Horoscope: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಇತರರಿಗೆ ಹೇಳದಿರುವುದೇ ಉತ್ತಮ, ಸಹೋದ್ಯೋಗಿಗಳಿಂದ ಕಿರಿಕಿರಿ ಅನುಭವಿಸಬಹುದು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 09, 2023 | 12:10 AM

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 9) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಇತರರಿಗೆ ಹೇಳದಿರುವುದೇ ಉತ್ತಮ, ಸಹೋದ್ಯೋಗಿಗಳಿಂದ ಕಿರಿಕಿರಿ ಅನುಭವಿಸಬಹುದು
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 9 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ,
ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ರಿಂದ 22ರ ವರೆಗೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:26 ರಿಂದ 10:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:02 ರಿಂದ 03:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ.

ಮೇಷ ರಾಶಿ: ದುರಾಸೆ ಪಡದೆ ಬಂದಿದ್ದನ್ನು ಸ್ವೀಕರಿಸಿ ದೊಡ್ಡವರಾಗುವಿರಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ಮಾನಸಿಕವಾಗಿ ಕುಗ್ಗಿರುವಿರಿ. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ಸಹಾಯವನ್ನು ಯಾವುದೇ ಮುಲಾಜಿಲ್ಲದೇ ಕೇಳುವಿರಿ.

ವೃಷಭ ರಾಶಿ: ಆಸ್ತಿ ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಲು ಇದು ಸರಿಯಾದ ಸಮಯ. ಸಾಹಸಕ್ಕೆ ಕೈಹಾಕುವುದು ಬೇಡ. ನೆಮ್ಮದಿಯನ್ನು ನೀವು ಹಾಳುಮಾಡಿಕೊಳ್ಳುವಿರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ವ್ಯಕ್ತಿಯ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸ್ತ್ರೀಯರು ವಿಶೇಷವಾಗಿ ಸಮಾಜದ ಪ್ರಮುಖ ಸ್ಥಾನವನ್ನು ಅಲಂಕರಿಸುವರು.

ಮಿಥುನ ರಾಶಿ: ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯು ಬರಬಹುದು. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ನೇರ ಮಾತಿನಿಂದ ಬೇಸರವನ್ನು ಉಂಟುಮಾಡುವಿರಿ. ಕಳೆದುಕೊಂಡಿದ್ದರ ಬಗ್ಗೆ ಹೆಚ್ಚು ಆಲೋಚನೆಯು ಇರಲಿದೆ. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳು ಕೇಳಿಬರಬಹುದು.

ಕಟಕ ರಾಶಿ: ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿಮಗೆ ಉಪಯುಕ್ತ ಸಲಹೆಗಳು ಸಿಗ ಬಹುದು. ನಿಮ್ಮ ಕಾರ್ಯವನ್ನು ಕೊನೆಯಲ್ಲಿ ಬದಲಿಸುವುದು ನಿಮಗೆ ಸಿಟ್ಟು ತಂದೀತು.