Horoscope: ದಿನಭವಿಷ್ಯ, ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತೆ ಪಡುವುದು ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತೆ ಪಡುವುದು ಬೇಡ
ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Oct 18, 2023 | 12:15 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:18ರ ವರೆಗೆ.

ಮೇಷ ರಾಶಿ: ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ಹಳೆಯ ಘಟನೆಗಳು ನಿಮಗೆ ಮತ್ತೆ ಮತ್ತೆ ಪ್ರಚೋದನೆಯನ್ನು ಕೊಡುವುವು. ನಿಮ್ಮ ಮನೋಬಲವನ್ನು ಕುಗ್ಗಿಸುಲು ಸಹೋದ್ಯೋಗಿಗಳ ಪ್ರಯತ್ನ‌ ಇರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಉನ್ನತ ಹುದ್ದೆಗೆ ಅವಕಾಶವು ಸಿಗಲಿದ್ದು ಸ್ಥಳ ಬದಲಾವಣೆಯ ಚಿಂತೆ‌ ಕಾಡಬಹುದು. ಮಹಾಲಕ್ಷ್ಮಿಯ ಸ್ವರೂಪವಾದ ಕೂಷ್ಮಾಂಡಾ ದುರ್ಗೆಯನ್ನು ಸಂಪ್ರಾರ್ಥಿಸಿ.

ವೃಷಭ ರಾಶಿ: ಇನ್ನೊಬ್ಬರ ಜೊತೆ ಕಾಲಹರಣ ಮಾಡುವುದನ್ನು ಬಿಟ್ಟು ಸದುಪಯೋಗವಾಗುವಂತಹ ಕೆಲಸದ ಕಡೆ ನಿಮ್ಮ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತೆ ಪಡುವುದು ಬೇಡ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಕಾರಣಾಂತರಗಳಿಂದ ಬೇರೆ ಕಡೆ ವಾಸ ಮಾಡುವ ಸಂದರ್ಭವು ಬರಬಹುದು. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ಎಲ್ಲರ ಜೊತೆ ಬೆರೆಯುವ ಅವಕಾಶಗಳು ಇಂದು ಕಡಿಮೆ‌ ಇರಲಿದೆ. ಸ್ವತಂತ್ರವಾಗಿ ಬದುಕಬೇಕು ಎಂಬ ಇಚ್ಛೆಯು ಜಾಗರೂಕವಾಗಲಿದೆ. ನಿಮ್ಮ ಬಗ್ಗೆ ಮಾತನಾಡುವವರನ್ನು ನೀವು ಲಕ್ಷ್ಯಕ್ಕೆ ತೆಗೆದುಕೊಳ್ಳುವುದಿಲ್ಲ. ಕೆಟ್ಟ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು.

ಮಿಥುನ ರಾಶಿ: ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಕಣ್ಣಿನ ತೊಂದರೆಯು ಪುನಃ ಕಾಣಿಸಿಕೊಳ್ಳಬಹುದು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಸಂಗಾತಿಯ ಸ್ವಭಾವವು ಇಂದು ಸ್ಪಷ್ಟವಾಗಿ ತಿಳಿಯಿತು ಎಂದು ಅಂದುಕೊಂಡಿರುವಿರಿ. ನಿಮ್ಮ ಗುರಿಯನ್ನು ಬದಲಿಸುವುದು ಬೇಡ. ಸಮಯವನ್ನು ಹೆಚ್ಚು ತೆಗೆದುಕೊಳ್ಳಿ. ಪ್ರಾಮಾಣಿಕತೆಗೆ ಪ್ರಶಂಸೆಯು ಎಲ್ಲರಿಂದ‌ ಸಿಗುವುದು. ಬಣ್ಣದ ಮಾತಿಗೆ ಮರುಳಾಗುವುದು ಬೇಡ. ಮಕ್ಕಳ‌ ಮಾತುಗಳು‌ ನಿಮಗೆ ಅಚ್ಚರಿಯನ್ನು ಉಂಟುಮಾಡೀತು.

ಕರ್ಕಾಟಕ ರಾಶಿ: ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ಸಂಪರ್ಕವನ್ನೂ ಮಾಡುವಿರಿ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ಉದ್ಯೋಗದಲ್ಲಿ ನೀವು ಜಾಣತನವನ್ನು ತೋರಿಸುವ ಅವಶ್ಯಕತೆ ಇಲ್ಲ. ಪ್ರಯಾಣದಲ್ಲಿ ಜಾಗರೂಕತೆ ಮುಖ್ಯವಾಗಿರಲಿ. ಮನೆಯಲ್ಲಿ ಬದಲಾಯಿಸುವ ಸಂದರ್ಭವು ಬರಬಹುದು. ದೈಹಿಕ ಶ್ರಮವನ್ನು ನೀವು ಹೆಚ್ಚು ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಭಾವವು ತೋರುವುದು. ಕೋಪದಲ್ಲಿ ಹಿಡಿತವನ್ನು ಕಳೆದುಕೊಂಡು ಏನನ್ನಾದರೂ ಹೇಳಿಬಿಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!