ರಾಶಿ ಭವಿಷ್ಯ: ಬಂಧುಗಳ ಜೊತೆ ಕಲಹವಾಗಬಹುದು-ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 09, 2023 | 12:45 AM

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಕಾರ್ಯ ಆರಂಭಿಸುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಇಂದು ಡಿಸೆಂಬರ್ 09 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

ರಾಶಿ ಭವಿಷ್ಯ: ಬಂಧುಗಳ ಜೊತೆ ಕಲಹವಾಗಬಹುದು-ಎಚ್ಚರ
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 09) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣಮ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:36 ರಿಂದ 11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:49 ರಿಂದ 03:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:47 ರಿಂದ 08:12ರ ವರೆಗೆ.

ಧನು ರಾಶಿ : ಗಣ್ಯರ ಜೊತೆ ಇಂದು ಚರ್ಚೆಯನ್ನು ಮಾಡುವ ಅವಕಾಶವು ದೊರೆಯಲಿದೆ. ಚರಾಸ್ತಿಯ ಗಣನೆಯನ್ನು ಮಾಡುವಿರಿ. ಮಕ್ಕಳು ನಿಮ್ಮ ಮಾತಿಗೆ ಸ್ಪಂದಿಸುವರು. ಆಸ್ತಿಯ ಖರೀದಿಗೆ ಎರಡು ಮನಸ್ಸು ಇರುವುದು. ಗೊಂದಲದಿಂದ ಹೊರಬರುವುದು ಕಷ್ಟವಾದೀತು. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು. ಸ್ವಂತ ಉದ್ಯೋಗಸ್ಥರು ಲಾಭ ಗಳಿಸುವರು. ಯಾರೊಂದಿಗೂ ವೈರ ಬೇಡ. ಸರ್ಕಾರದಿಂದ ಕೆಲವು ವಿಚಾರಕ್ಕೆ ಕಿರಿಕಿರಿ ಉಂಟಾದೀತು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರಲಿದೆ‌. ದಾಂಪತ್ಯದ ಬಿರುಕನ್ನು ನೀವು ಸರಿ ಮಾಡಲು ಪ್ರಯತ್ನಿಸಿದರೆ ಆಗುವುದು. ಹೊಸತನ್ನು ಕಲಿಯುವ ಅವಕಾಶವನ್ನು ಹುಡುಕಿಕೊಳ್ಳುವಿರಿ. ಹಂಚಿಕೊಂಡು ಕೆಲಸವನ್ನು ಮಾಡಿ.

ಮಕರ ರಾಶಿ : ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಮ್ಮ ಚುರುಕುತನಕ್ಕೆ ಅಚ್ಚರಿಗೊಳ್ಳುವರು. ಜವಾಬ್ದಾರಿಯು ನಿಮಗೆ ಅತಿಯಾಗುವುದು. ಒತ್ತಡವನ್ನು ನಿಭಾಯಿಸಕೊಳ್ಳಲು ಕಷ್ಟವಾದೀತು. ಸಹೋದ್ಯೋಗಿಗಳ ಜೊತೆ ಮನಸ್ತಾಪ ಬಂದು ಜಗಳವಾಡುವಿರಿ. ಮೇಲಧಿಕಾರಿಗಳ ಜೊತೆ ವಿನಾಕಾರಣ ವಾಗ್ವಾದ ಬೇಡ. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು. ಆಲಸ್ಯದಿಂದ ಮುಖ್ಯ ಕೆಲಸವನ್ನೇ ಮರೆಯುವಿರಿ. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಯಾವುದೋ ಯೋಚನೆಯಲ್ಲಿ ಮುಖ್ಯ ಕಾರ್ಯಗಳು ಮರೆತುಹೋಗಬಹುದು. ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನಾತ್ಮಕ ತೊಂದರೆ ಬರುವುದು. ಸಂತೋಷದ ಕೂಟದಲ್ಲಿ ನೀವು ಭಾಗಿಗಳಾಗುವಿರಿ. ಉದ್ಯಮವನ್ನು ಮಾಡುವ ಮೊದಲು ಸರಿಯಾದ ಯೋಜನೆಯನ್ನು ತಯಾರಿಸಿ.

ಕುಂಭ ರಾಶಿ : ಅಪರೂಪದ ಬಂಧುಗಳ ಜೊತೆ ಕಲಹವಾಗಬಹುದು. ಕೆಲವು ಸಂಗತಿಗಳು ನಿಮ್ಮನ್ನು ಪರೀಕ್ಷಿಸಬಹುದು. ಆರ್ಥಿಕತೆಯು ನಿಮ್ಮನ್ನು ಚಿಂತೆಗೀಡುಮಾಡುವುದು. ನಿಮ್ಮ ತಪ್ಪುಗಳೇ ಫಲಿತಾಂಶದಲ್ಲಿ ಬರುವುದು. ಮಂದಗತಿಯ ಕಾರ್ಯಕ್ಕೆ ನಿಮ್ಮನ್ನು ಯಾರಾದರೂ ಹೀಯಾಳಿಸಬಹುದು. ನೀವು ಪ್ರಯಾಣ ಮಾಡದೇ ಬಹಳ ದಿನಗಳಾದಂತೆ ಅನ್ನಿಸುವುದು. ಮಕ್ಕಳಿಗೆ ನಿಮ್ಮ ಬಗ್ಗೆ ಪ್ರೀತಿ ಉಂಟಾಗುವುದು. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡುವುದು. ಇರುವ ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಸದುಪಯೋಗ ಆಗುವಂತೆ ಮಾಡಿ. ಕೆಲವನ್ನು ನೀವಾಗಿಯೇ ತಂದುಕೊಳ್ಳುವಿರಿ. ವೃತ್ತಿಯಲ್ಲಿ ನಿಮಗೆ ತಪ್ಪಿನ ಭಯವು ಕಾಡಲಿದ್ದು ಯಾರ ಬಳಿಯಾದರೂ ಹೇಳಿಕೊಳ್ಳಿ. ನಿಮ್ಮ ಸಾಮರ್ಥ್ಯವು ಇಂದು‌ ಕಾಣಿಸಿಕೊಳ್ಳದು. ಪ್ರೀತಿಪಾತ್ರರ ಜೊತೆ ಸಂತೋಷ ಸಮಯವನ್ನು ಕಳೆಯುವಿರಿ.

ಮೀನ ರಾಶಿ : ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯಾಗಿ ಎಲ್ಲವೂ ಕಬ್ಬಿಣದ ಕಡಲೆಯಂತೆಯಾಗುವುದು. ಮನೆಯ ಅಭಿವೃದ್ಧಿಗೆ ಶ್ರಮವನ್ನು ಹಾಕುವಿರಿ. ಇಂದು ಪರೋಪಕಾರಕ್ಕೆ ನಿಮ್ಮ ಮನಸ್ಸು ಕರಗುವುದು. ಸ್ತ್ರೀಯರು ಈ ದಿನವನ್ನು ಬಹಳ ಉತ್ಸಾಹದಿಂದ ಕಳೆಯುವರು. ಕುಟುಂಬದ ಸೌಖ್ಯದಲ್ಲಿ ನೀವು ಭಾಗಿಯಾಗುವಿರಿ. ದಿನದ ಕಾರ್ಯವು ಹೆಚ್ಚು ಕಡಿಮೆ ಆಗಲಿದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯದಲ್ಲಿ ಪ್ರಗತಿಯನ್ನು ಕಾಣುವಿರಿ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಮಾಡಿಕೊಳ್ಳುವಿರಿ. ಮಕ್ಕಳಿಂದ ಆಗುವ ಅಸಮಾಧಾನವನ್ನು ಸಹಿಸಲಾರಿರಿ. ವಿರೋಧಿಗಳ ಮಾತನ್ನು ನೀವು ನಿರ್ಲಕ್ಷಿಸುವಿರಿ. ನಿಮ್ಮ ಉದ್ಯೋಗದ ತೊಂದರೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ. ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗುವುದು. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗದು.

-ಲೋಹಿತ ಹೆಬ್ಬಾರ್ – 8762924271 (what’s app only)