Horoscope: ಈ ರಾಶಿಯವರು ತಮ್ಮ ಪ್ರೀತಿಯ ಮಿತ್ರರನ್ನು ದೂರ ಮಾಡಿಕೊಳ್ಳುವರು, ನಿಮ್ಮ ಸ್ವಭಾವ ಕಿರಿಕಿರಿಯಾಗಬಹುದು
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 07 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಬ್ರಹ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:09 ರಿಂದ 04:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:24 ರಿಂದ 10:50 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 01:42ರ ವರೆಗೆ.
ಮೇಷ ರಾಶಿ: ಸಮಯೋಚಿತ ಸಲಹೆಯಿಂದ ಪ್ರಶಂಸೆ ಸಿಗಬಹುದು. ಉದ್ಯಮದ ಸ್ವರೂಪವನ್ನು ಇನ್ನಷ್ಟು ವಿಸ್ತರಿಸಬಹುದು. ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ. ದುಷ್ಟ ಮಾನಸಿಕತೆಯು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಅನಿರೀಕ್ಷಿತ ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ತಿಳಿದವರ ಜೊತೆ ಆಧ್ಯಾತ್ಮಿಕ ವಿಚಾರವನ್ನು ಚರ್ಚಿಸಿ. ಯಾರಾದರೂ ಕರ್ತವ್ಯದ ಬಗ್ಗೆ ನಿಮ್ಮನ್ನು ಎಚ್ಚರಿಸಬಹುದು. ಅವರ ಮಾತಿನ ಅರ್ಥವನ್ನು ಮಾತ್ರ ಗಮನಸಿ.
ವೃಷಭ ರಾಶಿ: ಒತ್ತಡಗಳಿಂದ ಕುಗ್ಗುವ ಸಾಧ್ಯತೆ ಇದೆ. ಇಷ್ಟ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ಪ್ರಾಣಿಗಳಿಂದ ಭೀತಿಯು ಇರುವುದು. ನಿಮ್ಮ ಸ್ವಭಾವದಿಂದ ನಿಮಗೆ ಕಿರಿಕಿರಿಯಾಗಬಹುದು. ಇನ್ನೊಬ್ಬರ ಮಾತುಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ. ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು. ನಿಮ್ಮ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು. ಸ್ನೇಹಿತರು ನಿಮ್ಮನ್ನು ಇಷ್ಟಪಡುವರು. ಮಾತು ನೇರವಾಗಿದ್ದರೂ ಇತರರು ಇಷ್ಟಪಡುವಂತೆ ಇರುವುದು.
ಮಿಥುನ ರಾಶಿ: ನಿಮ್ಮ ವರ್ತನೆಯು ತಾಯಿಗೆ ಇಷ್ಟವಾಗದೇ ನಿಮ್ಮ ಮೇಲೆ ಕೋಪಮಾಡಿಕೊಳ್ಳಬಹುದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಯುವಿರಿ. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಸಾಧ್ಯವಾಗುವ ಕೆಲಸದ ಕಡೆ ನಿಮ್ಮ ಗಮನ ಹೆಚ್ಚಿರಲಿ. ಬಡ್ತಿಗಾಗಿ ಮೇಲಧಿಕಾರಿಗಳ ಜೊತೆ ಮಾತನಾಡುವಿರಿ. ನಿಮ್ಮ ಸಾಮರ್ಥ್ಯವನ್ನು ಇತರರಿಗೆ ನೀವೇ ತಿಳಿಸಬೇಕಾಗುವುದು. ಹಿರಿಯರ ಎದುರು ಅಹಂಕಾರವನ್ನು ತೋರಿಸುವುದು ಬೇಡ.
ಕಟಕ ರಾಶಿ: ಊಹೆಯೆಲ್ಲವೂ ನಿಜವಾಗಬೇಕೆಂದಿಲ್ಲ. ಅದಕ್ಕಾಗಿ ಬೇಸರ ಪಡುವ ಅವಶ್ಯಕತೆಯೂ ಇಲ್ಲ. ನಿಮ್ಮ ಸಂಬಂಧಗಳ ಬಗ್ಗೆ ಇಂದು ಹೆಚ್ಚು ಆಲೋಚಿಸುವಿರಿ. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗುವುದು. ಅಧಿಕಾರಿಗಳಾಗಿದ್ದರೆ ನೀವೇ ಇಂದು ಆಗಬೇಕಾದ ಕಾರ್ಯಗಳ ಪರಿಶೀಲನೆ ಮಾಡುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ನಿಮ್ಮ ಕೆಲಸವು ಪೂರ್ಣವಾಗದೇ ಹೇಳಿಸಿಕೊಳ್ಳುವಿರಿ. ಸಿಟ್ಟಿನಿಂದ ನಿಮ್ಮ ಮನೋವಿಕಾರವು ಆಗಬಹುದು.