Horoscope: ರಾಶಿಭವಿಷ್ಯ, ಅತಿಯಾದ ಮಾತು ಬೇಡ, ನಿಮ್ಮ ವಿಚಾರಗಳು ಇತರರಿಗೆ ಇಷ್ಟವಾಗದಿರಬಹುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಅತಿಯಾದ ಮಾತು ಬೇಡ, ನಿಮ್ಮ ವಿಚಾರಗಳು ಇತರರಿಗೆ ಇಷ್ಟವಾಗದಿರಬಹುದು
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 06, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 06 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವರೀಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 10:51 – 12:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:19 – 04:49ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 – 09:22ರ ವರೆಗೆ.

ಮೇಷ ರಾಶಿ: ನಿಮ್ಮ ಆರೋಗ್ಯ ವೃದ್ಧಿಗೆ ಬೇಕಾದ ವಿಧಾನವನ್ನು ಅನುಸರಿಸಿ. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಮಹಿಳೆಯರು ಯಾವುದೇ ದೇಶೀಯ ವ್ಯವಹಾರವನ್ನು ಆರಂಭಿಸಲು ಬಯಸುವಿರಿ. ಸಹೋದರರಿಂದ ನಿಮಗೆ ಧನಸಹಾಯವು ಸಿಗಲಿದೆ. ನಿಮ್ಮ ಅಲ್ಪ ಮಾತಿನಿಂದ ಎಲ್ಲರಿಗೂ ಸಂತೋಷವಾಗಲಿದೆ.

ವೃಷಭ ರಾಶಿ: ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಉತ್ತಮ ಆರೋಗ್ಯದಿಂದ ಆನಂದಿಸುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ಯಮಿಗಳಿಗೆ ಲಾಭದ ದಿನ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಜೊತೆ, ನೀವು ಖರ್ಚು ಮಾಡುವ ಪರಿಸ್ಥಿತಿಯೂ ಬರಬಹುದು. ಹೊಸ ಕೆಲಸದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು.

ಮಿಥುನ ರಾಶಿ: ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಹಾರದ ಬಗ್ಗೆ ನಿಮ್ಮ ಶಿಸ್ತು ದೈಹಿಕ ಸ್ಥಿತಿಯಲ್ಲಿರಿವುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ನೀವು ಎಲ್ಲರೊಂದಿಗೆ ಸಭ್ಯವಾಗಿ ಮಾತನಾಡಬೇಕು. ನಿಮ್ಮದೇ ಆದ ಒತ್ತಡಗಳು ನಿಮಗೆ ಇರಲಿದೆ. ಓಡಾಟವು ಹೆಚ್ಚಾಗಿರುವುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ.

ಕಟಕ ರಾಶಿ: ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯಲ್ಲಿ ಉತ್ಸಾಹವು ಹೆಚ್ಚಿರುವುದು. ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು. ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ವಿಷಯಗಳಲ್ಲಿ ಆಸಕ್ತಿದಾಯಕ ಕೊಡುಗೆಗಳನ್ನು ಕಾಣಬಹುದು. ನಿಮ್ಮ ವಿಚಾರವನ್ನು ಇತರರ ಮುಂದೆ ಬಹಿರಂಗವಾಗಿ ಇರಿಸಿ.