AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಯಾರ ಬಳಿಯೂ ಸಹಾಯ ಹಸ್ತ ಚಾಚದೇ ಸ್ವಂತ ಬಲದ ಮೇಲೆ ಬೆಳೆಯುತ್ತಾರೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಯಾರ ಬಳಿಯೂ ಸಹಾಯ ಹಸ್ತ ಚಾಚದೇ ಸ್ವಂತ ಬಲದ ಮೇಲೆ ಬೆಳೆಯುತ್ತಾರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 12 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:32 ರಿಂದ ಸಂಜೆ 05:04 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಮೇಷ ರಾಶಿ: ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವಿರಿ. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನಿರಂತರ ಪ್ರಯತ್ನದ ಫಲವು ಇಂದು ಸಿಗಬಹುದು.

ವೃಷಭ ರಾಶಿ: ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಹೇಳಿಕೆಗಳು ನಿಮಗೆ ಉದ್ವೇಗವನ್ನು ಉಂಟಾಗಲಿದೆ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಲ್ಲಿ ಭೀತಿಯ ಮನೋಭಾವವು ಇರಲಿದೆ.

ಮಿಥುನ ರಾಶಿ: ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಮಕ್ಕಳ ಯಶಸ್ಸನ್ನು ಕಂಡು ಪೋಷಕರಿಗೆ ಸಂತಸವಾಗಲಿದೆ. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡುವಿರಿ. ನಿಮ್ಮ ಬಗ್ಗೆ ಇರುವ ಸುಳ್ಳು ಸುದ್ದಿಯು ಸರಿಉಅಗಬಹುದು.

ಕಟಕ ರಾಶಿ: ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಕುಟುಂಬದಲ್ಲಿ ಐಕಮತ್ಯದ ಕೊರೆತೆಯು ಕಡಿಮೆ‌ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮ್ಮ ಜೀವನದ ಕುರಿತು ತಂದೆ ತಾಯಿಯರು ಚಿಂತಿಸುವರು. ನೀವು ಮಾತಿಗೆ ತಪ್ಪಿದವರು ಎಂಬ ಪಟ್ಟಕ್ಕೆ ಸಿಗುವುದು.

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ