Daily Horoscope: ಸ್ತ್ರೀಯರಿಗೆ ಮನೆ ಕೆಲಸವು ಸಾಕೆನಿಸಬಹುದು, ಸುತ್ತಾಡಲು ಮನ ಬಯಸುವುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಸ್ತ್ರೀಯರಿಗೆ ಮನೆ ಕೆಲಸವು ಸಾಕೆನಿಸಬಹುದು, ಸುತ್ತಾಡಲು ಮನ ಬಯಸುವುದು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 04 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 11:03 ರಿಂದ 12 :38ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:28ರ ವರೆಗೆ.

ಮೇಷ: ಏಕಾಂಗಿಯಾಗಿ ಇರಲು ನೀವು ಬಯಸಬಹುದು. ಆಹಾರ ವ್ಯತ್ಯಾಸದಿಂದ ಅನಾರೋಗ್ಯವು ಕಾಡಬಹುದು. ಬಯಸಿದ್ದನ್ನು ಪಡೆಯಲು ಹೆಚ್ಚು ಪ್ರಯತ್ನ ಪಡಬೇಕಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಪುಣ್ಯಸ್ಥಳಗಳಿಗೆ ಹೋಗುವ ಮನಸ್ಸಿದ್ದರೂ ಕಾರ್ಯದ ಒತ್ತಡಕ್ಕೆ ಹೋಗಲಾಗದು. ಕಳೆದುಕೊಂಡಿದ್ದನ್ನು ಪಡೆದುಕೊಳ್ಳಲು ನೀವು ಬೇರೆ ಮಾರ್ಗಗಳನ್ನು ಅನುಸರಿಸುವಿರಿ. ಹೆಚ್ಚಿನ ಕೆಲಸವನ್ನು ಮಾಡಲು ಆಸಕ್ತಿಯ ಕೊರತೆ ಇರಲಿದೆ. ಸಿಕ್ಕ ಸಂಪತ್ತಿನ್ನು ಜೋಪಾನ ಮಾಡಿಕೊಳ್ಳಿ.

ವೃಷಭ: ಅಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗಬಹುದು. ಸಂಗಾತಿಯ ಜೊತೆ ವಾದಕ್ಕೆ ಇಳಿಯುವಿರಿ. ಕಛೇರಿಯಲ್ಲಿ ಆದ ಜಗಳವು ಉದ್ಯೋಗವನ್ನು ಕಳೆದುಕೊಳ್ಳುವ ಹಂತಕ್ಕೆ ಹೋಗಬಹುದು.‌ ಸಂಗಾತಿಯನ್ನು ನೀವು ಹಳೆಯ ಘಟನೆಗಳ ಜೊತೆಗೆ ಟೀಕಿಸಬಹುದು. ಜೀವನೋಪಾಯಕ್ಕಾಗಿ ಹೆಚ್ಚು ದುಡಿಮೆಯನ್ನು ಮಾಡಬೇಕಾದೀತು. ಇಷ್ಟವಿಲ್ಲದ ಕಾರ್ಯವನ್ನು ಮಾಡಲು ನೀವು ಹಿಂಜರಿಯುವಿರಿ. ತಾಯಿಯ ಜೊತೆ ಎಲ್ಲವನ್ನೂ ಹೇಳಬೇಕು ಎನಿಸಬಹುದು.

ಮಿಥುನ: ನಿಮ್ಮ ಕೆಲಸಕ್ಕೆ ಎಲ್ಲರಿಂದ ಪ್ರಶಂಸೆ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ಅಸ್ತಿತ್ವವನ್ನು ತೋರಿಸುವರು. ಸಾಮಾಜಿಕ ಕಾರ್ಯಗಳನ್ನು ಮಾಡಲು ನೀವು ಬಹಳ ಉತ್ಸಾಹದಿಂದ ಇರುವಿರಿ. ಮನಸ್ಸಿನಲ್ಲಿ‌ ಒಂದಿಲ್ಲೊಂದು ಭೀತಿಯು ಕಾಡಬಹುದು. ಅತಿಯಾದೆ ಆಸೆಯಿಂದ ನಿಮಗೆ ದುಃಖವು ಬರಬಹುದು. ಕಲೆಯ ವಿಷಯದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಬಗ್ಗೆ ನೀವು ಅವಲೋಕನ‌ ಮಾಡಿಕೊಳ್ಳುವ ಅಗತ್ಯ ಇರಲಿದೆ. ಎಲ್ಲವನ್ನೂ ನೀವು ಅತಿಯಾಗಿ ವೈಭವೀಕರಿಸುವಿರಿ. ಅದರಷ್ಟಕ್ಕೆ ಬಿಡುವುದು ಒಳ್ಳೆಯದು. ಸಿಗಬೇಕಾದ ಕಾಲಕ್ಕೆ ಸಿಗುವುದು ಎಂಬ ನಂಬಿಕೆ ಇರಲಿ.

ಕರ್ಕ: ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎನಿಸಬಹುದು. ಕೆಲಸದಲ್ಲಿ ನಿಮಗೆ ಬೆಂಬಲವು ಕಡಿಮೆ ಸಿಗಬಹುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಸುತ್ತಾಡುವ ಮನಸ್ಸಾಗುವುದು. ಬಂಧುಗಳ ಬಗ್ಗೆ ನಿಮಗೆ ಅಷ್ಟಾಗಿ ಪ್ರೀತಿ ಇರದು. ಅಸಭ್ಯ ಮಾತುಗಳು ನಿಮ್ಮ ನಡವಳಿಕೆಯನ್ನು ಹೇಳೀತು. ಅಧಿಕಾರವು ಬರುವಹಾಗೆ ಇದ್ದರೂ ಅದನ್ನು ತಪ್ಪಿಸಬಹುದು. ಸರಿಯಾದ ಆಲೋಚನೆಯನ್ನು ಮಾಡದೇ ಕೆಲಸವನ್ನು ಮಾಡಿದ ಕಾರಣ ತೊಂದರೆಗಳು ಬರಬಹುದು. ನಿಮ್ಮನ್ನು ಹೊಗಳಿಕೊಳ್ಳುವುದು ಸರಿ ಕಾಣಿಸದು. ಅಜ್ಜನ‌ ಪ್ರೀತಿಯು ನಿಮಗೆ ಸಿಗಬಹುದು. ‌ಮೇಲ್ನೋಟಕ್ಕೇ ನಿಮ್ಮ ಸ್ವಭಾವದ ಅರಿವಾಗಬಹುದು.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು