AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಯವರಿಗೆ ಆರ್ಥಿಕ ವಿಚಾರವಾಗಿ ದಾಂಪತ್ಯದಲ್ಲಿ ವಿರಸ ಉಂಟಾಗಬಹುದು

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಕಾರ್ಯ ಆರಂಭಿಸುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಇಂದು ಡಿಸೆಂಬರ್ 07 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ರಾಶಿಯವರಿಗೆ ಆರ್ಥಿಕ ವಿಚಾರವಾಗಿ ದಾಂಪತ್ಯದಲ್ಲಿ ವಿರಸ ಉಂಟಾಗಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 07, 2023 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 07) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದಶಮಿ, ನಿತ್ಯನಕ್ಷತ್ರ: ಹಸ್ತಾ, ಯೋಗ: ಆಯುಷ್ಮಾನ್​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:13 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ 08:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 10:59ರ ವರೆಗೆ.

ಧನು ರಾಶಿ : ನಿಮಗೆ ವಿಶ್ವಾಸದ ಕೊರತೆ ಕಾಣಿಸಿಕೊಳ್ಳುವುದು. ಆಪ್ತರು ಅದನ್ನು ಪೂರ್ಣ ಮಾಡುವರು. ಸಾಹಿತ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಹದ ತಪ್ಪಿದ ಆರೋಗ್ಯವು ವ್ಯಾಧಿಯಾಗಿ ನಿಮ್ಮನ್ನು ದುರ್ಬಲ ಮಾಡೀತು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ಬೀಳಿಸಿಕೊಳ್ಳುವ ಕಲೆ ನಿಮಗೆ ತಿಳಿದುಬರುವುದು. ವ್ಯರ್ಥ ಓಡಾಟದಿಂದ ಬೇಸರವಾಗುವುದು. ನಿಮ್ಮ ಇಂದಿನ ತುರ್ತು ಕಾರ್ಯಗಳನ್ನು ಮುಂದೂಡುವಿರಿ. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಇಂದು ಯಾರ ಮಾತನ್ನೂ ಪೂರ್ಣವಾಗಿ ನಂಬಲು ಆಗದು. ಲಾಭ ಬರುವ ಕಾರ್ಯದಲ್ಲಿ ಮಾತ್ರ ಇಚ್ಛೆಯು ಇರುವುದು. ಮನಸ್ಸಿನ ಚಾಂಚಲ್ಯವನ್ನು ಧ್ಯಾನದಿಂದ ಸರಿ ಮಾಡಿಕೊಳ್ಳಿ. ತಪ್ಪನ್ನು ಮರೆಮಾಚುವಿರಿ. ಆದರೂ ಗೊತ್ತಾಗುವುದು.

ಮಕರ ರಾಶಿ : ಗೊಂದಲದಿಂದ ನಿಮಗೆ ಯಾವುದನ್ನೂ ಪೂರ್ಣವಾಗಿ ಸ್ವೀಕರಿಸಲಾಗದು. ವಿವಾಹದ ಬಗ್ಗೆ ನಿಮಗೆ ತಿರಸ್ಕಾರದ ಭಾವವು ಇರುವುದು. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಯಂತ್ರಗಳ ಮಾರಾಟದಿಂದ ಹೆಚ್ಚಿನ ಲಾಭಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಇರಲಿದೆ. ಪಾಲಿಗೆ ಬಂದಿದ್ದು ಪಂಚಾಮೃತವಾಗಲಿದೆ. ನೆರೆಹೊರೆಯರ ಜೊತೆ ವಾಗ್ವಾದ‌ ಮಾಡುವಿರಿ. ಬಾಡಿಗೆ ಮನೆಯ ಮಾಲಿಕರಿಂದ ನಿಮಗೆ ಏನಾದರೂ ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇದೆ.‌ ಉದ್ಯೋಗದ ಮಿತ್ರರು ಇಂದು ಸಿಗವರು. ಅಂಗಳವನ್ನೇ ಹಾರಲು ಬಾರದವ ಆಕಾಶವನ್ನು ಹಾರಿದಂತೆ ಆಗುವುದು.

ಕುಂಭ ರಾಶಿ : ಪರಸ್ಥಳದ ನೋವನ್ನು ನೀವು ನಿಮ್ಮವರ ಜೊತೆ ಹಂಚಿಕೊಳ್ಳುವಿರಿ. ಅಧಿಕಾರಿಗಳ ಜೊತೆ ಸಭ್ಯ ವರ್ತನೆ ಇರಲಿ. ಆರ್ಥಿಕ ವಿಚಾರವಾಗಿ ದಾಂಪತ್ಯದಲ್ಲಿ ವಿರಸ ಉಂಟಾಗಬಹುದು. ವಿದೇಶ ಪ್ರಯಾಣಕ್ಕೆ ನೀವು ಸಮಯವನ್ನು ಹೊಂದಿಸಿಕೊಳ್ಳುವಿರಿ. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು. ವಿದೇಶೀ ವ್ಯವಹಾರದಿಂದ ನಿಮಗೆ ಲಾಭವಿದೆ. ಕುಟುಂಬದಲ್ಲಿ ನೆಮ್ಮದಿಯ ತಂದುಕೊಳ್ಳುವಿರಿ. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಇನ್ನೊಬ್ಬರ ಕ್ಷೇಮ ಭಾಗಿಯಾಗುವಿರಿ. ಹಣದ ಮೂಲವನ್ನು ಹುಡುಕುವ ಪ್ರಯತ್ನವು ಪೂರ್ಣ ಫಲಿಸದು. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ ಮುಗಸಿಕೊಳ್ಳುವಿರಿ. ಬಹಳ ದಿನಗಳ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವುದು.‌ ಸಾಹಸದ‌ ಕಾರ್ಯಗಳಲ್ಲಿ ಜಾಗರೂಕತೆ ಅವಶ್ಯಕ.

ಮೀನ ರಾಶಿ : ಇಂದು ನಮಗಾಗುವ ಅಲ್ಪ‌ಲಾಭವೂ ಅನಂತ ಫಲವನ್ನು ಕೊಡಬಹುದು. ಆರೋಗ್ಯದ ಏರಿಳಿತವು ನಿಮ್ಮ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುವುದು. ನಿಮ್ಮ ಸ್ಥಿರಾಸ್ತಿಯ ಮಾರಾಟಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಬಂಧುಗಳು ಮನೆಗೆ ಬಂದ ಕಾರಣ ಖರ್ಚು ಹೆಚ್ಚಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಟದಿಂದ ನೀವು ಸಿಟ್ಟಾಗುವಿರಿ. ನಿಮ್ಮ ನಿರೀಕ್ಷೆಯ ಗುರಿಯನ್ನು ತಲುಪುವುದು ಕಷ್ಟವಾಗಬಹುದು. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಯಾರನ್ನೂ ಜೊತೆಗೆ ಕರೆದುಕೊಂಡು ಹೋಗುವ ಅಭ್ಯಾಸವಿಲ್ಲ.‌ ಒಂಟಿಯಾಗಿ ಏನನ್ನೂ ಮಾಡಬಲ್ಲಿರಿ. ಬಂಧುಗಳ ಸಲಹೆಯು ನಿಮ್ಮನ್ನು ದಾರಿ ತಪ್ಪಿಸಬಹುದು. ಆರ್ಥಿಕ ವ್ಯವಹಾರವನ್ನು ಮೊದಲೇ ಸರಿಮಾಡಿಕೊಳ್ಳುವುದು ಉತ್ತಮ.

-ಲೋಹಿತಶರ್ಮಾ – 8762924271 (what’s app only)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ