ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 20 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 01:57ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:26ರ ವರೆಗೆ.
ಮೇಷ ರಾಶಿ: ನಿಮಗೆ ಸಂಬಂಧಿಸದ ವಿಚಾರಕ್ಕೆ ನೀವು ಮಧ್ಯ ಪ್ರವೇಶ ಮಾಡುವುದು ಬೇಡ. ಪ್ರೀತಿಯಲ್ಲಿ ಅಂತರವು ಬಂದಂತೆ ತೋರಿದ್ದು ಮಾತುಕತೆಯಿಂದ ಅದನ್ನು ಸರಿ ಮಾಡಿಕೊಳ್ಳುವುದು ಉಚಿತ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಇನ್ನೊಬ್ಬರಿಗೆ ಮೀಸಲಿಡಬೇಕಾದೀತು. ಸಂಗಾತಿಯ ನೋವಿಗು ಸ್ಪಂದಿಸಲು ಕಷ್ಟವಾದೀತು. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮ್ಮೊಳಗೆ ಆತಂಕಕ್ಕೆ ಸೃಷ್ಟಿಸುವುದು. ಮಕ್ಕಳ ತಿರುಗಾಟವನ್ನು ಕಡಿಮೆ ಮಾಡಲು ಹೇಳುವಿರಿ. ಸರಿಯಾದ ಸಮಯಕ್ಕೆ ಆಹಾರವನ್ನು ಸ್ವೀಕರಿಸಿ. ಪ್ರಯಾಣದ ಆಯಾಸವು ವಿಶ್ರಾಂತಿಯಿಂದ ದೂರಾಗುವುದು. ಸುಬ್ರಹ್ಮಣ್ಯನು ನಿಮಗೆ ನಕಾರಾತ್ಮಕ ಅಂಶಗಳಿಗೆ ಶಕ್ತಿ ತುಂಬುವನು.
ವೃಷಭ ರಾಶಿ: ರಾಜಕಾರಣಿಗಳಿಗೆ ತೊಳಲಾಟವು ಅಧಿಕವಾಗಿರುವುದು. ಇಂದಿನ ಸೋಲು ನಿಮಗೆ ಪಾಠವಾಗುವುದು. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ಕುಟುಂಬದ ನೇರ ಮಾತುಗಳು ನಿಮಗೆ ಸಹಿಸಲು ಶಕ್ಯವಾಹದೇ ಬೇಸರಿಸುವಿರಿ. ಊಹಿಸಿದಷ್ಟು ಮಾರ್ದವವು ಸಂಗಾತಿಯ ಸ್ವಭಾವದಲ್ಲಿ ಇರದು. ಕುಟುಂಬದ ವಿಚಾರದಲ್ಲಿ ಏಕಪಕ್ಷೀಯವಾಗಿ ನಿರ್ಧರವನ್ನು ತೆಗೆದುಕೊಳ್ಳದೇ ಎಲ್ಲರ ಅಭಿಪ್ರಾಯವನ್ನು ಪಡೆದು ಮುಂದುವರಿಯಿರಿ. ನಿಮ್ಮ ಕೆಲಸವು ಅನೇಕರಿಗೆ ಉಪಯೋಗವಾಗಬಹುದು. ತಾಳ್ಮೆಯಿಂದ ನೀವು ಜಯಿಸುವಿರಿ. ಅನಾರೋಗ್ಯವು ನಿಮಗೆ ಬಹಳ ಕಿರಿಕಿರಿ ಕೊಡಬಹುದು.
ಮಿಥುನ ರಾಶಿ: ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ಹಣಕಾಸಿನ ವ್ಯವಹಾರದಲ್ಲಿ ಇಂದು ಎಲ್ಲರಿಂದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ಇಂದು ನೀವು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಣವನ್ನು ಹೂಡಿಕೆ ಮಾಡುವಿರಿ. ತಂದೆಯ ಶ್ರಮವನ್ನು ಕಂಡು ಮಕ್ಕಳು ನೋಯುವರು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ನಿಮ್ಮ ಕೆಲಸದ ಬಗ್ಗೆ ನೀವೇ ಹೇಳಿಕೊಳ್ಳುವಿರಿ. ನೀವು ಎಲ್ಲರ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರ ಮಾಡುವಿರಿ. ಬಂಧುಗಳ ಭೇಟಿಯಿಂದ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರದಿದ್ದರೆ ಚಿಕಿತ್ಸೆಯವರೆಗೂ ಹೋಗಬಹುದು. ಇಂದು ಸಂಗಾತಿಯ ಪ್ರೀತಿಯಿಂದ ವಂಚಿತರಾಗುವಿರಿ. ನಿಮಗೆ ಹಳೆಯ ನೆನಪುಗಳು ಕಾಡಬಹುದು.
ಕಟಕ ರಾಶಿ: ನಿಮಗೆ ನಿಮ್ಮ ಹಳೆಯ ಜವಾಬ್ದಾರಿಯ ಪದವಿಯೇ ಸಿಗಲಿದೆ. ಒತ್ತಡದಿಂದ ಹೊರಬರಲು ಮಾರ್ಗವು ಸಿಗಲಿದೆ. ಇಂದು ನಿಮ್ಮ ಸಂಗಾತಿಯನ್ನು ಖರೀದಿಗೆ ಕರೆದೊಯ್ಯುವಿರಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮಿಸುವ ಸಾಧ್ಯತೆ ಇದೆ. ನೀವು ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ಕೆಲವು ಮಾಹಿತಿಯನ್ನು ಪಡೆದುಕೊಳ್ಳುವಿರಿ. ಹೆಣ್ಣು ಮಕ್ಕಳು ತಾಯಿಯಿಂದ ಲಾಭವನ್ನು ಪಡೆಯುವರು. ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹೆಚ್ಚಾದೀತು. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಮಾತು ಅಹಂಕಾರದಂತೆ ಕೇಳಿಸುವುದು. ಸಂಯಮವನ್ನು ಬೆಳೆಸಿಕೊಳ್ಳುವ ಅಗತ್ಯ. ಎಲ್ಲವನ್ನೂ ಅನುಮಾನದ ದೃಷ್ಟಿಯಿಂದ ನೋಡುವ ಅಭ್ಯಾಸ ಬೇಡ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ