Horoscope: ರಾಶಿಭವಿಷ್ಯ, ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು, ನೇರ ನುಡಿಗಳಿಂದ ಮುಜುಗರ ಉಂಟಾಗಬಹುದು
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 14 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಬ್ರಹ್ಮ, ಕರಣ: ಚತುಷ್ಪಾದ್, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:59 ರಿಂದ ಸಂಜೆ 03:31 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ 10:57ರ ವರೆಗೆ.
ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ಕಛೇರಿಯಲ್ಲಿ ಹೆಚ್ಚಿನ ಕಾರ್ಯವನ್ನು ಮಾಡಲು ಇರಬೇಕಾದೀತು. ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ. ಬೆನ್ನು ನೋವು ಕಾಣಿಸಿಕೊಂಡೀತು.
ವೃಷಭ ರಾಶಿ: ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು ಸೂಕ್ತ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಶ್ರೇಷ್ಠವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಂಡು ಹತಾಶರಾಗುವಿರಿ. ನಿಮ್ಮವರ ಮಾತು ನಿಮಗೆ ಅಸಮಾಧಾನವನ್ನು ಉಂಟುಮಾಡುವುದು. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು. ಮನೆಯಿಂದ ದೂರ ಇದ್ದವರಿಗೆ ತೊಂದರೆ ಬರಬಹುದು.
ಮಿಥುನ ರಾಶಿ: ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ವೈದ್ಯರಿಗೆ ಹೆಚ್ಚಿನ ಅವಕಾಶವು ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಇರುವಿರಿ. ಕೆಲವು ವಿಚಾರದಲ್ಲಿ ನಿಮಗೆ ನಿರ್ದಿಷ್ಟತೆ ಇರದು.
ಕರ್ಕ ರಾಶಿ: ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಅಜ್ಞಾನವನ್ನು ನೀವೇ ತೋರಿಸಿಕೊಳ್ಳುವಿರಿ. ನಮ್ಮದೇ ಸರಿ ಎನ್ನುವ ವಾದವು ಸರಿಯಾಗದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ. ಸಂಗಾತಿಯ ಇಂಗಿತವನ್ನು ಅರ್ಥಮಾಡಿಕೊಳ್ಳಲಾರಿರಿ.
Published On - 12:10 am, Thu, 14 September 23