Horoscope: ರಾಶಿಭವಿಷ್ಯ, ಸಾಮಾಜಿಕ ವಲಯಗಳಲ್ಲಿ ಗೌರವ, ಪ್ರತಿಷ್ಠೆ ನಿಮ್ಮದಾಗಲಿದೆ
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 08 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 16ಕ್ಕೆ, ರಾಹು ಕಾಲ ಸಂಜೆ 04:47 –06:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 –01:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:18 –04:47ರ ವರೆಗೆ.
ಮೇಷ ರಾಶಿ: ಪಾಲುದಾರಿಕೆಗೆ ಸಂಬಂಧಿಸಿದಂತೆ ದೂರ ಪ್ರಯಾಣ ಮಾಡಲು ಇಂದು ಒಳ್ಳೆಯದು. ಬಡ್ತಿಯಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷಿಸುವುದು ಬೇಡ. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸಣ್ಣ ವಿಚಾರವೂ ವಾಗ್ವಾದದಿಂದ ದೊಡ್ಡ ಮಾಡಿಕೊಳ್ಳಬೇಡಿ. ನೀರೀಕ್ಷಿಸಿದಂತೆ ಎಲ್ಲವೂ ನಡೆಯದೇ ಇರಬಹುದು. ಉತ್ತಮವಾದ ಸಮಯವನ್ನು ಎದುರು ನೋಡುವಿರಿ.
ವೃಷಭ ರಾಶಿ: ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ದೊಡ್ಡ ಲಾಭವನ್ನು ಗಳಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದು. ಕೂಡಿಟ್ಟ ಹಣದಿಂದ ನಿಮಗೆ ಇಂದು ಪ್ರಯೋಜನವಾದೀತು. ಹಳೆಯ ರೋಗವು ಮತ್ತೆ ಕಾಣಿಸಿಕೊಂಡು ಸಂಕಟಪಡುವಿರಿ. ಅನಿರೀಕ್ಷಿತ ಸುದ್ದಿಯು ನಿಮ್ಮ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ಮತ್ತೆ ಮತ್ತೆ ಒಂದೇ ಘಟನೆಗಳು ನಿಮಗೆ ಬೇಸರ ತರಿಸಬಹುದು. ಆರ್ಥಿಕಭದ್ರತೆಯ ಕಡೆ ಅಧಿಕ ಗಮನವನ್ನು ಕೊಡಿ.
ಮಿಥುನ ರಾಶಿ: ಈ ದಿನ ನೀವು ಅದೃಷ್ಟದ ಕಾರಣ ಉತ್ತಮ ಫಲಿತಾಂಶವನ್ನು ಪಡೆಯುವಿರಿ. ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕ ಮಾಡುವಿರಿ. ನೀವು ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ಮತ್ತು ನಿಮ್ಮ ಲಾಭವನ್ನು ಹೆಚ್ಚಿಸಬಹುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ನಿಮ್ಮ ಪ್ರಯತ್ನ ಮುಂದುವರಿಯಲಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ನಿಮಗೆ ಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯದೇ ನೋಯುವಿರಿ. ವಾಹನ ಸಂಚಾರದಲ್ಲಿ ನಿಮಗೆ ಭಯವಾಗಬಹುದು. ಆರ್ಥಿಕವಾಗಿ ನೀವು ಬಲವಾಗಿತ್ತಿರುವುದು ನಿಮಗೆ ಹೆಮ್ಮೆಯ ವಿಚಾರವಾಗುವುದು.
ಕರ್ಕ ರಾಶಿ: ವೃತ್ತಿಪರ ಮತ್ತು ಸಾಮಾಜಿಕ ವಲಯಗಳಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆಯುವಿರಿ. ದಿನವು ಅನುಕೂಲಕರವಾಗಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಯಾರ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳುವಿರಿ. ಕಣ್ಣಿನ ತೊಂದರೆ ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ಕಿರಿಕಿರಿ ಎನಿಸಬಹುದು. ಕೆಲಸದಲ್ಲಿ ಮಂದಗತಿಯು ಇರಲಿದೆ. ಬಂಧುಗಳನ್ನು ನೀವು ದೂರ ಮಾಡಿಕೊಳ್ಳುವಿರಿ. ಉದ್ಯೋಗವನ್ನೇ ನಂಬಿಕೊಂಡಿದ್ದರೆ ನಿಮಗೆ ಆತಂಕವು ಸೃಷ್ಟಿಯಾಗಬಹುದು.