ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 8 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 22ರ ವರೆಗೆ,
ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:26ರ ವರೆಗೆ.
ಮೇಷ ರಾಶಿ: ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆಯು ಕಾಣದ ಕಾರಣ ಬದಲಿಸುವಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಬಹಳ ದಿನದದಿಂದ ನಿರೀಕ್ಷಿಸುತ್ತಿದ್ದ ವಿವಾಹಯೋಗವು ಬರಬಹುದು. ಯೋಗ್ಯತೆಗೆ ಅನುಸಾರವಾಗಿ ನಿಮ್ಮ ಕಾರ್ಯಗಳು ಇರಲಿವೆ.
ವೃಷಭ ರಾಶಿ: ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನೀವು ಆತ್ಮೀಯರ ಸಮಾರಂಭಕ್ಕೆ ಹೋಗಿ ಖುಷಿಪಡುವಿರಿ. ಕೆಲವರನ್ನು ನೀವು ವಿನಾಕಾರಣ ದ್ವೇಷಿಸುವಿರಿ. ನಿಮ್ಮ ಮಾತು ಇನ್ನೊಬ್ಬರ ಮನಸ್ಸನ್ನು ಘಾಸಿಗೊಳಿಸಬಹುದು. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ಸಂಗಾತಿಯ ಮಾತು ಕಹಿಯಾಗಬಹುದು.
ಮಿಥುನ ರಾಶಿ: ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ತಮಾಷೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಕೂಡಿಟ್ಟ ಹಣವು ಇಂದು ಸದುಪಯೋಗಕ್ಕೆ ಬಂದಿದ್ದು ಖುಷಿ ಕೊಡಲಿದೆ. ನಿಮ್ಮ ಬೆಂಬಲಕ್ಕೆ ಸಹೋದ್ಯೋಗಿಗಳು ಬರಬಹುದು.
ಕಟಕ ರಾಶಿ: ವಿವಾಹ ಮಂಗಳಕಾರ್ಯದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಸಂಗಾತಿಯ ಸಲಹೆಯನ್ನೂ ಪಡೆದು ಆದಷ್ಟು ಬೇಗ ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು.