AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಬಹಳ‌ ದಿನಗಳ‌ ಅನಂತರ ಮನೆಯ ಬಗ್ಗೆ ಆಲೋಚಿಸುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಬಹಳ‌ ದಿನಗಳ‌ ಅನಂತರ ಮನೆಯ ಬಗ್ಗೆ ಆಲೋಚಿಸುವಿರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 19, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 19 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:46 ರಿಂದ 03:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:26 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:22 ರಿಂದ ಮಧ್ಯಾಹ್ನ 10:50ರ ವರೆಗೆ.

ಮೇಷ ರಾಶಿ: ನಿಮ್ಮ‌ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ‌ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಆಕಸ್ಮಿಕವಾಗಿ ಸ್ನೇಹಿತರಿಂದ ಉಡುಗೊರೆ ಸಿಗಲಿದೆ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿದೇಶದ ಜೊತೆ ವ್ಯಾಪಾರದ ಸಂಪರ್ಕವನ್ನು ಬೆಳೆಸಿಕೊಳ್ಳುವಿರಿ.‌ ನಿಮ್ಮ‌‌ಕೆಲಸದ ಬಗ್ಗೆ ಹಗುರವಾಗಿ ಮಾತನಾಡಿಯಾರು. ಶುಭಸಮಯವನ್ನು ನಿರೀಕ್ಷೆಯಷ್ಟೇ ಮಾಡಬಹುದು. ಪಾಪಿ ಸಮುದ್ರಕ್ಕಿಳಿದರೂ ಮೊಣಕಾಲು ನೀರು ಎಂಬಂತಾಗುವುದು.

ವೃಷಭ ರಾಶಿ: ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ಸುಲಭವಾಗಿ ದೊರೆಯುವುದನ್ನು ಇಷ್ಟಪಡುವುದಿಲ್ಲ. ಒಂಟಿತನವು ನಿಮಗೆ ಅಭ್ಯಾಸವಾಗಲಿದ್ದು ನಿಶ್ಚಿಂತೆಯಿಂದ ಇರುವಿರಿ. ಲೆಕ್ಕ ಶೋಧಕರು ಹೆಚ್ಚಿನ ಒತ್ತಡದಲ್ಲಿ ಇರುವರು. ಅಪರಿಚಿತರ ಜೊತೆ ಸಲುಗೆಯ ವ್ಯವಹಾರವು ಬೇಡ. ಸಂಗಾತಿಯ ಮಾತು ನಿಮಗೆ ಇಷ್ಟವಾಗದಿರುವುದು. ವಾಹನ ಖರೀದಿಗೆ ನಿಮ್ಮ‌ ಸಹಮತವಿರದು. ನಿಜವನ್ನು ಮುಚ್ಚಿಡಬೇಕಾಗುವುದು. ಉದ್ವೇಗದಲ್ಲಿ ಏನಾದರೂ ಹೇಳುವಿರಿ. ಸಹನೆಯು ಕೈತಪ್ಪಿ ಹೋಗುವುದು.

ಮಿಥುನ ರಾಶಿ: ಹೊಸ ಉದ್ಯಮದ‌ ಸಲುವಾಗಿ ಉದ್ಯಮಿಗಳನ್ನು ಭೇಟಿ ಮಾಡುವಿರಿ. ಸಾಲವನ್ನು ಮಾಡಬೇಕಾಗಿಬರಬಹುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ನಿಮ್ಮ ಸ್ವಭಾವವನ್ನು ಮರೆಮಾಚುವುದು ಕಷ್ಟಸಾಧ್ಯ. ಅಚಾತುರ್ಯದಿಂದ ತಪ್ಪು ನಡೆಯಬಹುದು. ಹಳೆಯ ಹೂಡಿಕೆಯು ಪ್ರಯೋಜನಕ್ಕೆ ಬರಲಿದೆ. ಕಛೇರಿಯ ಒತ್ತಡದಿಂದ ವಿರಾಮವನ್ನು ಪಡೆದು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಉದ್ಯೋಗದ ನಿಮಿತ್ತ ಅನಿವಾರ್ಯವಾಗಿ ಓಡಾಟ ಮಾಡುವ ಸಂದರ್ಭವು ಬರಬಹುದು. ನಂಬಿಕೆಯನ್ನು ಉಳಿಸಿಕೊಳ್ಳಲು ನೀವು ಕಷ್ಟಪಡಬೇಕಾದೀತು. ಹೊಸ ಮಿತ್ರರ ಜೊತೆ ಸಮಾಲೋಚನೆಯನ್ನು ಮಾಡುವಿರಿ. ಬಹಳ‌ ದಿನಗಳ‌ ಅನಂತರ ಮನೆಯ ಬಗ್ಗೆ ಆಲೋಚನೆ ಬರಲಿದೆ.

ಕರ್ಕ ರಾಶಿ: ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಗೊಂದಲ ಬರಬಹುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು. ನೂತನ ವಸ್ತ್ರಗಳನ್ನು ಖರೀದಿಸುವಿರಿ. ಆರ್ಥಿಕತೆಯ ತೊಂದರೆಯಿಂದ ನಿಮ್ಮ ಕೆಲವು ವಸ್ತುಗಳನ್ನು ಮಾರಾಟ ಮಾಡುವಿರಿ. ನಿಮ್ಮ ಅಪ್ರಾಮಣಿಕತೆಯು ಕೆಲವರಿಗೆ ಗೊತ್ತಾಗಬಹುದು. ಪ್ರಯಾಣ‌ ಮಾಡವ ಮನಸ್ಸಿದ್ದರೂ ಶರೀರಕ್ಕೆ ಅಸಾಧ್ಯ ಎನಿಸಬಹುದು. ಹಠದ ಸ್ವಭಾವದಿಂದ ಸಹೋದ್ಯೋಗಿಗಳಿಗೆ ಸಹಾಯವನ್ನು ಮಾಡುವುದಿಲ್ಲ. ನಿಮ್ಮದೇ ವಸ್ತುವು ನಿಮಗೆ ಹೊಸದರಂತೆ ತೋರುವುದು. ಧ್ಯಾನದಲ್ಲಿ ಮನಸ್ಸನ್ನು ಇಡುವುದು ಬೇಕಾಗಬಹುದು.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್