Horoscope: ಈ ರಾಶಿಯವರು ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2023 | 1:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 07 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:03 ರಿಂದ 03:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 09:26 ರಿಂದ 10:59ರ ವರೆಗೆ.

ಮೇಷ ರಾಶಿ : ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ. ಕೆಡಕು ಮಾಡುವ ಮನಸ್ಸು ನಿಮಗೆ ಶೋಭೆಯಲ್ಕ. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯ ಬೇಡ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ತಿಳಿದವರ ಜೊತೆ ಆಧ್ಯಾತ್ಮಿಕ ವಿಚಾರವನ್ನು ಚರ್ಚಿಸಿ. ಮಿತ್ರರ ಸಹವಾಸದಿಂದ ಬದಲಾಗುವಿರಿ. ನಿಮ್ಮ ನಡವಳಿಕೆಯಿಂದ ಅನುಮಾನ ಬರಬಹುದು. ಹಳೆಯ ವಸ್ತುಗಳ ಮಾರಾಟದಿಂದ ಲಾಭವಿದೆ. ಆದಾಯದ ಮೂಲವನ್ನು ಸರಿಯಾಗಿ ಇಟ್ಟುಕೊಳ್ಳಿ.

ವೃಷಭ ರಾಶಿ : ನಿಮ್ಮ ಸ್ವಭಾವದಿಂದ ನಿಮಗೆ ಕಿರಿಕಿರಿಯಾಗಬಹುದು. ಇನ್ನೊಬ್ಬರ ಮಾತುಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ನಿಮ್ಮ‌ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು.‌ ಸ್ನೇಹಿತರು ನಿಮ್ಮನ್ನು ಇಷ್ಟಪಡುವರು. ಹೊಸ ಉದ್ಯೋಗದಲ್ಲಿ ಉತ್ಸಾಹವು ಇರಲಿದೆ. ಆತ್ಮವಿಶ್ವಾಸದ ಕೊರತೆಯನ್ನು ನಿಮ್ಮ ಪ್ರಾಮಾಣಿಕ ಪ್ರಯತ್ನವು ಸಾಧಿಸಬಹುದು.

ಮಿಥುನ ರಾಶಿ : ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಕೆ ಆಗುವುದು. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ನಿಮ್ಮ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಉದ್ಯೋಗದಲ್ಲಿ ವೇತನವನ್ನು ಹೆಚ್ಚಿಸಿಕೊಳ್ಳಲು ಮೇಲಧಿಕಾರಿಗಳ ಜೊತೆ ಮಾತನಾಡುವಿರಿ. ನಿಮ್ಮ ಸಾಮರ್ಥ್ಯವನ್ನು ಇತರರಿಗೆ ನೀವೇ ತಿಳಿಸಬೇಕಾಗುವುದು. ಇಂದು ಅಲಂಕಾರಕ್ಕೆ ಹೆಚ್ಚು ಸಮಯವನ್ನು ತೆಗೆದಿಡುವಿರಿ.

ಕಟಕ ರಾಶಿ : ನಿಮ್ಮ ಸಂಬಂಧಗಳ ಬಗ್ಗೆ ಇಂದು ಹೆಚ್ಚು ಆಲೋಚಿಸುವಿರಿ.‌ ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ನಿಮ್ಮ ಸ್ವಭಾವದಂತೆ ಎಲ್ಲರನ್ನು ನಂಬುವಿರಿ. ಅದನ್ನು ಬದಲಿಸಿಕೊಳ್ಳುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗಲಿದೆ. ಅಧಿಕಾರಿಗಳಾಗಿದ್ದರೆ ನೀವೇ ಇಂದು ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ನಿಮ್ಮ ಕೆಲಸವು ಪೂರ್ಣವಾಗದೇ ಹೇಳಿಸಿಕೊಳ್ಳುವಿರಿ. ನೆಮ್ಮದಿಯನ್ನು ಪಡೆಯಲು ನಿಮಗೆ ಸಮಯ ಬೇಕಾದೀತು. ಅಪ್ರಾಮಾಣಿಕರಂತೆ ನಿಮಗೇ ಅನ್ನಿಸಬಹುದು. ಇಂದಿನ ಸಮಯವು ಕಳೆದುಹೋದದ್ದು ನಿಮಗೆ ಗೊತ್ತಾಗದೇ ಹೋಗುವುದು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ