ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 16 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವೈಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:25 ರಿಂದ 10:56 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:23 ರಿಂದ 03:30ರವರೆಗೆ, ಗುಳಿಕ ಕಾಲ ಸಂಜೆ 06:23 ರಿಂದ 07:54ರ ವರೆಗೆ.
ಮೇಷ ರಾಶಿ: ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಕೆಟ್ಟ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ನೀವು ಸ್ಪರ್ಧೆಯಲ್ಲಿ ಜಯಗಳಿಸಲು ಬಹಳ ಪ್ರಯತ್ನಿಸಬೇಕಾಗುವುದು. ಕಾನೂನುಸಮರಕ್ಕೆ ನಿಮಗೆ ಹೊಸ ಆಯಾಮ ಸಿಗಲಿದೆ. ಲಾಭವನ್ನು ಪಡೆಯಲು ಹೋಗಿ ಇರುವ ಸಂಪತ್ತನ್ನೂ ನಷ್ಟವಾಗಬಹುದು.
ವೃಷಭ ರಾಶಿ: ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ವಿದೇಶಪ್ರಯಾಣದ ಗುಂಗಿನಲ್ಲಿ ನೀವು ಇರುವಿರಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗುವುದು. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಉದ್ಯಮವು ಸಕ್ರಿಯವಾಗಿದ್ದು ಇದನ್ನು ವಿಸ್ತರಿಸುವಿರಿ. ನಿಮ್ಮನ್ನು ಇಷ್ಟಪಟ್ಟವರು ನಿಮ್ಮನ್ನು ಕಡೆಗಣಿಸಬಹುದು. ಇದು ನಿಮಗೆ ಸಂತೋಷವೂ ಆಗುವುದು.
ಮಿಥುನ ರಾಶಿ: ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಉಪಯೋಗಿಸಿಕೊಳ್ಳಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಯಲ್ಲಿ ಹಣವಿದ್ದಷ್ಟು ಖರ್ಚು ತಾನಾಗಿಯೇ ಹುಡುಕಿಕೊಂಡು ಬರಬಹುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ. ಇಂದಿನ ದಿನವನ್ನು ಆನಂದಿಸಲು, ಜವಾಬ್ದಾರಿಯ ಕೆಲಸಗಳನ್ನು ಪೂರೈಸುವತ್ತ ಗಮನವಿರಲಿ. ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಚಿಂತೆನೆಗಳು ಉತ್ತಮವಾಗಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.
ಕಟಕ ರಾಶಿ: ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ನಡೆಯುತ್ತಲೇ ಇರುವುದು. ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು. ಸಂಗಾತಿಯ ಜೊತೆ ಹೊಂದಾಣಿಕೆಯನ್ನು ಬೆಳೆಸಿಕೊಳ್ಳದಿದ್ದರೆ ಕಷ್ಟವಾದೀತು. ಹಿಂದಿನ ಹಣಕಾಸಿನ ಸಮಸ್ಯೆಯು ಇಂದೂ ಕಾಣಿಸಿಕೊಳ್ಳಬಹುದು. ನಿಮ್ಮ ಸಾಧನೆಯನ್ನು ನೀವು ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮಹತ್ತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸೂಕ್ಷ್ಮತೆಯ ಅಗತ್ಯತೆ ಇದೆ. ತಂತ್ರವನ್ನು ಹೂಡಿ ನಿಮ್ಮ ಹಿತಶತ್ರುವನ್ನು ಕಂಡುಕೊಳ್ಳುವಿರಿ.