AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಇಂದು ಪ್ರತಿ ಕ್ಷಣವನ್ನೂ ಎಂಜಾಯ್​ ಮಾಡುವರು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 21) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ಇಂದು ಪ್ರತಿ ಕ್ಷಣವನ್ನೂ ಎಂಜಾಯ್​ ಮಾಡುವರು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 21, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 21 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ , ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:50 ರಿಂದ 09:26ರ ವರೆಗೆ.

ಮೇಷ: ವಿನಾಕಾರಣ ಎಲ್ಲದಕ್ಕೂ ಎಲ್ಲರ ಮೇಲೂ ಸಿಟ್ಟಾಗುವಿರಿ. ಶಿಕ್ಷಣ ತಜ್ಞರ ಭೇಟಿಯಿಂದ ನಿಮ್ಮ ಓದು ಇನ್ನಷ್ಟು ಸುಗಮವಾಗುವುದು. ಮನೆಯವರ ಜೊತೆ ಕಾಲ ಕಳೆಯುವಿರಿ. ವ್ಯಾಪಾರವನ್ನು ಮಾಡುವಾಗ ಎಚ್ಚರಿಕೆ ಇರಲಿದೆ. ಬಂಧುಗಳು ನಿಮಗೆ ಜೀವನದ ಪಾಠವನ್ನು ಹೇಳಿಕೊಡುವರು. ಸಹೋದರರಿಗೆ ಉಡುಗೊರೆಯನ್ನು ಕೊಟ್ಟು ಸಂತೋಷಪಡಿಸುವಿರಿ. ಗೆಳೆತನದ ವಿಚಾರದಲ್ಲಿ ಮಿತಿಯಿರಲಿದೆ. ಸಂತರ ಭೇಟಿಯಾಗಿ ನಿಮಗೆ ನೆಮ್ಮದಿಯು ಸಿಗಲಿದೆ. ಪ್ರಯಾಣವನ್ನು ಮಾಡುವ ಉತ್ಸಾಹದಲ್ಲಿ ಇರುವಿರಿ. ಮಾನಸಿಕ‌ ಒತ್ತಡವು ಕಡಿಮೆಯಾಗಲಿದೆ. ಉದ್ಯೋಗದ ಸ್ಥಳದಲ್ಲಿ ಉತ್ಸಾಹವಿರಲಿದೆ.

ವೃಷಭ: ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ನಂಬಿಕೆಗೆ ದ್ರೋಹವಾಗಬಹುದು.‌ ಸಂಗಾತಿಯ ಮಾತುಗಳು ನಿಮಗೆ ಅಜೀರ್ಣವಾಗುವುದು. ಹಣಕಾಸಿನ ವೃದ್ಧಿಗೆ ಮಾರ್ಗೋಪಾಯವನ್ನು ಕಂಡುಕೊಳ್ಳುವಿರಿ. ನೀವು ಬಯಸಿದ ವಸ್ತುಗಳು ನಿಮ್ಮನ್ನು ಬಂದು ಸೇರಲಿದೆ. ಧಾರ್ಮಿಕ ಆಚರಣೆಯಲ್ಲಿ‌ ಆಸಕ್ತಿಯು ಕಡಿಮೆ ಆಗಲಿದೆ. ಸರ್ಕಾರದ ಕೆಲಸದಿಂದ ನಿಮಗೆ ಬೇಸರವಾಗಬಹುದು. ‌ವ್ಯರ್ಥ ಓಡಾಟವು ನಿಮಗೆ ಬೇಸರ ತರಿಸಬಹುದು. ಪ್ರತಿ ಕ್ಷಣವನ್ನೂ ಖುಷಿಯಿಂದ ಕಳೆಯಲು ಇಚ್ಛಿಸುವಿರಿ.

ಮಿಥುನ: ಯಾರಾದರೂ ನಿಮ್ಮ ಹಾದಿಯನ್ನು ತಪ್ಪಿಸಬಹುದು. ವಿವಾಹದಲ್ಲಿ ಆಸಕ್ತಿಯು ಕಡಿಮೆಯಾಗಲಿದೆ. ಸ್ವತಂತ್ರವಾಗಿರಲು ಬಯಸುವಿರಿ. ಮನೆಯವರ ವರ್ತನೆಯು ನಿಮಗೆ ಹಿಡಿಸದೇಹೋದೀತು. ಸಂಪತ್ತು ಕ್ಷಣಿಕ ಎಂದೆನಿಸಬಹುದು. ಸ್ತ್ರೀಯರಿಂದ ಸಹಾಯವನ್ನು ಪಡೆಯಲು ಇಚ್ಛಿಸುವಿರಿ. ಮಕ್ಕಳನ್ನು‌ ಮನೆಯಿಂದ ಆಚೆ ಇಟ್ಟು ಓದಿಸುವ ಆಲೋಚನೆ ಇರಲಿದೆ. ನಿಮ್ಮ ನಡತೆಯಲ್ಲಿ ಅನುಮಾನ ಕಾಣಬಹುದು. ಸಮಯವು ಅಮೂಲ್ಯ ಎಂದು ಅನ್ನಿಸಬಹುದು. ಉಪಕಾರಕ್ಕೆ ಪ್ರತ್ಯುಪಕಾರವನ್ನು ಬಯಸುವಿರಿ. ಹೊಂದಾಣಿಕೆಯಿಂದ ಮನಸ್ಸಿನ ಕ್ಲೇಶವು ಸುಧಾರಿಸಬಹುದು.

ಕಟಕ: ನಿಮ್ಮ ಸ್ವಭಾವಗಳು ಇಷ್ಟವಾಗದು. ನಿಮ್ಮ‌ ಮಾತುಗಳನ್ನು ನಿರಾಸಕ್ತಿಯಿಂದ ಪಾಲಿಸುವರು. ಸಂಬಂಧವನ್ನು ಮತ್ತಷ್ಟು ಆತ್ಮೀಯವಾಗಿಸಲು ಪ್ರಯತ್ನಿಸುವಿರಿ. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ನಿರೀಕ್ಷೆ ಇರಲಿದೆ. ಯಾರನ್ನೂ ಅಪಾರ್ಥ ಮಾಡಿಕೊಳ್ಳುವುದು ಸರಿಯಲ್ಲ. ನಿಮಗೆ ಸಿಗುವ ಗೌರವದಲ್ಲಿ ವ್ಯತ್ಯಾಸವಾದ ಕಾರಣ ನಿಮಗೆ ಸಿಟ್ಟು ಬರಬಹುದು. ದಾಂಪತ್ಯದಲ್ಲಿ ಉಂಟಾದ ಬಿರುಕನ್ನು ಕುಳಿತು ಸರಿಮಾಡಿಕೊಳ್ಳಿ. ನಿಮ್ಮಲ್ಲಿ‌ ಇರುವುದನ್ನು ದಾನಮಾಡುವಿರಿ. ಮಕ್ಕಳ‌ ವಿವಾಹದ ಚಿಂತೆ‌ಯು ಕಾಡಲಿದೆ.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!