AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತನೆ ಮಾಡುವಿರಿ, ಸಂಗಾತಿಯ ಸಲಹೆ ಪಡೆಯಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತನೆ ಮಾಡುವಿರಿ, ಸಂಗಾತಿಯ ಸಲಹೆ ಪಡೆಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 08, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 08 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಮೇಷ ರಾಶಿ: ಅನಿರೀಕ್ಷಿತ ತಿರುವುಗಳು ನಿಮ್ಮನ್ನು ಉದ್ವಿಗ್ನಗೊಳಿಸಬಹುದು. ಹೋರಾಟದ ಮನೋಭಾವವು ಇಂದು ಎದ್ದು ತೋರುವುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಕೆಲವು ಸಮಸ್ಯೆಯನ್ನು ಸುಮ್ನೇ ಬಿಡುವುದು ಯೋಗ್ಯ. ಕಾಲಕ್ರಮೇಣ ಸರಿಯಾಗುವುದು.

ವೃಷಭ ರಾಶಿ: ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ನಿಮ್ಮ‌ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ನೀವು ಸ್ವತಂತ್ರವಾಗಿ ನಿರ್ಧಾರವನ್ನು ತೆಗದುಕೊಳ್ಳಬೇಕಾಗಬಹುದು.

ಮಿಥುನ ರಾಶಿ: ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಉದ್ಯೋಗದಲ್ಲಿ ದೂರದೃಷ್ಟಿ ಇರಲಿ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯು ಅಧಿಕವಾಗಬಹುದು. ಧನ್ವಂತರಿಯ ಉಪಾಸನೆಯಿಂದ ಅನಾರೋಗ್ಯದ ಬಾಧೆಯು ಕಡಿಮೆ ಆದೀತು.

ಕಟಕ ರಾಶಿ: ಪ್ರೇಮವು ಸಾಕೆನಿಸಬಹುದು. ಸುಮ್ಮನೇ ಕುಳಿತುಕೊಳ್ಳುವುದು ಇಷ್ಟವಾಗದು. ಸಂತಾನ ಯೋಗದಿಂದ ನಿಮಗೆ ಖುಷಿ ಸಿಗಲಿದೆ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಅಸ್ಥಿರತೆಯಿಂದ ಕಷ್ಟವಾದೀತು.

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ