ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 15 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ವಿಶಾಖಾ, ಯೋಗ: ವೈಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಸಂಜೆ 04:43 ರಿಂದ 06:12ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:18 ರಿಂದ 01:47ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:15 ರಿಂದ 04:43ರ ವರೆಗೆ.
ಮೇಷ ರಾಶಿ: ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಆಹಾರ ವ್ಯತ್ಯಾಸದಿಂದ ದೇಹ ಬಾಧೆಯು ಕಾಣಿಸಿಕೊಳ್ಳುವುದು. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ನಿಮ್ಮ ಬಂಧುಗಳು ಭೇಟಿ ಮಾಡಿ ಸಮಯವನ್ನು ಹಾಳುಮಾಡುವರು. ಹಿರಿಯರ ಮೇಲಿದ್ದ ನಿಮ್ಮ ಪೂರ್ವಾಗ್ರಹ ಬೇಡ. ಮನಸ್ಸು ಬಹಳ ಗೊಂದಲದಲ್ಲಿ ಸಿಕ್ಕಿಕೊಳ್ಳಲಿದೆ. ಮನಸ್ಸನ್ನು ಸ್ವಲ್ಪ ಕಾಲ ಬೇರೆ ಕಾರ್ಯಕ್ಕೆ ಜೋಡಿಸಬೇಕಾಗುವುದು.
ವೃಷಭ ರಾಶಿ: ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ಕೆಟ್ಟ ಸನ್ನಿವೇಶವನ್ನು ನೀವು ಅನಿವಾರ್ಯವಾಗಿ ಎದುರಿಸಬೇಕಾಗಬಹುದು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ಹೂಡಿಕೆಯ ಬಗ್ಗೆ ನಿಮ್ಮ ಗಮನವು ಹೆಚ್ಚಾಗಿರಲಿದೆ. ಸ್ವಂತ ಕೆಲಸಗಳಿಗೆ ಸಮಯ ಹೊಂದಾಣಿಕೆ ಮಾಡುವುದು ಕಷ್ಟ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಯಾರದೋ ಮಾತು ನಿಮಗೆ ಮನಸ್ಸನ್ನು ಮುಟ್ಟಿ ಪರಿವರ್ತನೆ ಆಗಬಹುದು. ಸಹೋದರರು ನಿಮ್ಮ ಕಾರಣಕ್ಕೆ ಪಶ್ಚಾತ್ತಾಪ ಪಡುವರು. ಆರೋಗ್ಯದ ಸ್ಥಿತಿಯು ದೃಢವಾಗಿರಲು ಬೇಕಾದ ಕ್ರಮವನ್ನು ಮಾಡುವಿರಿ. ಪ್ರಾಣಿಗಳ ಜೊತೆ ಸಖ್ಯಮಾಡುವುದು ಇಷ್ಟವಾದೀತು..
ಮಿಥುನ ರಾಶಿ: ಸಾಲವನ್ನು ಹಿಂದಿರುಗಿಸಲು ನಿಮ್ಮ ಹೂಡಿಕೆಯನ್ನು ತೆಗೆಯಬೇಕಾಗುವುದು. ಕೆಲವು ವ್ಯವಹಾರದಲ್ಲಿ ನೀವು ಹಿಂದುಳಿದಂತೆ ನಿಮಗೆ ಅರಿವಾಗುವುದು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಒಂದೇರೀತಿಯ ಕೆಲಸವು ನಿಮಗೆ ಬೇಸರ ತರಿಸಬಹುದು. ಪ್ರೀತಿಯು ಸಪ್ಪೆಯಂತೆ ನಿಮಗೆ ಕಾಣಿಸುವುದು. ಹೊಸ ವಸ್ತುಗಳನ್ನು ಖರೀದಿಸುವಿರಿ. ಧಾರ್ಮಿಕ ಶ್ರದ್ಧೆಯಿಂದ ಉತ್ತಮವಾದುದನ್ನು ಸಾಧಿಸುವಿರಿ. ಪ್ರೀತಿಯಿಂದ ಹೇಳಿದರೂ ಯಾರೂ ಮಾತು ಕೇಳುವರು.
ಕರ್ಕ ರಾಶಿ: ಉನ್ನತವಾದ ವಿದ್ಯಾಭ್ಯಾಸದ ಕನಸನ್ನು ನೀವು ನನಸು ಮಾಡಿಕೊಳ್ಳುವಿರಿ. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಬಂಧುಗಳಿಂದ ಮನೆಯು ತುಂಬಿರುವುದು. ಸಾಮಾಜಿಕ ಗೌರವವನ್ನು ಪಡೆಯುವ ನಿರೀಕ್ಷೆಯು ಹುಸಿಯಾಗುವುದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತ ಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು. ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿಕೊಳ್ಳಿ. ನಿಮಗೆ ಬೇಕಾದ ಹಣವು ಸರಿಯಾದ ಸಮಯಕ್ಕೆ ಸಿಗದೆ ಆಂತಕವಾಗುವುದು. ಸಂಗಾತಿಯನ್ನು ಸಂತೋಷವಾಗಿ ಇಡಲು ಏನಾದರೂ ಉಡುಗೊರೆಯನ್ನು ನೀಡುವಿರಿ. ವ್ಯಾಪಾರದಲ್ಲಿ ನಿಮ್ಮ ಆಲೋಚನೆಯು ತಲೆಕೆಳಗಾಗುವುದು.