Horoscope: ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗಲಿದೆ, ಹಠ ಸ್ವಭಾವ ಕಡಿಮೆ ಮಾಡಿಕೊಳ್ಳಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗಲಿದೆ, ಹಠ ಸ್ವಭಾವ ಕಡಿಮೆ ಮಾಡಿಕೊಳ್ಳಿ
ದಿನಭವಿಷ್ಯImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 10, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 10 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ವ್ಯತಿಪಾತ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಸಂಜೆ 05:05 ರಿಂದ 06:37 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:02ರ ವರೆಗೆ, ಗುಳಿಕ ಕಾಲ ಸಂಜೆ 03:33 ರಿಂದ 05:05ರ ವರೆಗೆ.

ಮೇಷ ರಾಶಿ: ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಇಷ್ಟಪಟ್ಟರ ಜೊತೆ ಸಮಯವನ್ನು ಕಳೆಯಲು ಆಗದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಯಸುವಿರಿ. ಇಂದು ಮೌನವಾಗಿ ಇರುವುದು ಹಿತವೆನಿಸುವುದು. ಇಂದು ನಿಮ್ಮ ಉತ್ಸಾಹಕ್ಕೆ ಯಾರಿಂದಲಾದರೂ ತೊಂದರೆಯಾಗಬಹುದು.

ವೃಷಭ ರಾಶಿ: ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ಆಪ್ತರೂ ನಿಮ್ಮ ಸ್ವಭಾವವನ್ನು ಕಂಡು ದೂರವಾಗಬಹುದು. ಬಾಯಾರಿಕೆಯು ಹೆಚ್ಚಾದೀತು. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ. ಸಂಪತ್ತಿಗಾಗಿ ನೀವು ಬಹಳ ಶ್ರಮಪಡುವಿರಿ. ಆರ್ಥಿಕತೆಯ ಅಭಿವೃದ್ಧಿಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುವುದು.

ಮಿಥುನ ರಾಶಿ: ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು‌. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಇಂದೂ ಕೂಡ ಮನೆಯಿಂದ ಕಛೇರಿಯ ಕೆಲಸವನ್ನು ಮಾಡುವಿರಿ. ವಿಷ್ಣುಸಹಸ್ರನಾಮವನ್ನು ಪಠಿಸಿ.

ಕಟಕ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ. ಸಂಗಾತಿಯ ಪ್ರೀತಿಯು ಕಡಿಮೆ ಆದೀತು.