Horoscope: ಈ ರಾಶಿಯವರಿಗೆ ತಾವು ಮಾಡುತ್ತಿರುವ ವೃತ್ತಿಯು ಬೇಸರ ತರಿಸಬಹುದು, ಲೆಕ್ಕಾಚಾರದ ವಿಚಾರದಲ್ಲಿ ಎಚ್ಚರವಾಗಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ತಾವು ಮಾಡುತ್ತಿರುವ ವೃತ್ತಿಯು ಬೇಸರ ತರಿಸಬಹುದು, ಲೆಕ್ಕಾಚಾರದ ವಿಚಾರದಲ್ಲಿ ಎಚ್ಚರವಾಗಿರಿ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 04 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುನರ್ವಸೂ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:50 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:30 ರಿಂದ 07:56ರ ವರೆಗೆ.

ಮೇಷ ರಾಶಿ: ಸಾರ್ವಜನಿಕವಾಗಿ ಇರಲು ನಿಮಗೆ ಭಯವಾಗಬಹುದು. ಸ್ತ್ರೀಯರ ಜೊತೆ ವೈರವನ್ನು ಕಟ್ಟಿಕೊಳ್ಳಬೇಕಾದೀತು. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ಧಾರ್ಮಿಕ ಮುಖಂಡರ ಭೇಟಿಯಾಗುವುದು.‌ ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ‌ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು. ಏನಾದರೂ ಕೃಷಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ.

ವೃಷಭ ರಾಶಿ: ಸತ್ಪಾತ್ರರಿಗೆ ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ. ಯಾರದೋ ಮಾತಿನಿಂದ ಹೂಡಿಕೆ ಮಾಡಿ. ಆಧಿಕಾರದ ಆಮಿಷಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ನೀವು ನಂಬಿಕೆ ಇರುವಲ್ಲಿ ಅಪನಂಬಿಕೆ ತೋರುವುದು ಉಚಿತವಲ್ಲ.

ಮಿಥುನ ರಾಶಿ: ಸರ್ಕಾದ ಕೆಲಸವನ್ನು ಆಪ್ತ ಪ್ರಭಾವೀ ವ್ಯಕ್ತಿಗಳಿಂದ ಮಾಡಿಸಿಕೊಳ್ಳುವಿರಿ. ಅಧ್ಯಾತ್ಮದ ವಿಚಾರದಲ್ಲಿ ಆಸಕ್ತಿಯು ಹೆಚ್ ಅಗುವುದು. ಸುಮ್ಮನೇ ದೇಹಾಯಾಸವನ್ನು ಮಾಡಿಕೊಳ್ಳುವಿರಿ. ನೆರೆಯವರ ಜೊತೆ ಕಲಹವು ಬೇಡ. ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ನಿಮ್ಮ ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ನೆಮ್ಮದಿ. ಒಂಟಿಯಾಗಿ ಪ್ರಯಾಣ ಮಾಡುವುದು ಬೇಡ. ಸ್ವಂತ ಕೆಲಸಕ್ಕೆ ನೀವು ಸಮಯವನ್ನು ಕೊಡುವಿರಿ.

ಕಟಕ ರಾಶಿ: ನೂತನ ವೃತ್ತಿಪರರಿಗೆ ಉತ್ಸಾಹವು ಅಧಿಕವಾಗಿ ಇರಲಿದೆ. ಲೆಕ್ಕಾಚಾರದ ವಿಚಾರದಲ್ಲಿ ನಿಮಗೆ ಅಚ್ಚರಿ ಇರುವುದು. ಸತ್ಯವನ್ನು ನೋವಾಗದಂತೆ ತಿಳಿಸಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಿಸಬಹುದು. ಇಂದು ಸರ್ಕಾರಿ ನೌಕರರು ಅಧಿಕ‌ ಕಾರ್ಯಗಳ‌ ಕಡೆ ಗಮನ ಹರಿಸಬೇಕಾದೀತು. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ‌ ಮಾಡಿ. ಹೊಸ‌ ಉದ್ಯಮಕ್ಕೆ ನಿಮಗೆ ಧೈರ್ಯ ಸಾಲದು. ನಿಮ್ಮ ತಿಳಿವಳಿಕೆಯಿಂದ ಬರುವ ತೊಂದರೆಯನ್ನು ಪರಿಹರಿಸಿಕೊಳ್ಳುವಿರಿ. ಈ ದಿನದ ಕೊನೆಯಲ್ಲಿ ನಿಮ್ಮ ಆರೋಗ್ಯವು ಹದ ತಪ್ಪಬಹುದು. ವಾಹನ ಚಲಾವಣೆಯಲ್ಲಿ ನಿಯಂತ್ರಣ ತಪ್ಪಬಹುದು.

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು