಾಗಬಹುದು. ಕಲಿಕೆಯ ವಿಚಾರದಲ್ಲಿ ನೀವು ಹಿಂದುಳಿಯುವಿರಿ. ಪ್ರೀತಿಯಿಂದ ನಿಮಗೆ ದುಃಖವಾಗುವ ಸಂದರ್ಭವಿದೆ.‌ ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪ ಮಾಡಿಕೊಳ್ಳುವಿರಿ. ಶತ್ರುಗಳೂ ನಿಮಗೆ ಪರೋಕ್ಷವಾಗಿ ಉಪದೇಶ ಕೊಡಬಹುದು. ಹಣಕಾಸಿನ ವಿಚಾರದಲ್ಲಿ ಅನಾದರ ಬೇಡ. ನಿಮ್ಮ ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ಸಮಸ್ಯೆಯು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಕೆಲವು ಸಮಯ ತೊಂದರೆ ಕೊಡುವುದು. ನಿಮ್ಮವರನ್ನು ನೀವು ಸಂಪೂರ್ಣವಾಗಿ ಮರೆಯುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು.

ವೃಶ್ಚಿಕ ರಾಶಿ; ಬೆಂಬಲಿಗರು ನಿಮ್ಮನ್ನು ತಡೆಯಬಹುದು. ನಿಮ್ಮ ಮಾತುಗಳು ಚಾಣಾಕ್ಷತನದಂತೆ ಇರುವುದು. ನಿಮ್ಮ ಸಾಧನೆಯನ್ನು ಹಂಚಿಕೊಳ್ಳುವಿರಿ‌. ಯೋಗ್ಯ ಪುರಸ್ಕಾರ, ಮಾತುಗಳು ಸಿಗಲಿವೆ. ಆದಾಯಕ್ಕಾಗಿ ಅನ್ಯ ಮಾರ್ಗವನ್ನೂ ನೀವು ಅವಲಂಬಿಸಬಹುದು. ದೇವತಾಕಾರ್ಯದಿಂದ ನಿಮಗೆ ಇಂದಿನ ಎಲ್ಲ ಕಾರ್ಯಗಳೂ ಸುಗಮವಾಗುವುದು. ಆರ್ಥಿಕವಾಗಿ ವಂಚನೆಗೆ ಸಿಲುಕಿದ್ದು ಎಷ್ಟೋ ದಿನದ ಮೇಲೆ ಗೊತ್ತಾಗುವುದು. ನಿಮ್ಮ ಉಪಸ್ಥಿತಿಯನ್ನು ಗೌರವಿಸುವರು. ಮಾತಿನ ಮೇಲೆ ನಿಯಂತ್ರಣವು ತಪ್ಪಬಹುದು. ವಿಳಂಬದ ಕಾರ್ಯದಿಂದ ನೀವು ವ್ಯಥೆ ಪಡುವಿರಿ. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವು ಸಿಗುವುದು. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡುವುದು ಬೇಡ. ನಿಮ್ಮನ್ನು ನೀವು ಕುಗ್ಗಿಸಿಕೊಳ್ಳುವುದು ಬೇಡ. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು.

ಧನು ರಾಶಿ: ಅಜ್ಞಾನದ ಆವರಣದಿಂದ ನೀವು ಮುಕ್ತರಾಗಬೇಕು. ನೀವೇ ನಿಮ್ಮನ್ನು ಸರಿಮಾಡಿಕೊಳ್ಳುವ ಬಗ್ಗೆ ಯೋಚಿಸಿದರೆ ಉತ್ತಮ. ಕಾನೂನಿನಿಂದ ಜಯಸುವ ಉತ್ಸಾಹವು ಇಂದು ನಿರುತ್ಸಾಹದಲ್ಲಿ ಕೊನೆಯಾಗಲಿದೆ. ಸಂಗಾತಿಯ ಮಾನಸಿಕ ಸ್ಥಿತಿಯು ಬದಲಾಗಬಹುದು. ಹತ್ತಾರು ವಿಚಾರಗಳನ್ನು ನೀವು ಏಕಕಾಲದಲ್ಲಿ ಚಿಂತಿಸಿ ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖಿಸುವಿರಿ. ನಿಮ್ಮರನ್ನು ನೀವು ದೂರ ಮಾಡಿಕೊಳ್ಳುವಿರಿ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನಿರಾಕರಿಸುವಿರಿ.‌ ವಾಹನ ಚಾಲನೆಯಲ್ಲಿ ನುರಿತವರಾದರೂ ಎಚ್ಚರಿಕೆಯಿಂದ ಓಡಿಸಿ. ನಿಮ್ಮ ನೇರ ನುಡಿಯಿಂದ ಇನ್ನೊಬ್ಬರಿಗೆ ನೋವಾದೀತು ಎಂಬ ಆಲೋಚನೆ ಇರಲಿ. ಒಂದೇ ಕಾರ್ಯವನ್ನು ಬಹಳ ದಿನಗಳ ವರೆಗೆ ಮಾಡುವಿರಿ. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು.

ಮಕರ ರಾಶಿ: ಸುಮ್ಮನೆ ಮಸ್ತಾಪಕ್ಕಿಂತ ದೂರ ಉಳಿಯುವುದೇ ಶ್ರೇಯಸ್ಕರ. ಸಮಾನಮನಸ್ಕರು ಸೇರಿದಾಗ ಮಾತ್ರ ನಿಮ್ಮ ಕಾರ್ಯವು ಸಾಧುವಾಗುವುದು. ನಿಮ್ಮ ಮನಸ್ಸು ಕೆಲವು ಮಾತಿನಿಂದ ದುರ್ಬಲವಾಗಬಹುದು. ಕಲಹರಣಕ್ಕೆ ಯಾರ ಜೊತೆಗಾದರೂ ಮಾತನಾಡುತ್ತಾ ಇರುವಿರಿ. ನೀವು ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ಸಂದೇಹ ಉಂಟಾಗಬಹುದು. ಹಣಕಾಸಿನ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದಿಲ್ಲ. ಕಛೇರಿಯಲ್ಲಿ ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಹಾಯ ಪಡೆಯಿರಿ. ಒಂದಿಷ್ಟು ಕಾರ್ಯದಲ್ಲಿ ಒತ್ತಡವಿರಲಿದೆ. ನಿಮ್ಮದೇ ಬಳಗವನ್ನು ಮಾಡಿಕೊಂಡು ಸಮಯವನ್ನು ಕಳೆಯುವಿರಿ. ಯಾರ ಒತ್ತಾಯಕ್ಕೂ ಮಣಿಯದೇ ನಿರ್ಧಾರವನ್ನು ಬದಲಿಸಿಕೊಳ್ಳಲು ಹೋಗುವುದಿಲ್ಲ‌. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಸ್ನೇಹ ಸಂಬಂಧದಲ್ಲಿ ಅನ್ಯರ ಆಗಮನವಾಗಲಿದೆ.

ಕುಂಭ ರಾಶಿ: ನಿಮ್ಮ ಅಭಿಪ್ರಾಯವನ್ನು ಹೇಳಲು ಸ್ವತಂತ್ರರು. ಆದರೆ ಅದನ್ನು ಹೇರುವ ಕೆಲಸ ಮಾಡಬೇಡಿ. ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು. ಇಂದು ನಿಮ್ಮ ವೃತ್ತಿಕ್ಷೇತ್ರದಲ್ಲಿ ನೀವು ಕಲಹಕ್ಕೆ ದಾರಿ ಮಾಡಿಕೊಡುವಿರಿ. ಮಕ್ಕಳಿಗೆ ಧೈರ್ಯವನ್ನು ಹೇಳುವಿರಿ. ಜ್ವರವು ಕಾಣಿಸಿಕೊಂಡೀತು. ಸ್ನೇಹಿತರನ್ನು ಕಳೆದುಕೊಳ್ಳುವಿರಿ. ಇಷ್ಟಪಡುವವರಿಗೆ ಸಮಯವನ್ನು ಕೊಡಲಾಗದು. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಹೊಗಳುವರು. ಪುಣ್ಯಸ್ಥಳಕ್ಕೆ ಹೋಗಲು ಇಚ್ಛಿಸುವಿರಿ. ನಿಮ್ಮ ದಾರಿಯನ್ನು ಸುಗಮ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ನೀವು ಯಾರ ಸಹಕಾರವನ್ನೂ ಅನಪೇಕ್ಷಿತವಾದೀತು. ವೈದ್ಯ ವೃತ್ತಿಯಲ್ಲಿ ಇರುವವರು ಯಶಸ್ಸನ್ನು ಗಳಿಸುವರು. ನಿಮಗೆ ಅನೇಕ ವಿಚಾರಗಳನ್ನು ತಿಳಿಯಬೇಕು ಎಂಬ ಆಸೆಯು ಅತಿಯಾಗುವುದು. ಹೊಸ ಉದ್ಯೋಗಕ್ಕೆ ಪ್ರವೇಶ ಪಡೆಯುವಿರಿ. ನಿಮ್ಮ ಅನುಕೂಲವನ್ನು ನೋಡಿ ಖರ್ಚು ಮಾಡಿ. ನಿಮ್ಮ ವರ್ತನೆಯು ಸಂಗಾತಿಗೆ ಇಷ್ಟವಾಗದು. ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವಾಗುವುದು.

ಮೀನ ರಾಶಿ: ಕಿವಿಮಾತಿನಿಂದ ಬುದ್ಧಿ ಅನ್ಯ ಮಾರ್ಗವನ್ನು ಹಿಡಿಯಬಹುದು. ನೀವು ಇಂದು ಅನವಶ್ಯಕ ವಿವಾದಗಳಿಗೆ ಮಾತನ್ನು ಹರಿದುಬಿಡುವುದು ಬೇಡ.‌ ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ಅಧಿಕ ವೇತನದ ಉದ್ಯೋಗಕ್ಕೆ ಅವಕಾಶವು ಬರಬಹುದು. ಯೋಚಿಸಿ ತೀರ್ಮಾನ ಮಾಡಿ. ಸ್ನೇಹಕ್ಕೆ ಒತ್ತಾಯ ಮಾಡುವುದು ಬೇಡ. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಆಗುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ಅಪರೂಪದ ಆಹಾರದಿಂದ ದೇಹಕ್ಕೆ ತೊಂದರೆ. ಕೆಲವು ವಿಚಾದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ಉತ್ಸಾಹದಿಂದ ನಿಮಗೆ ಕೆಲವು ಕಾರ್ಯಗಳು ಸಾಧ್ಯವಾಗುವುದು. ನೋವನ್ನು ನುಂಗಲು ಕಷ್ಟವಾದೀತು.‌ ದಿನಚರಿಯ ವ್ಯತ್ಯಾಸದಿಂದ ಆರೋಗ್ಯ ತಪ್ಪುವುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು.

ಲೋಹಿತ ಹೆಬ್ಬಾರ್ – 8762924271 (what’s app only)

ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್