AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 11, 2023 | 12:20 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 09:25 ರಿಂದ ಮಧ್ಯಾಹ್ನ 10:15ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:42 ರಿಂದ 03:08ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:33 ರಿಂದ 07:59ರ ವರೆಗೆ.

ಮೇಷ ರಾಶಿ :ಅನಿರೀಕ್ಷಿತ ಪ್ರಯಾಣದಲ್ಲಿ ಕೆಲವು ಲಾಭವಾಗುವುದು. ಸಣ್ಣ ವಿಚಾರಕ್ಕೂ ಸಿಟ್ಟಗುವಿರಿ. ರಕ್ಷಣಾಸಿಬ್ಬಂದಿಗಳಿಗೆ ಸ್ವಲ್ಪ ಅನನುಕೂಲ ಸನ್ನಿವೇಶವು ಇರಲಿದೆ. ಪರಸ್ಪರ ನೆರವಿನಿಂದ ಇಂದಿನ ಕೆಲಸವು ಸಾಧ್ಯವಾಗುವುದು. ಸ್ನೇಹಿತರು ದೂರವಾದ್ದರಿಂದ ನಿಮಗೂ ನೆಮ್ಮದಿ ಸಿಗುವುದು. ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಸ್ಥಿರಾಸ್ತಿಯನ್ನು ಅಲಕ್ಷ್ಯ ಮಾಡುವಿರಿ‌ ಕಾರಣಾಂತರಗಳಿಂದ ನಿಮ್ಮ‌ ಯಾತ್ರೆಯು ಸ್ಥಗಿತವಾಗುವುದು. ಮನೆಯವರನ್ನು ಕಾಣದೇ ನಿಮಗೆ ಬೇಸರವಾದೀತು. ಅಧ್ಯಾತ್ಮದ ಚಿಂತನೆಯನ್ನು ಇಂದು ಮಾಡುವಿರಿ. ಆರ್ಥಿಕವಾಗಿ ನೀವು ಸಬಲರಾಗುವುದು ನಿಮ್ಮ ನಡತೆಯಲ್ಲಿ ಕಾಣುವುದು. ನಿಮ್ಮ ಬಗ್ಗೆ ಕೀಳರಿಮೆ ಉಂಟಾಗಬಹುದು. ಎಚ್ಚರಿಕೆ ಇರಲಿ.

ವೃಷಭ ರಾಶಿ : ಸಂಕುಚಿತ ಮನಃಸ್ಥಿತಿಯು ಎಲ್ಲದರಿಂದ ನಿಮ್ಮನ್ನು ದೂರವಿಡುವುದು. ಪಕ್ಷಪಾತವು ನಿಮ್ಮ ಎಲ್ಲ ಸದ್ಭಾವವನ್ನು ನುಂಗಿ ಹಾಕುವುದು. ದಾಂಪತ್ಯದಲ್ಲಿ ಬೇಸರವಿರಲಿದೆ. ಯಾರ ಮೇಲೂ ದೂರನ್ನು ಹೇಳುವುದು ಬೇಡ. ಇಬ್ಬರೂ ಕೆಲಸವನ್ನು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು. ಸಮಾರಂಭಗಳಲ್ಲಿ ನೀವು ಹೇಳಿದ ಮಾತು ವಿವಾದವಾಗಬಹುದು. ಸ್ನೇಹಿತರನ್ನು ಕಳೆದುಕೊಂಡಿರುವುದರ ಪರಿಣಾಮವು ಕೂಡಲೇ ಗೊತ್ತಾಗದು. ಅಮೂಲ್ಯ ವಸ್ತುವನ್ನು ಕೊಟ್ಟು ಆರ್ಥಿಕ ಸಂಕಷ್ಟವನ್ನು ತಂದುಕೊಳ್ಳುವಿರಿ. ಕೆಲವು ಸೂಚನೆಗಳು ನಿಮಗೆ ಭವಿಷ್ಯವನ್ನು ತಿಳಿಸಬಹುದು. ಕುಟುಂಬದಲ್ಲಿ ಶಾಂತಿಯು ಕದಡಲು ನಿಮ್ಮ ಪಾತ್ರವೇ ಇರುವುದು. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯುವಿರಿ.

ಮಿಥುನ ರಾಶಿ : ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಂಬಿಕೆಯಲ್ಲಿ ದ್ರೋಹವಾಗಿದೆ ಎಂದು ಅನ್ನಿಸಬಹುದು. ಕಛೇರಿಯ ನಿಯಮಗಳನ್ನು ನೀವೇ ಉಲ್ಲಂಘಿಸುವಿರಿ. ಮೇಲಧಿಕಾರಿಗಳ ಜೊತೆ ನಿಮಗೆ ಆಪ್ತತೆ ಬೇಡ. ಸಂಗಾತಿಯ ಮನಃಸ್ಥಿತಿಯನ್ನು ಬದಲಿಸಲು ಪ್ರಯತ್ನಿಸುವಿರಿ. ನಿಮಗೆ ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಅನಿವಾರ್ಯತೆ ಬರಬಹುದು. ಹಳೆಯ ಪ್ರೇಮವನ್ನು ಸಂಗಾತಿಯಲ್ಲಿ ಹೇಳಿಕೊಳ್ಳುವಿರಿ. ನೀವು ಇದರಿಂದ ನಿರಾಳರಾಗುವಿರಿ. ಕಛೇರಿಯಲ್ಲಿ ನಿಮ್ಮ ಮಾತನ್ನು ಪಾಲಿಸುವರು. ವಿದೇಶೀ ವಿನಿಮಯದಿಂದ ಲಾಭವಾಗಲಿದೆ. ನಿಮ್ಮ ಅನುಪಸ್ಥಿತಿಯಲ್ಲಿ ಕೆಲಸವನ್ನು ಬೇರೆಯವರು ಮಾಡುವರು. ಅನಾರೋಗ್ಯವು ಬೆನ್ನು‌ ಬಿಡದ ಬೇತಾಳದಂತೆ ಕಾಡಬಹುದು.

ಕಟಕ ರಾಶಿ : ಸ್ನೇಹಿತರು ನಿಮ್ಮ ಸಮಯವನ್ನು ವ್ಯರ್ಥ ಮಾಡಬಹುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಕಷ್ಟವಾದೀತು. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಕೋಪದಲ್ಲಿ ಏನನ್ನಾದರೂ ಹೇಳುವಿರಿ. ಕಠಿಣ ಕೆಲಸವನ್ನು ಸರಳ ಮಾಡಿಕೊಳ್ಳುವ ವಿಧಾನವು ಗೊತ್ತಿರಲಿ. ನಿಮ್ಮ ಕಾರ್ಯದ ಉದ್ದೇಶವೇ ಮರೆತುಹೋಗಬಹುದು. ಇಂದು ನೋವು ಅತಿಯಾಗಬಹುದು. ಇಂದಿನ ಖರ್ಚು ನಿಮ್ಮನ್ನು ಕುಗ್ಗಿಸಬಹುದು. ಅಶಿಸ್ತಿನ ಕಾರಣ ಹಿರಿಯರಿಂದ ಬೈಸಿಕೊಳ್ಳಬೇಕಾಗುವುದು. ಸದಾ ಕಾಲ ಹೊಸತನ್ನು ಅಪೇಕ್ಷಿಸುವಿರಿ. ನಿಮ್ಮ ವಸ್ತುವನ್ನು ಅನ್ಯರಿಗೆ ಕೊಟ್ಟು ಕಳೆದುಕೊಂಡು ಸಂಕಟಪಡುವಿರಿ. ಆದಾಯವನ್ನು ಹೆಚ್ಚು ಮಾಡಿಕೊಳ್ಳುವುದು ಅನಿವಾರ್ಯವಾದೀತು. ಒತ್ತಾಯದಿಂದ ಯಾರನ್ನೂ ಬಳಸಿಕೊಳ್ಳವುದು ಬೇಡ.

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?