Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 03 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:14 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:17 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ.

ಮೇಷ ರಾಶಿ: ಆಪ್ತರನ್ನು ದೂರ ಮಾಡಿಕೊಂಡು ಸಂಕಟಪಡಬೇಕಾದೀತು. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಎದ್ದು ಕಾಣುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡಿ. ವಾಹನದ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಇರಲಿದೆ. ಭೋಜನದ ವ್ಯತ್ಯಾಸದಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಅಭ್ಯಾಸ ಇಲ್ಲದ ಆಹಾರವನ್ನು ಸೇವಿಸುವುದು ಬೇಡ. ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ತಾಳ್ಮೆಯಿಂದ ಇದ್ದಷ್ಟೂ ನಿಮಗೆ ಹೆಚ್ಚು ಲಾಭವು ಸಿಗಲಿದೆ. ಅತಿಯಾಗಿ ಯಾರನ್ನೂ ನಂಬುವುದು ಬೇಡ. ನೋವನ್ನು ನುಂಗಲು ಕಷ್ಟವಾದೀತು.‌ ನೆನಪುಗಳು ನಿಮ್ಮನ್ನು ಕಾಡಬಹುದು.

ವೃಷಭ ರಾಶಿ: ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಚಂದದಲ್ಲಿ ಹೊಗಳುವರು. ಪುಣ್ಯಸ್ಥಳಕ್ಕೆ ಹೋಗುವ ಮನಸ್ಸಾಗುವುದು. ನಿಮ್ಮ ದಾರಿಯನ್ನು ನೀವು ಸುಗಮ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ನೀವು ಯಾರ ಸಹಕಾರವನ್ನೂ ಬಯಸದೇ ಇರುವಿರಿ. ವೈದ್ಯ ವೃತ್ತಿಯನ್ನು ಇಷ್ಟ ಪಡುವವರು ಯಶಸ್ಸನ್ನು ಗಳಿಸುವರು. ನಿಮಗೆ ಎಷ್ಟೋ ವಿಚಾರವನ್ನು ಕಲಿಯಬೇಕು ಎಂಬ ಆಸೆಯು ಅತಿಯಾಗಲಿದೆ. ಹೊಸ ಉದ್ಯೋಗಕ್ಕೆ ಪ್ರವೇಶ ಪಡೆಯುವಿರಿ. ನಿಮ್ಮ ಅನುಕೂಲವನ್ನು ನೋಡಿ ಖರ್ಚು ಮಾಡುವುದು ಉತ್ತಮ. ಯಾರಿಗಾದರೂ ನಿಮ್ಮ ವರ್ತನೆಯು ಇಷ್ಟವಾಗದೇ ಹೋಗಬಹುದು. ಅದಕ್ಕಾಗಿ ಆತಂಕ ಪಡುವ ಅವಶ್ಯಕತೆ ಇರದು.

ಮಿಥುನ ರಾಶಿ: ನೀವು ಪಡೆದುಕೊಂಡ ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ನಿಮಗೆ ಶಂಕೆ ಉಂಟಾಗಬಹುದು. ಹಣದ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದು ಬೇಡ. ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಹಾಯವನ್ನು ಪಡೆಯುವಿರಿ. ಒಂದಿಷ್ಟು ಕಾರ್ಯದಲ್ಲಿ ಒತ್ತಡವಿರಲಿದೆ. ನಿಮಗೆ ನಿಮ್ಮದೇ ಆದ ಬಳಗವು ಇರಲಿದ್ದು ಅವರ ಜೊತೆ ಸಮಯವನ್ನು ಕಳೆಯುವಿರಿ. ಯಾರು ಏನೇ ಅಂದರೂ ನಿಮ್ಮ ನಿರ್ಧಾರವನ್ನು ಬದಲಿಸಿಕೊಳ್ಳಲು ಹೋಗುವುದಿಲ್ಲ‌. ಆರೋಗ್ಯವು ಸರಿಯಾಗಲು ಸಮಯವನ್ನು ಕಾಯುತ್ತಿರುವಿರಿ.

ಕರ್ಕ ರಾಶಿ: ಎಲ್ಲವೂ ವಿಧಿಯ ನಿಯಮದಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖವು ಹೆಚ್ಚಾಗುವುದು. ನಿಮ್ಮರನ್ನು ನೀವು ದೂರ ಮಾಡಿಕೊಳ್ಳುವಿರಿ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನೀವು ನಿರಾಕರಿಸುವಿರಿ.‌ ಪ್ರೇಮ ವ್ಯವಹಾರವನ್ನು ತಿಳಿಸಲು ನೀವು ಭಯಪಡುವಿರಿ. ವಾಹನ ಚಾಲನೆಯಲ್ಲಿ ನುರಿತವರಾದರೂ ಕಾಲವು ಅದಾವುದನ್ನೂ ಕೇಳದು.‌ ನಿಮ್ಮ ನೇರ ನುಡಿಗಳು ಇನ್ನೊಬ್ಬರಿಗೆ ನೋವನ್ನು ಕೊಟ್ಟೀತು. ಒಂದೇ ಕೆಲಸವನ್ನು ಬಹಳ ದಿನಗಳ ವರೆಗೆ ಮಾಡುವಿರಿ. ಕೆಲವನ್ನು ಸುಮ್ಮನೇ ಮನಸ್ಸಿನಲ್ಲಿ ಅಂದುಕೊಂಡು ಕಾಲಹರಣ ಮಾಡುವಿರಿ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ