Daily Horoscope 20 November 2024: ಈ ದಿನ ಯಾವ ರಾಶಿಗೆ ಏನು ಫಲ? ನಿಮ್ಮ ಭವಿಷ್ಯ ತಿಳಿದುಕೊಳ್ಳಿ

Daily Horoscope 20 November 2024: ನವೆಂಬರ್ 20, 2024ರ ಸೋಮವಾರ ಇಂದಿನ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರಿಗೆ ಅಶುಭವಾಗಲಿದೆ? ಸೇರಿದಂತೆ ರಾಹು ಕಾಲ, ಯಮಘಂಡ, ಗುಳಿಕ ಕಾಲ ಸಮಯವನ್ನೂ ಸಹ ತಿಳಿದುಕೊಳ್ಳಿ.

Daily Horoscope 20 November 2024: ಈ ದಿನ ಯಾವ ರಾಶಿಗೆ ಏನು ಫಲ? ನಿಮ್ಮ ಭವಿಷ್ಯ ತಿಳಿದುಕೊಳ್ಳಿ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ

Updated on: Nov 20, 2024 | 1:35 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 13:44ರವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ ಬೆಳಗ್ಗೆ 09:28 ರವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 01:43 ರವರೆಗೆ.

ಮೇಷ ರಾಶಿ :ದುರಭ್ಯಾಸಗಳು ನಿಮಗೆ ಅಪಕೀರ್ತಿ ಕಾಣಿಸೀತು. ರಯಾವುದನ್ನೇ ಒಪ್ಪಿಕೊಳ್ಳುವುದಾದರೂ ನಿಮಗೆ ಬಲವಾದ ಕಾರಣ ಬೇಕಾಗುತ್ತದೆ. ಇಂದು ನಿಮ್ಮ ವ್ಯಾಪಾರದಲ್ಲಿ ಕಠಿಣ ಶ್ರಮವಿದ್ದೂ ಕಡಿಮೆ ಲಾಭವನ್ನು ಪಡೆಯಬೇಕಾಗುವುದು. ಇಂದಿನ ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಪುಣ್ಯಸ್ಥಳಕ್ಕೆ ಕಾರಣಾಂತರಗಳಿಂದ ಹೋಗಲಾಗದು. ಪಾಲುದಾರಿಕೆಯಲ್ಲಿ ಅಧಿಕಾರದ ಬಗ್ಗೆ ಅಸಮಾಧಾನ ಹೆಚ್ಚಾಗುವುದು. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ. ಏನಾದರೂ ಸಹಾಯವನ್ನು ನಿಮ್ಮ ಬಳಿ ಪರಿಚಿತರು ಕೇಳಿಬರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ.

ವೃಷಭ ರಾಶಿ :ಸರಿಯಾದ ಸಮಯಕ್ಕೆ ಸೂಕ್ತವಾದ ಕೆಲಸವು ಆಗಿಬಿಡುವುದು. ಯಾವುದನ್ನೇ ಪಡೆಯುವುದಿದ್ದರೂ ಸುಲಭಕ್ಕೆ ಸಿಕ್ಕುವುದಿಲ್ಲ. ಕುಟುಂಬಕ್ಕೆ ಅಗತ್ಯವಾದ ಪದಾರ್ಥಗಳನ್ನು ಖರೀದಿಸುವಿರಿ.‌ ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ನಿಮಗಾಗಿ ಕಾಯುವವರಿಗೆ ಬೇಸರ ತರಿಸಬಹುದು. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕೆ ಹತ್ತಿರವಾಗಿ ಇಲ್ಲ. ಏನನ್ನಾದರೂ ಸಾಧಿಸಬೇಕು ಎನ್ನುವ ಕ್ಷಣಕಲವಿದ್ದು ಮರೆಯಾಗುವುದು. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು.

ಮಿಥುನ ರಾಶಿ :ಆತ್ಮೀಯತೆಯಿಂದ ಮನಸ್ಸಿಗೆ ಬಾಧೆ ಬರುವುದು. ಸಾಲವನ್ನು ತೀರಿಸಲು ಮತ್ತೊಂದು ಸಾಲವನ್ನು ಮಾಡಬೇಕಾಗುವುದು. ಇಂದು ನೀವು ಮನೆಯ ಹಿರಿಯರಿಗೆ ಗೌರವ ತರುವ ಕಾರ್ಯವನ್ನು ಮಾಡುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಒಬ್ಬರಿಗೆ ಸಹಾಯ ಮಾಡಿದರೆ ಮತ್ತೊಬ್ಬರಿಗೆ ತೊಂದರೆ. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಕುಳಿತಿರುವರು.‌ ವೈವಾಹಿಕ ಜೀವನ ಆರಂಭದ ದಿನಗಳಲ್ಲಿ ಸಂತೋಷವೇ ಇರುವುದು. ಪರಸ್ಪರ ದುಃಖವನ್ನು ಹಂಚಿಕೊಂಡು ದಂಪತಿಗಳು ಹಗುರಾಗುವುದು. ವಾಹನ ವ್ಯವಸ್ಥೆಯಿಂದ ಅನನಕೂಲವಾಗುವ ಸಾಧ್ಯತೆ ಇದೆ. ಆಸ್ತಿಯ ವಿಚಾರಕ್ಕೆ ದಾಯಾದಿ ಕಲಹವಾಗಬಹುದು. ನಿಮ್ಮವರ ಪ್ರೀತಿಗೆ ನೀವು ಮನಸೋಲುವಿರಿ.

ಕರ್ಕಾಟಕ ರಾಶಿ :ಹಳೆಯ ವ್ಯವಸ್ಥೆಗೆ ನೀವು ಪುನಃ ಹೋಗಬೇಕಾಗಬಹುದು. ಪಾಲುದಾರಿಕೆಯನ್ನು ಬಿಡುವ ಆಲೋಚನೆ ಬರಬಹುದು. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಆಭರಣ ಮುಂತಾದ ಬಹು ಮೌಲ್ಯದ ವಸ್ತುವನ್ನು ಖರೀದಿಸುವಿರಿ. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ಅಶಿಸ್ತಿನಿಂದ ಇಂದಿನ ಕೆಲಸವನ್ನು ಮಾಡಿ, ಎಲ್ಲರ ಕೋಪಕ್ಕೆ ಗುರಿಯಾಗುವಿರಿ. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ನಿಮ್ಮ ದೂರ ಪ್ರಯಾಣಕ್ಕೆ ಕುಟುಂಬದಿಂದ ಒಪ್ಪಿಗೆ ಸಿಗದು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣವು ಮೆಚ್ಚುಗೆಯಾಗಿ ಇದೇ ಪ್ರೀತಿಗೆ ದಾರಿ ಮಾಡಿಕೊಡಬಹುದು. ನಿಮಗೆ ಸಿಕ್ಕ ವ್ಯಕ್ತಿಗಳನ್ನು ಉಳಿಸಿಕೊಳ್ಳಿ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ.

ಸಿಂಹ ರಾಶಿ :ವಿವಾಹದ ಕಾರಣಕ್ಕೆ ನಿಮಗೆ ಕೋಪ ಬರುವ ಸಾಧ್ಯತೆ ಇದೆ. ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲಾಗದೇ ಬೇಸರವಾವುವುದು. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಬಂಧುಗಳ ಜೊತೆ ಆಕಸ್ಮಿಕವಾಗಿ ಮನಸ್ತಾಪ ಕಾಣಿಸೀತು. ಸುಧಾರಿಸಿದ ಆರೋಗ್ಯವು ನಿಮಗೆ ಉತ್ಸಾಹವನ್ನು ಕಡಲ ಸಮಯವನ್ನು ತೆಗೆದುಕೊಂಡಿತು. ಜೀವನದ ಆಕಸ್ಮಿಕ ತಿರುವುಗಳಿಗೆ ನೀವು ಚಿಂತೆಗೆಡುವುದಿಲ್ಲ. ಹಣದ ಉಳಿತಾಯಕ್ಕೆ ಉಪಾಯದ ಅಗತ್ಯವು ಕಾಣಿಸಿಕೊಳ್ಳುವುದು. ಅಧ್ಯಯನದಲ್ಲಿ ಚುರುಕುತನ ಬೇಕು. ಉದ್ಯೋಗದ ಕೆಲವು ರಹಸ್ಯಗಳನ್ನು ನೀವು ಇಂದು ತಿಳಿದುಕೊಳ್ಳುವಿರಿ. ವಿಷಯಾಸಕ್ತಿಯು ಇಂದು ಅಧಿಕವಾಗಿ ಇರುವುದು. ನಿಮ್ಮ ಇಂದಿನ ಕೆಲಸಗಳು ಬೇಗನೆ ಮುಕ್ತಾಯವಾಗುವುದು.

ಕನ್ಯಾ ರಾಶಿ :ಅಪರಿಚಿತರ ಕರೆಯು ನಿಮ್ಮನ್ನು ಹೆದರಿಸಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು. ಬೆಂಕಿಯ ಸಣ್ಣ ಕಿಡಿಯಾದರೂ ಅದು ಇರುವಲ್ಲಿಯೇ ಇರಬೇಕು. ನಿಮ್ಮ ವ್ಯವಹಾರದಲ್ಲಿ ಹೊಸ ಬದಲಾವಣೆಯನ್ನು ಮಾಡಲು ನೀವು ಯೋಚಿಸುತ್ತಿದ್ದರೆ ಯಶಸ್ವಿಯಾಗುವಿರಿ. ಉದ್ಯೋಗದಲ್ಲಿ ಯಾರದೋ ಕಾರಣಕ್ಕೆ ಅತಂತ್ರ ಸ್ಥಿತಿ ಬರಬಹುದು. ನೀವು ಅಂದುಕೊಂಡಿದ್ದು ಆಗುತ್ತಿದ್ದರೂ ಮನಸ್ಸು ಸ್ವಸ್ಥವಾಗಿ ಇರದು. ಮಕ್ಕಳ ಕಾರಣದಿಂದ‌ ನಿಮಗೆ ಕೆಟ್ಟ ಮಾತನ್ನು ಕೇಳಬೇಕಾದೀತು. ಕೌಶಲವನ್ನು ಎಲ್ಲರ ಮುಂದೂ ತೋರಿಸಲಾರಿರಿ. ಎಲ್ಲವನ್ನೂ ತಿಳಿದೂ ನೀವು ಸುಮ್ಮನಿರುವುದು ಇಷ್ಟವಾಗದು. ಅಧಿಕಾರಿಗಳ ವರ್ಗದಿಂದ ಗೌರವ ಸಿಗಬಹುದು.‌ ನಿಮ್ಮವರಿಗೆ ನಿಮ್ಮ ಸರಿಯಾದ ಪರಿಚಯ ಆಗದು. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ.

ತುಲಾ ರಾಶಿ :ಸಾಮಾಜಿಕವಾದ ನ್ಯಾಯ ಪಡೆಯಲು ಹೋರಾಟ ಮಾಡಬೇಕಾಗುವುದು. ಮುಂದೆ ಬರುವ ಅವಕಾಶಕ್ಕೆ ಈಗಲೇ ಉದ್ಯೋಗವನ್ನು ಕೈಚೆಲ್ಲಿ ಕುಳಿತಿರುವುದು ಮೂರ್ಖತನವಾದೊಇತು. ವ್ಯಾವಹಾರಿಕ ಒಪ್ಪಂದವು ಕೊನೆಯ ಹಂತದಲ್ಲಿ ಇದ್ದು ಕೆಲವು ಅಸಮಾಧಾನಕರ ಮಾತನ್ನು ಕೇಳಬೇಕಾದೀತು. ನ್ಯಾಯಾಲಯದ ಮಾತಿಗೆ ನೀವು ತಲೆ ಬಾಗುವಿರಿ. ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಇಂದು ನೀವು ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಿಟ್ಟನ್ನು ಕಡಿಮೆ‌ ಮಾಡಿಸುವಿರಿ. ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಿ ಸಂಧಾನಕ್ಕೆ ಬರಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು. ಬಂಧುಗಳ ಮನೆಯ ಸಮಾರಂಭಕ್ಕೆ ಹೋಗಲಿದ್ದೀರಿ. ನಿಮ್ಮ ಸದ್ಭಾವವನ್ನು ಆಡಿಕೊಳ್ಳಬಹುದು.

ವೃಶ್ಚಿಕ ರಾಶಿ :ಮೊದಲು ದೃಷ್ಟಿ ಇಟ್ಟು, ಅನಂತರ ಹೆಜ್ಜೆ ಇಡಿ. ಉದ್ಯೋಗದ ಒತ್ತಡವು ಮನೆಯಲ್ಲಿ ನೆಮ್ಮದಿಯಿಂದ ಇರಲು ಬಿಡದು. ಎಲ್ಲವನ್ನೂ ನಿಮ್ಮ ನೇರಕ್ಕೆ ತರುವುದು ಕಷ್ಟವಸದೀತು. ಸುಪ್ತಪ್ರಜ್ಞೆಯು ಮುಂದಾಗುವುದನ್ನು ತಿಳಿಸುವುದು. ಉದ್ವೇಗದ ಸಂದರ್ಭದಲ್ಲಿ ಕಳವಳಗೊಂಡರೆ ಇನ್ನಷ್ಟು ಅಧ್ವಾನವಾಗಬಹುದು. ಇಂದು ನೀವು ಕೆಲಸವನ್ನು ಮಾಡಲು ಪ್ರಯತ್ನಿಸಿದರೂ ಪೂರ್ಣವಾಗದು. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ನೀವು ಇತರರಿಂದ ಗೌರವಕ್ಕೆ ಪಾತ್ರರಾಗುವಿರಿ. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ. ನಿಮ್ಮ ಸಂಶೋಧನೆಗೆ ನಿರ್ದಿಷ್ಟ ಗುರಿಯ ಅವಶ್ಯಕತೆ ಇರಲಿದೆ. ಆಸ್ತಿಯ ವಿಚಾರವಾಗಿ ತಂದೆಯ ಕಡೆಯಿಂದ ನಿಮಗೆ ಸಿಂಹಪಾಲು ಸಿಗುವುದು. ಗಂಭೀರ ಚರ್ಚೆಯಲ್ಲಿ ನಿಮ್ಮ ಹಾಸ್ಯವು ಸಭೆಯನ್ನು ವಿಚಲಿತಗೊಳಿಸೀತು.

ಧನು ರಾಶಿ :ಬೆಂಬಲವಿರುವ ಕಾರಣ ವ್ಯಾಪಾರದ ಹಿನ್ನಡೆಗೆ ಅಂಜಲಾರಿರಿ.‌ ಹಿಂದೆ ಮಾಡಿದ ಖರ್ಚಿನ ತಪ್ಪಿಗೆ ಇಂದು ತಿಳಿವಳಿಕೆ ಬರಬಹುದು. ನಿಮಗೆ ನಿಮ್ಮ ಹಳೆಯ ಜವಾಬ್ದಾರಿಯ ಪದವಿಯೇ ಸಿಗಲಿದೆ. ಒತ್ತಡದಿಂದ ಹೊರಬರಲು ಮಾರ್ಗವು ಸಿಗಲಿದೆ. ಇಂದು ನಿಮ್ಮ ಸಂಗಾತಿಯನ್ನು ಖರೀದಿಗೆ ಕರೆದೊಯ್ಯುವಿರಿ. ಯಾರೋ ಮಾಡಿದ ಸಾಲವು ನಿಮಗೆ ಶೂಲವಾಗಬಹುದು. ನೀವು ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ಕೆಲವು ಮಾಹಿತಿಯನ್ನು ಪಡೆದುಕೊಳ್ಳುವಿರಿ.‌ ಹೆಣ್ಣು ಮಕ್ಕಳು ತಾಯಿಯಿಂದ ಲಾಭವನ್ನು ಪಡೆಯುವರು. ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹೆಚ್ಚಾದೀತು. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಮಾತು ಅಹಂಕಾರದಂತೆ ಕೇಳಿಸುವುದು. ಸಂಯಮವನ್ನು ಬೆಳೆಸಿಕೊಳ್ಳುವ ಅಗತ್ಯ. ಎಲ್ಲವನ್ನೂ ಅನುಮಾನದ ದೃಷ್ಟಿಯಿಂದ ನೋಡುವ ಅಭ್ಯಾಸ ಬೇಡ.‌

ಮಕರ ರಾಶಿ :ಯಾವುದೋ ಯೋಚನೆಯಲ್ಲಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಅನಾರೋಗ್ಯದಿಂದ ವ್ಯಾಪಾರದಲ್ಲಿ ಉತ್ಸಾಹ ಕಡಿಮೆ ಆಗಲಿದೆ. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ಹಣಕಾಸಿನ ವ್ಯವಹಾರದಲ್ಲಿ ಇಂದು ಎಲ್ಲರಿಂದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಯಾರಿಗೋ ನಿಮ್ಮಿಂದ ಹಣವು ಕೈತಪ್ಪಿ ಹೋಗಬಹುದು. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ಇಂದು ನೀವು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಣವನ್ನು ಹೂಡಿಕೆ ಮಾಡುವಿರಿ. ತಂದೆಯ ಶ್ರಮವನ್ನು ಕಂಡು ಮಕ್ಕಳು ನೋಯುವರು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ನಿಮ್ಮ ಕೆಲಸದ ಬಗ್ಗೆ ನೀವೇ ಹೇಳಿಕೊಳ್ಳುವಿರಿ. ನೀವು ಎಲ್ಲರ‌ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರ ಮಾಡುವಿರಿ. ಬಂಧುಗಳ ಭೇಟಿಯಿಂದ ಸಂತೋಷ ಸಿಗಲಿದೆ. ಇಂದು ಸಂಗಾತಿಯ ಪ್ರೀತಿಯಿಂದ ವಂಚಿತರಾಗುವಿರಿ. ನೀವೇ ಅಸಹಕಾರ ತೋರಿದರೆ ನಿಮ್ಮ ಜೊತೆಗಾರರೂ ಹಿಂದೇಟು ಹಾಕುವರು.

ಕುಂಭ ರಾಶಿ :ಮಂಗಲ ಸಂದರ್ಭವು ನಿಮಗೆ ಅನಿರೀಕ್ಷಿತವಾಗಿ ಬರಬಹುದು. ಅದನ್ನು ಪೂರ್ಣ ಮನಸ್ಸಿನಿಂದ ಸ್ವೀಕರಿಸಿ. ನಿಮ್ಮ ಭಾವನೆಗಳನ್ನು ಇತರರು ಸುಲಭವಾಗಿ ಅರ್ಥಮಾಡಿಕೊಳ್ಳುವುದು ಕಷ್ಟ. ರಾಜಕಾರಣಿಗಳಿಗೆ ತೊಳಲಾಟವು ಅಧಿಕವಾಗಿರುವುದು. ಇಂದಿನ ಸೋಲು ನಿಮಗೆ ಪಾಠವಾಗುವುದು. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ಕುಟುಂಬದ ನೇರ ಮಾತುಗಳು ನಿಮಗೆ ಸಹಿಸಲು ಶಕ್ಯವಾಹದೇ ಬೇಸರಿಸುವಿರಿ. ಊಹಿಸಿದಷ್ಟು ಮಾರ್ದವವು ಸಂಗಾತಿಯ ಸ್ವಭಾವದಲ್ಲಿ ಇರದು. ಕುಟುಂಬದ ವಿಚಾರದಲ್ಲಿ ಏಕಪಕ್ಷೀಯವಾಗಿ ನಿರ್ಧರವನ್ನು ತೆಗೆದುಕೊಳ್ಳದೇ ಎಲ್ಲರ ಅಭಿಪ್ರಾಯವನ್ನು ಪಡೆದು ಮುಂದುವರಿಯಿರಿ. ನಿಮ್ಮ ಕೆಲಸವು ಅನೇಕರಿಗೆ ಉಪಯೋಗವಾಗಬಹುದು. ತಾಳ್ಮೆಯಿಂದ ನೀವು ಜಯಿಸುವಿರಿ. ಸ್ವತಂತ್ರ ನಿರ್ಧಾರವು ನಿಮಗೆ ಭಯ ಹುಟ್ಟಿಸೀತು. ಯಂತ್ರೋಪಕರಣಗಳು ದುರಸ್ತಿಗೆ ಬರಬಹುದು. ಯಾರಿಂದಲಾದರೂ ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು.

ಮೀನ ರಾಶಿ :ಮಾನಸಿಕವಾಗಿ ಆಗುವ ಸಣ್ಣ ಬಾಧೆಗಳಿಗೆ ಅರಿಯಾದ ಲಕ್ಷ್ಯ ಬೇಡ. ನಿರ್ಲಕ್ಷ್ಯವೇ ಅದರ ಧ್ಯೇಯವಾಗಲಿ. ಸಾಲದಿಂದ ಸ್ವಲ್ಪ ಸಮಾಧಾನ ಸಿಗಲಿದೆ. ಇದು ನಿಮ್ಮ ಆರೋಗ್ಯದ ಮೇಲೂ ಒಳ್ಳೆಯ ಪರಿಣಾಮವನ್ನು ಕೊಡುವುದು. ನಿಮಗೆ ಸಂಬಂಧಿಸದ ವಿಚಾರಕ್ಕೆ ನೀವು ಮಧ್ಯ ಪ್ರವೇಶ ಮಾಡುವುದು ಬೇಡ.‌ ಪ್ರೀತಿಯಲ್ಲಿ ಅಂತರವು ಬಂದಂತೆ ತೋರಿದ್ದು ಮಾತುಕತೆಯಿಂದ ಅದನ್ನು ಸರಿ ಮಾಡಿಕೊಳ್ಳುವುದು ಉಚಿತ. ಇಂದಿನ ಕೆಲವು ಸಮಯವನ್ನು ಇನ್ನೊಬ್ಬರಿಗೆ ಮೀಸಲಿಡಬೇಕಾದೀತು. ಸಂಗಾತಿಯ ನೋವಿಗೆ ಸ್ಪಂದಿಸಲು ಕಷ್ಟವಾದೀತು. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮ್ಮೊಳಗೆ ಆತಂಕಕ್ಕೆ ಸೃಷ್ಟಿಸುವುದು. ಮಕ್ಕಳ ತಿರುಗಾಟವನ್ನು ಕಡಿಮೆ ಮಾಡಲು ಹೇಳುವಿರಿ. ಸರಿಯಾದ ಸಮಯಕ್ಕೆ ಆಹಾರವನ್ನು ಸ್ವೀಕರಿಸಿ. ಪ್ರಯಾಣದ ಆಯಾಸವು ವಿಶ್ರಾಂತಿಯಿಂದ ದೂರಾಗುವುದು. ಪುರುಷ ಪ್ರಯತ್ನದಿಂದ ಇಂದು ಹೆಚ್ಚು ಇರುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
ನಿರ್ದೇಶಕ ದೂರಿನ ಮೇರೆಗೆ ನಟನನ್ನು ಬಂಧಿಸಿರುವ ಚಂದ್ರಾ ಲೇಔಟ್ ಪೊಲೀಸರು
ನಿರ್ದೇಶಕ ದೂರಿನ ಮೇರೆಗೆ ನಟನನ್ನು ಬಂಧಿಸಿರುವ ಚಂದ್ರಾ ಲೇಔಟ್ ಪೊಲೀಸರು
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ಕ್ರಿಕೆಟ್​ನಲ್ಲಿ ಪಾಕ್​ ಗೆದ್ದರೆ ಕಾಂಗ್ರೆಸ್ ಪಟಾಕಿ ಸಿಡಿಸುತ್ತದೆ: ಅಶೋಕ
ಕ್ರಿಕೆಟ್​ನಲ್ಲಿ ಪಾಕ್​ ಗೆದ್ದರೆ ಕಾಂಗ್ರೆಸ್ ಪಟಾಕಿ ಸಿಡಿಸುತ್ತದೆ: ಅಶೋಕ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ
ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ..ಇಲ್ಲದಿದ್ರೆ ಎನ್‌ಕೌಂಟರ್​?
ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ..ಇಲ್ಲದಿದ್ರೆ ಎನ್‌ಕೌಂಟರ್​?