ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 11 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ : ಆಶ್ಲೇಷಾ, ಮಾಸ : ಅಧಿಕ ಶ್ರಾವಣ, ಪಕ್ಷ : ಕೃಷ್ಣ, ವಾರ: ಶುಕ್ರ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ವ್ಯರಿಯಾನ್, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03: 47 ರಿಂದ ಸಂಜೆ 05:21 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ.
ಮೇಷ ರಾಶಿ: ವಿವಾಹಯೋಗವು ಬಂದರೂ ನಿಮಗೆ ಅಂತಹ ಯೋಗ್ಯತೆಯ ಕೊರತೆ ಎದ್ದು ಕಾಣುವುದು. ಇಂದಿನ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಕಾರ್ಮಿಕ ವಿಚಾರದಲ್ಲಿ ನಿಮಗೆ ಅಸಮಾಧಾನವು ಇರುವುದು. ಸಂಗಾತಿಗೆ ನೀವು ಸುಳ್ಳು ಹೇಳಿ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಯಾರ ಮೇಲೂ ಪಕ್ಷಪಾತ ಮಾಡದೇ ಇರಬೇಕಾಗುವುದು. ನಿಮ್ಮ ನಿರೀಕ್ಷೆ ಸಂಪೂರ್ಣ ಸರಿಯಾಗದು. ವೃತ್ತಿಯ ಕೆಲಸಗಳ ನಡುವೆ ಕುಟುಂಬವನ್ನು ಮರೆತಿರುವಿರಿ. ನೋವನ್ನು ದೊಡ್ಡ ಮಾಡಿಕೊಂಡು ಕಷ್ಟಡಬಹುದು. ಮಾತನ್ನು ನೀವು ಇಂದು ಕಡಿಮೆ ಮಾಡಿದ್ದೀರಿ.
ವೃಷಭ ರಾಶಿ: ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಕಾಲಾವಕಾಶದ ಕೊರತೆ ಇರುವುದು. ಭವಿಷ್ಯದ ಬಗ್ಗೆ ಹೆಚ್ಚು ಚಿಂತಾಮಗ್ನರಾಗುವಿರಿ. ವಿವಾಹದ ಮಾತುಕತೆಗಳು ನಿಮ್ಮ ಖುಷಿಯನ್ನು ಹೆಚ್ಚಿಸಬಹುದು. ವೃತ್ತಿಗಾಗಿ ನೀವು ಮಾಡುವ ಪ್ರಯತ್ನದಿಂದ ಯಶಸ್ಸು ಸಿಗಲಿದೆ. ಅಪರಿಚಿತರ ಒಡನಾಟ ಹೆಚ್ಚು ಶ್ರೇಯಸ್ಕರ ಅಲ್ಲ. ನಿಮ್ಮ ಅನುಕೂಲಕ್ಕೆ ತಕ್ಕ ಕೆಲಸವನ್ನು ಮಾಡಿ. ಯಾರಾದರೂ ನಿಮ್ಮ ಬಳಿ ಕೆಲಸ ಮಾಡಿಕೊಡಲು ಸಹಾಯವನ್ನು ಕೇಳಬಹುದು. ಗೊತ್ತಿರುವುದನ್ನು ಹಂಚಿಕೊಳ್ಳಿ. ನೀವು ವಿರೋಧ ಮಾಡುವ ಯಾವ ಮಾತನ್ನು ಆಡುವುದು ಬೇಡ.
ಮಿಥುನ ರಾಶಿ: ಅನಗತ್ಯ ಹರಟೆಯಿಂದ ಈ ದಿನವನ್ನು ಕಳೆಯುವಿರಿ. ಹಣಕಾಸಿನ ವ್ಯವಹಾರವನ್ನು ಮಾಡುತ್ತಿದ್ದರೆ ನಿಮಗೆ ಲಾಭವು ನಿಮ್ಮದಾಗಬಹುದು. ಸಮಯಾದ ಅಭಾವದಿಂದ ಇಂದಿನ ಕೆಲಸಗಳು ಹಾಗೆಯೇ ಇರಬಹುದು. ಕಲಾವಿದರು ಉತ್ತಮ ಅವಕಾಶಗಳನ್ನು ಪಡೆಯುವರು. ನೀವು ಹಿರಿಯರ ಜೊತೆ ವಾಗ್ವಾದಕ್ಕೆ ಇಳಿಯುವಿರಿ. ಮನೆಯ ಕೆಲಸದಲ್ಲಿ ಸಮಯ ಕಳೆದಿದ್ದು ಗೊತ್ತಾಗದು. ಮಕ್ಕಳಿಗೆ ಪ್ರಿಯವಾದುದನ್ನು ಮಾಡುವಿರಿ. ಧನಸಹಾಯವನ್ನು ಮಾಡಲು ನಿಮಗೆ ಇಷ್ಟವಾಗದು. ಕಳೆದುಕೊಂಡ ವಸ್ತುಗಳನ್ನು ಮರಳಿ ಪಡೆಯುವಿರಿ. ನಿಮಗೆ ಮಕ್ಕಳು ಅವಶ್ಯಕತೆ ಇರುವ ಹಣದ ಸಹಾಯವನ್ನು ಮಾಡುವರು.
ಕಟಕ ರಾಶಿ: ಉದ್ಯೋಗದಲ್ಲಿ ಇಷ್ಟವಿಲ್ಲದೆ ಕಡೆ ವರ್ಗಾವಣೆ ಆಗಲಿದೆ. ಸಹೋದ್ಯೋಗಿಗಳ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ. ಮನೆಯಲ್ಲಿ ದೇವರಿಗೆ ಸಂಬಂಧಿಸಿದ ತೊಂದರೆಗಳು ಕಾಣಿಸಿಕೊಳ್ಳಬಹುದು. ದುರಭ್ಯಾಸವು ನಿಮಗೆ ಹಣಕಾಸಿನ ನಷ್ಟವನ್ನು ಮಾಡಿಸೀತು. ಉತ್ತಮ ಅವಕಾಶಗಳಿಂದ ನೀವು ವಂಚಿತರಾಗುವ ಸಾಧ್ಯತೆಯಿದೆ. ಕುಟುಂಬದ ಸದಸ್ಯರನ್ನು ಅರ್ಥ ಮಾಡಿಕೊಳ್ಳಲು ಸೋಲುವಿರಿ. ಅಪರಿಚಿತರ ಜೊತೆ ವ್ಯವಹಾರವನ್ನು ಮಾಡುವಾಗ ಗುಟ್ಟನ್ನು ಬಿಟ್ಟಕೊಡಬೇಡಿ. ಅತಿಥಿ ಸತ್ಕಾರವನ್ನು ಇಂದು ನೀವು ಮಾಡುವಿರಿ. ಮನಸ್ಸಿಗೆ ಸಂತೋಷ ಎನಿಸಬಹುದು. ಕುಲದೇವರ ಆರಾಧನೆಯನ್ನು ಹೆಚ್ಚು ಮಾಡುವುದು ಉತ್ತಮ.