Horoscope: ಈ ರಾಶಿಯವರ ಪ್ರಗತಿಗೆ ಶತ್ರುಗಳು ಅಡ್ಡಗಾಲು ಹಾಕಬಹುದು ಎಚ್ಚರ!

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರ ಪ್ರಗತಿಗೆ ಶತ್ರುಗಳು ಅಡ್ಡಗಾಲು ಹಾಕಬಹುದು ಎಚ್ಚರ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 09, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 09 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06:24ಕ್ಕೆ, ಸೂರ್ಯಾಸ್ತ ಸಂಜೆ 06:15ಕ್ಕೆ, ರಾಹು ಕಾಲ ಬೆಳಿಗ್ಗೆ 07:53-09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:51–12:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:49 –03:18ರ ವರೆಗೆ.

ಮೇಷ ರಾಶಿ: ಅಧಿಕಾರ ಪ್ರಾಪ್ತಿಗೆ ಓಡಾಟವನ್ನು ಮಾಡುವಿರಿ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಿಮ್ಮ ಪ್ರಗತಿಗೆ ಶತ್ರುಗಳು ಅಡ್ಡಗಾಲು ಹಾಕಬಹುದು. ಬೇಸರದಿಂದ ಹೊರಬರಲು ಮಾರ್ಗವನ್ನು ಹುಡುಕಿಕೊಳ್ಳುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವಿರಿ. ಸ್ತ್ರೀಯರ ಸಹಕಾರದಿಂದ ಕೆಲಸವನ್ನು ಮುಗಿಸುವಿರಿ. ನಿಮ್ಮ ಮಕ್ಕಳ ಬಗ್ಗೆ ಗಮನ ಇರಲಿ. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯೋಗವನ್ನು ಹೇಳಿಕೊಳ್ಳುವಿರಿ. ಕಾರ್ಯದಲ್ಲಿ ಯಾರೋ ಮಾಡಿದ ತಪ್ಪನ್ನು ನೀವು ಸರಿ ಮಾಡಬೇಕಾದೀತು. ಆಪದ್ಧನವನ್ನು ಕೂಡಿಡುವುದು ಒಳ್ಳೆಯದು.

ವೃಷಭ ರಾಶಿ: ವಿನಾಕಾರಣ ಸುತ್ತಾಟದಿಂದ ಆಯಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಅನ್ಯಸ್ಥಳದಲ್ಲಿ ನಿಮ್ಮ ವಾಸವು ಇರಲಿದೆ. ಸುಖವಾದ ಭೋಜನವನ್ನು ಮಾಡುವಿರಿ. ಕೋಪದಲ್ಲಿ ಏನನ್ನಾದರೂ ಹೇಳುವಿರಿ. ದೂರದೃಷ್ಟಿಯಿಂದ ಮುಂಬರುವ ತೊಂದರೆಯನ್ನು ಸರಿಮಾಡಿಕೊಳ್ಳುವಿರಿ. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಬೇಡ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದ ದಿನ. ಉತ್ಸಾಹವು ಎಷ್ಟೇ ಇದ್ದರೂ ನೆಮ್ಮದಿಯ ಮನಸ್ಸಿನಿಂದ ನಿರ್ಧಾರಿಸಿ. ಹಿರಿಯರಿಂದ ಉತ್ತಮ ವಿಚಾರಗಳನ್ನು ತಿಳಿಯುವಿರಿ. ಇಂದು ನಿಮ್ಮ ಪರಿಶ್ರಮವು ವ್ಯರ್ಥವಾದಂತೆ ತೋರುವುದು. ಹಿತಶತ್ರುಗಳಿಗೆ ನಿಮ್ಮ ಯಶಸ್ಸನ್ನು ಸಹಿಸಲಾಗದು. ವೃಥಾ ಚರ್ಚೆಯಿಂದ ಸಮಯವನ್ನು ಕಳೆಯುವಿರಿ. ನಿಮ್ಮ ಚಿಂತನೆಯನ್ನು ಯೋಗ್ಯವಾದ ಜನರ ಜೊತೆ ಹಂಚಿಕೊಳ್ಳಿ.

ಮಿಥುನ ರಾಶಿ: ನಿಮ್ಮ ವಿದ್ಯಾಭ್ಯಾಸಕ್ಕೆ ಯೋಗ್ಯವಾದ ಕೆಲಸದ ಅನ್ವೇಷಣೆಯನ್ನು ಮಾಡುವಿರಿ. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆಯುವರು. ಸಹನೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸ್ವಪ್ರತಿಷ್ಠೆಯಿಂದ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಹಿರಿಯರೆದುರು ವಿನಯವಿರಲಿ. ದೇವತಾಕಾರ್ಯಗಳಲ್ಲಿ ಆಸಕ್ತಿಯು ಶ್ರದ್ಧೆಯಿಂದ ಭಾಗವಹಿಸುವಿರಿ. ಕಛೇರಿಯಲ್ಲಿ ಅಧಿಕಾರಿಗಳು ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾಗ್ವಾದ ಮಾಡಬಹುದು. ಯಾರಿಗೂ ಸಾಲವನ್ನು ಕೊಡುವುದು ಬೇಡ. ನಿಮ್ಮ ಸಂಬಂಧಗಳನ್ನು ಬಳಸದೇ ದೂರವಾಗುವುದು. ಬುದ್ಧಿಪೂರ್ವಕವಾಗಿ ತಪ್ಪುಗಳನ್ನು ಮಾಡಿ ಅನಂತರ ಸಂಕಟಪಟುವಿರಿ. ಸಕಾರಾತ್ಮಕ ಅಂಶಗಳನ್ನು ಸ್ವೀಕರಿಸಲು ಸಿದ್ಧರಿರಿ.

ಕರ್ಕ ರಾಶಿ: ಚರಾಸ್ತಿಯಲ್ಲಿ ಗೊಂದಲ ಇರುವುದು. ಪ್ರಯತ್ನಿಸಿದ ಕಾರ್ಯಕ್ಕೆ ಫಲವನ್ನು ನಿರ್ದಿಷ್ಟ ಮಾಡಿಕೊಳ್ಳುವಿರಿ. ಮನೆಯ ಸ್ಥಳವನ್ನು ಬದಲಾಯಿಸುವಿರಿ. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಉತ್ಸಾಹಕ್ಕೆ ತೊಂದರೆ ಆಗುವ ಕಡೆ ನೀವು ಇರಲಾರಿರಿ. ನಿಮ್ಮ ಉದ್ಯೋಗದ ಸ್ಥಳವನ್ನು ನೀವು ಬದಲಾಯಿಸುವಿರಿ. ನಿಮ್ಮ ಕೆಲಸವನ್ನು ಬಿಟ್ಟು ಬೇರೆಯವತ ಕಾರ್ಯದ ಕಡೆ ಗಮನ ಇರುವುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವು ಕಷ್ಟವಾದೀತು. ಪ್ರಾಮಾಣಿಕತೆಯಿಂದ ನಿಮಗೆ ಉನ್ನತ ಸ್ಥಾನವನ್ನು ನಿರೀಕ್ಷಿಸುವಿರಿ. ಸಂಗಾತಿಯ ವಿಚಾರದಲ್ಲಿ ನಿಮಗೆ ಗೊಂದಲವಾಗಬಹುದು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಲು ನಿಮಗೆ ಕಷ್ಟವಾದೀತು. ಅಗ್ನಿಯ ಭೀತಿಯು ಇರಲಿದೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ