AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಅನಗತ್ಯ ವೆಚ್ಚಗಳು ಬರಲಿವೆ, ಜಾಗರೂಕರಾಗಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಇಂದು ಅನಗತ್ಯ ವೆಚ್ಚಗಳು ಬರಲಿವೆ, ಜಾಗರೂಕರಾಗಿರಿ
ದಿನಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Nov 10, 2023 | 12:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 10 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:24ರ ವರೆಗೆ.

ಮೇಷ ರಾಶಿ: ನೀವು ಸದಾ ಸಂತೋಷದಿಂದ ಇರುವ ಕಾರಣ ಜನರು ನಿಮ್ಮೊಂದಿಗೆ ಸಂಬಂಧ ಹೊಂದಲು ಪ್ರಯತ್ನಿಸುತ್ತಾರೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಇಷ್ಟಪಟ್ಟರ ಜೊತೆ ಸಮಯವನ್ನು ಕಳೆಯಲು ಆಗದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಯಸುವಿರಿ.

ವೃಷಭ ರಾಶಿ: ತಿಳುವಳಿಕೆಯಿಂದ ಹೊಸ ಮಾರ್ಗಗಳನ್ನು ಹುಡೂಕಲು ಇಂದು ಖರ್ಚು ಮಾಡುವಿರಿ. ನೀವು ಸೀಮಿತವಾಗಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಖರ್ಚು ಮಾಡುತ್ತೀರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ.

ಮಿಥುನ ರಾಶಿ: ಇಂದು ಅಮೂಲ್ಯವಾದ ವಸ್ತುವು ನಿಮ್ಮ ಪಾಲಾಗಬಹುದು. ಆದರೆ ಅನಗತ್ಯ ವೆಚ್ಚಗಳು ಸಹ ಬರಲಿವೆ. ನಿಮ್ಮ ವ್ಯವಹಾರದಲ್ಲಿಯೂ ಸಹ ನೀವು ಭಾಗವಹಿಸುವಿರಿ ಮತ್ತು ಕೆಲಸ ಪೂರ್ಣಗೊಳ್ಳುತ್ತದೆ. ನೀವು ಯಾವುದೇ ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ಖಂಡಿತವಾಗಿಯೂ ಮಾಡಿ, ಭವಿಷ್ಯದಲ್ಲಿ ಪ್ರಯೋಜನವಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು.

ಕಟಕ ರಾಶಿ: ನಿಮ್ಮಲ್ಲಿ ಇಂದು ದಾನ, ಧರ್ಮದ ಪ್ರಜ್ಞೆ ವರ್ಧಿಸಬಹುದು. ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧೆಯಿಂದ ಪಾಲ್ಗೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಜಾಗರೂಕರಾಗಿರಿ ಮತ್ತು ಆಹಾರದ ಮೇಲೆ ಸಂಯಮವಿರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ