Horoscope: ಗೆಳತಿಯ ಜೊತೆ ಆತ್ಮೀಯ ಒಡನಾಡವನ್ನು ಇಟ್ಟುಕೊಳ್ಳುವಿರಿ, ಸಂಯಮ ಮುಖ್ಯ
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 05 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:35 ರಿಂದ 06:02 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:16 ರಿಂದ 13:43 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:09 ರಿಂದ 04:35ರ ವರೆಗೆ.
ಮೇಷ ರಾಶಿ: ಸುಮ್ಮನೇ ಆಡಿದ ಮಾತಿನಿಂದ ವಾಗ್ವಾದವು ಆರಂಭವಾಗಬಹುದು. ಕೃಷಿಗೆ ಸಂಬಂಧಿಸಿದ ಚಟುವಟಿಕೆ ಬಹಳ ವೇಗದ ರೂಪದಲ್ಲಿ ನಡೆಯಬಹುದು. ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಇಂದು ನಿಮ್ಮಲ್ಲಿ ಕ್ರೀಡಾ ಮನೋಭಾವವು ಇಲಿದೆ. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ ನಿರ್ಧಾರವನ್ನು ಮಕ್ಕಳು ಒಪ್ಪದೇ ಇರುವುದು ನಿಮಗೆ ಕೋಪಬರಬಹುದು. ಸೌಂದರ್ಯದ ವಿಚಾರದಲ್ಲಿ ಹೆಚ್ಚು ಆಸಕ್ತಿ ಇರಲಿದೆ. ನೀವು ಇಂದು ಪ್ರೀತಿಯನ್ನು ಹೇಳಿಕೊಳ್ಳುವಿರಿ. ಸಂಬಂಧವಿಲ್ಲದ ವಿಚಾರದಲ್ಲಿ ಮೂಗುತೂರಿಸುವುದು ಬೇಡ. ಮಕ್ಕಳ ಬಯಕೆಯನ್ನು ಈಡೇರಿಸುವಿರಿ.
ವೃಷಭ ರಾಶಿ: ಒಲ್ಲದ ಮನಸ್ಸಿನಿಂದ ಕಾರ್ಯವನ್ನು ಆರಂಭ ಮಾಡಿದರೂ ಅನಂತರ ಉತ್ಸಾಹವು ಬರುವುದು. ಇಂದು ಕುಟುಂಬದಲ್ಲಿ ಆತಂಕವು ಇರಲಿದ್ದು ದೈವದ ಮೊರೆ ಹೋಗುವಿರಿ. ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ಸಿಗುವುದು. ನೀವು ಇಂದು ಮಾನಸಿಕವಾಗಿ ಕುಗ್ಗುವಿರಿ. ಯಾರ ಸಮಾಧಾನವೂ ನಿಮಗೆ ಸಾಂತ್ವನವನ್ನು ನೀಡದು. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವಿರಿ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಕಲಾವಿದರು ಸನ್ಮಾನಕ್ಕೆ ಭಾಜರಾಗುವರು. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ನೂತನ ಗೃಹ ನಿರ್ಮಾಣಕ್ಕೆ ಯೋಜನೆಯನ್ನು ಸಿದ್ಧಪಡಿಸಿಕೊಳ್ಳುವಿರಿ.
ಮಿಥುನ ರಾಶಿ: ಇಷ್ಟವಿಲ್ಲದ ಕಡೆ ಬಲವಂತವಾಗಿ ಹೋಗಬೇಕಾದೀತು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟು ಮಾತ್ರ ಮಾತುಗಳನ್ನಾಡಿ. ಅತಿಥಿಗಳ ಆಗಮನದಿಂದ ಸಂತೋಷವಾಗುವುದು. ನಿಮ್ಮ ಬಲದ ಪ್ರದರ್ಶನವನ್ನು ಮಾಡುವಿರಿ. ಸಂಗಾತಿಯ ಜೊತೆ ಸಣ್ಣ ವಿಚಾರಕ್ಕೂ ಕಲಹ ಮಾಡಿಕೊಳ್ಳುವಿರಿ. ನಿಮ್ಮ ಚಂಚಲವಾದ ಸ್ವಭಾವವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಕಷ್ಟವಾದೀತು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದೂರ ಹೋಗುವ ಮನಸ್ಸು ಮಾಡುವಿರಿ. ತಪ್ಪು ಮಾಡದಿರುವ ವಿಚಾರಕ್ಕೆ ಕ್ಷಮೆ ಕೇಳಬೇಕಾದೀತು. ಸುಲಭವಾದ ಮಾರ್ಗವನ್ನು ನೀವು ಕ್ಲಿಷ್ಟ ಮಾಡಿಕೊಳ್ಳುವಿರಿ. ದೈವಭಕ್ತಿಯು ಅಧಿಕವಾಗುವುದು. ಇಂದು ಸಂಯಮವು ಮುಖ್ಯ.
ಕಟಕ ರಾಶಿ: ಆಪ್ತರ ಬಗ್ಗೆ ಇಟ್ಟುಕೊಂಡ ಭಾವಿ ಇಂದು ಹೊರಹಾಕುವಿರಿ. ಗೆಳತಿಯ ಜೊತೆ ಆತ್ಮೀಯ ಒಡನಾಡವನ್ನು ಇಟ್ಟುಕೊಳ್ಳುವಿರಿ. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಒತ್ತಡ ಹೇರಬಹುದು. ನಿಮ್ಮ ಮೇಲೆ ಪಿತೂರಿ ಮಾಡಿದ ಅನುಮಾನ ಇರಲಿದೆ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ನಿಮ್ಮ ಕಾರ್ಯದಲ್ಲಿ ಉದ್ದೇಶವು ಸ್ಪಷ್ಟವಾಗಿ ಇರಲಿ. ಕೆಲಸವು ಪೂರ್ಣವಾಗದೇ ಒದ್ದಾಡಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಸಂಗಾತಿಯ ಕೋಪವನ್ನು ನೀವು ಕಡಿಮೆ ಮಾಡುವಿರಿ. ಆಹಾರವು ನಿಮ್ಮ ಆರೋಗ್ಯವನ್ನು ಕೆಡಿಸೀತು. ಪಾಲುದಾರಿಕೆಯಲ್ಲಿ ನಿಮ್ಮ ನಿಮಗೆ ವ್ಯಥೆಯು ಇರಲಿದೆ. ಉಪಕರಿಸಿದವರ ಮೇಲೆ ನಿಮಗೆ ಸ್ಮರಣೆ ಇರಲಿ. ಬೆಂಬಲವನ್ನು ಅಪೇಕ್ಷಿಸಿದರೂ ಸಿಗದು.