Horoscope: ರಾಶಿಭವಿಷ್ಯ, ಈ ರಾಶಿಯವರು ತಮ್ಮವರನ್ನು ಕಂಡು ಅಸೂಯೆಪಡುವಿರಿ, ಒತ್ತಡ ಹೆಚ್ಚುವುದು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 17, 2023 | 12:10 AM

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರು ತಮ್ಮವರನ್ನು ಕಂಡು ಅಸೂಯೆಪಡುವಿರಿ, ಒತ್ತಡ ಹೆಚ್ಚುವುದು
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 17 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು,
ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ:
ತೃತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:14 ರಿಂದ 04:42ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:22 ರಿಂದ 10:50ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:18 ರಿಂದ 01:46ರ ವರೆಗೆ.

ಇಂದು ನವರಾತ್ರದ ಮೂರನೆಯ ದಿನ. ಚಂದ್ರಘಂಟಾ ಎನ್ನವ ದೇವಿಯನ್ನು ಆಹ್ವಾನಿಸಿ, ಆರಾಧಿಸುವ ದಿನ. ಆಕೆಯ ಸ್ತೋತ್ರವನ್ನು ಮಾಡಿ ಮಾತೆಯ ಅನುಗ್ರಹವನ್ನು ಪಡೆಯಿರಿ.

ಪಿಂಡಜಪ್ರವರಾರೂಢಾ
ಚಂಡಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೇ ಮಹ್ಯಂ
ಚಂದ್ರಘಂಟೇತಿ ವಿಶ್ರುತಾ ||

ಮೇಷ ರಾಶಿ: ಮನೆಯ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ. ವಾಹನ ಖರೀದಿಗೆ ಮನೆಯಲ್ಲಿ ಮನಸ್ಸು ಮಾಡುವುದಿಲ್ಲ. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡುವುದು. ಗೊಂದಲದಲ್ಲಿ ನೀವು ಇರಬೇಕಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ನಿಮ್ಮವರನ್ನು ನೀವು ಬಿಟ್ಟಕೊಡಲು ಇಷ್ಟಪಡುವುದಿಲ್ಲ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ಹೆಚ್ಚು ಖುಷಿಕೊಡುವುದು. ಇನ್ನೊಬ್ಬರನ್ನು ಹಾಸ್ಯ ಮಾಡುತ್ತ ಇಂದಿನ ಹೆಚ್ಚು ಸಮಯವನ್ನು ಕಳೆಯುವಿರಿ. ಸಂಗಾತಿಯ ಕೆಲವು ಮಾತುಗಳು ನಿಮಗೆ ಸರಿ ಎನಿಸದು. ಶುಭ ಸುದ್ದಿಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಪಾರ್ವತಿಯನ್ನು ಸ್ತುತಿಸಿ, ಸಕಲ ಇಷ್ಟಾರ್ಥವನ್ನು ಸುರಿಸುವಳು.

ವೃಷಭ ರಾಶಿ: ನಿಮ್ಮವರನ್ನು ಕಂಡು ನೀವು ಅಸೂಯೆಪಡುವಿರಿ. ಆಹಾರವು ನಿಮಗೆ ರುಚಿಸದೇ ಹೋಗುವುದು. ಮಕ್ಕಳಿಗೆ ಜೊತೆ ಇದ್ದು ಕಲಿಕೆಗೆ ಬೇಕಾದ ಸಹಾಯವನ್ನು ಮಾಡುವಿರಿ. ದೂರ ಪ್ರಯಾಣದಿಂದ ಆರೋಗ್ಯವು ಹದಗೆಡಬಹುದು. ಕಾರ್ಯದ ಆರಂಭದಲ್ಲಿ ಒತ್ತಡವು ಹೆಚ್ಚು ಇರುವುದು. ನಿಮ್ಮ ಇಂದಿನ ಖರ್ಚಿಗೆ ಕಡಿವಾಣ ಹಾಕುವುದು ಅಸಾಧ್ಯವಾಗಬಹುದು. ದುರ್ಬಲರ ಮೇಲೆ ನೀವು ಸಿಟ್ಟಾಗುವಿರಿ. ಯಾವುದೇ ಕಾರ್ಯಕ್ಕೂ ನೀವು ಮುನ್ನುಗ್ಗುವುದು ಇಷ್ಟವಾಗದು. ವ್ಯವಹಾರದಲ್ಲಿ ನೀವು ಸರಿಯಾಗಿ ಇರದೇ ಇರುವುದು ನಿಮಗೆ ಕಷ್ಟವಾಗಬಹುದು. ಇಂದಿನ ಕಾರ್ಯವು ನಿಮ್ಮ ಸಮಯವನ್ನು ಹಾಳುಮಾಡುವುದು. ಲಲಿತಾದೇವಿಯನ್ನು ಆರಾಧಿಸಿ.

ಮಿಥುನ ರಾಶಿ: ಕಛೇರಿಯಲ್ಲಿ ಸ್ತ್ರೀಯರಿಂದ ಅಪಮಾನವಾಗಬಹುದು. ನಿಮ್ಮ ತಪ್ಪುಗಳು ನಿಮಗೆ ಗೊತ್ತಾಗದೇ ಇನ್ನೊಬ್ಬರು ತಿಳಿಸಬೇಕಾಗುವುದು. ಅನಿವಾರ್ಯವಾಗಿ ಸಣ್ಣ ಸಾಲವನ್ನು ಮಾಡುವ ಸ್ಥಿತಿಯು ಬರಬಹುದು. ಮಂಗಲ ಕಾರ್ಯಕ್ಕೆ ಬಹಳ ಸಿದ್ಧತೆಯನ್ನು ಮಾಡುವಿರಿ. ಪ್ರಯಾಣದ ಆಯಾಸವು ನಿಮ್ಮನ್ನು ವಿಶ್ರಾಂತಿಗೆ ಕಳುಹಿಸಬಹುದು. ನಿಮ್ಮದೊಂದೇ ಸಮಸ್ಯೆ ಎನ್ನುವಂತೆ ಬಹಳ ಚಿಂತೆಯಿಂದ ಇರುವಿರಿ. ಇಂದು ನಿಮಗೆ ಕುಟುಂಬದ ಜೊತೆ ಇರುವುದು ಖುಷಿ ಕೊಡದು. ಆರ್ಥಿಕತೆಯ ವಿಚಾರದಲ್ಲಿ ನೀವು ನಿಷ್ಠುರತೆ ಇರಲಿದೆ. ಸಂಗಾತಿಯ ಬೇಸರವನ್ನು ಸಾಂತ್ವನ ಮಾಡಿ ಬಗೆಹರಿಸುವಿರಿ. ಆಕಸ್ಮಿಕವಾಗಿ ಅಸದ ಧನಲಾಭವನ್ನು ಬಿಟ್ಟುಕೊಡುವಿರಿ. ನಿಮ್ಮ ನಿರಂತರ ಪರಿಶ್ರಮದಿಂದ ನಿಮ್ಮ ಕಾರ್ಯವು ಸಫಲವಾಗುವುದು.

ಕರ್ಕ ರಾಶಿ: ಉದ್ಯೋಗದಲ್ಲಿ ವರ್ಗಾವಣೆ ಆಗುವ ಸಾಧ್ಯತೆ ಇದ್ದು, ಮನೆಯಿಂದ ದೂರವಿರಬೇಕಾದೀತು. ಇಷ್ಟಾರ್ಥವು ನಿನಗೆ ಸಿದ್ಧಿಯಾಗುವ ಬಗ್ಗೆ ನಿಮಗೆ ಅನುಮಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧನಾ ಮಾಡಬೇಕಾದೀತು. ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು. ವ್ಯವಸ್ಥೆ ವ್ಯವಹಾರದಿಂದ ಚುರುಕುತನದ ಅವಶ್ಯಕತೆ ಇರುವುದು. ನಿಮ್ಮ‌ ಮಾತು ನೇರವಾಗಿಯೂ ಸ್ಪಷ್ಟವಾಗಿಯೂ ಇರಲಿ.‌ ಮನೆಯನ್ನು ಬದಲಿಸುವಿರಿ. ನೀವು ನಿಮ್ಮನ್ನೇ ಪ್ರಶಂಸಿಸಿಕೊಳ್ಳುವುದು ಸರಿ ಕಾಣಿಸದು. ಮಕ್ಕಳ ವಿಚಾರದಲ್ಲಿ ನೀವು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಿ. ಗೌಪ್ಯ ಸಂಗತಿಯನ್ನು ನೀವು ಇನ್ನೊಬ್ಬರಿಗೆ ಹೇಳುಬಿಡುವಿರಿ. ಎಷ್ಟೇ ಸಮಾಧನವಿದ್ದರೂ ಒತ್ತಡವು ನಿಮ್ಮ ಮನಸ್ಸನ್ನು ಕೆಡಿಸುವುದು.