Horoscope: ರಾಶಿಭವಿಷ್ಯ, ಈ ರಾಶಿಯವರ ವಿವಾಹಜೀವನವು ಅತ್ಯಂತ ಸುಖಮಯವಾಗಿರುವುದು, ಬದುಕಿಗೆ ಹೊಸ ಆಯಾಮ ಸಿಗಲಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರ ವಿವಾಹಜೀವನವು ಅತ್ಯಂತ ಸುಖಮಯವಾಗಿರುವುದು, ಬದುಕಿಗೆ ಹೊಸ ಆಯಾಮ ಸಿಗಲಿದೆ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 13 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ ಶುಕ್ರ:, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:50 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ.

ಮೇಷ ರಾಶಿ: ಮನೆಯ ಧಾರ್ಮಿಕ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಬೇಕು ಎಂದುಕೊಂಡರೂ ಅದು ಅಸಾಧ್ಯ ಎನಿಸಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ. ವಿಳಂಬವಾಗಿ ಬರುತ್ತದೆ ಎಂದುಕೊಂಡ ನಿಮ್ಮ ಹಣವು ಬೇಗ ಬರಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು. ನಿಮ್ಮ ದಿನಚರಿಯನ್ನು ಬದಲಿಸಿಕೊಂಡು ಬದುಕಿಗೆ ಹೊಸ ಆಯಾಮವನ್ನು ಕೊಡಬೇಕು ಎನಿಸುವುದು.

ವೃಷಭ ರಾಶಿ: ಮನಸ್ಸಿನಲ್ಲಿಯೇ ಎಲ್ಲ ಸಂಕಟವನ್ನೂ ನೀವು ಅನುಭವಿಸುವಿರಿ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ನಂಬಿಕೆ ಕಡಮೆ ಆಗುವುದು. ಸಂಬಂಧದಲ್ಲಿ ಹಣಕಾಸಿನ ವ್ಯವಹಾರವನ್ನು ಇಟ್ಟುಕೊಳ್ಳಬೇಡಿ. ಯಾರಾದರೂ ಧನಸಹಾಯವನ್ನು ನಿಮ್ಮ ಬಳಿ ಕೇಳಬಹುದು.‌ ಹಾರಿಕೆಯ ಉತ್ತರ ನೀಡಿ ತಪ್ಪಿಸಿಕೊಳ್ಳಿ. ಶತ್ರುಗಳ ಕುತಂತ್ರವು ನಿಮಗೆ ಲಾಭವೇ ಆಗುವುದು.‌ ಯಾರ ವಿರೋಧವನ್ನೂ ಕಿವಿಗೆ ಹಾಕಿಕೊಳ್ಳದೇ ನಿಮ್ಮದೇ ಮನಸ್ಸಿನಂತೆ ನಡೆಯುವಿರಿ.

ಮಿಥುನ ರಾಶಿ: ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ಸಂಗಾತಿಯ ಮನೋಭಾವವು ನಿಮಗೆ ಇಂದು ಸರಿ ಹೊಂದದು. ವ್ಯವಹಾರದಲ್ಲಿ ನೀವು ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದೀರಿ ಎಂಬ ಭಾವವು ಆಗಾಗ ಬರುವುದು. ಸಂಗಾತಿಯ ಜೊತೆ ವಾಯುವಿಹಾರಕ್ಕೆ ಹೋಗಿ ಖುಷಿಪಡುವಿರಿ. ಒಬ್ಬರೇ ವಾಹನದಲ್ಲಿ ಓಡಾಡುವುದು ಬೇಡ. ಮಕ್ಕಳಿಗೆ ನಿಮ್ಮ ಮೇಲೆ ಇದ್ದಕ್ಕಿದ್ದಂತೆ ಪ್ರೀತಿಯು ಅಧಿಕವಾಗಬಹುದು. ಸ್ನೇಹಿತರ‌ ವಿಚಾರದಲ್ಲಿ ದೃಷ್ಟಿಕೋನ ಬದಲಾದೀತು.

ಕಟಕ ರಾಶಿ: ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ಹಗುರಾದ ಭಾವ ಬರಬಹುದು. ಯಾವುದೋ ಆಲೋಚನೆಯಲ್ಲಿ ಮುಳುಗಿರುವಿರಿ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು. ನಿಮ್ಮ ಹಾಸ್ಯಪ್ರಜ್ಞೆ ಕೆಲವರಿಗೆ ಇಷ್ಟವಾಗದು. ದೇಹವು ಅಧಿಕ ಶ್ರಮದಿಂದ ಆಯಾಸಗೊಳ್ಳುವುದು. ಸಾರ್ವಜನಿಕವಾಗಿ ಗುರುತಿಸಿಕೊಳ್ಳಬೇಕು ಎನಿಸುವುದು. ವಿದ್ಯಾಭ್ಯಾಸಕ್ಕೆಂದು ಹೊರಗೆ ಇರುವವರಿಗೆ ಮನೆಯ ಬಗ್ಗೆಯೇ ನೆನಪಾಗುವುದು. ಹಿರಿಯರ ವಿಚಾರದಲ್ಲಿ ಅನಾದರ ಬೇಡ. ಇಷ್ಟವಿಲ್ಲದ ವಿಚಾರದ ಬಗ್ಗೆ ಮೌನ ವಹಿಸುವಿರಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ