AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರು ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 16, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 16 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:50 ರಿಂದ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:46 ರಿಂದ 03:15ರ ವರೆಗೆ.

ಮೇಷ ರಾಶಿ: ನೌಕರರ ತಪ್ಪಿನಿಂದ ನೀವು ಹಣವನ್ನು ಖರ್ಚು ಮಾಡಬೇಕಾದೀತು. ಕೃಷಿಯಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು. ಮಕ್ಕಳ ವಿಚಾರದಲ್ಲಿ ಮಾನಸಿಕ ಹಿಂಸೆಯು ಆಗಲಿದೆ. ಒಂದೇ ಕಾರ್ಯವನ್ನು ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುವಿರಿ. ಒತ್ತಡ ನಿವಾರಣೆಗೆ ಧ್ಯಾನ ಹಾಗೂ ಯೋಗಾಭ್ಯಾಸವು ಬೇಕಾಗುವುದು. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ.‌ ದುರಭ್ಯಾಸಕ್ಕೆ ಅವಕಾಶಗಳು ಬರಲಿದ್ದು ಆಲೋಚಿಸಿ ಮುಂದುವರಿಯಿರಿ. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ನಕ್ಕಾರು. ನಿಮ್ಮ‌ ವೇಷಭೂಷಣದ ಬಗ್ಗೆ ಟೀಕಿಸುವರು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ. ಸಂಗಾತಿಯು ನಿಮ್ಮಿಂದ ಪ್ರೀತಿಯನ್ನು ನಿರೀಕ್ಷಿಸುವರು.

ವೃಷಭ ರಾಶಿ: ನೀವು ಯಶಸ್ಸನ್ನು ಗಳಿಸದಂತೆ ಹಿತಶತ್ರುಗಳು ಅಡ್ಡಗಾಲು ಹಾಕುವಿರಿ. ಆಭರಣದ ವಿಚಾರದಲ್ಲಿ ಜಾಗರೂಕತೆ ಇರಲಿ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ಇಂದು ಹೆಚ್ಚು ಮಾನಸಿಕ ಒತ್ತಡವು ಇರದಿದ್ದರೂ ಅಧಿಕ ಕಾರ್ಯವು ಇರಲಿದೆ. ಇಷ್ಟವಿಲ್ಲದ ಕೆಲಸವನ್ನು ಮಾಡಲು ಯಾರು ಒತ್ತಾಯಿಸಿದರೂ ಮಾಡುವುದಿಲ್ಲ. ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಿರಲು ನೀವು ಹೆಚ್ಚು ಇಷ್ಟಪಡುವಿರಿ. ಯಾರ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು. ಸೌಂದರ್ಯದ ಕಡೆ ನಿಮ್ಮ ಗಮನವಿರುವುದು. ನಿಮ್ಮ ಉದ್ದೇಶವನ್ನು ಸಾಕಾರಗೊಳಿಸುವತ್ತ ಸಾಗುವಿರಿ.

ಮಿಥುನ ರಾಶಿ: ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ. ಅಭಿನಯ ಕ್ಷೇತ್ರದಲ್ಲಿ ನಿಮಗೆ ಅವಕಾಶಗಳು ಸಿಗಲಿವೆ. ನ್ಯಾಯಾಲಯದ ವಿಚಾರವನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಭೋಗವಸ್ತುಗಳ ಖರೀದಿಯನ್ನು ಹೆಚ್ಚು ಮಾಡುವಿರಿ. ಕಛೇರಿಯಲ್ಲಿ ಅನಿರೀಕ್ಷಿತ ಒತ್ತಡವು ಬಂದು ಮುತ್ತಿಕೊಂಡು ದಿಕ್ಕು ತೋಚದಂತೆ ಆಗುವುದು. ನಿಮ್ಮ ಮಾತಿನ ಹಾಸ್ಯವು ಇನ್ನೊಬ್ಬರಿಗೆ ಬೇಸರವಾಗುವುದು. ನೀವು ಇನ್ನೊಬ್ಬರ ಮೇಲಿಟ್ಟ ವಿಶ್ವಾಸಕ್ಕೆ ಧಕ್ಕೆಯಾಗುವುದು. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ‌ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ. ನಿಷ್ಠುರ ಮಾತುಗಳನ್ನು ಆಡುವುದು ಬೇಡ. ನಿಮ್ಮ ವೈಯಕ್ತಿಕ ಕೆಲಸಗಳನ್ನು ಬಿಡುವಿಲ್ಲದ ಸಮಯದಲ್ಲಿಯೂ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಆಲೋಚನೆಯಲ್ಲಿ ಮಗ್ನರಾಗುವಿರಿ.

ಕರ್ಕ ರಾಶಿ: ಎಷ್ಟೋ ದಿನಗಳ ಹಿಂದೆಯೇ ಆಲೋಚಿಸಿದ್ದ ಕಾರ್ಯಗಳನ್ನು ನೀವು ಮತ್ತೆ ಆರಂಭಿಸಲು ಮನಸ್ಸು ಮಾಡುವಿರಿ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ನೀವು ಅಶಿಸ್ತಿನ ಸ್ವಭಾವವನ್ನು ಬದಲಾಯಿಸಿಕೊಳ್ಳಬೇಕು. ವೇತನವನ್ನು ಹೆಚ್ಚಿಸಲು ಅಧಿಕಾರಿಗಳನ್ನು ಕೇಳಿಕೊಳ್ಳುವಿರಿ. ದೂರದ ಬಂಧುಗಳ ಭೇಟಿಯಿಂಸ ನಿಮಗೆ ಸಂತೋಷವಾಗುವುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳುವಿರಿ. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ಅಹಂಕಾರದಿಂದ ಬೀಗುವುದು ಬೇಡ. ನಿಮ್ಮ ಸಮಾಧಾನದ ಚಿತ್ತವನ್ನು ಯಾರಾದರೂ ಕೆಡಿಸಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ