AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಸ್ತ್ರೀಯರಿಂದ ಲಾಭ ಪಡೆಯುವಿರಿ, ಸಮಯ ವ್ಯರ್ಥ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ಸ್ತ್ರೀಯರಿಂದ ಲಾಭ ಪಡೆಯುವಿರಿ, ಸಮಯ ವ್ಯರ್ಥ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 02, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 02 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತೃತೀಯಾ / ಚತುರ್ಥೀ, ನಿತ್ಯನಕ್ಷತ್ರ: ಭರಣೀ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 20ಕ್ಕೆ, ರಾಹು ಕಾಲ ಬೆಳಿಗ್ಗೆ 07:53 – 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:52 – 12:22ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:52 – 03:21ರ ವರೆಗೆ.

ಮೇಷ ರಾಶಿ: ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ತ್ರೀಯರು ನಿಮ್ಮ ಮೇಲೆ ಏನಾದರೂ ಆರೋಪ ಮಾಡಿಯಾರು. ಪಕ್ಷಪಾತ ಮಾಡುವುದು ಬೇಡ. ಸಂಬಂಧಿಸಿದ ವಿಚಾರಕ್ಕೆ ನಿಮ್ಮ ಸಮರ್ಥನೆ ಇರಲಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ನಿಮ್ಮ ಮನಸ್ಸು ಬಹಳ ದುರ್ಬಲವಾಗಿದ್ದು ಬಲಮಾಡಿಕೊಳ್ಳು ಮಾರ್ಗವನ್ನು ಕಂಡುಕೊಳ್ಳಿ. ವ್ಯಾಪಾರದಲ್ಲಿ ಲಾಭವನ್ನೇ ಗಮನದಲ್ಲಿಟ್ಟು ಉಳಿದುದನ್ನು ಮರೆಯುವಿರಿ. ನಿಮ್ಮ ಬಗ್ಗೆ ಅನುಕಂಪ ಬರುವುದು. ಪ್ರೀತಿಸಿದವರು ನಿಮಗೆ ಸಮಯ ಕೊಡದೇ ಬೇಸರಿಸಿಕೊಳ್ಳುವಿರಿ. ಆಪ್ತರನ್ನು ಬಿಟ್ಟುಕೊಡಲು ಮನಸ್ಸು ಒಪ್ಪದು. ಕುಟುಂಬದ ಭಿನ್ನಾಭಿಪ್ರಾಯವು ಸರಿಯಾಗುವುದು. ತಾಯಿಯು ನಿಮ್ಮ ಪರವಾಗಿ ನಿಲ್ಲುವಳು. ವಾಹನ ಖರೀದಿಸುವ ಯೋಚನೆ ಮಾಡವಿರಿ. ಸುಮ್ಮನೇ ಕುಳಿತರೆ ನಕಾರಾತ್ಮಕ ಯೋಚನೆಯು ಬರುವುದು.

ವೃಷಭ ರಾಶಿ: ಸ್ತ್ರೀಯರಿಂದ ಲಾಭವನ್ನು ಪಡೆಯುವಿರಿ. ಇಂದಿನ‌ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ‌ ಉತ್ಸಾಹವನ್ನು ಜಾಗರೂಕಗೊಳಿಸುವುದು. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ‌ ಸಮಯವನ್ನು ವ್ಯರ್ಥ ಮಾಡುವಿರಿ. ಮಾತಿನಲ್ಲಿ ಮಾರ್ದವವು ಇಲ್ಲವಾಗುವುದು. ಅತಿಯಾದ ಭಾರದ ವಸ್ತುಗಳನ್ನು ಒಯ್ಯುವಿರಿ. ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸುವುದು ಬೇಡ. ಅಸಾಮಾನ್ಯ ವಿಚಾರವನ್ನು ಸರಳೀಕರಿಸುವಿರಿ. ಇಂದು ಕೆಲವು ವಿಚಾರಕ್ಕೆ ನಿಮ್ಮ ಆಲಸ್ಯವು ವರವಾಗುವುದು. ಉದ್ಯೋಗದ ಸ್ಥಳದಲ್ಲಿ ಯಾರ ಜೊತೆಯೂ ಕಲಹ ಮಾಡಿಕೊಳ್ಳುವುದು ಬೇಡ. ನಿಮ್ಮ ಪರಿಸ್ಥಿತಿಯನ್ನು ಆಪ್ತರಿಗೆ ಹೇಳಿ ಸಮಾಧಾನ ಪಡುವಿರಿ. ಯಾವ ಕಾರ್ಯಕ್ಕೂ ಧೈರ್ಯದಿಂದ ಮುನ್ನುಗ್ಗುವುದು ಬೇಡ.

ಮಿಥುನ ರಾಶಿ: ನಿರೀಕ್ಷಿತ ಸುದ್ದಿಯಿಂದ ನಿಮ್ಮಲ್ಲಿ ಖುಷಿಯು ಹೆಚ್ಚಾಗುವುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೋಪವು ಹೆಚ್ಚಾಗಿರುವುದು. ದೇಹಾರೋಗ್ಯವು ಸರಿಯಾಗಿ ಇಲ್ಲದ ಕಾರಣ ಮನಸ್ಸು ಸರಿಯಾಗಿ ಕೆಲಸ ಮಾಡದು. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಕಾಡುವುದು. ಉದ್ಯೋಗವು ಸಾಕು ಎನಿಸಬಹುದು.‌ ಅತಿಯಾದ ಒತ್ತಡದಿಂದ ಹೊರಬರಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಓದು ಹೆಚ್ಚು ಫಲಿಸುವುದು. ಅನಗತ್ಯ ಓಡಾಟದಿಂದ ನಿಮಗೆ ಬೇಸರವಾಗಲಿದೆ. ಸಂಗಾತಿಯನ್ನು ನೀವು ಇಂದು ದೂರ ಮಾಡಿಕೊಳ್ಳುವಿರಿ. ಒಂಟಿಯಾಗಿ ಇರಲು‌ ನಿಮಗೆ ಆಗದು.

ಕಟಕ ರಾಶಿ: ಸಮಯೋಚಿತ ನಿರ್ಧಾರಕ್ಕೆ ಎಲ್ಲರೂ ತಲೆದೂಗುವರು. ಪ್ರಭಾವೀ ವ್ಯಕ್ತಿಗಳಿಂದ ಇಂದಿನ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೆಟ್ಟವರ ಸಹವಾಸ ಸಿಗುವ ಸಾಧ್ಯತೆ ಇದೆ. ನಂಬಿಕೆಯನ್ನು ಕಳೆದುಕೊಳ್ಳಬಹುದು. ನಿಮಗೆ ಸಂಬಂಧಿಸದ ವಿಚಾರದಲದಲಿ ಹೆಚ್ಚು ಮಾತನಾಡುವಿರಿ. ಸಿಕ್ಕಿದ್ದನ್ನು ಜೋಪಾನವಾಗಿ ಇಟ್ಟುಕೊಳ್ಳುವ ಬಗ್ಗೆ ಚಿಂತಿಸುವುದು ಉತ್ತಮ. ನಿಮಗೆ ಅನೇಕ ವಿಚಾರಗಳಿಗೆ ಸಾಂತ್ವನ ಸಿಗಬಹುದು. ಸ್ತ್ರೀಯರು ಹೆಚ್ಚಿನ ಸಮಯವನ್ನು ಸೌಂದರ್ಯ ವರ್ಧನೆಗೆ ಮೀಸಲಿಡುವಿರಿ. ಹೆಚ್ಚು ಆಡಂಬರವನ್ನು ನೀವು ಇಷ್ಟಪಡುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಅಧಿಕವಾಗಿ ಖರೀದಿಸುವಿರಿ. ಸ್ವೇಚ್ಛೆಯಿಂದ ಇಂದಿನ ವ್ಯವಹಾರವು ಇರುವುದು.

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ