Horoscope: ಹೂಡಿಕೆಯಿಂದಾದ ನಷ್ಟವು ನಿಮಗೆ ಬಹಳ ನೋವನ್ನು ಕೊಟ್ಟೀತು-ಎಚ್ಚರ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಕಾರ್ಯ ಆರಂಭಿಸುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಇಂದು ಡಿಸೆಂಬರ್ 13 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ಹೂಡಿಕೆಯಿಂದಾದ ನಷ್ಟವು ನಿಮಗೆ ಬಹಳ ನೋವನ್ನು ಕೊಟ್ಟೀತು-ಎಚ್ಚರ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 13, 2023 | 12:45 AM

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 13) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧವಾರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೂಲಾ, ಯೋಗ: ಶೂಲ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:51ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:14 ರಿಂದ 09:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ 12: 27ರ ವರೆಗೆ.

ಧನು ರಾಶಿ : ನಿಮ್ಮ ಪ್ರೀತಿಪಾತ್ರರ ಸಾಂಗತ್ಯದಿಂದ ಖುಷಿಪಡುವಿರಿ. ಆರೋಗ್ಯವು ದುರ್ಬಲವಾಗಿದ್ದು, ಎಲ್ಲರಮೇಲೂ ಸಿಟ್ಟಾಗುವಿರಿ. ಪ್ರತಿಕೂಲ ವಾತಾವರಣವನ್ನು ನಿಭಾಯಿಸುವ ಕಲೆಯನ್ನು ಗೊತ್ತುಮಾಡಿಕೊಳ್ಳುವಿರಿ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿಡಬೇಕಾಗುವುದು. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಹಾಗಾಗಿ ನಿಶ್ಚಿಂತೆಯಿಂದ ಇದ್ದುಬಿಡುವಿರಿ. ಸಿಕ್ಕಿದ್ದರಲ್ಲಿ ಸಂತೋಷ ಪಡುವುದನ್ನ ನೀವು ಬೆಳೆಸಿಕೊಳ್ಳಬೇಕಾಗುವುದು. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಇಷ್ಟವಿಲ್ಲದ ಕಡೆ ನೀವು ಎಂದೂ ಹೋಗಲಾರಿರಿ. ನಿಮ್ಮ ಉತ್ಸಾಹದ ಕೆಲಸವು ಇನ್ನೊಬ್ಬರಿಗೆ ಮಾದರಿಯಾದೀತು. ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಬೇಸರದ ಸನ್ನಿವೇಶದಲ್ಲಿ ಕುಟುಂಬದ ಬಗ್ಗೆ ಗೊತ್ತಾಗುವುದು. ಕೆಲವು ಸಂಬಂಧಗಳನ್ನು ಬಿಟ್ಟುಕೊಡುವುದು ನಿಮಗೆ ಕಷ್ಟವಾದೀತು.

ಮಕರ ರಾಶಿ : ವೃತ್ತಿಯಲ್ಲಿ ಒತ್ತಡವು ಹಲವು ದಿನಗಳ ಅನಂತರ ಹೆಚ್ಚಿರಲಿದೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಸದಭಿಪ್ರಾಯವು ಇರುವುದು. ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭವಾಗಬಹದು. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಣುವರು. ನಿಮ್ಮ ಕಾರ್ಯವನ್ನು ಕೆಲವು ಸಹೋದ್ಯೋಗಿಗಳು ಟೀಕಿಸಬಹುದು. ಕುಹಕ ಮಾತುಗಳನ್ನೂ ಆಡಬಹುದು. ಸಂಗಾತಿಯು ನಿಮ್ಮ ಮಾತನ್ನು ಅಲ್ಲಗಳೆಯುವಿರಿ. ಸ್ವಪ್ರತಿಷ್ಠೆಯನ್ನು ಎಲ್ಲರೆದುರು ತೋರಿಸಿದರೆ ಪ್ರಯೋಜನವಾಗದು. ಧಾರ್ಮಿಕ ಸ್ಥಳಗಳ ಭೇಟಿಯು ನಿಮಗೆ ಸಾಕಷ್ಟು ನೆಮ್ಮದಿನ್ನು ಕೊಡುವುದು. ನಿಮ್ಮ ವ್ಯವಹಾರದಲ್ಲಿ ಯಾರ ಹಸ್ತಕ್ಷೇಪವೂ ಇಷ್ಟವಾಗದು. ತಂದೆಯ ಕೆಲವು ವ್ಯವಹಾರವು ನಿಮಗೆ ಇಷ್ಟವಾಗದೇ ಅವರ ಮೇಲೆ ಮುನಿಸಿಕೊಳ್ಳುವಿರಿ. ರಾಜಕೀಯದಲ್ಲಿ ನಿಮ್ಮ ವರ್ಚಸ್ಸನ್ನು ಜೊತೆಗಿರುವವರು ಹೆಚ್ಚಿಸುವರು. ಕೆಲಸದ ಒತ್ತಡವು ಇಂದು ಅಧಿಕವಾಗಿ ಇರಲಿದೆ. ಅಹಂಕಾರದಿಂದ ನಿಮ್ಮ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವಿರಿ.

ಕುಂಭ ರಾಶಿ : ಹೂಡಿಕೆಯಿಂದಾದ ನಷ್ಟವು ನಿಮಗೆ ಬಹಳ ನೋವನ್ನು ಕೊಟ್ಟೀತು. ಪಾಲುದಾರಿಕೆಯಲ್ಲಿ ನಿಮಗೆ ಪೂರ್ಣ ಸಹಮತವಿರದು. ಕುಟುಂಬದ ಸದಸ್ಯರು ನಿಮ್ಮ ಸಮಸ್ಯೆಯನ್ನು ಸರಿಮಾಡಿಕೊಳ್ಳಲು ಸಹಕರಿಸಬಹುದು. ಹಳೆಯ ಮನೆಯ ದುರಸ್ತಿಗೆ ಹಣವನ್ನು ಖರ್ಚು ಮಾಡುವಿರಿ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಬಂಧುಗಳ ಸಹಕಾರ ಇಂದು ಲಭ್ಯವಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ಯಾರಾದರೂ ನಿಮ್ಮ ಭವಿಷ್ಯದ ಬಗ್ಗೆ ಹೇಳಿ ಅವಮಾನಿಸಬಹುದು. ಕೆಲಸದಲ್ಲಿ ಮತ್ತೆ ಮತ್ತೆ ತೊಂದರೆ ಎದುರಾದರೆ ಅದನ್ನು ಕೈ ಬಿಡುವುದು ಸೂಕ್ತ. ಮನೆಯ ಕಾರ್ಯದಲ್ಲಿ ಮಂದಗತಿ, ಆಮೇಲೆ ಮಾಡಿದರಾಯಿತು ಎಂಬ ಭಾವ ಇರಲಿದೆ. ನೆಚ್ಚಿನ ವ್ಯಕ್ತಿಗಳಿಂದ ಪ್ರಭಾವಿತರಾಗಿರುವಿರಿ. ರಾಜಕೀಯ ನಾಯಕರಿಂದ ಒತ್ತಾಯದ ಬೆಂಬಲವು ಸಿಗಲಿದೆ.

ಮೀನ ರಾಶಿ : ಆರ್ಥಿಕ ವ್ಯವಹಾರಕ್ಕಾಗಿ ದಿನವಿಡೀ ಸುತ್ತಾಡಬೇಕಾಗುವುದು. ನೀವು ಗೆಲ್ಲಲು ಸಾಕಷ್ಟು ಪ್ರಯತ್ನಗಳನ್ನು ಮಾಡಬೇಕಾಗುವುದು. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತವೆ. ಓಡಾಡಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ನೀವು ಹಣಕಾಸನ್ನು ಉಳಿಸಲು ನಾನಾಪ್ರಕಾರವಾಗಿ ಯೋಚಿಸುವಿರಿ. ಸರಳವಾಗಿರಲು ನಿಮಗೆ ಸಾಧ್ಯವಾಗುವುದು. ಸಮಯಕ್ಕೆ ಸರಿಯಾಗಿ ಕೆಲಸ ಮಾಡದೇ ಮೇಲಧಿಕಾರಿಗಳು ಏನಾದರೂ ಹೇಳಿಯಾರು. ಅಪಘಾತದಿಂದ ನಿಮಗೆ ಖಿನ್ನರಾಗುವಿರಿ. ನೀವು ಅತಿಯಾದ ಆತ್ಮವಿಶ್ವಾಸದಲ್ಲಿ ಕೆಲವೊಂದನ್ನು ಕಳೆದುಕೊಳ್ಳುವಿರಿ. ಮುನ್ನುಗ್ಗುವ ಮಾನಸಿಕತೆಯನ್ನು ಬೆಳೆಸಿಕೊಳ್ಳುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ