Horoscope: ರಾಶಿಭವಿಷ್ಯ, ಮನಸ್ಸಿನೊಳಗೆ ನೋವು ಇಟ್ಟುಕೊಂಡು ಸಂಕಟ ಪಡುವಿರಿ, ಸಣ್ಣ ವಿಚಾರಕ್ಕೂ ಕೋಪ ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಮನಸ್ಸಿನೊಳಗೆ ನೋವು ಇಟ್ಟುಕೊಂಡು ಸಂಕಟ ಪಡುವಿರಿ, ಸಣ್ಣ ವಿಚಾರಕ್ಕೂ ಕೋಪ ಬೇಡ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 18, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 18 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ 12:27ರವರೆಗೆ, ಗುಳಿಕ ಕಾಲ ಸಂಜೆ 01:58 ರಿಂದ 03:29ರ ವರೆಗೆ.

ಮೇಷ ರಾಶಿ: ನೋವನ್ನು ಮನಸ್ಸಿನೊಳಗೇ ಇಟ್ಟುಕೊಂಡು ಸಂಕಟಪಡುವಿರಿ. ಸಣ್ಣ ವಿಚಾರಕ್ಕೂ ಕೋಪಗೊಳ್ಳುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಕಡಿಮೆ ಇರುವುದು.‌ ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃತ್ತಿಯಲ್ಲಿ ನಿಮ್ಮ‌ ಸೇವೆಯು ಗಣನೀಯವಾಗಿರುವುದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಸಿಕೊಳ್ಳುವರು.

ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುವರು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು‌ ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನಿಮಗೆ ಮುಜುಗರವಾದೀತು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ವಾಗ್ವಾದ ಆಗಬಹುದು.

ಮಿಥುನ ರಾಶಿ: ಹಿರಿಯರಿಗೆ ಅಗೌರವದ ಮಾತುಗಳನ್ನು ಆಡುವಿರಿ. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ನಿಮ್ಮ ನಿರ್ಧಾರಕ್ಕೆ ನಿಮಗೆ ಸಂಪೂರ್ಣ ಬೆಂಬಲವಿರುವುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ಭವಿಷ್ಯದ ಬಗ್ಗೆ ಚಿಂತೆ ಇದ್ದರೂ ಬಂದಂತೆ ಸ್ವೀಕರಿಸಬೇಕು ಎಂದು ನಿರ್ಧರಿಸುವಿರಿ. ಸಂಗಾತಿಯ ಮಾತಿನಿಂದ ಸಿಟ್ಟಾಗುವಿರಿ. ಇಂದು ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಬಹುದು. ಆಟದತ್ತ ನಿಮಗೆ ಗಮನ ಇರಲಿದೆ.

ಕಟಕ ರಾಶಿ: ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ಕಣ್ಣಿಗೆ ಪರಮಸ್ವಾರ್ಥಿ ಎನಿಸಿಕೊಳ್ಳುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಆರೋಗ್ಯವು ಸ್ಥಿರವಾಗಿರುವಂತೆ ನೋಡಿಕೊಳ್ಳಿ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ