Daily Horoscope: ನಿಮ್ಮ ಸರಳತೆಯ ಬಗ್ಗೆ ಟೀಕಿಸಬಹುದು, ಯಾರನ್ನೂ ದ್ವೇಷಿಸುವ ಮನೋಭಾವ ಬೇಡ‌

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ನಿಮ್ಮ ಸರಳತೆಯ ಬಗ್ಗೆ ಟೀಕಿಸಬಹುದು, ಯಾರನ್ನೂ ದ್ವೇಷಿಸುವ ಮನೋಭಾವ ಬೇಡ‌
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 05 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶೋಭನ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 09: 28 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:49ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:18 ರಿಂದ 07:53ರ ವರೆಗೆ.

ಮೇಷ ರಾಶಿ: ಆಪ್ತರ ಹಿತವಚನವು ನಿಮ್ಮ ಮನಸ್ಸಿಗೆ ಬಾರದು. ಸರ್ಕಾರದ ಉದ್ಯೋಗಕ್ಕೆ ನಿಮಗೆ ಅವಕಾಶವು ಬರಬಹುದು. ಸಂಗಾತಿಯ ಮಾತಿಗೆ ಎದುರು ಮಾತನಾಡುವುದು ಕಷ್ಟವಾದೀತು. ಅಲ್ಪ ವಸ್ತುವಿನಿಂದ ಸಂತೋಷವಾಗಿ ಇರುವಿರಿ. ದಾನವನ್ನು ಮಾಡುವ ಮನಸ್ಸು ಬರುವುದು. ಬಂಧುಗಳ ವಿಚಾರದಲ್ಲಿ ನಿಮಗೆ ಸಂತೃಪ್ತಿ ಇರದು. ಸ್ತ್ರೀಯರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಮನೆಯಲ್ಲಿ ವಿಶ್ರಾಂತಿಯನ್ನು ಪಡೆಯಬೇಕಾಗುವುದು. ಕೃಷಿಯಲ್ಲಿ ಆಸಕ್ತಿಯು ಇರಲಿದೆ. ಸಾಕಷ್ಟು ಪ್ರಯತ್ನದ ಫಲವಾಗಿ ನಿಮ್ಮ ದಾರಿ ಸುಗಮವಾಗುವುದು. ಕಾರ್ತಿಕೇಯನ ಪ್ರಾರ್ಥನೆಯಿಂದ ಮನೋರಥಗಳನ್ನು ಈಡೇರುವುದು.

ವೃಷಭ ರಾಶಿ: ಸಾವಧಾನತೆಯಿಂದ ನಿಮಗೆ ಲಾಭವಿದೆ. ಮನಸ್ಸನ್ನು ಪ್ರಶಾಂತವಾಗಿ ಇರಿಸಿಕೊಂಡು ಸುಖಿಸುವಿರಿ. ನಾಟಕೀಯ ಮನೋಭಾವವು ನಿಮಗೆ ಹಿಡಿಸದು. ಮಗಳಿಗೆ ತಂದೆಯಿಂದ ಸಹಾಯವು ಸಿಗಲಿದೆ. ಹಣಕಾಸಿನ ಗಳಿಕೆಗೆ ಹೆಚ್ಚು ಸಮಯವನ್ನು ಕೊಡುವಿರಿ. ಅನಾರೋಗ್ಯದಿಂದ ನೀವು ಗುಣಮುಖರಾದರೂ ಅಂಶವು ನಿಮ್ಮನ್ನು ಹೊರ ಬರಲು ಬಿಡದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಅಧಿಕವಾದ ಆಸಕ್ತಿಯು ಬರಲಿದೆ. ಪ್ರಯಾಣವನ್ನು ಅನಿವಾರ್ಯವಿದ್ದರಷ್ಟೇ ಮಾಡಿ.‌ ಅನಾರೋಗ್ಯವನ್ನು ಔಷಧೀಯ ಮೂಲಕ ಕಡಿಮೆ ಮಾಡಿಕೊಳ್ಳಿ. ಗುರುಚರಿತ್ರೆಯನ್ನು ಪಠಿಸಿ.

ಮಿಥುನ ರಾಶಿ: ನಿಮ್ಮ ಸರಳತೆಯನ್ನೂ ಟೀಕಿಸಬಹುದು. ಯಾರನ್ನೂ ದೂಷಿಸುವ ಮನೋಭಾವ ಬೇಡ.‌ ತಪ್ಪನ್ನು ತಿದ್ದಿಕೊಳ್ಳುವ ಮನಸ್ಸು ಒಳ್ಳೆಯದೇ. ದೇಹವನ್ನು ದಂಡಿಸುವಿರಿ. ಪಾಲುದಾರಿಕೆಯಲ್ಲಿ ನಿಮ್ಮ ಮಾತೇ ಅಂತಿಮವಾಗಿ ನಡೆಯುವುದು. ಇನ್ನೊಬ್ಬರಿಗೆ ಹಣವನ್ನು ಕೊಡುವಾಗ ವ್ಯಕ್ತಿಯನ್ನು ನೋಡಿಕೊಳ್ಳಿ. ಸುಖಕ್ಕೆ ಬೇಕಾದ ಮನಃಸ್ಥಿತಿಯು ಇರಲಿದೆ. ಎಲ್ಲವೂ ನಿಮ್ಮ ಮೂಗಿನ‌ ನೇರಕ್ಕೆ ನಡೆಯದು. ಪ್ರೇಮ ಸಂಬಂಧದಿಂದ ನಿಮಗೆ ಸ್ವಲ್ಪ ಹಾಯೆನಿಸಬಹುದು. ಕೆಲಸವನ್ನು ಸರಳ ಮಾಡಿಕೊಳ್ಳುವುದು ಉಪಯೋಗವಾದೀತು. ನಿಮಗೆ ಆಗುವಂಥದ್ದನ್ನೇ ಮಾಡಿ.

ಕಟಕ ರಾಶಿ: ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಪರಾಜಯವು ಆಗಬಹುದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ಉಪಾಯವನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ನಿಮ್ಮೆದುರೇ ಆಡಿಕೊಳ್ಳಬಹುದು. ಶ್ರಮಕ್ಕೆ ತಕ್ಕುದಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯುವ ಮನಸ್ಸು ಆಗಬಹುದು. ಸಹೋದರನಿಂದ ಅರ್ಥಿಕ ಸಹಾಯವು ಸಿಗಬಹುದು. ತಂದೆಯ ಆರೋಗ್ಯದ ಬಗ್ಗೆ ಗಮನವಿರಲಿ. ಸತ್ಯವನ್ನು ಹೇಳಲು ಅಪಾಯ ಬರಬಹುದು ಎಂದು ಹಿಂದೇಟು ಹಾಕುವಿರಿ. ಮನೆಯ ಕೆಲಸದಲ್ಲಿ ಹೆಚ್ಚು ಮಗ್ನರಾಗುವಿರಿ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು